2 ಅರಸುಗಳು 6 : 1 (OCVKN)
ಎಲೀಷನು ಕೊಡಲಿಯನ್ನು ತೇಲಾಡಿಸಿದ್ದು ಪ್ರವಾದಿಗಳ ಮಂಡಳಿಯು ಎಲೀಷನಿಗೆ, “ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ. ಅಪ್ಪಣೆಕೊಡು,
2 ಅರಸುಗಳು 6 : 2 (OCVKN)
ನಾವು ಯೊರ್ದನಿನವರೆಗೂ ಹೋಗಿ, ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತೆಗೆದುಕೊಂಡು ಬಂದು, ವಾಸವಾಗಿರುವುದಕ್ಕೆ ನಮಗೋಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು,” ಎಂದರು.
2 ಅರಸುಗಳು 6 : 3 (OCVKN)
ಅವನು, “ಹೋಗಿರಿ,” ಎಂದನು. ಆಗ ಅವರಲ್ಲಿ ಒಬ್ಬನು ಎಲೀಷನಿಗೆ, “ನೀವು ದಯಮಾಡಿ ನಿಮ್ಮ ಸೇವಕರ ಸಂಗಡ ಬರುವಿರಾ?” ಎಂದನು. ಅದಕ್ಕವನು, “ನಾನು ಬರುತ್ತೇನೆ,” ಎಂದನು.
2 ಅರಸುಗಳು 6 : 4 (OCVKN)
ಹಾಗೆಯೇ ಅವನು ಅವರ ಸಂಗಡ ಹೋದನು. ಅವರು ಯೊರ್ದನ್ ನದಿಯ ಕಡೆಗೆ ಬಂದು ಅಲ್ಲಿ ಮರಗಳನ್ನು ಕಡಿದರು.
2 ಅರಸುಗಳು 6 : 5 (OCVKN)
ಆದರೆ ಒಬ್ಬನು ಮರವನ್ನು ಬೀಳಿಸುವಾಗ ಕೊಡಲಿಯು ನೀರಿನೊಳಕ್ಕೆ ಬಿತ್ತು. ಆಗ ಅವನು, “ಅಯ್ಯೋ! ಯಜಮಾನನೇ, ನಾನು ಅದನ್ನು ಸಾಲವಾಗಿ ತೆಗೆದುಕೊಂಡದ್ದು,” ಎಂದು ಕೂಗಿ ಹೇಳಿದನು.
2 ಅರಸುಗಳು 6 : 6 (OCVKN)
ದೇವರ ಮನುಷ್ಯನು, “ಅದು ಎಲ್ಲಿ ಬಿತ್ತು?” ಎಂದನು. ಅವನು ಎಲೀಷನಿಗೆ ಸ್ಥಳವನ್ನು ತೋರಿಸಿದ ತರುವಾಯ, ಎಲೀಷನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕಬ್ಬಿಣವು ತೇಲಿತು.
2 ಅರಸುಗಳು 6 : 7 (OCVKN)
ಪ್ರವಾದಿಯು, “ನೀನು ತೆಗೆದುಕೋ,” ಎಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು.
2 ಅರಸುಗಳು 6 : 8 (OCVKN)
ಎಲೀಷನು ಅರಾಮ್ಯರು ಕುರುಡರಾಗುವಂತೆ ಮಾಡಿದ್ದು
2 ಅರಸುಗಳು 6 : 9 (OCVKN)
ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧ ಮಾಡುತ್ತಿದ್ದನು. ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು. ಆಗ ದೇವರ ಮನುಷ್ಯನು ಇಸ್ರಾಯೇಲಿನ ಅರಸನಿಗೆ, “ಅಂಥಾ ಸ್ಥಳವನ್ನು ಹಾದುಹೋಗದೆ ಜಾಗ್ರತೆಯಾಗಿ ಇರು. ಏಕೆಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆ,” ಎಂದು ಹೇಳಿ ಕಳುಹಿಸಿದನು.
2 ಅರಸುಗಳು 6 : 10 (OCVKN)
ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ, ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿ ಕಳುಹಿಸಿ, ತನ್ನ ಸೈನ್ಯವನ್ನು ಕರೆಯಿಸಿಕೊಂಡನು. ಹೀಗೆ ಅವನು ಹಲವು ಸಾರಿ ತಪ್ಪಿಸಿಕೊಂಡನು.
2 ಅರಸುಗಳು 6 : 11 (OCVKN)
2 ಅರಸುಗಳು 6 : 12 (OCVKN)
ಆದ್ದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು, ಅವನು ತನ್ನ ಸೇವಕರನ್ನು ಕರೆದು ಅವರಿಗೆ, “ನಮ್ಮಲ್ಲಿ ಇಸ್ರಾಯೇಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವುದಿಲ್ಲವೋ?” ಎಂದನು.
2 ಅರಸುಗಳು 6 : 13 (OCVKN)
ಅವನ ಸೇವಕರಲ್ಲಿ ಒಬ್ಬನು, “ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ನಿನ್ನ ಮಲಗುವ ಕೋಣೆಯಲ್ಲಿ ನೀನು ಹೇಳುವ ಮಾತುಗಳನ್ನು ಸಹ ಇಸ್ರಾಯೇಲಿನ ಅರಸನಿಗೆ ಹೇಳುತ್ತಾನೆ,” ಎಂದನು. ಆಗ ಅರಾಮ್ಯರ ಅರಸನು, “ನಾನು ಅವನನ್ನು ಹಿಡಿಯುವ ಹಾಗೆ ನೀವು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ,” ಎಂದನು. ಅವನು ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.
2 ಅರಸುಗಳು 6 : 14 (OCVKN)
ಆದ್ದರಿಂದ ಅರಾಮ್ಯರ ಅರಸನು ಅಲ್ಲಿಗೆ ಕುದುರೆಗಳನ್ನೂ ರಥಗಳನ್ನೂ ಮಹಾಸೈನ್ಯವನ್ನೂ ಕಳುಹಿಸಿದನು. ಅವರು ರಾತ್ರಿಯಲ್ಲಿ ಬಂದು ಪಟ್ಟಣವನ್ನು ಸುತ್ತಿಕೊಂಡರು.
2 ಅರಸುಗಳು 6 : 15 (OCVKN)
2 ಅರಸುಗಳು 6 : 16 (OCVKN)
ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ, ಕುದುರೆಗಳೂ ರಥಗಳೂ ಉಳ್ಳ ಸೈನ್ಯ ಪಟ್ಟಣವನ್ನು ಸುತ್ತಿಕೊಂಡಿರುವುದನ್ನು ಕಂಡು ಎಲೀಷನಿಗೆ, “ಅಯ್ಯೋ! ನನ್ನ ಯಜಮಾನನೇ, ನಾವು ಏನು ಮಾಡುವುದು?” ಎಂದನು.
2 ಅರಸುಗಳು 6 : 17 (OCVKN)
ಆದರೆ ಪ್ರವಾದಿಯು, “ಭಯಪಡಬೇಡ. ಅವರ ಸಂಗಡ ಇರುವವರಿಗಿಂತ ನಮ್ಮ ಕಡೆ ಇರುವವರು ಹೆಚ್ಚಾಗಿದ್ದಾರೆ,” ಎಂದನು.
2 ಅರಸುಗಳು 6 : 18 (OCVKN)
ಆಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಇವನು ಕಾಣುವ ಹಾಗೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಯೆಹೋವ ದೇವರು ಆ ಯುವ ಸೇವಕನ ಕಣ್ಣುಗಳನ್ನು ತೆರೆದಾಗ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ರಥಗಳೂ, ಕುದುರೆಗಳೂ ತುಂಬಿರುವುದನ್ನು ಅವನು ಕಂಡನು.
2 ಅರಸುಗಳು 6 : 19 (OCVKN)
ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡಿರಿ,” ಎಂದು ಪ್ರಾರ್ಥಿಸಿದನು. ಎಲೀಷನ ಮಾತಿನ ಹಾಗೆಯೇ ದೇವರು ಅವರನ್ನು ಕುರುಡರನ್ನಾಗಿ ಮಾಡಿದರು.
2 ಅರಸುಗಳು 6 : 20 (OCVKN)
ಆಗ ಎಲೀಷನು ಅವರಿಗೆ, “ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ. ನೀವು ಹುಡುಕುವ ಮನುಷ್ಯರ ಬಳಿಗೆ ನಿಮ್ಮನ್ನು ಬರಮಾಡುವೆನು,” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡೆಸಿದನು.
2 ಅರಸುಗಳು 6 : 21 (OCVKN)
ಅವರು ಸಮಾರ್ಯಕ್ಕೆ ಬಂದಾಗ, ಎಲೀಷನು, “ಯೆಹೋವ ದೇವರೇ, ಇವರು ಕಾಣುವಂತೆ ಇವರ ಕಣ್ಣುಗಳನ್ನು ತೆರೆಯಿರಿ,” ಎಂದನು. ಆಗ ಯೆಹೋವ ದೇವರು ಅವರ ಕಣ್ಣುಗಳನ್ನು ತೆರೆದರು. ಅವರು ನೋಡಿದಾಗ ಸಮಾರ್ಯದ ಮಧ್ಯದಲ್ಲಿದ್ದರು.
2 ಅರಸುಗಳು 6 : 22 (OCVKN)
ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ, “ನನ್ನ ತಂದೆಯೇ, ನಾನು ಸಂಹರಿಸಲೋ, ಸಂಹರಿಸಲೋ?” ಎಂದನು. ಅದಕ್ಕವನು, “ಸಂಹರಿಸಬೇಡ. ನೀನು ನಿನ್ನ ಖಡ್ಗದಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳದವರನ್ನು ಹೊಡೆಯುತ್ತೀಯೋ? ರೊಟ್ಟಿಯನ್ನೂ, ನೀರನ್ನೂ ಇವರ ಮುಂದೆ ಇಡು. ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ,” ಎಂದನು.
2 ಅರಸುಗಳು 6 : 23 (OCVKN)
ಆಗ ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದ ಮೇಲೆ ಮತ್ತೆ ದಾಳಿಮಾಡಲಿಲ್ಲ.
2 ಅರಸುಗಳು 6 : 24 (OCVKN)
ಸಮಾರ್ಯಕ್ಕೆ ಘೋರ ಬರಗಾಲ ಬಂದದ್ದು ಸ್ವಲ್ಪ ಸಮಯದ ನಂತರ, ಅರಾಮಿನ ಅರಸ ಬೆನ್ಹದದನು ತನ್ನ ಸಮಸ್ತ ಸೈನ್ಯವನ್ನು ಕೂಡಿಸಿಕೊಂಡು ಹೊರಟುಹೋಗಿ, ಸಮಾರ್ಯವನ್ನು ಮುತ್ತಿಗೆಹಾಕಿದನು.
2 ಅರಸುಗಳು 6 : 25 (OCVKN)
ಆಗ ಸಮಾರ್ಯದಲ್ಲಿ ದೊಡ್ಡ ಬರವಿತ್ತು. ಒಂದು ಕತ್ತೆಯ ತಲೆಯು ಎಂಬತ್ತು ಶೆಕೆಲ್ ಬೆಳ್ಳಿಗೆ, ಸುಮಾರು ನೂರು ಗ್ರಾಂ[* ಹೀಬ್ರೂ ಭಾಷೆಯಲ್ಲಿ ಕಬ್‌ನ ಕಾಲುಭಾಗ, ಅಂದರೆ ಸುಮಾರು 100 ಗ್ರಾಂ ] ಪಾರಿವಾಳದ ಗೊಬ್ಬರವನ್ನು ಐದು ಶೆಕೆಲ್ ಬೆಳ್ಳಿಗೆ ಮಾರಲಾಗುವವರೆಗೂ ಅದನ್ನು ಮುತ್ತಿಗೆಹಾಕಿದನು.
2 ಅರಸುಗಳು 6 : 26 (OCVKN)
2 ಅರಸುಗಳು 6 : 27 (OCVKN)
ಇಸ್ರಾಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ, ಒಬ್ಬ ಸ್ತ್ರೀಯು ಅವನನ್ನು ಕೂಗಿ, “ನನ್ನ ಯಜಮಾನನೇ, ಅರಸನೇ, ಸಹಾಯ ಮಾಡಿ,” ಎಂದಳು. ಅದಕ್ಕವನು, “ಯೆಹೋವ ದೇವರು ನಿನಗೆ ಸಹಾಯ ಮಾಡದೆ ಹೋದರೆ, ನಾನು ಎಲ್ಲಿಂದ ನಿನಗೆ ಸಹಾಯ ಮಾಡಲಿ? ಕಣದಿಂದಲೋ, ದ್ರಾಕ್ಷಿ ಆಲೆಯಿಂದಲೋ?” ಎಂದನು.
2 ಅರಸುಗಳು 6 : 28 (OCVKN)
ಅರಸನು ಅವಳಿಗೆ, “ನಿನ್ನ ದುಃಖವೇನು?” ಎಂದನು. ಅದಕ್ಕವಳು, “ಈ ಸ್ತ್ರೀಯು ನನಗೆ ಹೇಳಿದ್ದೇನೆಂದರೆ, ‘ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವಂತೆ ಅವನನ್ನು ಕೊಡು, ನಾಳೆ ನನ್ನ ಮಗನನ್ನು ತಿನ್ನೋಣ,’ ಎಂದಳು.
2 ಅರಸುಗಳು 6 : 29 (OCVKN)
ಹಾಗೆಯೇ ನಾವು ನನ್ನ ಮಗನನ್ನು ಬೇಯಿಸಿ ಅವನನ್ನು ತಿಂದೆವು. ಮಾರನೆಯ ದಿವಸದಲ್ಲಿ ನಾನು ಅವಳಿಗೆ, ‘ನಾವು ನಿನ್ನ ಮಗನನ್ನು ತಿನ್ನುವಂತೆ ಅವನನ್ನು ಕೊಡು,’ ಎಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ,” ಎಂದಳು.
2 ಅರಸುಗಳು 6 : 30 (OCVKN)
ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ಕಂಡಾಗ ಅವನ ಮೈಮೇಲೆ ಗೋಣಿತಟ್ಟು ಇತ್ತು.
2 ಅರಸುಗಳು 6 : 31 (OCVKN)
ಆಗ ಅವನು, “ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ, ದೇವರು ನನಗೆ ಇದರಂತೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ,” ಎಂದನು.
2 ಅರಸುಗಳು 6 : 32 (OCVKN)
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ದೂತನನ್ನು ಕಳುಹಿಸಿದನು. ಅವನು ಇನ್ನೂ ಸ್ವಲ್ಪ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ದೂತನನ್ನು ಕಳುಹಿಸಿದ್ದಾನೆ. ದೂತನು ಇಲ್ಲಿಗೆ ಬಂದ ಕೂಡಲೇ ನೀವು ಬಾಗಿಲನ್ನು ಮುಚ್ಚಿ, ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲಿನ ಸಪ್ಪಳ ಕೇಳಿಸುತ್ತಿದೆಯಲ್ಲವೇ?” ಎಂದು ಹೇಳಿದನು.
2 ಅರಸುಗಳು 6 : 33 (OCVKN)
ಎಲೀಷನು ಅವರೊಡನೆ ಮಾತನಾಡುತ್ತಿರುವಾಗಲೇ ಆ ದೂತನೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವ ದೇವರಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಅವರನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33