2 ಯೋಹಾನನು 1 : 1 (OCVKN)
ಸಭಾಹಿರಿಯನಾದ ನಾನು, ನಮ್ಮಲ್ಲಿ ವಾಸಿಸುವ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿ ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ
2 ಯೋಹಾನನು 1 : 2 (OCVKN)
ಸತ್ಯದಲ್ಲಿ ಪ್ರೀತಿಸುವ ದೇವರಿಂದ ಆಯ್ಕೆಯಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ:
2 ಯೋಹಾನನು 1 : 3 (OCVKN)
ತಂದೆಯಾದ ದೇವರಿಂದಲೂ ಆ ತಂದೆಯ ಪುತ್ರ ಆಗಿರುವ ಕರ್ತ ಕ್ರಿಸ್ತ ಯೇಸುವಿನಿಂದಲೂ ಕೃಪೆಯು, ಕರುಣೆಯು ಮತ್ತು ಶಾಂತಿಯು ಸತ್ಯಪೂರ್ವಕವಾಗಿ ಪ್ರೀತಿಪೂರ್ವಕವಾಗಿ ನಿಮ್ಮೊಂದಿಗಿರಲಿ.
2 ಯೋಹಾನನು 1 : 4 (OCVKN)
ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.
2 ಯೋಹಾನನು 1 : 5 (OCVKN)
ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿನಗೆ ಬರೆಯುವವನಾಗಿ ನಾವು ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.
2 ಯೋಹಾನನು 1 : 6 (OCVKN)
ದೇವರ ಆಜ್ಞೆಗಳನ್ನು ಅನುಸರಿಸಿ ಬಾಳುವುದೇ ಪ್ರೀತಿ. ಪ್ರೀತಿಯಲ್ಲಿ ಬಾಳಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.
2 ಯೋಹಾನನು 1 : 7 (OCVKN)
ಏಕೆಂದರೆ ನರಮಾಂಸದಲ್ಲಿ ಬಂದಿರುವ ಕ್ರಿಸ್ತ ಯೇಸುವನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವರೇ ಮೋಸಗಾರರೂ ಕ್ರಿಸ್ತವಿರೋಧಿಗಳೂ ಆಗಿದ್ದಾರೆ.
2 ಯೋಹಾನನು 1 : 8 (OCVKN)
ಪರಿಪೂರ್ಣ ಪ್ರತಿಫಲವನ್ನು ನೀವು ಹೊಂದುವಂತೆ ನಾವು ಪ್ರಯಾಸಪಟ್ಟು ಮಾಡಿದವುಗಳು ನಷ್ಟವಾಗದಂತೆ ಎಚ್ಚರವಹಿಸಿರಿ.
2 ಯೋಹಾನನು 1 : 9 (OCVKN)
ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳದೆ ಅದನ್ನು ಅತಿಕ್ರಮಿಸುವವರಿಗೆ ದೇವರಿಲ್ಲ. ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳುವವರಿಗೆ ತಂದೆ ಮತ್ತು ಪುತ್ರ ಇಬ್ಬರೂಇರುತ್ತಾರೆ.
2 ಯೋಹಾನನು 1 : 10 (OCVKN)
ಈ ಬೋಧನೆಯನ್ನು ಒಪ್ಪದಿರುವ ಯಾರಾದರೂ ನಿಮ್ಮ ಬಳಿಗೆ ಬಂದರೆ, ಅವರನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವರಿಗೆ, “ವಂದನೆ” ಎಂದೂ ಹೇಳಬೇಡಿರಿ.
2 ಯೋಹಾನನು 1 : 11 (OCVKN)
ಏಕೆಂದರೆ ಅವರಿಗೆ “ವಂದನೆ” ಎಂದು ಹೇಳುವವರು ಅವರ ದುಷ್ಕೃತ್ಯಗಳಲ್ಲಿ ಪಾಲುಗಾರರಾಗುತ್ತಾರೆ.
2 ಯೋಹಾನನು 1 : 12 (OCVKN)
ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವುದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಮ್ಮ ಸಂತೋಷವು ಪರಿಪೂರ್ಣವಾಗುವುದು.
2 ಯೋಹಾನನು 1 : 13 (OCVKN)
ದೇವರಿಂದ ಆಯ್ಕೆಯಾದ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ.

1 2 3 4 5 6 7 8 9 10 11 12 13