1 ಯೋಹಾನನು 5 : 1 (OCVKN)
ಮಾನವರಾಗಿ ಬಂದ ದೇವ ಪುತ್ರರಲ್ಲಿ ವಿಶ್ವಾಸ ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.
1 ಯೋಹಾನನು 5 : 2 (OCVKN)
ನಾವು ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.
1 ಯೋಹಾನನು 5 : 3 (OCVKN)
ದೇವರ ಪ್ರೀತಿ ಏನೆಂದರೆ: ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವುದೇ. ಅವರ ಆಜ್ಞೆಗಳು ಕಠಿಣವಾದವುಗಳಲ್ಲ.
1 ಯೋಹಾನನು 5 : 4 (OCVKN)
ದೇವರಿಂದ ಹುಟ್ಟಿರುವ ಪ್ರತಿಯೊಬ್ಬರು ಲೋಕವನ್ನು ಜಯಿಸುತ್ತಾರೆ. ಲೋಕವನ್ನು ಜಯಿಸುವಂಥದು ನಮ್ಮ ನಂಬಿಕೆಯೇ.
1 ಯೋಹಾನನು 5 : 5 (OCVKN)
ಯೇಸುವು ದೇವಪುತ್ರ ಎಂದು ನಂಬಿದವರೇ ಹೊರತು ಲೋಕವನ್ನು ಜಯಿಸುವವರು ಯಾರು?
1 ಯೋಹಾನನು 5 : 6 (OCVKN)
ಕ್ರಿಸ್ತ ಯೇಸುವೇ ನೀರಿನಿಂದಲೂ ರಕ್ತದಿಂದಲೂ ಬಂದವರು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದರು, ಇದಕ್ಕೆ ಸಾಕ್ಷಿಕೊಡುವವರು ಪವಿತ್ರಾತ್ಮ ದೇವರೇ, ಏಕೆಂದರೆ ಪವಿತ್ರಾತ್ಮ ದೇವರು ಸತ್ಯವಾಗಿದ್ದಾರೆ.
1 ಯೋಹಾನನು 5 : 7 (OCVKN)
ಇದಲ್ಲದೆ ಸಾಕ್ಷಿಕೊಡುವವರು ಮೂವರಿದ್ದಾರೆ.* ಅವರು ಯಾರೆಂದರೆ: ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮ ದೇವರು.
1 ಯೋಹಾನನು 5 : 8 (OCVKN)
ಆತ್ಮ, ಜಲ, ರಕ್ತ ಎಂಬ ಮೂರು ಸಾಕ್ಷಿಗಳು ಇವೆ. ಇವು ಕೊಡುವ ಸಾಕ್ಷಿ ಒಂದೇ ಆಗಿರುತ್ತದೆ.
1 ಯೋಹಾನನು 5 : 9 (OCVKN)
ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವುದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಏಕೆಂದರೆ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.
1 ಯೋಹಾನನು 5 : 10 (OCVKN)
ದೇವಪುತ್ರ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟವರು ಆ ಸಾಕ್ಷಿಯನ್ನು ಸ್ವೀಕರಿಸುತ್ತಾರೆ. ದೇವರನ್ನು ನಂಬದವರು ದೇವರನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾರೆ. ಹೇಗೆಂದರೆ ದೇವರು ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅಂಥವರು ನಂಬಿಕೆಯಿಡಲಿಲ್ಲ.
1 ಯೋಹಾನನು 5 : 11 (OCVKN)
ಆ ಸಾಕ್ಷಿ ಯಾವುದೆಂದರೆ: ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಈ ಜೀವವು ದೇವರ ಪುತ್ರ ಕ್ರಿಸ್ತ ಯೇಸುವಿನಲ್ಲಿ ಇದೆ ಎಂಬುದೇ.
1 ಯೋಹಾನನು 5 : 12 (OCVKN)
ಯಾರು ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಹೊಂದಿದ್ದಾರೊ ಅವರಿಗೆ ಜೀವವಿದೆ. ಯಾರಲ್ಲಿ ದೇವರ ಪುತ್ರ ಆಗಿರುವ ಕ್ರಿಸ್ತ ಯೇಸು ಇರುವುದಿಲ್ಲವೋ ಅಂಥವರಿಗೆ ಜೀವವಿಲ್ಲ.
1 ಯೋಹಾನನು 5 : 13 (OCVKN)
ಮುಕ್ತಾಯದ ಮಾತುಗಳು ದೇವಪುತ್ರ ಆಗಿರುವವರ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆ ನಾನು ನಿಮಗೆ ಇವುಗಳನ್ನು ಬರೆದಿದ್ದೇನೆ.
1 ಯೋಹಾನನು 5 : 14 (OCVKN)
ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ.
1 ಯೋಹಾನನು 5 : 15 (OCVKN)
ನಾವು ಏನು ಬೇಡಿಕೊಂಡರೂ ದೇವರು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾರೆ ಎಂದು ತಿಳಿದಿದ್ದರೆ, ನಾವು ಬೇಡಿದವುಗಳು ನಮಗೆ ದೊರೆಯುತ್ತವೆ ಎಂಬ ದೃಢನಿಶ್ಚಯ ನಮಗಿದೆ.
1 ಯೋಹಾನನು 5 : 16 (OCVKN)
ಮರಣಕರವಲ್ಲದ ಪಾಪವನ್ನು ಮಾಡುವ ಸಹೋದರ ಅಥವಾ ಸಹೋದರಿಯನ್ನು ಯಾರಾದರೂ ಕಂಡರೆ, ಆ ಸಹೋದರ ಅಥವಾ ಸಹೋದರಿಯರಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಅವರಿಗೆ ಜೀವವನ್ನು ದಯಪಾಲಿಸುವರು. ಮರಣಕರವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಆದರೆ ಮರಣಕರವಾದ ಪಾಪವೂ ಉಂಟು. ಈ ಮರಣಕರವಾದ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.
1 ಯೋಹಾನನು 5 : 17 (OCVKN)
ಅನೀತಿಯೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು.
1 ಯೋಹಾನನು 5 : 18 (OCVKN)
ದೇವರಿಂದ ಹುಟ್ಟಿರುವವರು ಪಾಪದಲ್ಲಿ ಮುಂದುವರೆಯುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವರನ್ನು ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ಅಂಥವರನ್ನು ಕಾಪಾಡುವರು, ಕೆಡುಕನು ಅಂಥವರನ್ನು ಮುಟ್ಟುವುದಿಲ್ಲ.
1 ಯೋಹಾನನು 5 : 19 (OCVKN)
ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.
1 ಯೋಹಾನನು 5 : 20 (OCVKN)
ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.
1 ಯೋಹಾನನು 5 : 21 (OCVKN)
ಪ್ರಿಯ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ದೇವರಿಗೆ ಕೊಡತಕ್ಕ ಸ್ಥಾನವನ್ನು ಕೊಡಬೇಡಿರಿ

1 2 3 4 5 6 7 8 9 10 11 12 13 14 15 16 17 18 19 20 21