2 ಕೊರಿಂಥದವರಿಗೆ 3 : 1 (OCVKN)
ನಮ್ಮನ್ನು ನಾವೇ ತಿರುಗಿ ಶಿಫಾರಸ್ಸು ಮಾಡಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಬೇರೆಯವರಂತೆ ನಿಮಗೆ ತೋರಿಸುವುದಕ್ಕೆ ಯೋಗ್ಯತಾಪತ್ರವು ಬೇಕೋ ಅಥವಾ ನಿಮ್ಮಿಂದ ನಮಗೆ ಯೋಗ್ಯತಾಪತ್ರವು ಬೇಕಾಗಿದೆಯೋ?
2 ಕೊರಿಂಥದವರಿಗೆ 3 : 2 (OCVKN)
ನೀವೇ ನಮ್ಮ ಹೃದಯದ ಮೇಲೆ ಎಲ್ಲರೂ ಓದಿ ತಿಳಿದುಕೊಳ್ಳಬಹುದಾದ ಪತ್ರವಾಗಿರುತ್ತೀರಿ.
2 ಕೊರಿಂಥದವರಿಗೆ 3 : 3 (OCVKN)
ನಮ್ಮ ಸುವಾರ್ತಾ ಸೇವೆಯ ಫಲಿತಾಂಶವಾಗಿ, ನೀವು ಕ್ರಿಸ್ತ ಯೇಸುವಿನ ಪತ್ರವೆಂದು ಪ್ರಕಟಿಸುತ್ತಿದ್ದೀರಿ ಎಂಬುದು ಸ್ಪಷ್ಟವಾಗಿದೆ. ಆ ಪತ್ರವು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆಯಲಾಗಿದೆ, ಕಲ್ಲಿನ ಹಲಗೆಗಳ ಮೇಲೆಯಲ್ಲ, ಮಾನವ ಹೃದಯಗಳೆಂಬ ಹಲಗೆಗಳ ಮೇಲೆ ಬರೆಯಲಾಗಿದೆ.
2 ಕೊರಿಂಥದವರಿಗೆ 3 : 4 (OCVKN)
ಕ್ರಿಸ್ತ ಯೇಸುವಿನ ಮೂಲಕ ದೇವರ ಮುಂದೆ ನಮಗೆ ಅಂಥಾ ಭರವಸೆಯು ಇರುವುದರಿಂದ ನಾವು ಹಾಗೆ ಹೇಳುತ್ತಿದ್ದೇವೆ.
2 ಕೊರಿಂಥದವರಿಗೆ 3 : 5 (OCVKN)
ನಮ್ಮಿಂದಲೇ ಉಂಟಾಯಿತು ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಯಾವ ಸಾಮರ್ಥ್ಯವೂ ಇಲ್ಲ. ನಮ್ಮ ಸಾಮರ್ಥ್ಯವು ದೇವರಿಂದಲೇ ಬರುತ್ತದೆ.
2 ಕೊರಿಂಥದವರಿಗೆ 3 : 6 (OCVKN)
ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.
2 ಕೊರಿಂಥದವರಿಗೆ 3 : 7 (OCVKN)
ಹೊಸ ಒಡಂಬಡಿಕೆಯ ಮಹಿಮೆ ಕಲ್ಲಿನ ಮೇಲೆ ಅಕ್ಷರಗಳನ್ನು ಕೆತ್ತಿಸಿದ್ದೂ, ಮರಣವನ್ನುಂಟುಮಾಡುವಂಥದ್ದೂ ಆಗಿರುವ ಆ ಸೇವೆಯು ಮಹಿಮೆಯಿಂದ ಕೂಡಿದ್ದಾಗಿತ್ತು. ಕುಂದಿಹೋಗುವಂಥ ಆ ಮಹಿಮೆಯಿಂದ ತುಂಬಿದ ಮೋಶೆಯ ಮುಖವನ್ನು ಇಸ್ರಾಯೇಲರಿಗೆ ದಿಟ್ಟಿಸಿ ನೋಡಲು ಸಾಧ್ಯವಾಗಲಿಲ್ಲ.
2 ಕೊರಿಂಥದವರಿಗೆ 3 : 8 (OCVKN)
ಆದರೆ ಪವಿತ್ರಾತ್ಮ ದೇವರಿಂದ ಜೀವವನ್ನು ಉಂಟುಮಾಡುವ ಸೇವೆಯು ಎಷ್ಟೋ ಹೆಚ್ಚಾಗಿ ಮಹಿಮೆಯುಳ್ಳದ್ದಾಗಿರಬೇಕು?
2 ಕೊರಿಂಥದವರಿಗೆ 3 : 9 (OCVKN)
ಮನುಷ್ಯರನ್ನು ದಂಡನಾ ತೀರ್ಪಿಗೆ ಒಳಪಡಿಸುವಂಥ ಸೇವೆಯೇ ಮಹಿಮೆಯುಳ್ಳದ್ದಾಗಿದ್ದರೆ, ನೀತಿವಂತರೆಂದು ನಿರ್ಣಯಿಸುವ ಸೇವೆಯು ಇನ್ನೆಷ್ಟು ಮಹಿಮೆಯುಳ್ಳದ್ದಾಗಿರಬೇಕು!
2 ಕೊರಿಂಥದವರಿಗೆ 3 : 10 (OCVKN)
ಈ ಸೇವೆಯ ಅಪರಿಮಿತ ಮಹಿಮೆಯ ಮುಂದೆ, ಹಿಂದಿನ ಆ ಶಾಸನದ ಮಹಿಮೆಯು ಇಲ್ಲದಂತಾಗಿದೆ.
2 ಕೊರಿಂಥದವರಿಗೆ 3 : 11 (OCVKN)
ಇಲ್ಲದೆ ಹೋಗುವಂಥದ್ದು ಮಹಿಮೆಯುಳ್ಳದ್ದಾಗಿದ್ದಲ್ಲಿ, ನಿತ್ಯವಾಗಿರುವಂಥದ್ದು ಇನ್ನು ಹೆಚ್ಚಾದ ಮಹಿಮೆಯಲ್ಲಿರಬೇಕಲ್ಲವೇ?
2 ಕೊರಿಂಥದವರಿಗೆ 3 : 12 (OCVKN)
ಇಂಥಾ ನಿರೀಕ್ಷೆಯು ನಮಗಿರುವುದರಿಂದ ನಾವು ಬಹಳ ಧೈರ್ಯಶಾಲಿಗಳಾಗಿದ್ದೇವೆ.
2 ಕೊರಿಂಥದವರಿಗೆ 3 : 13 (OCVKN)
ತನ್ನ ಮುಖದಲ್ಲಿರುವ ಮಹಿಮೆಯು ಕುಂದಿ ಹೋಗುತ್ತಿರುವುದನ್ನು ಇಸ್ರಾಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಂಡನು. ನಾವು ಮೋಶೆಯಂತೆ ಮಾಡುವವರಲ್ಲ.
2 ಕೊರಿಂಥದವರಿಗೆ 3 : 14 (OCVKN)
ಆದರೆ ಇಸ್ರಾಯೇಲರ ಬುದ್ಧಿ ಮಂದವಾಯಿತು. ಈ ದಿನದವರೆಗೂ ಹಳೆಯ ಒಡಂಬಡಿಕೆಯು ಓದುವಾಗಲೆಲ್ಲಾ, ಅದೇ ಮುಸುಕು ಅವರಲ್ಲಿ ಇರುತ್ತದೆ. ಅದು ಕ್ರಿಸ್ತ ಯೇಸುವಿನಲ್ಲಿ ಮಾತ್ರವೇ ತೆಗೆಯಲು ಸಾಧ್ಯ. ಆದ್ದರಿಂದ ಅದು ಈಗಲೂ ತೆಗೆದುಹಾಕಲಾಗಿಲ್ಲ.
2 ಕೊರಿಂಥದವರಿಗೆ 3 : 15 (OCVKN)
ಈ ದಿನದ ತನಕವೂ ಮೋಶೆಯ ಗ್ರಂಥವು ಓದುಗುವಾಗಲೆಲ್ಲಾ, ಅವರ ಹೃದಯಕ್ಕೆ ಮುಸುಕು ಹಾಕಲಾಗಿರುತ್ತದೆ.
2 ಕೊರಿಂಥದವರಿಗೆ 3 : 16 (OCVKN)
ಆದರೆ ಯಾರಾದರೂ ಕರ್ತ ಯೇಸುವಿನ ಕಡೆಗೆ ತಿರುಗಿದಾಗೆಲ್ಲಾ, ಆ ಮುಸುಕು ಅವರಿಂದ ತೆಗೆಯಲಾಗುತ್ತದೆ.
2 ಕೊರಿಂಥದವರಿಗೆ 3 : 17 (OCVKN)
ಕರ್ತದೇವರೇ ಆತ್ಮರಾಗಿದ್ದಾರೆ. “ಕರ್ತದೇವರ ಆತ್ಮವು ಎಲ್ಲಿರುತ್ತದೋ ಅಲ್ಲಿ ಸ್ವಾತಂತ್ರ್ಯವಿರುವುದು.”
2 ಕೊರಿಂಥದವರಿಗೆ 3 : 18 (OCVKN)
ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.

1 2 3 4 5 6 7 8 9 10 11 12 13 14 15 16 17 18