2 ಪೂರ್ವಕಾಲವೃತ್ತಾ 21 : 1 (OCVKN)
ಯೆಹೋಷಾಫಾಟನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಪೂರ್ವಜರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಆಗ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.
2 ಪೂರ್ವಕಾಲವೃತ್ತಾ 21 : 2 (OCVKN)
ಇವನ ಸಹೋದರರಾಗಿರುವ ಯೆಹೋಷಾಫಾಟನ ಪುತ್ರರಾದ ಅಜರ್ಯನೂ, ಯೆಹೀಯೇಲನೂ, ಜೆಕರ್ಯನೂ, ಅಜರ್ಯನೂ, ಮೀಕಾಯೇಲನೂ, ಶೆಫಟ್ಯನೂ ಇದ್ದರು. ಇವರೆಲ್ಲರು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಪುತ್ರರು.
2 ಪೂರ್ವಕಾಲವೃತ್ತಾ 21 : 3 (OCVKN)
ಅವರ ತಂದೆ ಯೆಹೂದದಲ್ಲಿ ಕೋಟೆಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಯನ್ನೂ, ಬಂಗಾರವನ್ನೂ, ಬೆಲೆಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲ ಮಗನಾದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.
2 ಪೂರ್ವಕಾಲವೃತ್ತಾ 21 : 4 (OCVKN)
ಯೆಹೂದ್ಯರ ಅರಸನಾದ ಯೆಹೋರಾಮನು ಯೆಹೋರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ, ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ, ಇಸ್ರಾಯೇಲಿನ ಪ್ರಧಾನರಲ್ಲಿ ಕೆಲವರನ್ನೂ ಖಡ್ಗದಿಂದ ಕೊಂದುಹಾಕಿದನು.
2 ಪೂರ್ವಕಾಲವೃತ್ತಾ 21 : 5 (OCVKN)
ಯೆಹೋರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.
2 ಪೂರ್ವಕಾಲವೃತ್ತಾ 21 : 6 (OCVKN)
ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
2 ಪೂರ್ವಕಾಲವೃತ್ತಾ 21 : 7 (OCVKN)
ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.
2 ಪೂರ್ವಕಾಲವೃತ್ತಾ 21 : 8 (OCVKN)
ಯೆಹೋರಾಮನ ದಿನಗಳಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿಬಿದ್ದು, ತಮ್ಮ ಅರಸನನ್ನು ತಾವೇ ನೇಮಿಸಿಕೊಂಡರು.
2 ಪೂರ್ವಕಾಲವೃತ್ತಾ 21 : 9 (OCVKN)
ಆಗ ಯೆಹೋರಾಮನು ತನ್ನ ಪ್ರಧಾನರ ಸಂಗಡ, ಎಲ್ಲಾ ರಥಬಲವನ್ನು ತೆಗೆದುಕೊಂಡುಹೋಗಿ, ರಾತ್ರಿಯಲ್ಲಿ ಎದ್ದು, ತನ್ನನ್ನೂ, ತನ್ನ ರಥಗಳ ಅಧಿಪತಿಗಳನ್ನೂ ಸುತ್ತುವರೆದಿದ್ದ ಎದೋಮ್ಯರನ್ನು ಸೋಲಿಸಿದನು.
2 ಪೂರ್ವಕಾಲವೃತ್ತಾ 21 : 10 (OCVKN)
ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಅದೇ ಕಾಲದಲ್ಲಿ ಯೆಹೋರಾಮನು ತನ್ನ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು.
2 ಪೂರ್ವಕಾಲವೃತ್ತಾ 21 : 11 (OCVKN)
ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಪೂಜಾಸ್ಥಳಗಳನ್ನು ಮಾಡಿ, ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ, ಹಾಗೆಯೇ ಮಾಡಲು ಯೆಹೂದದವರನ್ನು ಬಲವಂತ ಮಾಡಿದನು.
2 ಪೂರ್ವಕಾಲವೃತ್ತಾ 21 : 12 (OCVKN)
ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಪತ್ರವು ಬಂತು. ಅದರಲ್ಲಿ ಅವನು, “ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗಗಳಲ್ಲಿಯೂ, ಯೆಹೂದದ ಅರಸನಾದ ಆಸನ ಮಾರ್ಗಗಳಲ್ಲಿಯೂ ನಡೆಯದೆ,
2 ಪೂರ್ವಕಾಲವೃತ್ತಾ 21 : 13 (OCVKN)
ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು, ಅಹಾಬನ ಮನೆಯವರು ದೇವದ್ರೋಹ ಮಾಡಿದಂತೆ, ಯೆಹೂದದವರನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ ದ್ರೋಹ ಮಾಡಲು ಪ್ರೇರೇಪಿಸಿ, ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆಯವರಾದ ನಿನ್ನ ಸಹೋದರರನ್ನು ಕೊಂದುಹಾಕಿದ್ದರಿಂದ,
2 ಪೂರ್ವಕಾಲವೃತ್ತಾ 21 : 14 (OCVKN)
ಯೆಹೋವ ದೇವರು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ, ನಿನ್ನ ಮಕ್ಕಳನ್ನೂ, ನಿನ್ನ ಹೆಂಡತಿಯರನ್ನೂ, ನಿನ್ನ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾರೆ.
2 ಪೂರ್ವಕಾಲವೃತ್ತಾ 21 : 15 (OCVKN)
ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವುದರಿಂದ ನಿನ್ನ ಕರುಳುಗಳು ಹೊರಕ್ಕೆ ಬರುವವರೆಗೆ ಕರುಳುಬೇನೆಯ ರೋಗದಿಂದ ನಿನಗೆ ಕಠಿಣರೋಗ ಬರುವುದು,’ ” ಎಂದು ಬರೆದಿದ್ದನು.
2 ಪೂರ್ವಕಾಲವೃತ್ತಾ 21 : 16 (OCVKN)
ಇದಲ್ಲದೆ ಕೂಷ್ಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಯೆಹೋವ ದೇವರು ಎಬ್ಬಿಸಿದರು.
2 ಪೂರ್ವಕಾಲವೃತ್ತಾ 21 : 17 (OCVKN)
ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ನುಗ್ಗಿ, ಅರಸನ ಅರಮನೆಯಲ್ಲಿ ಸಿಕ್ಕಿದ ಸಮಸ್ತ ಸ್ಥಿತಿಯನ್ನೂ, ಅವನ ಪುತ್ರರನ್ನೂ, ಅವನ ಹೆಂಡತಿಯರನ್ನೂ ತೆಗೆದುಕೊಂಡು ಹೋದರು. ಆದ್ದರಿಂದ ಅವನ ಪುತ್ರರಲ್ಲಿ ಚಿಕ್ಕವನಾದ ಯೆಹೋವಾಹಾಜನ ಹೊರತು ಅವನಿಗೆ ಪುತ್ರರು ಯಾರೂ ಉಳಿಯಲಿಲ್ಲ.
2 ಪೂರ್ವಕಾಲವೃತ್ತಾ 21 : 18 (OCVKN)
ಇದೆಲ್ಲದರ ತರುವಾಯ ಯೆಹೋವ ದೇವರು ಯೆಹೋರಾಮನ ಕರುಳುಗಳಲ್ಲಿ ವಾಸಿಯಾಗಲಾರದ ರೋಗದಿಂದ ಅವನನ್ನು ಬಾಧಿಸಿದರು.
2 ಪೂರ್ವಕಾಲವೃತ್ತಾ 21 : 19 (OCVKN)
ಎರಡು ವರ್ಷವಾದ ತರುವಾಯ, ಅವನ ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆ ಅವನು ಕಡುಬೇನೆಯಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೆ ಗೌರವಕ್ಕೋಸ್ಕರ ಅಗ್ನಿಕುಂಡ ಹಚ್ಚಲಿಲ್ಲ.
2 ಪೂರ್ವಕಾಲವೃತ್ತಾ 21 : 20 (OCVKN)
ಯೆಹೋರಾಮ್ ಆಳಲಾರಂಭಿಸಿದಾಗ ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಗಳಲ್ಲಿ ಅಲ್ಲ.

1 2 3 4 5 6 7 8 9 10 11 12 13 14 15 16 17 18 19 20