2 ಪೂರ್ವಕಾಲವೃತ್ತಾ 13 : 1 (OCVKN)
ಯೆಹೂದ್ಯರ ಅರಸನಾದ ಅಬೀಯನು ಅರಸನಾದ ಯಾರೊಬ್ಬಾಮನ ಆಳಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ಅರಸನಾಗಿ,
2 ಪೂರ್ವಕಾಲವೃತ್ತಾ 13 : 2 (OCVKN)
ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು. ಅವನ ತಾಯಿಯ ಹೆಸರು ಮೀಕಾಯ, ಇವಳು ಗಿಬೆಯದ ಉರಿಯೇಲನ ಮಗಳು* ಅಥವಾ ಮೊಮ್ಮಗಳು . ಅಬೀಯನಿಗೂ, ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು.
2 ಪೂರ್ವಕಾಲವೃತ್ತಾ 13 : 3 (OCVKN)
ಆಗ ಅಬೀಯನು ಯುದ್ಧಭಟರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯ್ಕೆಯಾದ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷಮಂದಿ ಆಯ್ಕೆಯಾದ ಪರಾಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.
2 ಪೂರ್ವಕಾಲವೃತ್ತಾ 13 : 4 (OCVKN)
ಆಗ ಅಬೀಯನು ಎಫ್ರಾಯೀಮ್ ಬೆಟ್ಟದಲ್ಲಿರುವ ಚೆಮಾರಯಿಮ್ ಎಂಬ ಬೆಟ್ಟದ ಮೇಲೆ ನಿಂತು, “ಯಾರೊಬ್ಬಾಮನೇ, ಸಮಸ್ತ ಇಸ್ರಾಯೇಲರೇ, ನನ್ನ ಮಾತು ಕೇಳಿರಿ.
2 ಪೂರ್ವಕಾಲವೃತ್ತಾ 13 : 5 (OCVKN)
ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀದನಿಗೂ, ಅವನ ವಂಶದವರಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟರೆಂದು ನಿಮಗೆ ಗೊತ್ತಿಲ್ಲವೋ.
2 ಪೂರ್ವಕಾಲವೃತ್ತಾ 13 : 6 (OCVKN)
ಆದರೆ ದಾವೀದನ ಮಗ ಸೊಲೊಮೋನನ ಸೇವಕನಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ತನ್ನ ಯಜಮಾನನ ಮೇಲೆ ತಿರುಗಿಬಿದ್ದನು.
2 ಪೂರ್ವಕಾಲವೃತ್ತಾ 13 : 7 (OCVKN)
ಇದಲ್ಲದೆ ನಿಷ್ಪ್ರಯೋಜಕರಾದ ದುಷ್ಟರು ಅವನ ಬಳಿಗೆ ಕೂಡಿಬಂದು, ಸೊಲೊಮೋನನ ಮಗ ರೆಹಬ್ಬಾಮನು ಎಳೆಯ ಪ್ರಾಯದವನೂ, ನಿರ್ಣಯಿಸಲಾಗದವನೂ ಅವರನ್ನು ಎದುರಿಸಲು ಬಲವಿಲ್ಲದವನೂ ಆಗಿರುವುದರಿಂದ ಅವನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡರು.
2 ಪೂರ್ವಕಾಲವೃತ್ತಾ 13 : 8 (OCVKN)
“ಈಗ ದಾವೀದನ ವಂಶಜರ ಕೈಯಲ್ಲಿರುವ ಯೆಹೋವ ದೇವರ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೊಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.
2 ಪೂರ್ವಕಾಲವೃತ್ತಾ 13 : 9 (OCVKN)
ನೀವು ಯೆಹೋವ ದೇವರ ಯಾಜಕರಾದ ಆರೋನನ ವಂಶದವರಾದ ಲೇವಿಯರನ್ನೂ ತಳ್ಳಿ ಹಾಕಿ, ಅನ್ಯದೇಶಗಳ ಜನರಂತೆ ನಿಮಗೆ ಯಾಜಕರನ್ನು ಮಾಡಿಕೊಳ್ಳಲಿಲ್ಲವೋ? ಯಾವನಾದರೂ ದನದ ಮರಿಯಾದ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದು, ತನ್ನನ್ನು ಪ್ರತಿಷ್ಠೆ ಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನಷ್ಟೇ.
2 ಪೂರ್ವಕಾಲವೃತ್ತಾ 13 : 10 (OCVKN)
“ನಮಗಾದರೋ ಯೆಹೋವ ದೇವರು ದೇವರಾಗಿದ್ದಾರೆ. ನಾವು ಅವರನ್ನು ಬಿಡಲಿಲ್ಲ. ಇದಲ್ಲದೆ ಯೆಹೋವ ದೇವರಿಗೆ ಸೇವೆ ಮಾಡುವ ಯಾಜಕರು ಆರೋನನ ಮಕ್ಕಳು. ಲೇವಿಯರು ಅವರಿಗೆ ಕೆಲಸದಲ್ಲಿ ಸಹಾಯ ಮಾಡುತ್ತಿದ್ದರು.
2 ಪೂರ್ವಕಾಲವೃತ್ತಾ 13 : 11 (OCVKN)
ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.
2 ಪೂರ್ವಕಾಲವೃತ್ತಾ 13 : 12 (OCVKN)
ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು.
2 ಪೂರ್ವಕಾಲವೃತ್ತಾ 13 : 13 (OCVKN)
ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆ ಬರಮಾಡಿದನು. ಆದ್ದರಿಂದ ಇಸ್ರಾಯೇಲರು ಯೆಹೂದದವರ ಮುಂದೆಯೂ, ಅವರ ಹಿಂದೆಯೂ ಬಂದರು.
2 ಪೂರ್ವಕಾಲವೃತ್ತಾ 13 : 14 (OCVKN)
ಯೆಹೂದದವರು ಹಿಂದಕ್ಕೆ ನೋಡಿದಾಗ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಯೆಹೋವ ದೇವರಿಗೆ ಅವರು ಮೊರೆಯಿಟ್ಟರು. ಯಾಜಕರು ತುತೂರಿಗಳನ್ನು ಊದಿದರು.
2 ಪೂರ್ವಕಾಲವೃತ್ತಾ 13 : 15 (OCVKN)
ಆಗ ಯೆಹೂದ್ಯರು ಆರ್ಭಟಿಸಿದರು. ಯೆಹೂದ್ಯರು ಆರ್ಭಟಿಸಿದಾಗ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮನನ್ನೂ, ಸಮಸ್ತ ಇಸ್ರಾಯೇಲರನ್ನೂ ಅಪಜಯಗೊಳಿಸಿದರು.
2 ಪೂರ್ವಕಾಲವೃತ್ತಾ 13 : 16 (OCVKN)
ಇಸ್ರಾಯೇಲರು ಯೆಹೂದದವರ ಎದುರಿನಿಂದ ಓಡಿಹೋದರು. ಹೀಗೆ ದೇವರು ಇಸ್ರಾಯೇಲರನ್ನು ಯೆಹೂದದವರ ಕೈಯಲ್ಲಿ ಒಪ್ಪಿಸಿದರು.
2 ಪೂರ್ವಕಾಲವೃತ್ತಾ 13 : 17 (OCVKN)
ಅಬೀಯನೂ, ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿದರು. ಇಸ್ರಾಯೇಲರಲ್ಲಿ ಐದು ಲಕ್ಷಮಂದಿ ಬಲಶಾಲಿಗಳಾದ ಸೈನಿಕರು ಹತರಾದರು.
2 ಪೂರ್ವಕಾಲವೃತ್ತಾ 13 : 18 (OCVKN)
ಹೀಗೆ ಆ ಕಾಲದಲ್ಲಿ ಇಸ್ರಾಯೇಲರು ತಗ್ಗಿಹೋದರು. ಆದರೆ ಯೆಹೂದದವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಮೇಲೆ ಆತುಕೊಂಡದ್ದರಿಂದ ಜಯ ಹೊಂದಿದರು.
2 ಪೂರ್ವಕಾಲವೃತ್ತಾ 13 : 19 (OCVKN)
ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ, ಅವುಗಳ ಗ್ರಾಮಗಳನ್ನೂ ವಶಪಡಿಸಿಕೊಂಡನು.
2 ಪೂರ್ವಕಾಲವೃತ್ತಾ 13 : 20 (OCVKN)
ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲಿಲ್ಲ. ಯೆಹೋವ ದೇವರ ಶಿಕ್ಷೆಯಿಂದ ಯಾರೊಬ್ಬಾಮನು ಸತ್ತನು.
2 ಪೂರ್ವಕಾಲವೃತ್ತಾ 13 : 21 (OCVKN)
2 ಪೂರ್ವಕಾಲವೃತ್ತಾ 13 : 22 (OCVKN)
ಅಬೀಯನು ಪ್ರಬಲನಾದನು. ಅವನಿಗೆ ಹದಿನಾಲ್ಕು ಮಂದಿ ಹೆಂಡತಿಯರೂ, ಇಪ್ಪತ್ತೆರಡು ಮಂದಿ ಪುತ್ರರೂ, ಹದಿನಾರು ಮಂದಿ ಪುತ್ರಿಯರೂ ಇದ್ದರು. ಅಬೀಯನ ಮಿಕ್ಕಾದ ಕ್ರಿಯೆಗಳೂ, ಅವನ ನಡೆನುಡಿಗಳ ಮಾತುಗಳೂ ಪ್ರವಾದಿಯಾದ ಇದ್ದೋವನ ವರ್ತಮಾನಗಳಲ್ಲಿ ಬರೆದಿರುತ್ತವೆ.

1 2 3 4 5 6 7 8 9 10 11 12 13 14 15 16 17 18 19 20 21 22