1 ತಿಮೊಥೆಯನಿಗೆ 4 : 1 (OCVKN)
ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಗೊಟ್ಟು ವಿಶ್ವಾಸದಲ್ಲಿ ಬಿದ್ದುಹೋಗುವರೆಂದು ಪವಿತ್ರಾತ್ಮ ದೇವರು ಸ್ಪಷ್ಟವಾಗಿ ಹೇಳುತ್ತಾರೆ.
1 ತಿಮೊಥೆಯನಿಗೆ 4 : 2 (OCVKN)
ಅವರು ಕಪಟಿಗಳೂ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಬರೆಯುಳ್ಳವರಾದರೂ ಆಗಿದ್ದು
1 ತಿಮೊಥೆಯನಿಗೆ 4 : 3 (OCVKN)
ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ತಿಳಿದುಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವುದಕ್ಕೋಸ್ಕರ ದೇವರು ಸೃಷ್ಟಿಸಿದ ಆಹಾರವನ್ನು ತಿನ್ನಬಾರದೆಂತಲೂ ಆಜ್ಞಾಪಿಸುತ್ತಾರೆ.
1 ತಿಮೊಥೆಯನಿಗೆ 4 : 4 (OCVKN)
ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದಾಗಿದೆ. ಕೃತಜ್ಞತೆ ಮಾಡಿ ಸ್ವೀಕರಿಸುವ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ.
1 ತಿಮೊಥೆಯನಿಗೆ 4 : 5 (OCVKN)
ಅದು ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಪವಿತ್ರವಾಗುತ್ತದೆ.
1 ತಿಮೊಥೆಯನಿಗೆ 4 : 6 (OCVKN)
ಈ ವಿಷಯಗಳನ್ನು ಸಹೋದರರಿಗೆ ತಿಳಿಸುವವನಾದರೆ ನೀನು ಅನುಸರಿಸುತ್ತಿರುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ.
1 ತಿಮೊಥೆಯನಿಗೆ 4 : 7 (OCVKN)
ಪ್ರಾಪಂಚಿಕ ಹಾಗೂ ಅಜ್ಜಿ ಕಥೆಗಳನ್ನು ನಿರಾಕರಿಸಿ ನೀನು ದೇವಭಕ್ತಿಯನ್ನು ಅಭ್ಯಾಸ ಮಾಡಿಕೋ.
1 ತಿಮೊಥೆಯನಿಗೆ 4 : 8 (OCVKN)
ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.
1 ತಿಮೊಥೆಯನಿಗೆ 4 : 9 (OCVKN)
ಈ ಮಾತು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ.
1 ತಿಮೊಥೆಯನಿಗೆ 4 : 10 (OCVKN)
ಇದಕ್ಕಾಗಿ ನಾವು ಕಷ್ಟಪಡುತ್ತೇವೆ ಮತ್ತು ಪ್ರಯಾಸ ಪಡುತ್ತೇವೆ. ಏಕೆಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕ ಆಗಿರುವ ಜೀವಸ್ವರೂಪರಾದ ದೇವರನ್ನು ನಾವು ನಿರೀಕ್ಷಿಸಿದ್ದೇವೆ.
1 ತಿಮೊಥೆಯನಿಗೆ 4 : 11 (OCVKN)
ಈ ವಿಷಯಗಳನ್ನು ಆಜ್ಞಾಪಿಸಿ ಬೋಧಿಸು.
1 ತಿಮೊಥೆಯನಿಗೆ 4 : 12 (OCVKN)
ನಿನ್ನ ಯೌವನವನ್ನೂ ಯಾರೂ ತಾತ್ಸಾರ ಮಾಡದಿರಲಿ. ಆದರೆ ನಂಬುವವರಿಗೆ ನುಡಿಯಲ್ಲಿ, ನಡೆಯಲ್ಲಿ, ಪ್ರೀತಿಯಲ್ಲಿ, ವಿಶ್ವಾಸದಲ್ಲಿ, ಶುದ್ಧತ್ವದಲ್ಲಿ ನೀನೇ ಆದರ್ಶನಾಗಿರು.
1 ತಿಮೊಥೆಯನಿಗೆ 4 : 13 (OCVKN)
ನಾನು ಬರುವ ತನಕ ಓದುವುದರಲ್ಲಿಯೂ ಎಚ್ಚರಿಸುವುದರಲ್ಲಿಯೂ ಬೋಧಿಸುವುದರಲ್ಲಿಯೂ ಲಕ್ಷ್ಯಕೊಡು.
1 ತಿಮೊಥೆಯನಿಗೆ 4 : 14 (OCVKN)
ನಿನ್ನಲ್ಲಿರುವ ವರವನ್ನು ಅಲಕ್ಷ್ಯ ಮಾಡಬೇಡ. ಅದು ಸಭೆಯ ಹಿರಿಯರು ಪ್ರವಾದನೆಯ ಮೂಲಕ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ನಿನಗೆ ಕೊಡಲಾಯಿತಲ್ಲವೇ?
1 ತಿಮೊಥೆಯನಿಗೆ 4 : 15 (OCVKN)
ಈ ವಿಷಯಗಳನ್ನು ಧ್ಯಾನಿಸುವವನಾಗಿರು. ಇವುಗಳಲ್ಲಿಯೇ ನೆಲೆಗೊಂಡಿರು. ಹೀಗೆ ನಿನ್ನ ಪ್ರಗತಿಯು ಎಲ್ಲರಿಗೂ ಪ್ರಕಟವಾಗುವುದು.
1 ತಿಮೊಥೆಯನಿಗೆ 4 : 16 (OCVKN)
ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ.

1 2 3 4 5 6 7 8 9 10 11 12 13 14 15 16