2 ಪೂರ್ವಕಾಲವೃತ್ತಾ 17 : 1 (OCVKN)
ಯೆಹೂದ್ಯರ ಅರಸನಾದ ಯೆಹೋಷಾಫಾಟನು ಆಸನ ಮಗ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು. ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿಕೊಂಡನು.
2 ಪೂರ್ವಕಾಲವೃತ್ತಾ 17 : 2 (OCVKN)
ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು, ಯೆಹೂದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದುಕೊಂಡ ಎಫ್ರಾಯೀಮನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.
2 ಪೂರ್ವಕಾಲವೃತ್ತಾ 17 : 3 (OCVKN)
ಯೆಹೋಷಾಫಾಟನು ಬಾಳ್ ದೇವರುಗಳನ್ನು ಅನುಸರಿಸದೆ, ತನ್ನ ತಂದೆ ದಾವೀದನ ಮೊದಲಿನ ಮಾರ್ಗದಲ್ಲಿ ನಡೆದದ್ದರಿಂದ, ಯೆಹೋವ ದೇವರು ಅವನ ಸಂಗಡ ಇದ್ದರು.
2 ಪೂರ್ವಕಾಲವೃತ್ತಾ 17 : 4 (OCVKN)
ತನ್ನ ತಂದೆಯ ದೇವರನ್ನು ಹುಡುಕಿ, ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ, ದೇವರ ಆಜ್ಞೆಗಳಲ್ಲಿ ನಡೆದನು.
2 ಪೂರ್ವಕಾಲವೃತ್ತಾ 17 : 5 (OCVKN)
ಆದ್ದರಿಂದ ಯೆಹೋವ ದೇವರು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದರು. ಯೆಹೂದವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟದ್ದರಿಂದ, ಅವನಿಗೆ ಐಶ್ವರ್ಯವೂ, ಘನತೆಯೂ ಅಧಿಕವಾಯಿತು.
2 ಪೂರ್ವಕಾಲವೃತ್ತಾ 17 : 6 (OCVKN)
ಅವನ ಹೃದಯವು ಯೆಹೋವ ದೇವರ ಮಾರ್ಗಗಳಲ್ಲಿ ಸಮರ್ಪಿತವಾಗಿತ್ತು. ಇದಲ್ಲದೆ ಅವನು ಯೆಹೂದದಲ್ಲಿದ್ದ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದುಹಾಕಿದನು.
2 ಪೂರ್ವಕಾಲವೃತ್ತಾ 17 : 7 (OCVKN)
ಅವನ ಆಳಿಕೆಯ ಮೂರನೆಯ ವರ್ಷದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ, ಓಬದ್ಯನನ್ನೂ, ಜೆಕರ್ಯನನ್ನೂ, ನೆತನೆಯೇಲನನ್ನೂ, ಮೀಕಾಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೆಕಳುಹಿಸಿದನು.
2 ಪೂರ್ವಕಾಲವೃತ್ತಾ 17 : 8 (OCVKN)
ಅವರ ಸಂಗಡ ಲೇವಿಯರಾದ ಶೆಮಾಯನನ್ನೂ, ನೆತನ್ಯನನ್ನೂ, ಜೆಬದ್ಯನನ್ನೂ, ಅಸಾಯೇಲನನ್ನೂ, ಶೆಮೀರಾಮೋತನನ್ನೂ, ಯೆಹೋನಾತಾನನನ್ನೂ, ಅದೋನೀಯನನ್ನೂ, ಟೋಬೀಯನನ್ನೂ, ಟೋಬದೋನಿಯನನ್ನೂ, ಇವರ ಸಂಗಡ ಯಾಜಕರಾದ ಎಲೀಷಾಮನನ್ನೂ, ಯೆಹೋರಾಮನನ್ನೂ ಕಳುಹಿಸಿದನು.
2 ಪೂರ್ವಕಾಲವೃತ್ತಾ 17 : 9 (OCVKN)
ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಯೆಹೋವ ದೇವರ ನಿಯಮದ ಗ್ರಂಥ ಇತ್ತು. ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ, ಜನರಿಗೆ ಬೋಧಿಸಿದರು.
2 ಪೂರ್ವಕಾಲವೃತ್ತಾ 17 : 10 (OCVKN)
ಯೆಹೋವ ದೇವರ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದುದರಿಂದ, ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡಲಿಲ್ಲ.
2 ಪೂರ್ವಕಾಲವೃತ್ತಾ 17 : 11 (OCVKN)
ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಗಳನ್ನೂ, ಕಪ್ಪದ ಹಣವನ್ನು ತಂದರು. ಅರಬಿಯ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.
2 ಪೂರ್ವಕಾಲವೃತ್ತಾ 17 : 12 (OCVKN)
ಯೆಹೋಷಾಫಾಟನು ಬರಬರುತ್ತಾ ಬಹಳ ಅಭಿವೃದ್ಧಿಯಾಗಿ ಯೆಹೂದದಲ್ಲಿ ಅರಮನೆಗಳನ್ನೂ, ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.
2 ಪೂರ್ವಕಾಲವೃತ್ತಾ 17 : 13 (OCVKN)
ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ದವಸ ಧಾನ್ಯಗಳ ದೊಡ್ಡ ಮಳಿಗೆಯನ್ನು ಕಟ್ಟಿದನು. ಪರಾಕ್ರಮಶಾಲಿಗಳಾದ ಯುದ್ಧವೀರರು ಯೆರೂಸಲೇಮಿನಲ್ಲಿದ್ದರು.
2 ಪೂರ್ವಕಾಲವೃತ್ತಾ 17 : 14 (OCVKN)
ತಮ್ಮ ಪಿತೃಗಳ ಮನೆಯ ಪ್ರಕಾರವಾಗಿರುವ ಅವರ ಲೆಕ್ಕವೇನೆಂದರೆ: ಯೆಹೂದದ 1,000 ಅಧಿಪತಿಗಳಲ್ಲಿ ಅದ್ನಾನು ಮುಖ್ಯಸ್ಥನಾಗಿದ್ದನು. ಅವನ ಸಂಗಡ ಪರಾಕ್ರಮಶಾಲಿಗಳು 3,00,000 ಮಂದಿ ಇದ್ದರು.
2 ಪೂರ್ವಕಾಲವೃತ್ತಾ 17 : 15 (OCVKN)
ಅವನ ತರುವಾಯ ಅಧಿಪತಿಯಾದ ಯೆಹೋಹಾನಾನನು; ಅವನ ಸಂಗಡ 2,80,000 ಮಂದಿಯು.
2 ಪೂರ್ವಕಾಲವೃತ್ತಾ 17 : 16 (OCVKN)
ಇವನ ತರುವಾಯ ಯೆಹೋವ ದೇವರಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ 2,00,000 ಮಂದಿ ಪರಾಕ್ರಮಶಾಲಿಗಳು.
2 ಪೂರ್ವಕಾಲವೃತ್ತಾ 17 : 17 (OCVKN)
ಬೆನ್ಯಾಮೀನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ; ಇವನ ಸಂಗಡ ಬಿಲ್ಲನ್ನೂ, ಗುರಾಣಿಯನ್ನೂ ಧರಿಸಿಕೊಂಡಿರುವ 2,00,000 ಮಂದಿಯು.
2 ಪೂರ್ವಕಾಲವೃತ್ತಾ 17 : 18 (OCVKN)
ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ 1,80,000 ಮಂದಿಯು.
2 ಪೂರ್ವಕಾಲವೃತ್ತಾ 17 : 19 (OCVKN)
19 ಅರಸನಿಂದ ಸಮಸ್ತ ಯೆಹೂದದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇದ್ದವರ ಹೊರತಾಗಿ, ಇವರು ಅರಸನ ಬಳಿಯಲ್ಲಿ ಸೇವೆಮಾಡುತ್ತಿದ್ದರು.

1 2 3 4 5 6 7 8 9 10 11 12 13 14 15 16 17 18 19