2 ಕೊರಿಂಥದವರಿಗೆ 2 : 1 (OCVKN)
ಆದ್ದರಿಂದ ಇನ್ನೊಮ್ಮೆ ನಿಮ್ಮ ಬಳಿಗೆ ಬಂದು ನಿಮಗೆ ವೇದನೆಯನ್ನು ಉಂಟುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆನು.
2 ಕೊರಿಂಥದವರಿಗೆ 2 : 2 (OCVKN)
ನಾನೇ ನಿಮ್ಮನ್ನು ದುಃಖಪಡಿಸಿದರೆ, ನಾನು ದುಃಖಪಡಿಸಿದ ನಿಮ್ಮನ್ನಲ್ಲದೆ ನನ್ನನ್ನು ಆನಂದಪಡಿಸುವವರು ಬೇರೆ ಯಾರಿದ್ದಾರೆ?
2 ಕೊರಿಂಥದವರಿಗೆ 2 : 3 (OCVKN)
ನಾನು ಬಂದಾಗ ನನ್ನನ್ನು ಆನಂದಪಡಿಸತಕ್ಕವರಿಂದಲೇ ದುಃಖ ಹೊಂದಬಾರದೆಂದು ನಾನು ಹಿಂದಿನ ಪತ್ರವನ್ನು ನಿಮಗೆ ಬರೆದಿದ್ದೇನೆ. ನನ್ನ ಆನಂದದಲ್ಲಿ ನೀವೆಲ್ಲರೂ ಪಾಲಾಗುವಿರಿ ಎಂದು ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸೆ ಇದೆ.
2 ಕೊರಿಂಥದವರಿಗೆ 2 : 4 (OCVKN)
ಏಕೆಂದರೆ, ನಿಮಗೆ ದುಃಖವಾಗಬೇಕೆಂದಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ ನಾನು ಮಹಾ ದುಃಖದಿಂದಲೂ ಬಹಳ ಕಣ್ಣೀರಿನಿಂದಲೂ ಹೃದಯದ ವೇದನೆಯಿಂದಲೂ ನಿಮಗೆ ಬರೆದೆನು.
2 ಕೊರಿಂಥದವರಿಗೆ 2 : 5 (OCVKN)
ಅಪರಾಧಿಗೆ ಕ್ಷಮಾಪಣೆ ನಿಮ್ಮಲ್ಲಿ ಯಾರಾದರೂ ನನ್ನನ್ನು ದುಃಖಪಡಿಸಿದರೆ, ಅವನು ನನ್ನನ್ನು ಮಾತ್ರವೇ ದುಃಖ ಪಡಿಸದೆ, ಒಂದು ವಿಧದಲ್ಲಿ ನಿಮ್ಮೆಲ್ಲರನ್ನೂ ದುಃಖಪಡಿಸಿದ್ದಾನೆ. ಅವನ ಮೇಲೆ ಬಹಳ ಕಠಿಣನಾಗಿರಲು ನನಗೆ ಇಷ್ಟವಿಲ್ಲ.
2 ಕೊರಿಂಥದವರಿಗೆ 2 : 6 (OCVKN)
ಅವನಿಗೆ ನಿಮ್ಮಲ್ಲಿ ಅನೇಕರಿಂದ ಉಂಟಾದ ಶಿಕ್ಷೆಯೇ ಸಾಕು.
2 ಕೊರಿಂಥದವರಿಗೆ 2 : 7 (OCVKN)
ಈಗ ಅವನನ್ನು ನೀವು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ, ಅವನು ದುಃಖದಲ್ಲಿ ಮುಳುಗಿ ಹೋದಾನು.
2 ಕೊರಿಂಥದವರಿಗೆ 2 : 8 (OCVKN)
ಅದಕ್ಕಾಗಿ ನೀವು ನಿಮ್ಮ ಪ್ರೀತಿಯನ್ನು ಮೊದಲು ಇದ್ದಂತೆ ಈಗಲೂ ಅವನ ಮೇಲೆ ತೋರಿಸಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.
2 ಕೊರಿಂಥದವರಿಗೆ 2 : 9 (OCVKN)
ಎಲ್ಲಾ ವಿಷಯಗಳಲ್ಲಿ ನೀವು ವಿಧೇಯರಾಗುತ್ತೀರೋ ಏನೋ ಎಂದು ಪರೀಕ್ಷಿಸಿ ಅರಿತುಕೊಳ್ಳಬೇಕೆಂಬ ಕಾರಣಕ್ಕಾಗಿ ನಾನು ನಿಮಗೆ ಹಾಗೆ ಬರೆದನು.
2 ಕೊರಿಂಥದವರಿಗೆ 2 : 10 (OCVKN)
ನೀವು ಯಾರನ್ನಾದರೂ ಕ್ಷಮಿಸಿದರೆ, ನಾನು ಅವರನ್ನು ಕ್ಷಮಿಸುವೆನು. ನಾನು ಯಾರನ್ನಾದರೂ ಕ್ಷಮಿಸಿದರೆ, ನಿಮ್ಮ ನಿಮಿತ್ತವಾಗಿಯೇ ಕ್ರಿಸ್ತ ಯೇಸುವಿನ ಸನ್ನಿಧಾನದಲ್ಲಿ ಕ್ಷಮಿಸುವೆನು.
2 ಕೊರಿಂಥದವರಿಗೆ 2 : 11 (OCVKN)
ಸೈತಾನನು ನಮ್ಮನ್ನು ವಂಚಿಸಲು ಅವಕಾಶ ಕೊಡಬಾರದು. ಅವನ ಕುತಂತ್ರಗಳನ್ನು ನಾವು ಅರಿತವರಲ್ಲವೇ?
2 ಕೊರಿಂಥದವರಿಗೆ 2 : 12 (OCVKN)
ಹೊಸ ಒಡಂಬಡಿಕೆಯ ಸೇವಕರು ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಹೋದಾಗ, ಅಲ್ಲಿ ಕರ್ತ ಯೇಸುವು ನನಗೆ ಬಾಗಿಲು ತೆರೆದಿರುವುದನ್ನು ಕಂಡೆನು.
2 ಕೊರಿಂಥದವರಿಗೆ 2 : 13 (OCVKN)
ನನ್ನ ಸಹೋದರನಾದ ತೀತನು ನನಗೆ ಅಲ್ಲಿ ಸಿಗದಿದ್ದ ಕಾರಣ, ನನ್ನ ಆತ್ಮಕ್ಕೆ ಇನ್ನೂ ವಿಶ್ರಾಂತಿಯಿರಲಿಲ್ಲ. ಆದ್ದರಿಂದ ತ್ರೋವದವರಿಗೆ ನಾನು ನನ್ನ ವಂದನೆಗಳನ್ನರ್ಪಿಸಿ ಮಕೆದೋನ್ಯ ಪ್ರಾಂತಕ್ಕೆ ಹೋದೆನು.
2 ಕೊರಿಂಥದವರಿಗೆ 2 : 14 (OCVKN)
ಕ್ರಿಸ್ತ ಯೇಸುವಿನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರೆಸುತ್ತಾ, ಅವರ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ಪ್ರಸಾರಗೊಳಿಸುವ ದೇವರಿಗೆ ಕೃತಜ್ಞತೆಗಳು.
2 ಕೊರಿಂಥದವರಿಗೆ 2 : 15 (OCVKN)
ರಕ್ಷಣಾ ಮಾರ್ಗದಲ್ಲಿರುವವರಿಗೂ ನಾಶದ ಮಾರ್ಗದಲ್ಲಿರುವವರಿಗೂ ನಾವು ದೇವರಿಗೆ ಕ್ರಿಸ್ತ ಯೇಸುವಿನ ಪರಿಮಳವಾಗಿದ್ದೇವೆ.
2 ಕೊರಿಂಥದವರಿಗೆ 2 : 16 (OCVKN)
ಕೆಲವರಿಗೆ ನಾವು ಮರಣದ ವಾಸನೆಯಾಗಿದ್ದೇವೆ. ಇತರರಿಗೆ ಜೀವವನ್ನು ಹುಟ್ಟಿಸುವ ವಾಸನೆಯಾಗಿರುತ್ತೇವೆ. ಇಂಥ ಸೇವೆಗೆ ಸಮರ್ಥರು ಯಾರು?
2 ಕೊರಿಂಥದವರಿಗೆ 2 : 17 (OCVKN)
ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ, ಅದರಿಂದ ಹಣಗಳಿಸುತ್ತಾರೆ. ನಾವಾದರೋ ಹಾಗೆ ಮಾಡುವವರಲ್ಲ. ನಾವು ದೇವರಿಂದ ಕಳುಹಿಸಲಾದವರಾಗಿ ಕ್ರಿಸ್ತ ಯೇಸುವಿನಲ್ಲಿದ್ದುಕೊಂಡು ದೇವರ ಮುಂದೆ ಯಥಾರ್ಥವಾಗಿ ಮಾತನಾಡುತ್ತೇವೆ.

1 2 3 4 5 6 7 8 9 10 11 12 13 14 15 16 17