1 ಸಮುವೇಲನು 5 : 1 (OCVKN)
ಅಷ್ಡೋದ್ ಮತ್ತು ಎಕ್ರೋನಿನಲ್ಲಿ ಮಂಜೂಷ ಫಿಲಿಷ್ಟಿಯರು ದೇವರ ಮಂಜೂಷವನ್ನು ತೆಗೆದುಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.
1 ಸಮುವೇಲನು 5 : 2 (OCVKN)
ಫಿಲಿಷ್ಟಿಯರು ದೇವರ ಮಂಜೂಷವನ್ನು ದಾಗೋನನ ಗುಡಿಗೆ ತೆಗೆದುಕೊಂಡುಹೋಗಿ, ದಾಗೋನನ ಪಕ್ಕದಲ್ಲಿಟ್ಟರು.
1 ಸಮುವೇಲನು 5 : 3 (OCVKN)
ಅಷ್ಡೋದ್ಯರು ಮಾರನೆಯ ದಿವಸ ಎದ್ದಾಗ, ದಾಗೋನ್ ವಿಗ್ರಹ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
1 ಸಮುವೇಲನು 5 : 4 (OCVKN)
ಆಗ ಅವರು ದಾಗೋನನನ್ನು ತೆಗೆದು, ಅದನ್ನು ಅದರ ಸ್ಥಳದಲ್ಲಿ ತಿರುಗಿ ಇಟ್ಟರು. ಅವರು ಮಾರನೆಯ ದಿವಸ ಬೆಳಿಗ್ಗೆ ಎದ್ದಾಗ, ದಾಗೋನ್ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. ದಾಗೋನನ ತಲೆಯೂ ಅದರ ಎರಡು ಕೈಗಳೂ ಕತ್ತರಿಸಲಾಗಿ ಹೊಸ್ತಿಲ ಮೇಲೆ ಬಿದ್ದಿದ್ದವು.
1 ಸಮುವೇಲನು 5 : 5 (OCVKN)
ಮುಂಡ ಮಾತ್ರ ಅದಕ್ಕೆ ಉಳಿದಿತ್ತು. ಆದ್ದರಿಂದ ಈ ದಿನದವರೆಗೂ ದಾಗೋನನ ಯಾಜಕರೂ, ದಾಗೋನನ ಗುಡಿಯನ್ನು ಪ್ರವೇಶಿಸುವವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿಲನ್ನು ತುಳಿಯುವುದಿಲ್ಲ.
1 ಸಮುವೇಲನು 5 : 6 (OCVKN)
ಯೆಹೋವ ದೇವರ ಕೈ ಅಷ್ಡೋದಿನವರ ಮೇಲೆ ಮಹಾ ಭಾರವಾಗಿತ್ತು. ಅವರನ್ನು ನಾಶಮಾಡಿ, ಅಷ್ಡೋದನ್ನೂ, ಅದರ ಮೇರೆಗಳನ್ನೂ ಗಡ್ಡೆರೋಗದಿಂದಲೂ ಬಾಧಿಸಿದರು.
1 ಸಮುವೇಲನು 5 : 7 (OCVKN)
ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ಕಂಡಾಗ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು. ಏಕೆಂದರೆ ಅವರ ಕೈ ನಮ್ಮ ಮೇಲೆಯೂ, ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ,” ಎಂದರು.
1 ಸಮುವೇಲನು 5 : 8 (OCVKN)
ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೆಯಕಳುಹಿಸಿ ಅವರಿಗೆ, “ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದರು. ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವು ಗತ್ ಊರಿಗೆ ಕಳುಹಿಸಬೇಕು,” ಎಂದರು.
1 ಸಮುವೇಲನು 5 : 9 (OCVKN)
ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು. ಆದರೆ ಅವರು ಅದನ್ನು ತಂದ ತರುವಾಯ, ಯೆಹೋವ ದೇವರ ಕೈ ಆ ಪಟ್ಟಣದ ಮೇಲೆ ಬಂದು ಮಹಾ ನಾಶಮಾಡಿತು. ಇದಲ್ಲದೆ ಯೆಹೋವ ದೇವರು ಚಿಕ್ಕವರಿಂದ ಹಿರಿಯರವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದರು. ಅವರಿಗೆ ಗಡ್ಡೆರೋಗ ಬಂದಿತು.
1 ಸಮುವೇಲನು 5 : 10 (OCVKN)
ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ, ಎಕ್ರೋನ್ಯರು, “ನಮ್ಮನ್ನೂ, ನಮ್ಮ ಜನರನ್ನೂ ಕೊಂದುಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರು,” ಎಂದು ಕೂಗಿ ಹೇಳಿದರು.
1 ಸಮುವೇಲನು 5 : 11 (OCVKN)
ಆಗ ಆ ಇಡೀ ಪಟ್ಟಣಕ್ಕೆ ಮರಣಾಂತಿಕ ವಿನಾಶ ಉಂಟಾಗಿ, ದೇವರ ಕೈ ಅಲ್ಲಿ ಮಹಾಬಾಧಕವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟುಗೂಡಿಸಿ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ, ನಮ್ಮ ಜನರನ್ನೂ ಕೊಂದು ಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರುಗಿ ಹೋಗುವಂತೆ ಕಳುಹಿಸಿಬಿಡಿರಿ,” ಎಂದರು.
1 ಸಮುವೇಲನು 5 : 12 (OCVKN)
ಉಳಿದವರು ಸತ್ತು ಹೋಗದೆ ಗಡ್ಡೆರೋಗದಿಂದ ಬಾಧಿತರಾದರು, ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.

1 2 3 4 5 6 7 8 9 10 11 12