2 ಕೊರಿಂಥದವರಿಗೆ 13 : 1 (OCVKN)
ಅಂತಿಮ ಎಚ್ಚರಿಕೆಗಳು ನಾನು ನಿಮ್ಮ ಬಳಿಗೆ ಬರುವುದು ಇದು ಮೂರನೆಯ ಸಾರಿ. “ಇಬ್ಬರು ಮೂವರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು,”* ಧರ್ಮೋ 19:15 ಎಂದು ಬರೆಯಲಾಗಿದೆ.
2 ಕೊರಿಂಥದವರಿಗೆ 13 : 2 (OCVKN)
ನಾನು ಎರಡನೆಯ ಸಾರಿ ನಿಮ್ಮ ಬಳಿಗೆ ಬಂದಿದ್ದಾಗ, ಗತಕಾಲದಲ್ಲಿ ಪಾಪ ಮಾಡುತ್ತಿದ್ದವರನ್ನು ಎಚ್ಚರಿಸಿದೆನು. ನಾನು ತಿರುಗಿ ಬಂದರೆ, ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ ದೂರದಲ್ಲಿದ್ದುಕೊಂಡು ಹೇಳುತ್ತಿದ್ದೇನೆ.
2 ಕೊರಿಂಥದವರಿಗೆ 13 : 3 (OCVKN)
ಕ್ರಿಸ್ತ ಯೇಸು ನನ್ನ ಮೂಲಕ ಮಾತನಾಡುತ್ತಾನೆಂಬುದಕ್ಕೆ ನಿಮಗೆ ಬೇಕಾದ ನಿದರ್ಶನವು ಆಗ ತೋರಿಬರುವುದು. ಬಲಹೀನನಾಗಿ ಕ್ರಿಸ್ತನು ನಿಮ್ಮೊಂದಿಗೆ ವ್ಯವಹರಿಸದೆ, ನಿಮ್ಮ ನಡುವೆ ಶಕ್ತನಾಗಿದ್ದಾನೆ.
2 ಕೊರಿಂಥದವರಿಗೆ 13 : 4 (OCVKN)
ಕ್ರಿಸ್ತ ಯೇಸು ಬಲಹೀನತೆಯಲ್ಲಿ ಶಿಲುಬೆಗೆ ಹಾಕಲಾದರು ನಿಜ. ಆದರೆ ಅವರು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾರೆ. ನಾವು ಸಹ ಬಲಹೀನತೆಯುಳ್ಳವರಾಗಿದ್ದೇವೆ. ಆದರೆ ನಾವು ನಿಮ್ಮ ಸೇವೆ ಮಾಡುವಂತೆ, ನಾವು ಕ್ರಿಸ್ತ ಯೇಸುವಿನೊಂದಿಗೆ ದೇವರ ಶಕ್ತಿಯಿಂದ ಬದುಕುತ್ತಿದ್ದೇವೆ.
2 ಕೊರಿಂಥದವರಿಗೆ 13 : 5 (OCVKN)
ನಂಬಿಕೆಯಲ್ಲಿ ಇದ್ದೀರೋ, ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಕ್ರಿಸ್ತ ಯೇಸು ನಿಮ್ಮಲ್ಲಿದ್ದಾರೆಂಬುದರ ಬಗ್ಗೆ ನಿಮಗೆ ನಂಬಿಕೆಯಿಲ್ಲವೋ? ಅವರು ನಿಮ್ಮಲ್ಲಿಲ್ಲದಿದ್ದರೆ, ನೀವು ಪರೀಕ್ಷೆಯಲ್ಲಿ ಉತ್ತೀರ್ಣರಾದವರಲ್ಲ.
2 ಕೊರಿಂಥದವರಿಗೆ 13 : 6 (OCVKN)
ನಾವಂತೂ ಉತ್ತೀರ್ಣರಾದವರೆಂದು ನಿಮಗೆ ಗೊತ್ತಾಗುವುದೆಂದು ನಾನು ನಿರೀಕ್ಷಿಸುತ್ತೇನೆ.
2 ಕೊರಿಂಥದವರಿಗೆ 13 : 7 (OCVKN)
ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಉತ್ತೀರ್ಣರಾದವರು ಎಂದು ಕಂಡುಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಸೋತವರಾಗಿ ಕಂಡುಬಂದರೂ ನೀವು ಒಳ್ಳೆಯದನ್ನೇ ಮಾಡಬೇಕೆಂಬುದು ನಮ್ಮ ಪ್ರಾರ್ಥನೆಯಾಗಿದೆ.
2 ಕೊರಿಂಥದವರಿಗೆ 13 : 8 (OCVKN)
ಸತ್ಯಕ್ಕೆ ವಿರುದ್ಧವಾಗಿ ನಾವೇನೂ ಮಾಡಲಾರೆವು. ಸತ್ಯದ ಪರವಾಗಿಯೇ ಎಲ್ಲವನ್ನೂ ಮಾಡುತ್ತೇವೆ.
2 ಕೊರಿಂಥದವರಿಗೆ 13 : 9 (OCVKN)
ನಾವು ಬಲಹೀನರಾಗಿದ್ದರೂ, ನೀವು ಬಲಿಷ್ಠರಾಗಿದ್ದಿರೆಂದು ತಿಳಿದು ಆನಂದಪಡುತ್ತೇವೆ. ನೀವು ಪರಿಪೂರ್ಣರಾಗಬೇಕೆಂದೇ ನಾವು ಪ್ರಾರ್ಥಿಸುತ್ತೇವೆ.
2 ಕೊರಿಂಥದವರಿಗೆ 13 : 10 (OCVKN)
ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ, ಈ ಮಾತುಗಳನ್ನು ಬರೆದಿದ್ದೇನೆ. ನಾನು ಬಂದಾಗ ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ ಆದರೆ ಕಟ್ಟುವುದಕ್ಕಾಗಿ ಕರ್ತ ಯೇಸು ನನಗೆ ಕೊಟ್ಟಿರುವ ಅಧಿಕಾರದಿಂದ ನಿಮಗೆ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.
2 ಕೊರಿಂಥದವರಿಗೆ 13 : 11 (OCVKN)
ಅಂತಿಮ ವಂದನೆಗಳು ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.
2 ಕೊರಿಂಥದವರಿಗೆ 13 : 12 (OCVKN)
2 ಕೊರಿಂಥದವರಿಗೆ 13 : 13 (OCVKN)
ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ದೇವಜನರೆಲ್ಲರೂ ನಿಮಗೆ ತಮ್ಮ ವಂದನೆಗಳನ್ನು ತಿಳಿಸಿದ್ದಾರೆ.
2 ಕೊರಿಂಥದವರಿಗೆ 13 : 14 (OCVKN)
ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮ ದೇವರ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡ ಇರಲಿ.
❮
❯
1
2
3
4
5
6
7
8
9
10
11
12
13
14