2 ಕೊರಿಂಥದವರಿಗೆ 1 : 1 (OCVKN)
ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ಕೊರಿಂಥದಲ್ಲಿರುವ ದೇವರ ಸಭೆಗೆ ಮತ್ತು ಅಖಾಯ ಪ್ರಾಂತದಲ್ಲಿರುವ ಎಲ್ಲಾ ಪವಿತ್ರ ಜನರಿಗೆ ಬರೆಯುವ ಪತ್ರ:
2 ಕೊರಿಂಥದವರಿಗೆ 1 : 2 (OCVKN)
ನಮ್ಮ ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
2 ಕೊರಿಂಥದವರಿಗೆ 1 : 3 (OCVKN)
ಸಂತೈಸುವ ದೇವರು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣೆಯುಳ್ಳ ತಂದೆಯೂ ಎಲ್ಲರನ್ನೂ ಆದರಿಸುವ ದೇವರೂ ಆಗಿದ್ದಾರೆ.
2 ಕೊರಿಂಥದವರಿಗೆ 1 : 4 (OCVKN)
ದೇವರು ನಮಗಾಗುವ ಎಲ್ಲಾ ಬಾಧೆಗಳಲ್ಲಿ ನಮ್ಮನ್ನು ಸಂತೈಸುವವರಾಗಿದ್ದಾರೆ. ಇತರರು ಬಾಧೆಗಳನ್ನು ಅನುಭವಿಸುತ್ತಿರುವಾಗ, ನಾವು ಸಹ ದೇವರಿಂದ ಹೊಂದಿರುವ ಸಂತೈಸುವಿಕೆಯಿಂದ ಅವರನ್ನು ಸಂತೈಸಲು ನಮ್ಮನ್ನು ಶಕ್ತರನ್ನಾಗಿ ಮಾಡಿದ್ದಾರೆ.
2 ಕೊರಿಂಥದವರಿಗೆ 1 : 5 (OCVKN)
ಕ್ರಿಸ್ತ ಯೇಸುವಿನ ಸಂಕಟವು ನಮ್ಮಲ್ಲಿ ಹೇಗೆ ಅಧಿಕವಾಗಿದೆಯೋ ಹಾಗೆಯೇ, ಕ್ರಿಸ್ತ ಯೇಸುವಿನ ಮೂಲಕ ನಮ್ಮ ಸಂತೈಸುವಿಕೆಯೂ ನಮ್ಮಲ್ಲಿ ಅಧಿಕವಾಗಿರುತ್ತದೆ.
2 ಕೊರಿಂಥದವರಿಗೆ 1 : 6 (OCVKN)
ನಮಗೆ ಕಷ್ಟಸಂಕಟಗಳು ಬಂದರೆ, ಅದು ನಿಮ್ಮ ಆದರಣೆ ಮತ್ತು ರಕ್ಷಣೆಗೋಸ್ಕರವೇ ಇರುತ್ತದೆ. ನಾವು ಸಂತೈಸುವಿಕೆಯನ್ನು ಹೊಂದಿರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ಆ ಆದರಣೆಯು ನಮ್ಮಂತೆ ನೀವು ಅನುಭವಿಸುವ ಕಷ್ಟಸಂಕಟಗಳನ್ನು ಸಹನೆಯಿಂದ ಅನುಭವಿಸುವಂತೆ ಮಾಡುವುದು.
2 ಕೊರಿಂಥದವರಿಗೆ 1 : 7 (OCVKN)
ನಿಮಗಾಗಿರುವ ನಮ್ಮ ನಿರೀಕ್ಷೆಯು ಸ್ಥಿರವಾಗಿದೆ. ಏಕೆಂದರೆ, ನಮ್ಮ ಕಷ್ಟಸಂಕಟಗಳಲ್ಲಿ ನೀವು ಪಾಲುಗಾರರಾಗಿದ್ದಂತೆಯೇ, ನಮ್ಮ ಸಂತೈಸುವಿಕೆಗಳಲ್ಲಿಯೂ ನೀವು ನಮ್ಮೊಂದಿಗೆ ಪಾಲುಗಾರರಾಗಿದ್ದೀರಿ ಎಂದು ನಮಗೆ ಗೊತ್ತಿದೆ.
2 ಕೊರಿಂಥದವರಿಗೆ 1 : 8 (OCVKN)
ಪ್ರಿಯರೇ, ನಾವು ಏಷ್ಯಾ ಪ್ರಾಂತದಲ್ಲಿ ಅನುಭವಿಸಿದ ಕಷ್ಟ ಸಂಕಟಗಳ ಬಗ್ಗೆ ನೀವು ತಿಳಿಯಬೇಕೆಂದು ಬಯಸುತ್ತೇವೆ. ನಾವು ಸಹಿಸುವುದಕ್ಕೆ ಬಹುಕಷ್ಟಕರವಾದ ಒತ್ತಡಗಳು ನಮಗೆ ಬಂದೊದಗಿದಾಗ, ಅವು ನಮ್ಮ ಪ್ರಾಣಕ್ಕೂ ಅಪಾಯಕಾರಿ ಎಂದೆನಿಸಿತು.
2 ಕೊರಿಂಥದವರಿಗೆ 1 : 9 (OCVKN)
ಮರಣದ ಶಿಕ್ಷೆಯನ್ನು ನಾವು ಅನುಭವಿಸುತ್ತೇವೋ ಎಂಬಂತೆ ನಮಗಾಯಿತು. ನಾವು ನಮ್ಮ ಮೇಲೆ ಭರವಸೆಯಿಡದೆ, ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸೆ ಇಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.
2 ಕೊರಿಂಥದವರಿಗೆ 1 : 10 (OCVKN)
ನಾವು ಭರವಸೆಯಿಟ್ಟ ದೇವರು ಅಂಥಾ ಮರಣಕರ ಅಪಾಯದಿಂದ ನಮ್ಮನ್ನು ತಪ್ಪಿಸಿದ್ದಾರೆ ಮತ್ತು ಮುಂದೆಯೂ ಅಪಾಯಗಳಿಂದ ನಮ್ಮನ್ನು ಪಾರುಮಾಡುವರು.
2 ಕೊರಿಂಥದವರಿಗೆ 1 : 11 (OCVKN)
ನೀವು ನಿಮ್ಮ ಪ್ರಾರ್ಥನೆಯಿಂದ ನಮಗೆ ಸಹಾಯಮಾಡಿರಿ. ಹೀಗೆ, ಬಹಳ ಜನರ ಪ್ರಾರ್ಥನೆಗಳಿಗೆ ಉತ್ತರವಾಗಿ ನಮಗೆ ದೊರಕಿದ ಕೃಪೆಯ ಮೆಚ್ಚುಗೆಗಾಗಿ, ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುವರು.
2 ಕೊರಿಂಥದವರಿಗೆ 1 : 12 (OCVKN)
ಪೌಲನ ಬದಲಾದ ಯೋಜನೆಗಳು ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.
2 ಕೊರಿಂಥದವರಿಗೆ 1 : 13 (OCVKN)
ನಿಮಗೆ ಓದಲು ಅಥವಾ ಅರ್ಥಮಾಡಿಕೊಳ್ಳಲು ಅಸಾಧ್ಯವಾದ ಯಾವುದನ್ನೂ ನಾವು ಬರೆಯಲಿಲ್ಲ.
2 ಕೊರಿಂಥದವರಿಗೆ 1 : 14 (OCVKN)
ಈಗ ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರಿತುಕೊಂಡಿದ್ದೀರಿ. ಆದರೆ ಕರ್ತ ಆಗಿರುವ ಯೇಸುವಿನ ಪುನರಾಗಮನ ದಿನದಲ್ಲಿ ನಾವು ನಿಮ್ಮ ಬಗ್ಗೆ ಹೆಮ್ಮೆ ಪಡುವಂತೆ, ನಮ್ಮ ಬಗ್ಗೆ ಹೆಮ್ಮೆ ಪಡಲು ನೀವು ಸಂಪೂರ್ಣವಾಗಿ ನಮ್ಮನ್ನು ಅರಿತುಕೊಳ್ಳುವಿರೆಂಬ ನಿರೀಕ್ಷೆ ನಮಗಿದೆ.
2 ಕೊರಿಂಥದವರಿಗೆ 1 : 15 (OCVKN)
ಈ ಭರವಸೆಯಿಂದ, ನಾನು ನಿಮ್ಮನ್ನು ಮೊದಲು ಸಂದರ್ಶಿಸಿ, ನಿಮಗೆ ಎರಡರಷ್ಟು ಉಪಯುಕ್ತತೆಯನ್ನು ಹೊಂದುವಂತೆ ಯೋಚನೆ ಮಾಡಿದ್ದೆನು.
2 ಕೊರಿಂಥದವರಿಗೆ 1 : 16 (OCVKN)
ಮಕೆದೋನ್ಯಕ್ಕೆ ಹೋಗುವಾಗ ನಾನು ನಿಮ್ಮನ್ನು ಸಂದರ್ಶಿಸುವೆನು, ಅಲ್ಲಿಂದ ಹಿಂದಿರುಗಿ ಬರುವಾಗಲೂ ನಿಮ್ಮನ್ನು ಸಂದರ್ಶಿಸಲು ನಾನೇ ಯೂದಾಯಕ್ಕೆ ಬರುವಂತೆ ಯೋಚನೆ ಮಾಡಿದ್ದೆನು.
2 ಕೊರಿಂಥದವರಿಗೆ 1 : 17 (OCVKN)
ನಾನು ಇದನ್ನು ಯೋಚಿಸಿದಾಗ, ಚಂಚಲಹೃದಯವನ್ನು ತಾಳಿದೆನೋ? ಅಥವಾ, ಒಮ್ಮೆ ಅದು “ಹೌದು, ಹೌದು” ಅದೇ ಕ್ಷಣದಲ್ಲಿ ಅದು “ಅಲ್ಲ, ಅಲ್ಲ” ಎಂದು ನಾನು ಲೋಕ ರೀತಿಯಾಗಿ ಯೋಜನೆಯನ್ನು ತಯಾರಿಸಿದ್ದೇನೋ?
2 ಕೊರಿಂಥದವರಿಗೆ 1 : 18 (OCVKN)
ನಿಶ್ಚಯವಾಗಿ, ದೇವರು ಹೇಗೆ ಪ್ರಾಮಾಣಿಕತೆಗೆ ಯೋಗ್ಯರೋ, ಹಾಗೆಯೇ ನಾವು ನಿಮಗೆ ಕೊಟ್ಟ ಸಂದೇಶವೂ, ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ.
2 ಕೊರಿಂಥದವರಿಗೆ 1 : 19 (OCVKN)
ನಾನು, ಸಿಲ್ವಾನ ಮತ್ತು ತಿಮೊಥೆಯನು ನಿಮ್ಮಲ್ಲಿ ಬೋಧಿಸಿದ ದೇವರ ಪುತ್ರನಾದ ಯೇಸು ಕ್ರಿಸ್ತನು ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ. ಯಾವಾಗಲೂ ಅದು ಕ್ರಿಸ್ತನಲ್ಲಿ ಹೌದು ಎಂದೇ ಆಗಿರುತ್ತಾನೆ.
2 ಕೊರಿಂಥದವರಿಗೆ 1 : 20 (OCVKN)
ದೇವರು ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತ ಯೇಸುವಿನಲ್ಲಿ “ಹೌದು” ಎಂದೇ ಇರುತ್ತದೆ. ಕ್ರಿಸ್ತ ಯೇಸುವಿನ ಮೂಲಕ ನಾವು ಅದಕ್ಕೆ “ಆಮೆನ್” ಎಂದು ದೇವರ ಮಹಿಮೆಗಾಗಿ ಎನ್ನುತ್ತೇವೆ.
2 ಕೊರಿಂಥದವರಿಗೆ 1 : 21 (OCVKN)
ನೀವೂ ನಾವೂ ಕ್ರಿಸ್ತ ಯೇಸುವಿನಲ್ಲಿ ದೃಢವಾಗಿ ನಿಲ್ಲುವಂತೆ ದೇವರು ನಮ್ಮನ್ನು ಸ್ಥಿರಪಡಿಸುತ್ತಾರೆ. ದೇವರು ನಮ್ಮನ್ನು ಅಭಿಷೇಕಿಸಿ,
2 ಕೊರಿಂಥದವರಿಗೆ 1 : 22 (OCVKN)
ನಮ್ಮ ಮೇಲೆ ದೇವರಿಗಿರುವ ಅಧಿಕಾರವೆಂಬ ಮುದ್ರೆಯನ್ನು ಒತ್ತಿದರು. ಮಾತ್ರವಲ್ಲದೇ ತಮ್ಮ ಪವಿತ್ರಾತ್ಮನನ್ನು ಖಾತರಿಯಾಗಿ ನಮ್ಮ ಹೃದಯದಲ್ಲಿಟ್ಟರು.
2 ಕೊರಿಂಥದವರಿಗೆ 1 : 23 (OCVKN)
ನಿಮಗೆ ಶ್ರಮೆ ಪಡಿಸಬಾರದೆಂದು ನಾನು ಕೊರಿಂಥಕ್ಕೆ ಹಿಂದಿರುಗಿ ಬರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.
2 ಕೊರಿಂಥದವರಿಗೆ 1 : 24 (OCVKN)
ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತೇವೆಂದು ತಿಳಿಯಬೇಡಿರಿ. ಆದರೆ ನಿಮ್ಮ ಆನಂದಕ್ಕಾಗಿ ಕೆಲಸಮಾಡಿ, ನಾವೂ ಭಾಗಿಗಳಾಗಿರಲು ಬಯಸುತ್ತೇವೆ. ಏಕೆಂದರೆ, ನೀವು ವಿಶ್ವಾಸದಲ್ಲಿ ದೃಢವಾಗಿ ನಿಂತಿದ್ದೀರಲ್ಲ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24