1 ಥೆಸಲೊನೀಕದವರಿಗೆ 1 : 1 (OCVKN)
ತಂದೆ ದೇವರಲ್ಲಿಯೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ, ಪೌಲ, ಸಿಲ್ವಾನ ಹಾಗೂ ತಿಮೊಥೆ ಇವರು ಬರೆಯುವ ಪತ್ರ: ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
1 ಥೆಸಲೊನೀಕದವರಿಗೆ 1 : 2 (OCVKN)
ಪೌಲನ ಕೃತಜ್ಞತಾಸ್ತುತಿ ನಾವು ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಸ್ಮರಿಸುತ್ತಾ ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.
1 ಥೆಸಲೊನೀಕದವರಿಗೆ 1 : 3 (OCVKN)
ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ.
1 ಥೆಸಲೊನೀಕದವರಿಗೆ 1 : 4 (OCVKN)
ದೇವರು ಪ್ರೀತಿಸುವ ಪ್ರಿಯರೇ, ದೇವರು ತಾವಾಗಿಯೇ ನಿಮ್ಮನ್ನು ಆರಿಸಿಕೊಂಡಿದ್ದಾರೆಂದು ನಾವು ಬಲ್ಲೆವು.
1 ಥೆಸಲೊನೀಕದವರಿಗೆ 1 : 5 (OCVKN)
ಏಕೆಂದರೆ ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ, ಶಕ್ತಿಯಲ್ಲಿಯೂ ಪವಿತ್ರಾತ್ಮ ದೇವರ ಸನ್ನಿಧಿಯಲ್ಲಿಯೂ ಬಹು ನಿಶ್ಚಯದಲ್ಲಿಯೂ ಬಂತೆಂಬುದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಮಾಡಿದ ಜೀವನ ಎಂಥದ್ದೆಂದು ನೀವೇ ಬಲ್ಲಿರಿ.
1 ಥೆಸಲೊನೀಕದವರಿಗೆ 1 : 6 (OCVKN)
ನೀವು ಬಹು ಹಿಂಸೆಯಿಂದಲೂ ಪವಿತ್ರಾತ್ಮ ಪ್ರೇರಿತ ಆನಂದದಿಂದಲೂ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತ ಯೇಸುವನ್ನೂ ಅನುಸರಿಸುವವರಾಗಿದ್ದೀರಿ.
1 ಥೆಸಲೊನೀಕದವರಿಗೆ 1 : 7 (OCVKN)
ಹೀಗೆ ಮಕೆದೋನ್ಯ ಹಾಗೂ ಅಖಾಯದ ವಿಶ್ವಾಸಿಗಳೆಲ್ಲರಿಗೂ ನೀವು ಆದರ್ಶರಾದಿರಿ.
1 ಥೆಸಲೊನೀಕದವರಿಗೆ 1 : 8 (OCVKN)
ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯ ಹಾಗೂ ಅಖಾಯದಲ್ಲಿ ಘೋಷಿತವಾದದ್ದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಹರಡಿತು. ಆದ್ದರಿಂದ ಇದನ್ನು ಕುರಿತು ನಾವು ಹೇಳಬೇಕಾದ ಅವಶ್ಯ ಏನೂ ಇಲ್ಲ.
1 ಥೆಸಲೊನೀಕದವರಿಗೆ 1 : 9 (OCVKN)
ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.
1 ಥೆಸಲೊನೀಕದವರಿಗೆ 1 : 10 (OCVKN)
ಇದಲ್ಲದೆ, ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ತಮ್ಮ ಪುತ್ರರಾಗಿರುವ ಯೇಸು ಮುಂದೆ ಬರುವ ಕೋಪದಿಂದ ನಮ್ಮನ್ನು ಬಿಡಿಸುವವರೂ ಆಗಿದ್ದಾರೆ. ಈ ಯೇಸುವನ್ನೇ ಪರಲೋಕದಿಂದ ಬರುವುದನ್ನು ನೀವು ಎದುರು ನೋಡುತ್ತಿದ್ದೀರಿ ಎಂಬುದನ್ನೂ ಅವರು ನಮಗೆ ವಿವರಿಸಿದರು.
❮
❯