2 ಕೊರಿಂಥದವರಿಗೆ 10 : 1 (OCVKN)
ಪೌಲನ ಸೇವೆಯ ಸಮರ್ಥನೆ ನಾನು ನಿಮ್ಮ ಬಳಿಯಲ್ಲಿ ಮುಖಾಮುಖಿಯಾಗಿ ಮಾತನಾಡುವಾಗ, “ಮೃದುವಾಗಿಯೂ” ನಿಮ್ಮಿಂದ ದೂರವಿರುವಾಗ “ಕಠಿಣನಾಗಿಯೂ ವರ್ತಿಸುವವನು” ಎಂತಲೂ ನೀವು ತಿಳಿದಿದ್ದೀರಿ. ಅಂಥ ಪೌಲನೆಂಬ, ನಾನು ಕ್ರಿಸ್ತ ಯೇಸುವಿನ ದೀನತ್ವದಿಂದಲೂ ಸಾತ್ವಿಕತೆಯಿಂದಲೂ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:
2 ಕೊರಿಂಥದವರಿಗೆ 10 : 2 (OCVKN)
ನಾನು ನಿಮ್ಮ ಬಳಿಗೆ ಬಂದಾಗ, ಕಠಿಣವಾಗಿ ವರ್ತಿಸಲು ನನಗೆ ಅವಕಾಶಕೊಡಬೇಡಿರಿ. ಏಕೆಂದರೆ ನಾವು ಪ್ರಾಪಂಚಿಕ ರೀತಿಗನುಸಾರವಾಗಿ ನಡೆಯುತ್ತಿದ್ದೇವೆಂದು ಆಕ್ಷೇಪಿಸುವ ಕೆಲವರ ವಿರುದ್ಧ ಖಂಡಿತವಾಗಿಯು ಕಠಿಣನಾಗಿಯೇ ವರ್ತಿಸಬೇಕೆಂದಿದ್ದೇನೆ.
2 ಕೊರಿಂಥದವರಿಗೆ 10 : 3 (OCVKN)
ನಾವು ಈ ಲೋಕದಲ್ಲಿ ಜೀವಿಸುವವರಾದರೂ, ನಾವು ಲೋಕದವರಂತೆ ಹೋರಾಟ ಮಾಡುವವರಲ್ಲ.
2 ಕೊರಿಂಥದವರಿಗೆ 10 : 4 (OCVKN)
ನಾವು ಹೋರಾಡುವಾಗ ಉಪಯೋಗಿಸುವ ಆಯುಧಗಳು ಲೋಕದವುಗಳಲ್ಲ. ಅವುಗಳಿಗೆ ಕೋಟೆಗಳನ್ನೇ ಕೆಡವಿ ಹಾಕುವ ದೈವಿಕ ಶಕ್ತಿ ಇದೆ.
2 ಕೊರಿಂಥದವರಿಗೆ 10 : 5 (OCVKN)
ನಾವು ದೈವಜ್ಞಾನವನ್ನು ವಿರೋಧಿಸುವ ವಾಗ್ವಾದಗಳನ್ನೂ ಪ್ರತಿಯೊಂದು ನಟನೆಯನ್ನೂ ಧ್ವಂಸಮಾಡುತ್ತೇವೆ. ಪ್ರತಿಯೊಂದು ಯೋಚನೆಗಳನ್ನು ಕ್ರಿಸ್ತ ಯೇಸುವಿಗೆ ವಿಧೇಯವಾಗುವಂತೆ ಸೆರೆಹಿಡಿಯುವವರು ಆಗಿದ್ದೇವೆ.
2 ಕೊರಿಂಥದವರಿಗೆ 10 : 6 (OCVKN)
ನಿಮ್ಮ ವಿಧೇಯತ್ವವು ಪರಿಪೂರ್ಣವಾದಾಗ, ನಾವು ಪ್ರತಿಯೊಂದು ಅವಿಧೇಯತ್ವವನ್ನೂ ಶಿಕ್ಷಿಸಲು ಸಿದ್ಧರಾಗಿದ್ದೇವೆ.
2 ಕೊರಿಂಥದವರಿಗೆ 10 : 7 (OCVKN)
ನೀವು ಹೊರಗಿನ ತೋರಿಕೆಗಳನ್ನು ಮಾತ್ರ ತೀರ್ಪುಮಾಡುವವರಾಗಿದ್ದೀರಿ. ಯಾರಾದರೂ ತಾನು ಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ತಾನು ಹೇಗೆ ಕ್ರಿಸ್ತ ಯೇಸುವಿನವನೋ, ಹಾಗೆಯೇ ನಾವೂ ಕ್ರಿಸ್ತ ಯೇಸುವಿನವರು ಎಂದು ಅವನು ತಿಳಿದುಕೊಳ್ಳಲಿ.
2 ಕೊರಿಂಥದವರಿಗೆ 10 : 8 (OCVKN)
ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ. ನಿಮ್ಮ ಭಕ್ತಿವೃದ್ಧಿಮಾಡಲಿಕ್ಕೆ ಕರ್ತ ಯೇಸು ನಮಗೆ ಅಧಿಕಾರವನ್ನು ಕೊಟ್ಟಿದ್ದಾರೆ. ಈ ಅಧಿಕಾರದ ಬಗ್ಗೆ ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾನು ನಾಚಿಕೆಪಡುವುದಿಲ್ಲ.
2 ಕೊರಿಂಥದವರಿಗೆ 10 : 9 (OCVKN)
ನನ್ನ ಪತ್ರಗಳಿಂದ ನಾನು ನಿಮಗೆ ಭಯ ಹುಟ್ಟಿಸಲು ಪ್ರಯತ್ನಿಸುವುದಕ್ಕೆ ನನಗೆ ಮನಸ್ಸಿಲ್ಲ.
2 ಕೊರಿಂಥದವರಿಗೆ 10 : 10 (OCVKN)
“ಅವನ ಪತ್ರಗಳು ತೀಕ್ಷ್ಣವಾಗಿಯೂ ಶಕ್ತಿಯುತವಾಗಿಯೂ ಇವೆ. ಆದರೆ ಅವನು ಎದುರು ಬಂದಾಗ ನಿರ್ಬಲನೂ ಕೆಲಸಕ್ಕೆ ಬಾರದ ಮಾತುಗಳನ್ನಾಡುವವನೂ ಆಗಿದ್ದಾನೆ,” ಎಂದು ಕೆಲವರು ಹೇಳುತ್ತಾರೆ.
2 ಕೊರಿಂಥದವರಿಗೆ 10 : 11 (OCVKN)
ಆದರೆ, ನಾವು ದೂರದಲ್ಲಿರುವಾಗ ಪತ್ರಗಳ ಮಾತಿನಲ್ಲಿ ಎಂಥವರಾಗಿದ್ದೇವೋ, ಹತ್ತಿರದಲ್ಲಿರುವಾಗಲೂ ಕೃತ್ಯದಲ್ಲಿ ಅಂಥವರಾಗಿಯೇ ಇರುತ್ತೇವೆ ಎಂದು ಅಂಥವರು ಅರ್ಥಮಾಡಿಕೊಳ್ಳಲಿ.
2 ಕೊರಿಂಥದವರಿಗೆ 10 : 12 (OCVKN)
ತಮ್ಮನ್ನು ತಾವೇ ಹೊಗಳಿಕೊಳ್ಳುವವರೊಂದಿಗೆ ನಾವು ಹೋಲಿಸಿಕೊಳ್ಳಲು ಯತ್ನಿಸುವುದಿಲ್ಲ. ಏಕೆಂದರೆ, ಅವರು ತಮ್ಮತಮ್ಮೊಳಗೆ ತಮ್ಮನ್ನು ಅಳತೆ ಮಾಡಿಕೊಂಡು ಒಬ್ಬರೊಂದಿಗೊಬ್ಬರು ಹೋಲಿಸಿಕೊಳ್ಳುವುದರಿಂದ ವಿವೇಕವಿಲ್ಲದವರಾಗಿರುತ್ತಾರೆ.
2 ಕೊರಿಂಥದವರಿಗೆ 10 : 13 (OCVKN)
ನಾವಾದರೋ ಮೇರೆ ತಪ್ಪಿ ಹೊಗಳಿಕೊಳ್ಳುವುದಿಲ್ಲ; ದೇವರು ತಾವೇ ನಮಗೆ ನೇಮಿಸಿದ ಸೇವಾಕ್ಷೇತ್ರದ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಆ ಮೇರೆಯೊಳಗೆ ನೀವೂ ಒಳಪಟ್ಟಿದ್ದೀರಿ.
2 ಕೊರಿಂಥದವರಿಗೆ 10 : 14 (OCVKN)
ನಾವು ಮೊದಲು ನಿಮ್ಮ ಬಳಿಗೆ ಬಾರದಿದ್ದರೆ, ನಮ್ಮ ಹೊಗಳಿಕೊಳ್ಳುವಿಕೆಯು ಮೇರೆಯನ್ನು ಉಲ್ಲಂಘಿಸುವುದಾಗಿರುತ್ತಿತ್ತು; ಆದರೆ ನಾವು ನಿಮಗೆ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದಕ್ಕಾಗಿ ನಿಮ್ಮ ಬಳಿಗೆ ಬಂದೇವಲ್ಲಾ.
2 ಕೊರಿಂಥದವರಿಗೆ 10 : 15 (OCVKN)
ಬೇರೆಯವರು ಮಾಡಿದ ಪ್ರಯಾಸದ ಫಲಕ್ಕಾಗಿ, ನಾವು ಮೇರೆ ತಪ್ಪಿ ಹೊಗಳಿಕೊಳ್ಳುವವರಲ್ಲ. ಆದರೆ ನಿಮ್ಮ ವಿಶ್ವಾಸವು ವೃದ್ಧಿಯಾದಂತೆ, ನಿಮ್ಮ ಮಧ್ಯೆ ನಮ್ಮ ಸೇವಾಕ್ಷೇತ್ರವು ಅಧಿಕವಾಗಿ ವಿಸ್ತಾರವಾಗಬೇಕೆಂದು ನಿರೀಕ್ಷಿಸುತ್ತೇವೆ.
2 ಕೊರಿಂಥದವರಿಗೆ 10 : 16 (OCVKN)
ಏಕೆಂದರೆ, ನಿಮ್ಮ ಪ್ರದೇಶಗಳಿಗೆ ಆಚೆ ಇರುವ ಸ್ಥಳಗಳಲ್ಲಿಯೂ ನಾವು ಸುವಾರ್ತೆಯನ್ನು ಸಾರಬೇಕು. ಇತರರು ಮಾಡಿದ ಸೇವಾಕ್ಷೇತ್ರದಲ್ಲಿ ನಾವು ಸೇವೆಮಾಡಿ, ಹೆಚ್ಚಳ ಪಡುವುದಕ್ಕೆ ನಮಗಿಷ್ಟವಿಲ್ಲ.
2 ಕೊರಿಂಥದವರಿಗೆ 10 : 17 (OCVKN)
ಆದರೆ, “ಹೆಚ್ಚಳ ಪಡುವವನು ಕರ್ತ ದೇವರಲ್ಲಿಯೇ ಹೆಚ್ಚಳ ಪಡಲಿ.”* ಯೆರೆ 9:24
2 ಕೊರಿಂಥದವರಿಗೆ 10 : 18 (OCVKN)
ತನ್ನನ್ನು ತಾನೇ ಹೊಗಳಿಕೊಳ್ಳುವವನಲ್ಲ, ಕರ್ತ ಯೇಸು ಯಾರನ್ನು ಹೊಗಳುತ್ತಾರೋ ಅವನೇ ಯೋಗ್ಯನು.

1 2 3 4 5 6 7 8 9 10 11 12 13 14 15 16 17 18