1 ಅರಸುಗಳು 19 : 1 (OCVKN)
ಎಲೀಯನು ಹೋರೇಬಿಗೆ ಓಡಿಹೋದದ್ದು ಎಲೀಯನು ಮಾಡಿದ್ದೆಲ್ಲವನ್ನೂ, ಅವನು ಖಡ್ಗದಿಂದ ಎಲ್ಲಾ ಪ್ರವಾದಿಗಳನ್ನು ಕೊಂದು ಹಾಕಿದ್ದೆಲ್ಲವನ್ನೂ, ಅಹಾಬನು ಈಜೆಬೆಲಳಿಗೆ ತಿಳಿಸಿದಾಗ,
1 ಅರಸುಗಳು 19 : 2 (OCVKN)
ಈಜೆಬೆಲಳು ಎಲೀಯನ ಬಳಿಗೆ ದೂತನನ್ನು ಕಳುಹಿಸಿ, “ನಾನು ನಾಳೆ ಇಷ್ಟು ಹೊತ್ತಿಗೆ ಅವರಲ್ಲಿರುವ ಒಬ್ಬೊಬ್ಬನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ, ದೇವರುಗಳು ನನಗೆ ಬೇಕಾದದ್ದನ್ನು ಮಾಡಲಿ,” ಎಂದು ಹೇಳಿದಳು.
1 ಅರಸುಗಳು 19 : 3 (OCVKN)
ಅವನು ಅದನ್ನು ಕೇಳಿ ಎದ್ದು, ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ, ಅಲ್ಲಿ ತನ್ನ ಸೇವಕನನ್ನು ಕಳುಹಿಸಿಬಿಟ್ಟನು.
1 ಅರಸುಗಳು 19 : 4 (OCVKN)
ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು.
1 ಅರಸುಗಳು 19 : 5 (OCVKN)
ಅವನು ಜಾಲೀಗಿಡದ ಕೆಳಗೆ ಮಲಗಿಕೊಂಡು ನಿದ್ರೆಮಾಡಿದನು. ಆಗ ಒಬ್ಬ ದೂತನು ಅವನನ್ನು ತಟ್ಟಿ, ಅವನಿಗೆ, “ಎದ್ದು ತಿನ್ನು,” ಎಂದನು.
1 ಅರಸುಗಳು 19 : 6 (OCVKN)
ಅವನು ಎದ್ದು ನೋಡಿದಾಗ, ಇಗೋ, ಕೆಂಡದಲ್ಲಿ ಬೇಯಿಸಿದ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು, ಕುಡಿದು ತಿರುಗಿ ಮಲಗಿಕೊಂಡನು.
1 ಅರಸುಗಳು 19 : 7 (OCVKN)
ತಿರುಗಿ ಎರಡನೆಯ ಸಾರಿ ಯೆಹೋವ ದೇವರ ದೂತನು ಬಂದು, ಅವನನ್ನು ತಟ್ಟಿ ಅವನಿಗೆ, “ನೀನೆದ್ದು ತಿನ್ನು, ಏಕೆಂದರೆ ನೀನು ಬಹುದೂರ ಪ್ರಯಾಣ ಮಾಡಬೇಕಾಗಿದೆ,” ಎಂದನು.
1 ಅರಸುಗಳು 19 : 8 (OCVKN)
ಆಗ ಅವನೆದ್ದು ತಿಂದು, ಕುಡಿದು ಆ ಭೋಜನದ ಶಕ್ತಿಯಿಂದ ರಾತ್ರಿ ಹಗಲು ನಾಲ್ವತ್ತು ದಿವಸ ಹೋರೇಬ್ ಎಂಬ ದೇವರ ಬೆಟ್ಟದವರೆಗೂ ನಡೆದನು.
1 ಅರಸುಗಳು 19 : 9 (OCVKN)
ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಯೆಹೋವ ದೇವರು ಎಲೀಯನಿಗೆ ಪ್ರತ್ಯಕ್ಷನಾದದ್ದು
1 ಅರಸುಗಳು 19 : 10 (OCVKN)
ಅಲ್ಲಿ ಅವನಿಗೆ ಯೆಹೋವ ದೇವರ ವಾಕ್ಯವು ಬಂದು, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದರು.
1 ಅರಸುಗಳು 19 : 11 (OCVKN)
ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು. ಆಗ ಯೆಹೋವ ದೇವರು, “ನೀನು ಹೊರಗೆ ಬಂದು ಬೆಟ್ಟದ ಮೇಲೆ ನನ್ನ ಮುಂದೆ ನಿಲ್ಲು. ಏಕೆಂದರೆ ನಾನು ನಿನ್ನ ಮುಂದೆ ಹಾದು ಹೋಗುತ್ತಿದ್ದೇನೆ,” ಎಂದನು. ಯೆಹೋವ ದೇವರ ಮುಂದೆ ಬೆಟ್ಟಗಳನ್ನು ಭೇದಿಸಿ, ಗುಡ್ಡಗಳನ್ನು ಒಡೆಯುವಂಥ ಮಹಾಬಲವಾದ ಗಾಳಿ, ಆ ಗಾಳಿಯಲ್ಲಿ ಯೆಹೋವ ದೇವರು ಇರಲಿಲ್ಲ. ಗಾಳಿಯ ತರುವಾಯ ಭೂಕಂಪವು, ಆ ಭೂಕಂಪದಲ್ಲಿ ಯೆಹೋವ ದೇವರು ಇರಲಿಲ್ಲ.
1 ಅರಸುಗಳು 19 : 12 (OCVKN)
ಭೂಕಂಪದ ತರುವಾಯ ಬೆಂಕಿಯು, ಆ ಬೆಂಕಿಯಲ್ಲಿ ಯೆಹೋವ ದೇವರು ಇರಲಿಲ್ಲ. ಬೆಂಕಿಯ ತರುವಾಯ ಮೃದುವಾದ ಸ್ವರವು ಕೇಳಿಸಿತು.
1 ಅರಸುಗಳು 19 : 13 (OCVKN)
ಎಲೀಯನು ಅದನ್ನು ಕೇಳಿದಾಗ, ತನ್ನ ಕಂಬಳಿಯಿಂದ ತನ್ನ ಮುಖವನ್ನು ಮುಚ್ಚಿಕೊಂಡು, ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು.
1 ಅರಸುಗಳು 19 : 14 (OCVKN)
ಆಗ, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದು ವಾಣಿ ಕೇಳಿಸಿತು.
1 ಅರಸುಗಳು 19 : 15 (OCVKN)
ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು. ಆಗ ಯೆಹೋವ ದೇವರು ಅವನಿಗೆ, “ನೀನು ಬಂದ ಮಾರ್ಗದಲ್ಲಿ ದಮಸ್ಕದ ಮರುಭೂಮಿಗೆ ತಿರುಗಿಕೊಂಡು ಹೋಗಿ, ಅಲ್ಲಿ ತಲುಪಿದಾಗ, ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು.
1 ಅರಸುಗಳು 19 : 16 (OCVKN)
ಇದಲ್ಲದೆ ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಆಬೇಲ್ ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷನನ್ನು ನಿನಗೆ ಪ್ರತಿಯಾಗಿ ಪ್ರವಾದಿಯಾಗಿರಲು ಅಭಿಷೇಕಿಸು.
1 ಅರಸುಗಳು 19 : 17 (OCVKN)
ಹಜಾಯೇಲನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಯೇಹುವಿನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಎಲೀಷನು ಕೊಂದುಹಾಕುವನು.
1 ಅರಸುಗಳು 19 : 18 (OCVKN)
ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿಯನ್ನು ಇಸ್ರಾಯೇಲಿನಲ್ಲಿ ನನಗೋಸ್ಕರ ಉಳಿಸುವೆನು,” ಎಂದರು.
1 ಅರಸುಗಳು 19 : 19 (OCVKN)
ಎಲೀಷನ ಕರೆಯುವಿಕೆ ಹಾಗೆಯೇ ಎಲೀಯನು ಅಲ್ಲಿಂದ ಹೊರಟು ಶಾಫಾಟನ ಮಗ ಎಲೀಷನನ್ನು ಕಂಡುಕೊಂಡನು. ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡಿ ಎತ್ತುಗಳಿಂದ ಹೊಲವನ್ನು ಉಳುತ್ತಿದ್ದನು. ಅವನು ಹನ್ನೆರಡನೆಯ ಜೋಡಿನ ಸಂಗಡ ಇದ್ದಾಗ, ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ, ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
1 ಅರಸುಗಳು 19 : 20 (OCVKN)
ಆಗ ಅವನು ಎತ್ತುಗಳನ್ನು ಬಿಟ್ಟು, ಎಲೀಯನ ಹಿಂದೆ ಓಡಿಹೋಗಿ ಅವನಿಗೆ, “ಅಪ್ಪಣೆಯಾದರೆ, ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬಂದು ನಿನ್ನನ್ನು ಹಿಂಬಾಲಿಸುವೆನು,” ಎಂದನು.
1 ಅರಸುಗಳು 19 : 21 (OCVKN)
ಎಲೀಯನು, “ಹೋಗು, ನಾನು ನಿನಗೆ ಏನು ಮಾಡಿದೆ?” ಎಂದನು. ಆಗ ಎಲೀಷನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ, ನೊಗದ ಕಟ್ಟಿಗೆಯಿಂದ ಅವುಗಳ ಮಾಂಸವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21