2 ಥೆಸಲೊನೀಕದವರಿಗೆ 1 : 1 (OCVKN)
ನಮ್ಮ ತಂದೆ ದೇವರಲ್ಲಿಯೂ, ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ತಿಮೊಥೆಯರು ಬರೆಯುವುದು:
2 ಥೆಸಲೊನೀಕದವರಿಗೆ 1 : 2 (OCVKN)
ನಮ್ಮ ತಂದೆ ದೇವರಿಂದಲೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
2 ಥೆಸಲೊನೀಕದವರಿಗೆ 1 : 3 (OCVKN)
ಕೃತಜ್ಞತಾಸ್ತುತಿ ಹಾಗೂ ಪ್ರಾರ್ಥನೆ ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.
2 ಥೆಸಲೊನೀಕದವರಿಗೆ 1 : 4 (OCVKN)
ಹೀಗಿರುವುದರಿಂದ, ನೀವು ಸಹಿಸುತ್ತಿರುವ ನಿಮ್ಮ ಎಲ್ಲಾ ಹಿಂಸೆಗಳಲ್ಲಿಯೂ ಸಂಕಟಗಳಲ್ಲಿಯೂ ನಿಮಗೆ ತೋರಿ ಬಂದ ನಿಮ್ಮ ತಾಳ್ಮೆ, ನಂಬಿಕೆಗಳನ್ನು ನೆನೆಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಮ್ಮೆಪಡುತ್ತೇವೆ.
2 ಥೆಸಲೊನೀಕದವರಿಗೆ 1 : 5 (OCVKN)
ನೀವು ಯಾವ ದೇವರ ರಾಜ್ಯಕ್ಕಾಗಿ ಕಷ್ಟವನ್ನು ಅನುಭವಿಸುತ್ತಿರುವಿರೋ, ಆ ರಾಜ್ಯಕ್ಕಾಗಿ ನೀವು ಯೋಗ್ಯರೆಂದು ಎಣಿಕೆಯಾಗಲು ಇದು ದೇವರ ನೀತಿಯುಳ್ಳ ನ್ಯಾಯತೀರ್ಪಿಗೆ ಸ್ಪಷ್ಟವಾದ ನಿದರ್ಶನವಾಗಿದೆ.
2 ಥೆಸಲೊನೀಕದವರಿಗೆ 1 : 6 (OCVKN)
ನಿಮ್ಮನ್ನು ಸಂಕಟ ಪಡಿಸುವವರಿಗೆ ದೇವರು ಪ್ರತಿಯಾಗಿ ಸಂಕಟವನ್ನೂ ಮತ್ತು
2 ಥೆಸಲೊನೀಕದವರಿಗೆ 1 : 7 (OCVKN)
ಸಂಕಟ ಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರಿಗೆ ನ್ಯಾಯವಾಗಿದೆ. ನಮಗೆ ಕರ್ತ ಆಗಿರುವ ಯೇಸು ತಮ್ಮ ಶಕ್ತಿಯುತವಾದ ದೂತರೊಂದಿಗೆ ಪರಲೋಕದಿಂದ ಪ್ರಜ್ವಲಿಸುವ ಜ್ವಾಲೆಯಲ್ಲಿ ಪ್ರತ್ಯಕ್ಷರಾಗುವಾಗ ಇದಾಗುವುದು.
2 ಥೆಸಲೊನೀಕದವರಿಗೆ 1 : 8 (OCVKN)
ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.
2 ಥೆಸಲೊನೀಕದವರಿಗೆ 1 : 9 (OCVKN)
ಅಂಥವರು ಕರ್ತ ಯೇಸುವಿನ ಸನ್ನಿಧಿಯಿಂದಲೂ ಅವರ ಮಹಿಮೆಯ ಬಲದಿಂದಲೂ ಬಹಿಷ್ಕೃತರಾಗಿ ನಿತ್ಯನಾಶದ ಶಿಕ್ಷೆಯನ್ನು ಅನುಭವಿಸುವರು.
2 ಥೆಸಲೊನೀಕದವರಿಗೆ 1 : 10 (OCVKN)
ಆ ದಿನದಲ್ಲಿ ಕರ್ತ ಯೇಸು ತಮ್ಮ ಪರಿಶುದ್ಧ ಜನರಲ್ಲಿ ಮಹಿಮೆ ಹೊಂದುವವರಾಗಿಯೂ ನಂಬುವವರೆಲ್ಲರನ್ನು ಆಶ್ಚರ್ಯಪಡಿಸುವವರಾಗಿಯೂ ಬರುವರು. ನಮ್ಮ ಸಾಕ್ಷಿಯನ್ನು ನಂಬಿದ್ದರಿಂದ ನಿಮಗೂ ಇವು ಸಂಭವಿಸುವುವು.
2 ಥೆಸಲೊನೀಕದವರಿಗೆ 1 : 11 (OCVKN)
ನಮ್ಮ ದೇವರು ನೀಡಿರುವ ಕರೆಯುವಿಕೆಗೆ ನಿಮ್ಮನ್ನು ಯೋಗ್ಯರೆಂದು ಎಣಿಸಿ, ಒಳಿತನ್ನು ಮಾಡಲು ನಿಮ್ಮ ಎಲ್ಲಾ ಇಷ್ಟಾರ್ಥವನ್ನೂ ವಿಶ್ವಾಸದಿಂದ ಆಗಿರುವ ನಿಮ್ಮ ಎಲ್ಲಾ ಕಾರ್ಯಗಳನ್ನೂ ದೇವರು ತಮ್ಮ ಶಕ್ತಿಯಿಂದ ಪರಿಪೂರ್ಣಗೊಳಿಸುವಂತೆ ನಾವು ಯಾವಾಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡುತ್ತೇವೆ.
2 ಥೆಸಲೊನೀಕದವರಿಗೆ 1 : 12 (OCVKN)
ನಮ್ಮ ದೇವರ ಹಾಗೂ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯ ಅನುಸಾರವಾಗಿ, ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದಬೇಕು. ಮಾತ್ರವಲ್ಲದೇ ನೀವು ಕೂಡಾ ಅವರಲ್ಲಿ ಮಹಿಮೆ ಹೊಂದಬೇಕು ಎಂದು ಬೇಡಿಕೊಳ್ಳುತ್ತೇವೆ.
❮
❯
1
2
3
4
5
6
7
8
9
10
11
12