1 ತಿಮೊಥೆಯನಿಗೆ 5 : 1 (OCVKN)
ವಿಧವೆಯರ, ಹಿರಿಯರ, ಗುಲಾಮರ ಬಗ್ಗೆ ಸಲಹೆಗಳು ವೃದ್ಧನನ್ನು ಗದರಿಸದೆ ತಂದೆಯಂತೆಯೂ ಯೌವನಸ್ಥರನ್ನು ಸಹೋದರರಂತೆಯೂ
1 ತಿಮೊಥೆಯನಿಗೆ 5 : 2 (OCVKN)
ವೃದ್ಧ ಸ್ತ್ರೀಯರನ್ನು ತಾಯಿಯಂತೆಯೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆಯಿಂದ ಸಹೋದರಿಯರಂತೆಯೂ ಅವರವರಿಗೆ ಬುದ್ಧಿ ಹೇಳು.
1 ತಿಮೊಥೆಯನಿಗೆ 5 : 3 (OCVKN)
ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯರನ್ನು ಗುರುತಿಸಿ ಅವರಿಗೆ ಸಹಾಯಮಾಡು.
1 ತಿಮೊಥೆಯನಿಗೆ 5 : 4 (OCVKN)
ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿಯಿಂದಿರುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದು.
1 ತಿಮೊಥೆಯನಿಗೆ 5 : 5 (OCVKN)
ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲು ಇರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
1 ತಿಮೊಥೆಯನಿಗೆ 5 : 6 (OCVKN)
ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ.
1 ತಿಮೊಥೆಯನಿಗೆ 5 : 7 (OCVKN)
ವಿಧವೆಯರು ನಿಂದೆಗೆ ಗುರಿಯಾಗದಂತೆ ಇವುಗಳನ್ನು ಆಜ್ಞಾಪಿಸು.
1 ತಿಮೊಥೆಯನಿಗೆ 5 : 8 (OCVKN)
ಯಾವನಾದರೂ ಸ್ವಂತದವರನ್ನು ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆದವನೂ ಅವಿಶ್ವಾಸಿಗಿಂತ ನೀಚನೂ ಆಗಿದ್ದಾನೆ.
1 ತಿಮೊಥೆಯನಿಗೆ 5 : 9 (OCVKN)
ವಯಸ್ಸಿನಲ್ಲಿ ಅರವತ್ತಕ್ಕೆ ಕಡಿಮೆಯಿಲ್ಲದ ವಿಧವೆಯರನ್ನು ಮಾತ್ರ ವಿಧವೆಯರ ಪಟ್ಟಿಯಲ್ಲಿ ಸೇರಿಸು. ಅಂಥವಳು ಗಂಡನಿಗೆ ನಂಬಿಗಸ್ತಳಾಗಿದ್ದಿರಬೇಕು.
1 ತಿಮೊಥೆಯನಿಗೆ 5 : 10 (OCVKN)
ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.
1 ತಿಮೊಥೆಯನಿಗೆ 5 : 11 (OCVKN)
ಆದರೆ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ. ಏಕೆಂದರೆ ಅವರಲ್ಲಿ ದೈಹಿಕ ಅಪೇಕ್ಷೆಗಳು ಕ್ರಿಸ್ತ ಯೇಸುವಿನ ಮೇಲಿಟ್ಟ ಅವರ ಪ್ರತಿಷ್ಠೆಯನ್ನು ಸೋಲಿಸಿ, ಅವರು ಮದುವೆ ಮಾಡಿಕೊಳ್ಳುವಂತೆ ಮಾಡುವವು.
1 ತಿಮೊಥೆಯನಿಗೆ 5 : 12 (OCVKN)
ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ಬಿಟ್ಟಿದ್ದರಿಂದ ತೀರ್ಪಿಗೆ ಗುರಿಯಾಗುವರು.
1 ತಿಮೊಥೆಯನಿಗೆ 5 : 13 (OCVKN)
ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಸೋಮಾರಿತನವನ್ನು ಕಲಿಯುತ್ತಾರೆ. ಸೋಮಾರಿಗಳಾಗುವುದಷ್ಟೇ ಅಲ್ಲ, ಹರಟೆ ಮಾತನಾಡುವವರೂ ಇತರರ ಕೆಲಸದಲ್ಲಿ ತಲೆಹಾಕುವವರಾಗಿ ಆಡಬಾರದ ಮಾತುಗಳನ್ನಾಡುವವರೂ ಆಗುತ್ತಾರೆ.
1 ತಿಮೊಥೆಯನಿಗೆ 5 : 14 (OCVKN)
ಆದ್ದರಿಂದ ಯೌವನಸ್ಥ ವಿಧವೆಯರು ಮದುವೆಮಾಡಿಕೊಂಡು, ಮಕ್ಕಳನ್ನು ಹೆತ್ತು, ಮನೆಯ ಕೆಲಸಮಾಡಿ, ವಿರೋಧಿಯ ನಿಂದೆಗೆ ಆಸ್ಪದ ಕೊಡಬಾರದೆಂಬುದೇ ನನ್ನ ಅಪೇಕ್ಷೆ.
1 ತಿಮೊಥೆಯನಿಗೆ 5 : 15 (OCVKN)
ಈಗಾಗಲೇ ಕೆಲವರು ದಾರಿತಪ್ಪಿ ಸೈತಾನನನ್ನು ಹಿಂಬಾಲಿಸಿದ್ದಾರೆ.
1 ತಿಮೊಥೆಯನಿಗೆ 5 : 16 (OCVKN)
1 ತಿಮೊಥೆಯನಿಗೆ 5 : 17 (OCVKN)
ವಿಶ್ವಾಸಿಯಾದ ಸ್ತ್ರೀಯ ಕುಟುಂಬದಲ್ಲಿ ವಿಧವೆಯರಿದ್ದರೆ, ಆಕೆ ಇಂಥವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸಬೇಕಾಗಿರುವುದರಿಂದ ಆ ಭಾರವನ್ನು ಸಭೆಯ ಮೇಲೆ ಹಾಕಬಾರದು. ಸಭಾಕಾರ್ಯಗಳನ್ನು ಸರಿಯಾಗಿ ನಡೆಸುತ್ತಿರುವ ಹಿರಿಯರು, ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆಯಲ್ಲಿಯೂ ಶ್ರಮಿಸುತ್ತಿರುವವರು ಇಮ್ಮಡಿಯಾದ ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.
1 ತಿಮೊಥೆಯನಿಗೆ 5 : 18 (OCVKN)
ಏಕೆಂದರೆ, “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು!”* ಧರ್ಮೋ 25:4 ಎಂತಲೂ, “ಕೆಲಸದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ!” † ಲೂಕ 10:7 ಎಂತಲೂ ಪವಿತ್ರ ವೇದದಲ್ಲಿ ಹೇಳಿದೆಯಲ್ಲಾ.
1 ತಿಮೊಥೆಯನಿಗೆ 5 : 19 (OCVKN)
ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ, ಇಬ್ಬರ ಇಲ್ಲವೆ ಮೂವರ ಸಾಕ್ಷಿ ಇಲ್ಲದೆ ಅದನ್ನು ಅಂಗೀಕರಿಸಬೇಡ.
1 ತಿಮೊಥೆಯನಿಗೆ 5 : 20 (OCVKN)
ಪಾಪಮಾಡುವ ಹಿರಿಯರನ್ನು ಎಲ್ಲರ ಮುಂದೆಯೇ ಗದರಿಸು. ಇದರಿಂದ ಇತರರಿಗೂ ಎಚ್ಚರಿಕೆಯಾಗುವುದು.
1 ತಿಮೊಥೆಯನಿಗೆ 5 : 21 (OCVKN)
ನೀನು ವಿಚಾರಿಸುವುದಕ್ಕೆ ಮೊದಲೇ ತೀರ್ಮಾನಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಗೊಳ್ಳಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯ್ಕೆಯಾದ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.
1 ತಿಮೊಥೆಯನಿಗೆ 5 : 22 (OCVKN)
1 ತಿಮೊಥೆಯನಿಗೆ 5 : 23 (OCVKN)
ಅವಸರದಿಂದ ಯಾರ ಮೇಲೆಯೂ ಹಸ್ತವನ್ನಿಟ್ಟು, ಸಭಾ ಹಿರಿಯರನ್ನಾಗಿ ನೇಮಿಸಬೇಡ. ಇತರರ ಪಾಪಗಳಲ್ಲಿ ಪಾಲುಗಾರನಾಗಬೇಡ. ನಿನ್ನನ್ನು ಶುದ್ಧನಾಗಿ ಕಾಪಾಡಿಕೋ.
1 ತಿಮೊಥೆಯನಿಗೆ 5 : 24 (OCVKN)
ನೀರನ್ನು ಮಾತ್ರ ಕುಡಿಯದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾಗುವ ಬಲಹೀನತೆಗಳಿಗಾಗಿಯೂ ಸ್ವಲ್ಪ ದ್ರಾಕ್ಷಾರಸವನ್ನು ಉಪಯೋಗಿಸು. ಕೆಲವರ ಪಾಪಗಳು ತೀರ್ಪಿಗೆ ಮುಂಚೆಯೇ ಬಹಿರಂಗವಾಗುತ್ತವೆ. ಇನ್ನು ಕೆಲವರ ಪಾಪಗಳು ಕ್ರಮೇಣವಾಗಿ ಕಂಡುಬರುತ್ತವೆ.
1 ತಿಮೊಥೆಯನಿಗೆ 5 : 25 (OCVKN)
ಅದರಂತೆಯೇ ಕೆಲವರ ಒಳ್ಳೆಯ ಕ್ರಿಯೆಗಳು ಮುಂಚೆಯೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವ ಒಳ್ಳೆಯ ಕ್ರಿಯೆಗಳು ನಿರಂತರವಾಗಿ ಮರೆಯಾಗಿರಲಾರವು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25