2 ಸಮುವೇಲನು 22 : 1 (OCVKN)
ದಾವೀದನ ಸ್ತುತಿಗೀತೆ ಯೆಹೋವ ದೇವರು ದಾವೀದನನ್ನು ಅವನ ಎಲ್ಲಾ ಶತ್ರುಗಳಿಂದಲೂ, ಸೌಲನ ಕೈಯಿಂದಲೂ ತಪ್ಪಿಸಿಕೊಂಡಾಗ ಯೆಹೋವ ದೇವರಿಗೆ ಈ ಪದ್ಯವನ್ನು ಹಾಡಿದ್ದು.
2 ಸಮುವೇಲನು 22 : 2 (OCVKN)
ಅವನು ಹೇಳಿದನು: “ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ,
2 ಸಮುವೇಲನು 22 : 3 (OCVKN)
ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು; ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ಅವರು ನನ್ನ ಉನ್ನತವಾದ ದುರ್ಗವೂ, ನನ್ನ ಆಶ್ರಯವೂ, ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುವವರೂ ಅವರೇ ಆಗಿದ್ದಾರೆ.
2 ಸಮುವೇಲನು 22 : 4 (OCVKN)
“ಸ್ತುತಿ ಪಾತ್ರರಾಗಿರುವ ಯೆಹೋವ ದೇವರನ್ನು ನಾನು ಮೊರೆಯಿಟ್ಟದ್ದರಿಂದ, ಅವರು ನನ್ನ ಶತ್ರುಗಳಿಂದ ನನ್ನನ್ನು ಕಾಪಾಡಿದ್ದಾರೆ.
2 ಸಮುವೇಲನು 22 : 5 (OCVKN)
ಮರಣದಲೆಗಳು ನನ್ನನ್ನು ಆವರಿಸಿಕೊಂಡವು. ವಿನಾಶಪ್ರವಾಹಗಳು ನನ್ನ ಮೇಲೆ ಹರಿದವು;
2 ಸಮುವೇಲನು 22 : 6 (OCVKN)
ಪಾತಾಳದ ಪಾಶಗಳು ನನ್ನನ್ನು ಸುತ್ತಿಕೊಂಡವು; ಮರಣದ ಬಲೆಗಳು ನನ್ನನ್ನು ಎದುರಿಸಿದವು.
2 ಸಮುವೇಲನು 22 : 7 (OCVKN)
“ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಕರೆದೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಕಿವಿಗೆ ಮುಟ್ಟಿತು.
2 ಸಮುವೇಲನು 22 : 8 (OCVKN)
ಆಗ ದೇವರು ಬೇಸರಗೊಂಡಿದ್ದರಿಂದ ಭೂಮಿಯು ನಡುಗಿ ಕದಲಿದವು, ಆಕಾಶಗಳ ಅಸ್ತಿವಾರಗಳು ಸಹ ಕದಲಿದವು.
2 ಸಮುವೇಲನು 22 : 9 (OCVKN)
ಮೂಗಿನಿಂದ ಹೊಗೆ ಬಂದಂತೆಯೂ, ಬಾಯಿಯೊಳಗಿಂದ ದಹಿಸುವ ಅಗ್ನಿ ಹೊರಟಂತೆಯೂ; ಕೆಂಡಗಳು ಅದರಿಂದ ಜ್ವಾಲಿಸಿದಂತೆಯೂ ಇತ್ತು.
2 ಸಮುವೇಲನು 22 : 10 (OCVKN)
ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು; ಅವರ ಪಾದಗಳ ಕೆಳಗೆ ಕಾರ್ಮೋಡಗಳಿದ್ದವು;
2 ಸಮುವೇಲನು 22 : 11 (OCVKN)
ಅವರು ಕೆರೂಬಿಯ ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.
2 ಸಮುವೇಲನು 22 : 12 (OCVKN)
ಕತ್ತಲನ್ನೂ, ಮಳೆ ತರುವ ಆಕಾಶದ ಕಾರ್ಮೋಡಗಳನ್ನೂ ತಮ್ಮ ಸುತ್ತಲೂ ಹೊದಿಕೆಯನ್ನಾಗಿ ಮಾಡಿಕೊಂಡರು.
2 ಸಮುವೇಲನು 22 : 13 (OCVKN)
ಅವರ ಸನ್ನಿಧಿಯ ಪ್ರಕಾಶದಿಂದ ಮಿಂಚಿನ ಜ್ವಾಲೆಗಳು ಹೊರಹೊಮ್ಮಿದವು.
2 ಸಮುವೇಲನು 22 : 14 (OCVKN)
ಯೆಹೋವ ದೇವರು ಆಕಾಶಗಳಲ್ಲಿ ಗುಡುಗಿದರು. ಮಹೋನ್ನತ ದೇವರ ಧ್ವನಿಯು ಕಲ್ಮಳೆ ಹಾಗೂ ಮಿಂಚುಗಳಿಂದ ಪ್ರತಿಧ್ವನಿಸಿತು.
2 ಸಮುವೇಲನು 22 : 15 (OCVKN)
ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು, ಸಿಡಿಲಿನಿಂದ ವೈರಿಗಳನ್ನೆಲ್ಲ ಅಟ್ಟಿಸಿಬಿಟ್ಟರು.
2 ಸಮುವೇಲನು 22 : 16 (OCVKN)
ಆಗ ಯೆಹೋವ ದೇವರ ಗದರಿಕೆಯಿಂದಲೂ, ಅವರ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿತು. ಭೂಲೋಕದ ಅಸ್ತಿವಾರಗಳು ಬಯಲಾದವು.
2 ಸಮುವೇಲನು 22 : 17 (OCVKN)
“ಅವರು ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ಅಗಾಧವಾದ ಜಲರಾಶಿಗಳಿಂದ ಹೊರಗೆಳೆದರು.
2 ಸಮುವೇಲನು 22 : 18 (OCVKN)
ಅವರು ನನಗಿಂತ ಶಕ್ತಿಶಾಲಿಯಾದ ಶತ್ರುಗಳಿಂದ, ದ್ವೇಷಿಸುತ್ತಿದ್ದ ವೈರಿಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದರು.
2 ಸಮುವೇಲನು 22 : 19 (OCVKN)
ನನ್ನ ಆಪತ್ತಿನ ದಿನದಲ್ಲಿ ನನ್ನನ್ನು ಆ ಶತ್ರುಗಳು ದಾಳಿಮಾಡಿದರು; ಆದರೆ ಯೆಹೋವ ದೇವರು ನನಗೆ ಆಧಾರವಾಗಿದ್ದರು.
2 ಸಮುವೇಲನು 22 : 20 (OCVKN)
ಅವರು ನನ್ನನ್ನು ಹೊರಗೆ ವಿಶಾಲ ಸ್ಥಳಕ್ಕೆ ತಂದರು; ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ಕಾಪಾಡಿದರು.
2 ಸಮುವೇಲನು 22 : 21 (OCVKN)
“ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು; ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಪ್ರತಿಫಲಕೊಟ್ಟರು.
2 ಸಮುವೇಲನು 22 : 22 (OCVKN)
ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಅನುಸರಿಸಿದ್ದೇನೆ, ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.
2 ಸಮುವೇಲನು 22 : 23 (OCVKN)
ಅವರ ಆಜ್ಞೆಗಳೆಲ್ಲಾ ನನ್ನ ಮುಂದೆ ಇಟ್ಟುಕೊಂಡೆನು; ದೇವರ ತೀರ್ಪುಗಳಿಂದ ನಾನು ತೊಲಗಿಹೋಗಲಿಲ್ಲ.
2 ಸಮುವೇಲನು 22 : 24 (OCVKN)
ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು, ನಾನು ಪಾಪದಿಂದ ನನ್ನನ್ನು ಕಾಪಾಡಿಕೊಂಡೆನು.
2 ಸಮುವೇಲನು 22 : 25 (OCVKN)
ಆದ್ದರಿಂದ ಯೆಹೋವ ದೇವರು ನನ್ನ ನೀತಿಯ ಪ್ರಕಾರವೂ, ಅವರ ದೃಷ್ಟಿಯಲ್ಲಿ ನನ್ನ ಶುದ್ಧತ್ವದ ಪ್ರಕಾರವೂ ನನಗೆ ಪ್ರತಿಫಲಕೊಟ್ಟರು.
2 ಸಮುವೇಲನು 22 : 26 (OCVKN)
“ದಯವಂತರಿಗೆ ನೀವು ನಿಮ್ಮನ್ನು ದಯವಂತರಾಗಿ ತೋರಿಸುತ್ತೀರಿ; ನಿರ್ದೋಷಿಗೆ ನೀವು ನಿರ್ದೋಷಿಯಾಗಿ ತೋರಿಸುತ್ತೀರಿ.
2 ಸಮುವೇಲನು 22 : 27 (OCVKN)
ಶುದ್ಧರಿಗೆ ನೀವು ಶುದ್ಧರಾಗಿ ತೋರಿಸುತ್ತೀರಿ, ವಕ್ರ ವ್ಯಕ್ತಿಗೆ ನಿಮ್ಮ ಬುದ್ಧಿವಂತಿಕೆಯನ್ನು ತೋರಿಸುತ್ತೀರಿ.
2 ಸಮುವೇಲನು 22 : 28 (OCVKN)
ದೀನರನ್ನು ರಕ್ಷಿಸುತ್ತೀರಿ; ಆದರೆ ನೀವು ಗರ್ವಿಷ್ಠರನ್ನು ತಗ್ಗಿಸಲು ನಿಮ್ಮ ಕಣ್ಣುಗಳು ಅವರ ಮೇಲೆ ಇರುತ್ತವೆ.
2 ಸಮುವೇಲನು 22 : 29 (OCVKN)
ಯೆಹೋವ ದೇವರೇ, ನನ್ನ ದೀಪವು ನೀವೇ; ಯೆಹೋವ ದೇವರು ನನ್ನ ಕತ್ತಲೆಯನ್ನು ಬೆಳಕನ್ನಾಗಿ ಮಾರ್ಪಡಿಸುವರು.
2 ಸಮುವೇಲನು 22 : 30 (OCVKN)
ನಿಮ್ಮ ಸಹಾಯದಿಂದ ವೈರಿಸೇನೆಯ ವಿರುದ್ಧ ಹೋಗುವೆನು. ನನ್ನ ದೇವರೊಂದಿಗೆ ಕೋಟೆಗೋಡೆಯನ್ನೂ ಹಾರುವೆನು.
2 ಸಮುವೇಲನು 22 : 31 (OCVKN)
“ದೇವರ ಮಾರ್ಗವು ಪರಿಪೂರ್ಣವಾದದ್ದು; ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.
2 ಸಮುವೇಲನು 22 : 32 (OCVKN)
ಏಕೆಂದರೆ ಯೆಹೋವ ದೇವರಲ್ಲದೆ ಬೇರೆ ದೇವರು ಯಾರು? ಮತ್ತು ನಮ್ಮ ದೇವರನ್ನು ಹೊರತುಪಡಿಸಿ ಬಂಡೆ ಯಾರು?
2 ಸಮುವೇಲನು 22 : 33 (OCVKN)
ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ; ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ.
2 ಸಮುವೇಲನು 22 : 34 (OCVKN)
ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಚುರುಕು ಮಾಡಿ, ಅವರು ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾರೆ.
2 ಸಮುವೇಲನು 22 : 35 (OCVKN)
ಅವರು ಯುದ್ಧಕ್ಕಾಗಿ ನನ್ನ ಕೈಗಳಿಗೆ ತರಬೇತುಕೊಟ್ಟು. ನನ್ನ ಭುಜದಿಂದ ಕಂಚಿನ ಬಿಲ್ಲನ್ನು ಬಗ್ಗಿಸುವಂತೆ ಮಾಡುತ್ತಾರೆ.
2 ಸಮುವೇಲನು 22 : 36 (OCVKN)
ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ, ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ.
2 ಸಮುವೇಲನು 22 : 37 (OCVKN)
ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ, ಆದುದರಿಂದ ನನ್ನ ಹಿಮ್ಮಡಿಗಳು ಜಾರುವುದಿಲ್ಲ.
2 ಸಮುವೇಲನು 22 : 38 (OCVKN)
“ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು. ಅವರನ್ನು ಸಂಹರಿಸಿಬಿಡುವವರೆಗೂ ನಾನು ಹಿಂದಿರುಗಲಿಲ್ಲ.
2 ಸಮುವೇಲನು 22 : 39 (OCVKN)
ಏಳಲಾರದಂತೆ ಅವರನ್ನು ಸಂಪೂರ್ಣವಾಗಿ ತುಳಿದುಬಿಟ್ಟೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದರು.
2 ಸಮುವೇಲನು 22 : 40 (OCVKN)
ನೀವು ಯುದ್ಧಕ್ಕಾಗಿ ನನಗೆ ಬಲವನ್ನು ಆಯುಧವನ್ನಾಗಿ ನೀಡಿ; ನನ್ನ ಎದುರಾಳಿಗಳನ್ನು ನನಗೆ ಅಧೀನ ಮಾಡಿದ್ದೀರಿ.
2 ಸಮುವೇಲನು 22 : 41 (OCVKN)
ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು.
2 ಸಮುವೇಲನು 22 : 42 (OCVKN)
ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ; ಯೆಹೋವ ದೇವರಿಗೂ ಮೊರೆಯಿಟ್ಟರು, ಆದರೆ ಅವರೂ ಉತ್ತರ ಕೊಡಲಿಲ್ಲ.
2 ಸಮುವೇಲನು 22 : 43 (OCVKN)
ನಾನು ಅವರನ್ನು ನೆಲದ ಧೂಳಿನಂತೆ ಪುಡಿಪುಡಿ ಮಾಡಿದೆನು; ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು.
2 ಸಮುವೇಲನು 22 : 44 (OCVKN)
“ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ, ನನ್ನನ್ನು ಜನಾಂಗಗಳಿಗೆ ನಾಯಕನನ್ನಾಗಿ ಉಳಿಸಿದ್ದೀ; ನಾನು ಅರಿಯದ ಜನರು ನನಗೆ ವಿಧೇಯರಾಗುವರು.
2 ಸಮುವೇಲನು 22 : 45 (OCVKN)
ವಿದೇಶಿಯರು ನನಗೆ ಅಧೀನರಾದರು; ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು.
2 ಸಮುವೇಲನು 22 : 46 (OCVKN)
ಅವರು ಭಯಗೊಳ್ಳುವರು; ನಡುಗುತ್ತಾ ತಮ್ಮ ಕೋಟೆಗಳಿಂದ ಹೊರಬರುವರು.
2 ಸಮುವೇಲನು 22 : 47 (OCVKN)
“ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರ. ನನ್ನ ಬಂಡೆಯು, ನನ್ನ ರಕ್ಷಕರಾದ ದೇವರು ಮಹಿಮೆ ಹೊಂದಲಿ.
2 ಸಮುವೇಲನು 22 : 48 (OCVKN)
ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ ಜನರನ್ನು ನನಗೆ ಅಧೀನಪಡಿಸುವವರೂ ಆಗಿದ್ದಾರೆ.
2 ಸಮುವೇಲನು 22 : 49 (OCVKN)
ಅವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ. ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ. ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ.
2 ಸಮುವೇಲನು 22 : 50 (OCVKN)
ಆದ್ದರಿಂದ ಯೆಹೋವ ದೇವರೇ, ನಾನು ಜನಾಂಗಗಳಲ್ಲಿ ನಿಮ್ಮನ್ನು ಕೊಂಡಾಡುವೆನು. ನಿಮ್ಮನ್ನು ಕೊಂಡಾಡಿ ನಿಮ್ಮ ಹೆಸರನ್ನು ಕೀರ್ತಿಸುವೆನು.
2 ಸಮುವೇಲನು 22 : 51 (OCVKN)
“ಅವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; ತಮ್ಮ ಅಭಿಷಿಕ್ತನಿಗೂ, ದಾವೀದನಿಗೂ, ಅವನ ಸಂತತಿಯವರಿಗೂ ದಯೆಯನ್ನು ಯುಗಯುಗಕ್ಕೂ ಅನುಗ್ರಹಿಸುವರು.”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51