1 ಪೇತ್ರನು 2 : 1 (OCVKN)
ಆದಕಾರಣ, ಎಲ್ಲಾ ದ್ವೇಷವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ ಎಲ್ಲಾ ಅಪವಾದಗಳನ್ನೂ ವಿಸರ್ಜಿಸಿರಿ.
1 ಪೇತ್ರನು 2 : 2 (OCVKN)
ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ರಕ್ಷಣೆಯಲ್ಲಿ ಬೆಳೆಯುವ ಹಾಗೆ ಆತ್ಮಿಕವಾದ ಶುದ್ಧಹಾಲನ್ನು ಬಯಸಿರಿ.
1 ಪೇತ್ರನು 2 : 3 (OCVKN)
ಏಕೆಂದರೆ ಕರ್ತದೇವರು ಒಳ್ಳೆಯವರೆಂದು ನೀವು ರುಚಿ ನೋಡಿದ್ದೀರಲ್ಲಾ.
1 ಪೇತ್ರನು 2 : 4 (OCVKN)
ಆಯ್ಕೆಯಾದ ಜೀವವುಳ್ಳ ಕಲ್ಲುಗಳು ನೀವು ಸಜೀವ ಕಲ್ಲಾಗಿರುವವರ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿರಾಕರಿಸಿದರೂ ಅದು ದೇವರಿಂದ ಆರಿಸಿಕೊಂಡದ್ದೂ ಅವರಿಗೆ ಅಮೂಲ್ಯವಾದದ್ದೂ ಆಯಿತು.
1 ಪೇತ್ರನು 2 : 5 (OCVKN)
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.
1 ಪೇತ್ರನು 2 : 6 (OCVKN)
ಪವಿತ್ರ ವೇದವು ಹೇಳುವುದೇನೆಂದರೆ: “ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಂಡದ್ದು, ಅಮೂಲ್ಯವಾದದ್ದು. ದೇವರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”* ಯೆಶಾಯ 28:16
1 ಪೇತ್ರನು 2 : 7 (OCVKN)
7 ಈಗ ನಂಬುವವರಾದ ನಿಮಗೆ ಈ ಕಲ್ಲು ಅಮೂಲ್ಯವಾದುದು. ನಂಬದವರಿಗಾದರೋ, “ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,” ಕೀರ್ತನೆ 118:22
1 ಪೇತ್ರನು 2 : 8 (OCVKN)
8 ಮತ್ತು, “ಜನರು ಎಡವಲು ಕಾರಣವಾಗುವ ಕಲ್ಲೂ ಅವರು ಬಿದ್ದುಹೋಗುವಂತೆ ಮಾಡುವ ಬಂಡೆಯೂ ಆಗಿರುತ್ತದೆ,” ಯೆಶಾಯ 8:14 ಅವರು ವಾಕ್ಯಕ್ಕೆ ಅವಿಧೇಯರಾದ್ದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
1 ಪೇತ್ರನು 2 : 9 (OCVKN)
ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.
1 ಪೇತ್ರನು 2 : 10 (OCVKN)
ಮೊದಲು ನೀವು ಪ್ರಜೆಗಳಾಗಿರಲಿಲ್ಲ. ಈಗ ದೇವರ ಪ್ರಜೆಗಳಾಗಿದ್ದೀರಿ. ಮೊದಲು ಕರುಣೆ ಹೊಂದಿರಲಿಲ್ಲ. ಈಗ ಕರುಣೆ ಹೊಂದಿದ್ದೀರಿ.
1 ಪೇತ್ರನು 2 : 11 (OCVKN)
ಭಕ್ತಿಹೀನ ಸಮಾಜದಲ್ಲಿ ಭಕ್ತರಾಗಿ ಬಾಳುವುದು ಪ್ರಿಯರೇ, ಈ ಲೋಕದಲ್ಲಿ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
1 ಪೇತ್ರನು 2 : 12 (OCVKN)
ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.
1 ಪೇತ್ರನು 2 : 13 (OCVKN)
ಮನುಷ್ಯನ ಪ್ರತಿಯೊಂದು ನಿಯಮಗಳಿಗೂ ಕರ್ತದೇವರ ನಿಮಿತ್ತ ನೀವು ಅಧೀನರಾಗಿರಿ. ಅರಸನು ಸರ್ವಾಧಿಕಾರಿಯಾಗಿದ್ದು,
1 ಪೇತ್ರನು 2 : 14 (OCVKN)
ರಾಜ್ಯಪಾಲರು ಕೆಟ್ಟವರನ್ನು ದಂಡಿಸುವುದಕ್ಕೆ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವುದಕ್ಕೆ ಅರಸನಿಂದ ಅವರು ಕಳುಹಿಸಲಾದವರೆಂದೂ ತಿಳಿದು ಅವರಿಗೆ ಅಧೀನರಾಗಿರಿ.
1 ಪೇತ್ರನು 2 : 15 (OCVKN)
ನೀವು ನಿಮ್ಮ ಒಳ್ಳೆಯ ನಡತೆಯಿಂದ, ತಿಳುವಳಿಕೆಯಿಲ್ಲದೆ ಮಾತಾಡುವ ಮೂಢಜನರ ಬಾಯಿ ಮುಚ್ಚುವಂತೆ ಮಾಡುವುದೇ ದೇವರ ಚಿತ್ತ.
1 ಪೇತ್ರನು 2 : 16 (OCVKN)
ಸ್ವತಂತ್ರರಾಗಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ. ದೇವರ ಸೇವಕರಂತೆಯೇ ಬಾಳಿರಿ.
1 ಪೇತ್ರನು 2 : 17 (OCVKN)
ಎಲ್ಲರನ್ನು ಸನ್ಮಾನಿಸಿರಿ, ವಿಶ್ವಾಸಿಗಳ ಸಹೋದರತ್ವವನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ, ಅರಸನನ್ನು ಸನ್ಮಾನಿಸಿರಿ.
1 ಪೇತ್ರನು 2 : 18 (OCVKN)
ದಾಸರೇ, ಯಜಮಾನರಿಗೆ ಅಧೀನರಾಗಿರಿ. ನೀವು ಅವರಲ್ಲಿ ಒಳ್ಳೆಯ ಯಜಮಾನರಿಗೆ ಮಾತ್ರವಲ್ಲ, ಕ್ರೂರ ಯಜಮಾನರಿಗೂ ಪೂರ್ಣಭಯಭಕ್ತಿಯಿಂದ ಅಧೀನರಾಗಿರಿ.
1 ಪೇತ್ರನು 2 : 19 (OCVKN)
ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅವನು ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.
1 ಪೇತ್ರನು 2 : 20 (OCVKN)
ತಪ್ಪುಮಾಡಿ ಶಿಕ್ಷೆ ಹೊಂದುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಇದು ದೇವರಿಗೆ ಮೆಚ್ಚುಗೆಯಾಗಿದೆ.
1 ಪೇತ್ರನು 2 : 21 (OCVKN)
ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು.
1 ಪೇತ್ರನು 2 : 22 (OCVKN)
“ಕ್ರಿಸ್ತ ಯೇಸುವು ಯಾವ ಪಾಪವನ್ನೂ ಮಾಡಲಿಲ್ಲ, ಅವರ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.”§ ಯೆಶಾಯ 53:9
1 ಪೇತ್ರನು 2 : 23 (OCVKN)
23 ಬೈಯ್ಯುವವರನ್ನು ಅವರು ಪ್ರತಿಯಾಗಿ ಬೈಯಲಿಲ್ಲ. ಅವರು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವ ತಂದೆಗೆ ತಮ್ಮನ್ನು ಒಪ್ಪಿಸಿದರು.
1 ಪೇತ್ರನು 2 : 24 (OCVKN)
ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”
1 ಪೇತ್ರನು 2 : 25 (OCVKN)
ಏಕೆಂದರೆ, “ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ.”* ಯೆಶಾಯ 53:4,5,6 ಆದರೆ ಈಗ ನೀವು ತಿರುಗಿ ನಿಮ್ಮ ಆತ್ಮಗಳ ಕುರುಬ ಹಾಗೂ ಸಭಾಧ್ಯಕ್ಷರೂ ಆಗಿರುವ ಕ್ರಿಸ್ತ ಯೇಸುವಿನ ಬಳಿಗೆ ಬಂದಿದ್ದೀರಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25