1 ತಿಮೊಥೆಯನಿಗೆ 3 : 1 (OCVKN)
ಮೇಲ್ವಿಚಾರಕರೂ ಸಭಾಸೇವಕರೂ ಸಭೆಯ ಮೇಲ್ವಿಚಾರಕನಾಗಲು ಬಯಸುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.
1 ತಿಮೊಥೆಯನಿಗೆ 3 : 2 (OCVKN)
ಸಭೆಯ ಮೇಲ್ವಿಚಾರಕನು ನಿಂದಾರಹಿತನಾಗಿ, ಏಕಪತ್ನಿಯುಳ್ಳವನೂ ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಗೌರವಸ್ಥನೂ ಅತಿಥಿ ಸತ್ಕಾರ ಮಾಡುವವನೂ ಬೋಧಿಸುವುದರಲ್ಲಿ ಪ್ರವೀಣನೂ ಆಗಿರಬೇಕು.
1 ತಿಮೊಥೆಯನಿಗೆ 3 : 3 (OCVKN)
ಅವನು ಮದ್ಯಪಾನ ಮಾಡುವವನಾಗಿರಬಾರದು, ಹೊಡೆದಾಡುವವನಾಗಿರಬಾರದು. ಆದರೆ ಸಾತ್ವಿಕನೂ ಕುತರ್ಕ ಮಾಡದವನೂ ಹಣದಾಶೆಯಿಲ್ಲದವನೂ ಆಗಿರಬೇಕು.
1 ತಿಮೊಥೆಯನಿಗೆ 3 : 4 (OCVKN)
ಪೂರ್ಣ ಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವನಾಗಿರಬೇಕು.
1 ತಿಮೊಥೆಯನಿಗೆ 3 : 5 (OCVKN)
ಸ್ವಂತ ಮನೆಯವರನ್ನು ಆಳುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿಸುವನು?
1 ತಿಮೊಥೆಯನಿಗೆ 3 : 6 (OCVKN)
ಅವನು ಹೊಸದಾಗಿ ವಿಶ್ವಾಸಕ್ಕೆ ಬಂದವನಾಗಿರಬಾರದು. ಅಂಥವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಬಲಿಬೀಳುವನು.
1 ತಿಮೊಥೆಯನಿಗೆ 3 : 7 (OCVKN)
ಇದಲ್ಲದೆ ಅವನು ನಿಂದೆಗೆ ಗುರಿಯಾಗದವನೂ ಸೈತಾನನ ಉರುಲಿಗೆ ಸಿಕ್ಕಿ ಬೀಳದವನೂ ಆಗಿದ್ದಾನೆಂಬ ಒಳ್ಳೆಯ ಸಾಕ್ಷಿಯನ್ನು ಹೊಂದಿದವನಾಗಿರಬೇಕು.
1 ತಿಮೊಥೆಯನಿಗೆ 3 : 8 (OCVKN)
ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ನಾಲಿಗೆಯುಳ್ಳವರಾಗಿರಬಾರದು. ಮದ್ಯಾಸಕ್ತರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ
1 ತಿಮೊಥೆಯನಿಗೆ 3 : 9 (OCVKN)
ನಂಬಿಕೆಯ ರಹಸ್ಯವನ್ನು ಶುದ್ಧಮನಸ್ಸಾಕ್ಷಿಯಿಂದ ಹಿಡಿದುಕೊಂಡವರಾಗಿರಬೇಕು.
1 ತಿಮೊಥೆಯನಿಗೆ 3 : 10 (OCVKN)
ಇದಲ್ಲದೆ ಇವರು ಸಹ ಮೊದಲು ಪರೀಕ್ಷೆಗೊಳಪಡಬೇಕು. ಅವರು ನಿಂದಾರಹಿತರಾಗಿ ಕಂಡು ಬಂದರೆ ಸಭಾ ಹಿರಿಯರಾಗಿ ಸೇವೆಮಾಡಲಿ.
1 ತಿಮೊಥೆಯನಿಗೆ 3 : 11 (OCVKN)
1 ತಿಮೊಥೆಯನಿಗೆ 3 : 12 (OCVKN)
ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು. ಚಾಡಿ ಹೇಳದವರೂ ಸ್ವಸ್ಥ ಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು. ಸಭಾಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.
1 ತಿಮೊಥೆಯನಿಗೆ 3 : 13 (OCVKN)
ಸಭಾ ಹಿರಿಯರಾಗಿ ಚೆನ್ನಾಗಿ ಸೇವೆ ಮಾಡಿದವರು ತಮಗೆ ಒಳ್ಳೆಯ ಸ್ಥಿತಿಯನ್ನೂ, ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸದಲ್ಲಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.
1 ತಿಮೊಥೆಯನಿಗೆ 3 : 14 (OCVKN)
ಪೌಲನ ಸೂಚನೆಗಳಿಗೆ ಕಾರಣಗಳು ನಾನು ನಿನ್ನ ಬಳಿಗೆ ಬೇಗನೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.
1 ತಿಮೊಥೆಯನಿಗೆ 3 : 15 (OCVKN)
ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.
1 ತಿಮೊಥೆಯನಿಗೆ 3 : 16 (OCVKN)
ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”
❮
❯
1
2
3
4
5
6
7
8
9
10
11
12
13
14
15
16