2 ಥೆಸಲೊನೀಕದವರಿಗೆ 3 : 1 (OCVKN)
ಪ್ರಾರ್ಥನೆಗಾಗಿ ಬೇಡಿಕೆ ಕೊನೆಯದಾಗಿ ಪ್ರಿಯರೇ, ಕರ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಹಬ್ಬಿದಂತೆ ಎಲ್ಲ ಕಡೆಗಳಲ್ಲಿಯೂ ಅತಿವೇಗದಿಂದ ಹಬ್ಬಿ ಹರಡುವಂತೆ ನಮಗಾಗಿ ಬೇಡಿಕೊಳ್ಳಿರಿ.
2 ಥೆಸಲೊನೀಕದವರಿಗೆ 3 : 2 (OCVKN)
ವಕ್ರಬುದ್ಧಿಯುಳ್ಳ ದುಷ್ಟರ ಕೈಯಿಂದ ನಾವು ತಪ್ಪಿಸಿಕೊಳ್ಳುವಂತೆಯೂ ಪ್ರಾರ್ಥಿಸಿರಿ. ಏಕೆಂದರೆ ಎಲ್ಲರಲ್ಲಿಯೂ ವಿಶ್ವಾಸವಿಲ್ಲವಲ್ಲಾ.
2 ಥೆಸಲೊನೀಕದವರಿಗೆ 3 : 3 (OCVKN)
ಆದರೆ ಕರ್ತ ಯೇಸು ನಂಬಿಗಸ್ತರು, ಅವರು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೆಡುಕನಿಂದ ತಪ್ಪಿಸುವರು.
2 ಥೆಸಲೊನೀಕದವರಿಗೆ 3 : 4 (OCVKN)
ನಾವು ನಿಮಗೆ ಆಜ್ಞಾಪಿಸಿದವುಗಳನ್ನು ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯವಾಗಿ ಕರ್ತ ಯೇಸುವಿನಲ್ಲಿ ನಮಗೆ ಭರವಸೆಯಿದೆ.
2 ಥೆಸಲೊನೀಕದವರಿಗೆ 3 : 5 (OCVKN)
ಕರ್ತ ಯೇಸು ದೇವರ ಪ್ರೀತಿಯಲ್ಲಿಯೂ ತಮ್ಮ ತಾಳ್ಮೆಯಲ್ಲಿಯೂ ನಿಮ್ಮ ಹೃದಯಗಳನ್ನು ನಡೆಸಲಿ.
2 ಥೆಸಲೊನೀಕದವರಿಗೆ 3 : 6 (OCVKN)
ಸೋಮಾರಿತನದ ಬಗ್ಗೆ ಎಚ್ಚರಿಕೆ ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ, ನಮ್ಮಿಂದ ಸ್ವೀಕರಿಸಿದ ಬೋಧನೆಯನ್ನು ಅನುಸರಿಸದೆ, ಸೋಮಾರಿಯಾಗಿ ಅಶಿಸ್ತಿನಿಂದ ನಡೆಯುವ ಪ್ರತಿ ವಿಶ್ವಾಸಿಗೆ ನೀವು ದೂರವಾಗಿರಬೇಕು.
2 ಥೆಸಲೊನೀಕದವರಿಗೆ 3 : 7 (OCVKN)
ನೀವು ನಮ್ಮ ಮಾದರಿಯನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ. ಏಕೆಂದರೆ ನಾವು ನಿಮ್ಮಲ್ಲಿರುವಾಗ ಸೋಮಾರಿಗಳಾಗಿರಲಿಲ್ಲ.
2 ಥೆಸಲೊನೀಕದವರಿಗೆ 3 : 8 (OCVKN)
ನಾವು ಉಚಿತವಾಗಿ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರದೆಂದು ಹಗಲಿರುಳೂ ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದೆವು.
2 ಥೆಸಲೊನೀಕದವರಿಗೆ 3 : 9 (OCVKN)
ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದಲ್ಲ. ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಆದರ್ಶರಾಗಿರಬೇಕೆಂದು ಹಾಗೆ ಮಾಡಿದೆವು.
2 ಥೆಸಲೊನೀಕದವರಿಗೆ 3 : 10 (OCVKN)
ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಉಣ್ಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು.
2 ಥೆಸಲೊನೀಕದವರಿಗೆ 3 : 11 (OCVKN)
ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಶಿಸ್ತಿನಿಂದ ನಡೆಯುತ್ತಾರೆಂದು ಕೇಳಿದ್ದೇವೆ.
2 ಥೆಸಲೊನೀಕದವರಿಗೆ 3 : 12 (OCVKN)
ಅಂಥವರು ಶಾಂತವಾಗಿ ಕೆಲಸಮಾಡಿ ತಮ್ಮ ಸ್ವಂತ ಆಹಾರವನ್ನೇ ಊಟ ಮಾಡಬೇಕೆಂದು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.
2 ಥೆಸಲೊನೀಕದವರಿಗೆ 3 : 13 (OCVKN)
ಪ್ರಿಯರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.
2 ಥೆಸಲೊನೀಕದವರಿಗೆ 3 : 14 (OCVKN)
ಈ ಪತ್ರದ ಮೂಲಕ ಹೇಳಿರುವ ನಮ್ಮ ಮಾತಿಗೆ ಯಾರಾದರೂ ವಿಧೇಯರಾಗದಿದ್ದರೆ ಅಂಥವರನ್ನು ಗುರುತಿಸಿ ಅವರಿಗೆ ನಾಚಿಕೆಯಾಗುವಂತೆ ಅವರ ಸಹವಾಸದಲ್ಲಿ ಸೇರಬೇಡಿರಿ.
2 ಥೆಸಲೊನೀಕದವರಿಗೆ 3 : 15 (OCVKN)
ಆದರೂ ಅಂಥವರನ್ನು ವೈರಿಯೆಂದು ಎಣಿಸದೆ, ಜೊತೆ ವಿಶ್ವಾಸಿಯೆಂದು ಭಾವಿಸಿ ಬುದ್ಧಿಹೇಳಿರಿ.
2 ಥೆಸಲೊನೀಕದವರಿಗೆ 3 : 16 (OCVKN)
ಅಂತಿಮ ವಂದನೆಗಳು ನಮಗೆ ಕರ್ತ ಆಗಿರುವ ಯೇಸು ಈ ಸಮಾಧಾನದಲ್ಲಿ ತಾವೇ ಸದಾಕಾಲದಲ್ಲಿಯೂ ಸಕಲ ವಿಧದಲ್ಲಿಯೂ ನಿಮಗೆ ಸಮಾಧಾನವನ್ನು ದಯಪಾಲಿಸಲಿ. ಕರ್ತದೇವರು ನಿಮ್ಮೆಲ್ಲರೊಂದಿಗೆ ಇರಲಿ.
2 ಥೆಸಲೊನೀಕದವರಿಗೆ 3 : 17 (OCVKN)
ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದ ಬರೆದ ವಂದನೆಯಿದು. ನನ್ನ ಎಲ್ಲಾ ಪತ್ರಗಳಲ್ಲಿಯೂ ಇದೇ ಗುರುತು. ನಾನು ಹೀಗೆಯೇ ಬರೆಯುತ್ತೇನೆ.
2 ಥೆಸಲೊನೀಕದವರಿಗೆ 3 : 18 (OCVKN)
ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೆಲ್ಲರ ಸಂಗಡ ಇರಲಿ.
❮
❯
1
2
3
4
5
6
7
8
9
10
11
12
13
14
15
16
17
18