1 ಥೆಸಲೊನೀಕದವರಿಗೆ 5 : 1 (OCVKN)
ಕರ್ತ ಯೇಸುವಿನ ದಿನವು ಪ್ರಿಯರೇ, ಈ ಕಾಲಸಮಯಗಳನ್ನು ಕುರಿತು ನಿಮಗೆ ಬರೆಯುವುದು ಅವಶ್ಯವಿಲ್ಲ.
1 ಥೆಸಲೊನೀಕದವರಿಗೆ 5 : 2 (OCVKN)
ರಾತ್ರಿಯಲ್ಲಿ ಕಳ್ಳನು ಬರುವಂತೆ ಕರ್ತ ಯೇಸುವಿನ ದಿನವು ಬರುವುದೆಂದು ನೀವೇ ಚೆನ್ನಾಗಿ ಬಲ್ಲಿರಿ.
1 ಥೆಸಲೊನೀಕದವರಿಗೆ 5 : 3 (OCVKN)
ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.
1 ಥೆಸಲೊನೀಕದವರಿಗೆ 5 : 4 (OCVKN)
ಆದರೆ ಪ್ರಿಯರೇ, ಆ ದಿನವು ಕಳ್ಳನಂತೆ ನಿಮ್ಮನ್ನು ಆಶ್ಚರ್ಯಪಡಿಸುವುದಕ್ಕೆ ನೀವು ಕತ್ತಲೆಯಲ್ಲಿರುವವರಲ್ಲ.
1 ಥೆಸಲೊನೀಕದವರಿಗೆ 5 : 5 (OCVKN)
ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಿ. ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.
1 ಥೆಸಲೊನೀಕದವರಿಗೆ 5 : 6 (OCVKN)
ಆದಕಾರಣ ನಾವು ಇತರರಂತೆ ನಿದ್ರೆ ಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿರೋಣ.
1 ಥೆಸಲೊನೀಕದವರಿಗೆ 5 : 7 (OCVKN)
ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರೆ.
1 ಥೆಸಲೊನೀಕದವರಿಗೆ 5 : 8 (OCVKN)
ನಾವಾದರೋ ಹಗಲಿಗೆ ಸೇರಿದವರಾಗಿ ಇರುವುದರಿಂದ ನಂಬಿಕೆ ಹಾಗೂ ಪ್ರೀತಿಯನ್ನು ಕವಚವನ್ನಾಗಿಯೂ ರಕ್ಷಣೆಯ ನಿರೀಕ್ಷೆಯನ್ನು ಶಿರಸ್ತ್ರಾಣವನ್ನಾಗಿಯೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.
1 ಥೆಸಲೊನೀಕದವರಿಗೆ 5 : 9 (OCVKN)
ಏಕೆಂದರೆ ದೇವರು ನಮ್ಮನ್ನು ಕೋಪಾಗ್ನಿಗೆ ನೇಮಿಸದೆ ನಾವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿ ರಕ್ಷಣೆಯನ್ನು ಹೊಂದಬೇಕೆಂದೇ ನೇಮಿಸಿದರು.
1 ಥೆಸಲೊನೀಕದವರಿಗೆ 5 : 10 (OCVKN)
ನಾವು ಎಚ್ಚರವಾಗಿದ್ದರೂ ನಿದ್ರೆಯಲ್ಲಿದ್ದರೂ ತಮ್ಮ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಅವರು ನಮಗಾಗಿ ಸತ್ತರು.
1 ಥೆಸಲೊನೀಕದವರಿಗೆ 5 : 11 (OCVKN)
ಆದ್ದರಿಂದ ನೀವು ಈಗ ಮಾಡುತ್ತಿರುವಂತೆಯೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.
1 ಥೆಸಲೊನೀಕದವರಿಗೆ 5 : 12 (OCVKN)
ಅನುಸರಿಸಬೇಕಾದ ಅಂತಿಮ ಆಜ್ಞೆಗಳು ಪ್ರಿಯರೇ, ಯಾರು ನಿಮ್ಮ ನಡುವೆ ಪ್ರಯಾಸಪಟ್ಟು ಕರ್ತ ಯೇಸುವಿನಲ್ಲಿ ನಿಮ್ಮನ್ನು ಪರಾಮರಿಸುವವರಾಗಿದ್ದು ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಗೌರವಿಸಿರಿ.
1 ಥೆಸಲೊನೀಕದವರಿಗೆ 5 : 13 (OCVKN)
ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಅತ್ಯಧಿಕವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.
1 ಥೆಸಲೊನೀಕದವರಿಗೆ 5 : 14 (OCVKN)
ಪ್ರಿಯರೇ, ಶಿಸ್ತು ಇಲ್ಲದವರನ್ನು ಎಚ್ಚರಿಸಿರಿ. ಮನಗುಂದಿದವರನ್ನು ಆದರಿಸಿರಿ. ಬಲಹೀನರಿಗೆ ಆಧಾರವಾಗಿರಿ. ಎಲ್ಲರೊಂದಿಗೂ ತಾಳ್ಮೆಯುಳ್ಳವರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
1 ಥೆಸಲೊನೀಕದವರಿಗೆ 5 : 15 (OCVKN)
ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ. ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಳ್ಳುವುದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.
1 ಥೆಸಲೊನೀಕದವರಿಗೆ 5 : 16 (OCVKN)
1 ಥೆಸಲೊನೀಕದವರಿಗೆ 5 : 17 (OCVKN)
1 ಥೆಸಲೊನೀಕದವರಿಗೆ 5 : 18 (OCVKN)
ಎಲ್ಲವುಗಳಿಗಾಗಿ ಕೃತಜ್ಞತೆ ಸಲ್ಲಿಸಿರಿ. ಏಕೆಂದರೆ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.
1 ಥೆಸಲೊನೀಕದವರಿಗೆ 5 : 19 (OCVKN)
ಪವಿತ್ರಾತ್ಮ ದೇವರ ಸನ್ನಿಧಿಯನ್ನು ನಂದಿಸಬೇಡಿರಿ.
1 ಥೆಸಲೊನೀಕದವರಿಗೆ 5 : 20 (OCVKN)
ಪ್ರವಾದನೆಗಳನ್ನು ಹೀನೈಸಬೇಡಿರಿ.
1 ಥೆಸಲೊನೀಕದವರಿಗೆ 5 : 21 (OCVKN)
ಎಲ್ಲವನ್ನು ಪರಿಶೋಧಿಸಿ ಒಳ್ಳೆಯದನ್ನೇ ಬಿಗಿಯಾಗಿ ಹಿಡಿದುಕೊಳ್ಳಿರಿ.
1 ಥೆಸಲೊನೀಕದವರಿಗೆ 5 : 22 (OCVKN)
ಸಕಲ ವಿಧವಾದ ಕೆಟ್ಟತನಗಳಿಗೆ ದೂರವಾಗಿರಿ.
1 ಥೆಸಲೊನೀಕದವರಿಗೆ 5 : 23 (OCVKN)
ಸಮಾಧಾನದ ದೇವರು ತಾವಾಗಿಯೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಪುನರಾಗಮನದಲ್ಲಿ ನಿಮ್ಮ ಆತ್ಮ, ಪ್ರಾಣ, ಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿರಲಿ.
1 ಥೆಸಲೊನೀಕದವರಿಗೆ 5 : 24 (OCVKN)
ನಿಮ್ಮನ್ನು ಕರೆಯುವ ದೇವರು ನಂಬಿಗಸ್ತರು, ಅವರೇ ಅದನ್ನು ಸಾಧಿಸುವವರೂ ಆಗಿದ್ದಾರೆ.
1 ಥೆಸಲೊನೀಕದವರಿಗೆ 5 : 25 (OCVKN)
ಪ್ರಿಯರೇ, ನಮಗಾಗಿ ಪ್ರಾರ್ಥಿಸಿರಿ.
1 ಥೆಸಲೊನೀಕದವರಿಗೆ 5 : 26 (OCVKN)
ಪವಿತ್ರವಾದ ಮುದ್ದಿಟ್ಟು ದೇವಜನರೆಲ್ಲರನ್ನೂ ವಂದಿಸಿರಿ.
1 ಥೆಸಲೊನೀಕದವರಿಗೆ 5 : 27 (OCVKN)
ಈ ಪತ್ರವನ್ನು ಸಹೋದರ ಸಹೋದರಿಯರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತ ಯೇಸುವಿನ ಹೆಸರಿನಲ್ಲಿ ಆಜ್ಞಾಪಿಸುತ್ತೇನೆ.
1 ಥೆಸಲೊನೀಕದವರಿಗೆ 5 : 28 (OCVKN)
ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೊಂದಿಗಿರಲಿ.
❮
❯