1 ತಿಮೊಥೆಯನಿಗೆ 2 : 1 (OCVKN)
ಆರಾಧನೆಯ ಕ್ರಮ ಎಲ್ಲದಕ್ಕಿಂತ ಮೊದಲು ಮನುಷ್ಯರೆಲ್ಲರಿಗೋಸ್ಕರವೂ ಅರಸರುಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಬಿನ್ನಹಗಳನ್ನೂ ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಪ್ರಬೋಧಿಸುತ್ತೇನೆ.
1 ತಿಮೊಥೆಯನಿಗೆ 2 : 2 (OCVKN)
ಹೀಗೆ ಮಾಡಿದರೆ ನಾವು ನೆಮ್ಮದಿ ಹಾಗೂ ಸಮಾಧಾನಗಳಿಂದ ಕೂಡಿದ ಜೀವನವನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ನಡೆಸುವುದಕ್ಕಾಗುವುದು.
1 ತಿಮೊಥೆಯನಿಗೆ 2 : 3 (OCVKN)
ಏಕೆಂದರೆ ಇದು ನಮ್ಮ ರಕ್ಷಕರಾದ ದೇವರ ಮುಂದೆ ಒಳ್ಳೆಯದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಇದೆ.
1 ತಿಮೊಥೆಯನಿಗೆ 2 : 4 (OCVKN)
ಎಲ್ಲಾ ಮನುಷ್ಯರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಬರಬೇಕೆಂಬುದು ದೇವರ ಚಿತ್ತವಾಗಿದೆ.
1 ತಿಮೊಥೆಯನಿಗೆ 2 : 5 (OCVKN)
ದೇವರು ಒಬ್ಬರೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥ ಒಬ್ಬರೇ. ಅವರು ಮನುಷ್ಯರಾಗಿ ಬಂದ ಕ್ರಿಸ್ತ ಯೇಸುವೇ.
1 ತಿಮೊಥೆಯನಿಗೆ 2 : 6 (OCVKN)
ಯೇಸು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು. ಇದೇ ಸೂಕ್ತ ಸಮಯದಲ್ಲಿ ನೀಡಬೇಕಾದ ಸಾಕ್ಷಿಯಾಗಿದೆ.
1 ತಿಮೊಥೆಯನಿಗೆ 2 : 7 (OCVKN)
ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.
1 ತಿಮೊಥೆಯನಿಗೆ 2 : 8 (OCVKN)
ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ.
1 ತಿಮೊಥೆಯನಿಗೆ 2 : 9 (OCVKN)
ಹಾಗೆಯೇ ಸ್ತ್ರೀಯರು ಸಭ್ಯತೆ ಹಾಗೂ ಸ್ವಸ್ಥಬುದ್ಧಿಯುಳ್ಳವರಾಗಿದ್ದು ಗೌರವಕ್ಕೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ, ಚಿನ್ನ, ಮುತ್ತುಗಳು, ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ,
1 ತಿಮೊಥೆಯನಿಗೆ 2 : 10 (OCVKN)
ದೇವ ಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ತಕ್ಕಂತೆ ಸತ್ಕ್ರಿಯೆಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳಬೇಕು.
1 ತಿಮೊಥೆಯನಿಗೆ 2 : 11 (OCVKN)
ಸ್ತ್ರೀಯು* ಅಥವಾ ಹೆಂಡತಿ ಮೌನವಾಗಿದ್ದು ಎಲ್ಲಾ ಅಧೀನತೆಯನ್ನು ಕಲಿಯಬೇಕು.
1 ತಿಮೊಥೆಯನಿಗೆ 2 : 12 (OCVKN)
ಆದರೆ ಉಪದೇಶ ಮಾಡುವುದಕ್ಕಾಗಲಿ, ಪುರುಷನ† ಅಥವಾ ತನ್ನ ಗಂಡನ ಮೇಲೆ ಮೇಲೆ ಅಧಿಕಾರ ನಡೆಸುವುದಕ್ಕಾಗಲಿ ಸ್ತ್ರೀಗೆ ನಾನು ಅಪ್ಪಣೆ ಕೊಡುವುದಿಲ್ಲ. ಆಕೆಯು ಮೌನವಾಗಿರಬೇಕು.
1 ತಿಮೊಥೆಯನಿಗೆ 2 : 13 (OCVKN)
ಏಕೆಂದರೆ ಮೊದಲು ನಿರ್ಮಿತನಾದವನು ಆದಾಮನು, ಆಮೇಲೆ ಹವ್ವಳು.
1 ತಿಮೊಥೆಯನಿಗೆ 2 : 14 (OCVKN)
ಆದಾಮನು ವಂಚನೆಗೊಳಗಾಗಲಿಲ್ಲ, ಸ್ತ್ರೀಯು ವಂಚನೆಗೊಳಗಾಗಿ ಅಪರಾಧಿಯಾದಳು.
1 ತಿಮೊಥೆಯನಿಗೆ 2 : 15 (OCVKN)
ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆ, ಪ್ರೀತಿ ಹಾಗೂ ಪರಿಶುದ್ಧತೆಯಲ್ಲಿ ನೆಲೆಗೊಂಡಿದ್ದರೆ ಅವರು ಮಗುವನ್ನು ಹೆರುವುದರ ಮೂಲಕ ರಕ್ಷಣೆಹೊಂದುವರು.
❮
❯
1
2
3
4
5
6
7
8
9
10
11
12
13
14
15