2 ತಿಮೊಥೆಯನಿಗೆ 3 : 1 (OCVKN)
ಆದರೆ ಕಡೆಯ ದಿವಸಗಳಲ್ಲಿ ಕಷ್ಟಕರವಾದ ಕಾಲಗಳು ಬರುವುವೆಂಬುದನ್ನು ಸಹ ತಿಳಿದುಕೋ.
2 ತಿಮೊಥೆಯನಿಗೆ 3 : 2 (OCVKN)
ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿಕೊಳ್ಳುವವರೂ ಹಣದಾಶೆಯುಳ್ಳವರೂ ಬಡಾಯಿ ಕೊಚ್ಚುವವರೂ ಅಹಂಕಾರಿಗಳೂ ದೇವದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಕೃತಜ್ಞತೆಯಿಲ್ಲದವರೂ ಅಶುದ್ಧರೂ
2 ತಿಮೊಥೆಯನಿಗೆ 3 : 3 (OCVKN)
ಮಾನವತ್ವವಿಲ್ಲದವರೂ ಸಮಾಧಾನವಾಗದವರೂ ಚಾಡಿಕೋರರೂ ಸಂಯಮವಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯದನ್ನು ಪ್ರೀತಿಸದವರೂ
2 ತಿಮೊಥೆಯನಿಗೆ 3 : 4 (OCVKN)
ದ್ರೋಹಿಗಳೂ ದುಡುಕುವವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸುವುದಕ್ಕಿಂತಲೂ ಭೋಗಗಳನ್ನೇ ಪ್ರೀತಿಸುವವರೂ
2 ತಿಮೊಥೆಯನಿಗೆ 3 : 5 (OCVKN)
ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು. ಇಂಥವರನ್ನು ಬಿಟ್ಟು ಪ್ರತ್ಯೇಕವಾಗಿರು.
2 ತಿಮೊಥೆಯನಿಗೆ 3 : 6 (OCVKN)
ಇಂಥವರು ಮನೆಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ಪ್ರೇರಣೆ ಹೊಂದಿ ಸುಲಭವಾಗಿ ಮೋಸಹೋಗುವ ಸ್ತ್ರೀಯರನ್ನು ವಶಮಾಡಿಕೊಳ್ಳುವರು.
2 ತಿಮೊಥೆಯನಿಗೆ 3 : 7 (OCVKN)
ಇಂಥ ಸ್ತ್ರೀಯರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಜ್ಞಾನಕ್ಕೆ ಬರಲಾರದವರು ಆಗಿರುವರು.
2 ತಿಮೊಥೆಯನಿಗೆ 3 : 8 (OCVKN)
ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ, ಈ ಸುಳ್ಳು ಬೋಧಕರು ಸಹ ಸತ್ಯವನ್ನು ವಿರೋಧಿಸುತ್ತಾರೆ. ಇದಲ್ಲದೆ ಇವರು ಬುದ್ಧಿಗೆಟ್ಟವರೂ ವಿಶ್ವಾಸದ ವಿಷಯದಲ್ಲಿ ಭ್ರಷ್ಠರೂ ಆಗಿ, ತಿರಸ್ಕಾರ ಹೊಂದಿರುತ್ತಾರೆ.
2 ತಿಮೊಥೆಯನಿಗೆ 3 : 9 (OCVKN)
ಆದರೆ ಇವರು ಇನ್ನು ಮುಂದುವರಿಯಲಾರರು. ಯನ್ನ, ಯಂಬ್ರರ ಮೂರ್ಖತನವು ಎಲ್ಲರಿಗೂ ಸ್ಪಷ್ಟವಾಗಿ ತಿಳಿದುಬಂದಂತೆಯೇ, ಇವರದೂ ತಿಳಿದುಬರುವುದು.
2 ತಿಮೊಥೆಯನಿಗೆ 3 : 10 (OCVKN)
ತಿಮೊಥೆಗೆ ಪೌಲನ ಅಪ್ಪಣೆ ನೀನಾದರೋ ನನ್ನ ಎಲ್ಲಾ ಬೋಧನೆ, ನನ್ನ ನಡತೆ, ನನ್ನ ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ,
2 ತಿಮೊಥೆಯನಿಗೆ 3 : 11 (OCVKN)
ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.
2 ತಿಮೊಥೆಯನಿಗೆ 3 : 12 (OCVKN)
ನಿಜವಾಗಿಯೂ ಕ್ರಿಸ್ತ ಯೇಸುವಿನಲ್ಲಿ ಭಕ್ತಿಯುಳ್ಳವರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.
2 ತಿಮೊಥೆಯನಿಗೆ 3 : 13 (OCVKN)
ಆದರೆ ದುಷ್ಟರೂ ಇತರರಂತೆ ನಟಿಸುವ ವೇಷಧಾರಿಗಳೂ ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ಹೆಚ್ಚಾದ ಕೆಟ್ಟತನಕ್ಕೆ ಸಾಗುವರು.
2 ತಿಮೊಥೆಯನಿಗೆ 3 : 14 (OCVKN)
ನೀನಾದರೋ, ಕಲಿತು ನಿಶ್ಚಯಗೊಂಡವುಗಳಲ್ಲಿ ಮುಂದುವರಿಯುತ್ತಿರು. ನಿನಗೆ ಕಲಿಸಿಕೊಟ್ಟವರು ಯಾರೆಂಬುದು ನಿನಗೆ ತಿಳಿದಿದೆ.
2 ತಿಮೊಥೆಯನಿಗೆ 3 : 15 (OCVKN)
ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.
2 ತಿಮೊಥೆಯನಿಗೆ 3 : 16 (OCVKN)
ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ.
2 ತಿಮೊಥೆಯನಿಗೆ 3 : 17 (OCVKN)
ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.

1 2 3 4 5 6 7 8 9 10 11 12 13 14 15 16 17