2 ಪೇತ್ರನು 1 : 1 (OCVKN)
ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:
2 ಪೇತ್ರನು 1 : 2 (OCVKN)
ದೇವರ ವಿಷಯವಾಗಿಯೂ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿಯೂ ಇರುವ ತಿಳುವಳಿಕೆಯ ಮೂಲಕ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
2 ಪೇತ್ರನು 1 : 3 (OCVKN)
ಕರೆಯುವಿಕೆಯ ಮತ್ತು ಆಯ್ಕೆಯ ನಿಶ್ಚಯ ದೇವರು ತಮ್ಮ ಸ್ವಂತ ಮಹಿಮೆಗಾಗಿಯೂ ಸದ್ಗುಣಕ್ಕಾಗಿಯೂ ನಮ್ಮನ್ನು ಕರೆದಿದ್ದಾರೆ. ಏಕೆಂದರೆ, ದೇವರ ತಿಳುವಳಿಕೆಯ ಮೂಲಕವಾಗಿ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ದೇವರ ಶಕ್ತಿಯು ನಮಗೆ ಕೊಡಲಾಗಿದೆ.
2 ಪೇತ್ರನು 1 : 4 (OCVKN)
ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ.
2 ಪೇತ್ರನು 1 : 5 (OCVKN)
ಈ ಕಾರಣದಿಂದಲೇ ನೀವು ಪೂರ್ಣಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ
2 ಪೇತ್ರನು 1 : 6 (OCVKN)
ಜ್ಞಾನಕ್ಕೆ ಸ್ವಯಂ ನಿಯಂತ್ರಣವನ್ನೂ ಸ್ವಯಂ ನಿಯಂತ್ರಣಕ್ಕೆ ತಾಳ್ಮೆಯನ್ನೂ
2 ಪೇತ್ರನು 1 : 7 (OCVKN)
ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸೋದರ ಸ್ನೇಹವನ್ನೂ ಸೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.
2 ಪೇತ್ರನು 1 : 8 (OCVKN)
ಈ ಗುಣಗಳು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ, ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅರಿತುಕೊಳ್ಳುವುದರಲ್ಲಿ ನೀವು ನಿಷ್ಪ್ರಯೋಜಕರೂ ನಿಷ್ಫಲರೂ ಆಗದಂತೆ ಮಾಡುತ್ತವೆ.
2 ಪೇತ್ರನು 1 : 9 (OCVKN)
ಆದರೆ ಈ ಗುಣಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಿನ ಪಾಪಗಳಿಂದ ಶುದ್ಧನಾದದ್ದನ್ನು ಮರೆತು ಬಿಟ್ಟಿದ್ದಾನೆ.
2 ಪೇತ್ರನು 1 : 10 (OCVKN)
ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.
2 ಪೇತ್ರನು 1 : 11 (OCVKN)
ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವು ತಮ್ಮ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಭಾಗ್ಯವನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.
2 ಪೇತ್ರನು 1 : 12 (OCVKN)
ದೇವರ ವಾಕ್ಯದ ಪ್ರವಾದನೆ ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮ್ಮ ನೆನಪಿಗೆ ತರಲು ನಾನು ಬಯಸುತ್ತೇನೆ.
2 ಪೇತ್ರನು 1 : 13 (OCVKN)
ನಾನು ನನ್ನ ದೇಹವೆಂಬ ಗುಡಾರದಲ್ಲಿ ಬಾಳುವ ತನಕ ನಿಮ್ಮ ನೆನಪಿಗೆ ತರುವುದು ಯುಕ್ತವೆಂದೆಣಿಸಿದ್ದೇನೆ.
2 ಪೇತ್ರನು 1 : 14 (OCVKN)
ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ನನಗೆ ಸ್ಪಷ್ಟ ಪಡಿಸಿದ ಪ್ರಕಾರ, ಈ ನನ್ನ ದೇಹವೆಂಬ ಗುಡಾರವನ್ನು ತೆಗೆದುಹಾಕುವ ಕಾಲ ಬೇಗನೆ ಬರುತ್ತದೆಂದು ನಾನು ಬಲ್ಲೆನು.
2 ಪೇತ್ರನು 1 : 15 (OCVKN)
ಆದರೂ ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ನೆನಪಿಟ್ಟುಕೊಳ್ಳುವಂತೆ ನನ್ನಿಂದಾದಷ್ಟು ಪ್ರಯಾಸಪಡುವೆನು.
2 ಪೇತ್ರನು 1 : 16 (OCVKN)
ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಶಕ್ತಿಯ ಬಗ್ಗೆಯೂ ಅವರ ಪುನರಾಗಮನದ ಬಗ್ಗೆಯೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಕುತಂತ್ರವಾಗಿ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿಸಲಿಲ್ಲ. ಆದರೆ ನಾವೇ ಕ್ರಿಸ್ತ ಯೇಸುವಿನ ಮಹತ್ತನ್ನು ಕಣ್ಣಾರೆ ಕಂಡವರಾಗಿ ತಿಳಿಯಪಡಿಸಿದೆವು.
2 ಪೇತ್ರನು 1 : 17 (OCVKN)
ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ,”* ಮತ್ತಾಯ 17:5; ಮಾರ್ಕ 9:7; ಲೂಕ 9:35 ಎಂಬ ಧ್ವನಿಯು ಮಹೋನ್ನತ ಮಹಿಮೆಯಿಂದ ಅವರಿಗೆ ಉಂಟಾದದ್ದರಲ್ಲಿ ಅವರು ತಂದೆ ದೇವರಿಂದ ಗೌರವವನ್ನೂ ಮಹಿಮೆಯನ್ನೂ ಹೊಂದಿದರಲ್ಲವೇ.
2 ಪೇತ್ರನು 1 : 18 (OCVKN)
ನಾವು ಪರಿಶುದ್ಧ ಪರ್ವತದ ಮೇಲೆ ಕ್ರಿಸ್ತ ಯೇಸುವಿನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.
2 ಪೇತ್ರನು 1 : 19 (OCVKN)
ಮಾತ್ರವಲ್ಲದೆ ನಮಗೆ ಬಹು ನಿಶ್ಚಯವಾದ ಪ್ರವಾದನೆಯ ವಾಕ್ಯಗಳಿವೆ. ಉದಯ ನಕ್ಷತ್ರವಾಗಿರುವ ಕ್ರಿಸ್ತ ಯೇಸು ನಿಮ್ಮ ಹೃದಯಗಳಲ್ಲಿ ಉದಯಿಸುವಾಗ ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪದಂತೆ ಎಣಿಸಿ, ನೀವು ಆ ಪ್ರವಾದನಾ ವಾಕ್ಯಗಳಿಗೆ ಲಕ್ಷ್ಯಕೊಡುವುದು ಒಳ್ಳೆಯದು.
2 ಪೇತ್ರನು 1 : 20 (OCVKN)
ಪವಿತ್ರ ವೇದದ ಯಾವ ಪ್ರವಾದನೆಯೂ ಕೇವಲ ಪ್ರವಾದಿಗಳಿಂದ ಸ್ವಂತವಾಗಿ ವಿವರಿಸತಕ್ಕದ್ದಲ್ಲ ಎಂಬುದನ್ನು ಮೊದಲು ತಿಳಿದುಕೊಳ್ಳಿರಿ.
2 ಪೇತ್ರನು 1 : 21 (OCVKN)
ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.

1 2 3 4 5 6 7 8 9 10 11 12 13 14 15 16 17 18 19 20 21