1 ತಿಮೊಥೆಯನಿಗೆ 6 : 1 (OCVKN)
ದೇವರ ನಾಮವೂ ನಮ್ಮ ಬೋಧನೆಯೂ ದೂಷಣೆಗೆ ಗುರಿಯಾಗದಂತೆ ದಾಸತ್ವದ ನೊಗ ಹೊತ್ತಿರುವವರು ತಮ್ಮ ಸ್ವಂತ ಯಜಮಾನರನ್ನು ಪೂರ್ಣ ಗೌರವಕ್ಕೆ ಯೋಗ್ಯರೆಂದೆಣಿಸಲಿ.
1 ತಿಮೊಥೆಯನಿಗೆ 6 : 2 (OCVKN)
ವಿಶ್ವಾಸಿಗಳಾದ ಯಜಮಾನರಿರುವವರು ಆ ಯಜಮಾನರು ಸಹೋದರನಾಗಿರುವುದರಿಂದ ಅವರನ್ನು ತಾತ್ಸಾರ ಮಾಡದಿರಲಿ. ಏಕೆಂದರೆ ತಮ್ಮ ಸೇವೆಯಿಂದ ಲಾಭ ಹೊಂದುವವರು ವಿಶ್ವಾಸಿಗಳು ಮತ್ತು ತಮಗೆ ಪ್ರಿಯರಾಗಿದ್ದಾರೆ ಎಂದು ತಿಳಿದು ಅವರಿಗೆ ಉತ್ತಮ ಸೇವೆಮಾಡಲಿ. ಇವುಗಳನ್ನು ಅವರಿಗೆ ಬೋಧಿಸಿ ಎಚ್ಚರಿಸು.
1 ತಿಮೊಥೆಯನಿಗೆ 6 : 3 (OCVKN)
ಸುಳ್ಳು ಬೋಧಕರು ಹಾಗೂ ಹಣದಾಶೆ ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಶುದ್ಧವಾದ ಮಾತುಗಳಿಗೂ ಭಕ್ತಿಗೆ ಅನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ,
1 ತಿಮೊಥೆಯನಿಗೆ 6 : 4 (OCVKN)
ಅಂಥವರು ಅಹಂಕಾರಿಯೂ ವಿವೇಕರಹಿತನಾಗಿದ್ದಾರೆ. ಅವರು ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯಪಡುವ ಭ್ರಾಂತರಾಗಿ ಸತ್ಯವನ್ನು ಬಿಟ್ಟು, ಕುತರ್ಕ ವಾಗ್ವಾದಗಳನ್ನು ಮಾಡುವವರಾಗಿದ್ದಾರೆ.
1 ತಿಮೊಥೆಯನಿಗೆ 6 : 5 (OCVKN)
ಹೀಗೆ ಅನಾರೋಗ್ಯಕರವಾದ ವಿವಾದಗಳನ್ನೂ ಕೆಲವು ಮಾತುಗಳ ಕುರಿತಾಗಿರುವ ತರ್ಕಗಳನ್ನೂ ಸೃಷ್ಟಿಸುವ ಪ್ರಸಿದ್ಧರಾಗಿದ್ದಾರೆ. ಅಂಥವರು ದೇವಭಕ್ತಿಯನ್ನು ಆರ್ಥಿಕ ಲಾಭವನ್ನಾಗಿ ಭಾವಿಸುವವರಾಗಿದ್ದಾರೆ.
1 ತಿಮೊಥೆಯನಿಗೆ 6 : 6 (OCVKN)
ಸಂತೃಪ್ತಿಯೊಂದಿಗಿರುವ ದೇವಭಕ್ತಿಯೇ ದೊಡ್ಡ ಲಾಭವು.
1 ತಿಮೊಥೆಯನಿಗೆ 6 : 7 (OCVKN)
ನಾವು ಲೋಕದೊಳಗೆ ಏನನ್ನೂ ತೆಗೆದುಕೊಂಡು ಬರಲಿಲ್ಲ. ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು.
1 ತಿಮೊಥೆಯನಿಗೆ 6 : 8 (OCVKN)
ಆದರೆ ಅನ್ನವಸ್ತ್ರಗಳು ನಮಗಿರುವುದಾದರೆ, ನಾವು ಅದರಲ್ಲಿ ತೃಪ್ತರಾಗಿರೋಣ.
1 ತಿಮೊಥೆಯನಿಗೆ 6 : 9 (OCVKN)
ಆದರೆ ಐಶ್ವರ್ಯವಂತರಾಗಬೇಕೆಂದು ಬಯಸುವವರು ಶೋಧನೆಯಲ್ಲಿಯೂ ಉರುಲಿನಲ್ಲಿಯೂ ಬಿದ್ದು ಅನೇಕ ಬುದ್ಧಿಹೀನವಾದ ಹಾಗೂ ಹಾನಿಕರವಾದ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ವಿನಾಶನಗಳಲ್ಲಿ ಮುಳುಗಿಸುತ್ತವೆ.
1 ತಿಮೊಥೆಯನಿಗೆ 6 : 10 (OCVKN)
ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.
1 ತಿಮೊಥೆಯನಿಗೆ 6 : 11 (OCVKN)
ತಿಮೊಥೆಗೆ ಪೌಲನ ಅಪ್ಪಣೆ ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.
1 ತಿಮೊಥೆಯನಿಗೆ 6 : 12 (OCVKN)
ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?
1 ತಿಮೊಥೆಯನಿಗೆ 6 : 13 (OCVKN)
ಎಲ್ಲಕ್ಕೂ ಜೀವ ನೀಡುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಒಳ್ಳೆಯ ಅರಿಕೆಯನ್ನು ಸಾಕ್ಷಿಯಾಗಿ ನೀಡಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳವುದೇನೆಂದರೆ:
1 ತಿಮೊಥೆಯನಿಗೆ 6 : 14 (OCVKN)
ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.
1 ತಿಮೊಥೆಯನಿಗೆ 6 : 15 (OCVKN)
ರಾಜಾಧಿರಾಜನೂ ಕರ್ತರ ಕರ್ತನೂ ಭಾಗ್ಯವಂತರಾದ ಏಕಾಧಿಪತಿಯು ತಮ್ಮ ಸಮಯಗಳಲ್ಲೆ ಕ್ರಿಸ್ತ ಯೇಸುವನ್ನು ಪ್ರತ್ಯಕ್ಷಪಡಿಸುವರು.
1 ತಿಮೊಥೆಯನಿಗೆ 6 : 16 (OCVKN)
ದೇವರೊಬ್ಬರೇ ಅಮರತ್ವವುಳ್ಳವರೂ ಯಾರೂ ಸಮೀಪಿಸಲಾರದ ಬೆಳಕಿನಲ್ಲಿ ವಾಸಿಸುವವರೂ ಆಗಿದ್ದಾರೆ. ಯಾವ ಮನುಷ್ಯನೂ ದೇವರನ್ನು ಕಾಣಲಿಲ್ಲ. ಯಾರೂ ಕಾಣಲಾರರು. ದೇವರಿಗೆ ಮಾನವೂ ಬಲವೂ ಸದಾಕಾಲಕ್ಕೂ ಇರಲಿ. ಆಮೆನ್.
1 ತಿಮೊಥೆಯನಿಗೆ 6 : 17 (OCVKN)
ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.
1 ತಿಮೊಥೆಯನಿಗೆ 6 : 18 (OCVKN)
ಅಂಥವರು ಒಳ್ಳೆಯದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲು ಕೊಡುವುದರಲ್ಲಿ ಸಿದ್ಧರಾಗಿರುವವರೂ ಪರೋಪಕಾರ ಮಾಡುವವರೂ ಆಗಿರಬೇಕೆಂದು ಅವರನ್ನು ಪ್ರಬೋಧಿಸು.
1 ತಿಮೊಥೆಯನಿಗೆ 6 : 19 (OCVKN)
ಹೀಗೆ ಮುಂದಿನ ಕಾಲಕ್ಕೆ ಯಥಾರ್ಥ ಜೀವವಾಗಿರುವ ನಿತ್ಯಜೀವವನ್ನು ಹಿಡಿದುಕೊಳ್ಳುವಂತೆ ತಮಗೋಸ್ಕರ ಸ್ಥಿರವಾದ ಅಸ್ತಿವಾರಕ್ಕಾಗಿ ನಿಕ್ಷೇಪಗಳನ್ನು ಕೂಡಿಸಿಟ್ಟುಕೊಳ್ಳಲಿ.
1 ತಿಮೊಥೆಯನಿಗೆ 6 : 20 (OCVKN)
ತಿಮೊಥೆಯನೇ, ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡು. ದೇವಭಕ್ತಿಗೆ ಅನುಗುಣವಾಗದ ಹರಟೆ ಮಾತುಗಳಿಗೂ ಜ್ಞಾನದಿಂದ ವಿಚಾರಪಡಿಸುವ ಸುಳ್ಳು ತರ್ಕಗಳಿಗೂ ಒಳಪಡದಿರು.
1 ತಿಮೊಥೆಯನಿಗೆ 6 : 21 (OCVKN)
ಕೆಲವರು ಇಂಥವುಗಳಿಗೆ ಒಳಪಟ್ಟು ನಂಬಿಕೆಯಿಂದ ಗುರಿತಪ್ಪಿ ಹೋಗಿದ್ದಾರೆ. ಕೃಪೆಯು ನಿಮ್ಮೊಂದಿಗಿರಲಿ.

1 2 3 4 5 6 7 8 9 10 11 12 13 14 15 16 17 18 19 20 21