2 ತಿಮೊಥೆಯನಿಗೆ 4 : 1 (OCVKN)
ದೇವರ ಮುಂದೆಯೂ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸಲು ಕರ್ತ ಆಗಿರುವ ಕ್ರಿಸ್ತ ಯೇಸುವಿನ ಮುಂದೆಯೂ ಅವರ ಪ್ರತ್ಯಕ್ಷತೆ ಹಾಗೂ ಅವರ ರಾಜ್ಯದ ಮುಂದೆಯೂ ನಾನು ನಿನಗೆ ಆಜ್ಞಾಪಿಸಿ ಹೇಳುವುದೇನೆಂದರೆ:
2 ತಿಮೊಥೆಯನಿಗೆ 4 : 2 (OCVKN)
ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.
2 ತಿಮೊಥೆಯನಿಗೆ 4 : 3 (OCVKN)
ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು.
2 ತಿಮೊಥೆಯನಿಗೆ 4 : 4 (OCVKN)
ಅವರು ಸತ್ಯಕ್ಕೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ತಿರುಗಿಕೊಳ್ಳುವರು.
2 ತಿಮೊಥೆಯನಿಗೆ 4 : 5 (OCVKN)
ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು. ಶ್ರಮೆಗಳನ್ನು ತಾಳಿಕೋ. ಸುವಾರ್ತಿಕನ ಕೆಲಸವನ್ನು ಮಾಡು. ನಿನ್ನ ಸೇವೆಯ ಎಲ್ಲಾ ಕರ್ತವ್ಯಗಳನ್ನು ನೆರವೇರಿಸು.
2 ತಿಮೊಥೆಯನಿಗೆ 4 : 6 (OCVKN)
ಏಕೆಂದರೆ ನಾನು ಈಗಲೇ ಪಾನ ಅರ್ಪಣೆಯಾಗಿ ಇದ್ದೇನೆ. ನಾನು ಹೊರಟುಹೋಗಬೇಕಾದ ಸಮಯವು ಹತ್ತಿರ ಬಂದಿದೆ.
2 ತಿಮೊಥೆಯನಿಗೆ 4 : 7 (OCVKN)
ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.
2 ತಿಮೊಥೆಯನಿಗೆ 4 : 8 (OCVKN)
ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.
2 ತಿಮೊಥೆಯನಿಗೆ 4 : 9 (OCVKN)
ವೈಯಕ್ತಿಕ ಹಿತನುಡಿಗಳು ನನ್ನ ಬಳಿಗೆ ಆದಷ್ಟು ಬೇಗನೆ ಬರುವುದಕ್ಕೆ ನೀನು ಪ್ರಯತ್ನ ಮಾಡು.
2 ತಿಮೊಥೆಯನಿಗೆ 4 : 10 (OCVKN)
ಏಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ, ತೀತನು ದಲ್ಮಾತ್ಯಕ್ಕೂ ಹೋದನು.
2 ತಿಮೊಥೆಯನಿಗೆ 4 : 11 (OCVKN)
ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನು ನನ್ನ ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.
2 ತಿಮೊಥೆಯನಿಗೆ 4 : 12 (OCVKN)
ತುಖಿಕನನ್ನು ನಾನು ಎಫೆಸಕ್ಕೆ ಕಳುಹಿಸಿದೆನು.
2 ತಿಮೊಥೆಯನಿಗೆ 4 : 13 (OCVKN)
ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ಮೇಲಂಗಿಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
2 ತಿಮೊಥೆಯನಿಗೆ 4 : 14 (OCVKN)
ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡು ಮಾಡಿದ್ದಾನೆ. ಕರ್ತದೇವರು ಅವನ ಕೃತ್ಯಗಳಿಗೆ ಅನುಸಾರವಾಗಿ ಅವನಿಗೆ ಪ್ರತಿಫಲವನ್ನು ಕೊಡಲಿ.
2 ತಿಮೊಥೆಯನಿಗೆ 4 : 15 (OCVKN)
ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ಏಕೆಂದರೆ ಅವನು ನಮ್ಮ ಸಂದೇಶವನ್ನು ಬಹಳವಾಗಿ ವಿರೋಧಿಸಿದನು.
2 ತಿಮೊಥೆಯನಿಗೆ 4 : 16 (OCVKN)
ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ.
2 ತಿಮೊಥೆಯನಿಗೆ 4 : 17 (OCVKN)
ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.
2 ತಿಮೊಥೆಯನಿಗೆ 4 : 18 (OCVKN)
ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.
2 ತಿಮೊಥೆಯನಿಗೆ 4 : 19 (OCVKN)
ಅಂತಿಮ ವಂದನೆಗಳು ಪ್ರಿಸ್ಕಳಿಗೂ ಅಕ್ವಿಲನಿಗೂ ಒನೇಸಿಫೊರನ ಮನೆಯವರಿಗೂ ವಂದನೆ.
2 ತಿಮೊಥೆಯನಿಗೆ 4 : 20 (OCVKN)
ಎರಸ್ತನು ಕೊರಿಂಥದಲ್ಲಿ ಉಳಿದುಕೊಂಡಿದ್ದಾನೆ. ಆದರೆ ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ನಾನು ಮಿಲೇತದಲ್ಲಿ ಬಿಟ್ಟಿದ್ದೇನೆ.
2 ತಿಮೊಥೆಯನಿಗೆ 4 : 21 (OCVKN)
ನೀನು ಚಳಿಗಾಲಕ್ಕೆ ಮುಂಚೆಯೇ ಆದಷ್ಟು ಬೇಗನೆ ಬರುವುದಕ್ಕೆ ಪ್ರಯತ್ನ ಮಾಡು. ಯುಬೂಲನೂ ಪೊದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.
2 ತಿಮೊಥೆಯನಿಗೆ 4 : 22 (OCVKN)
ಕರ್ತ ಯೇಸು ನಿನ್ನ ಆತ್ಮದೊಂದಿಗೆ ಇರಲಿ. ಕೃಪೆಯು ನಿಮ್ಮೆಲ್ಲರೊಂದಿಗಿರಲಿ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22