ಅಪೊಸ್ತಲರ ಕೃತ್ಯಗ 1 : 1 (OCVKN)
ಯೇಸು ಪರಲೋಕಕ್ಕೆ ಏರಿಹೋದದ್ದು ಥೆಯೊಫಿಲನೇ, ನಾನು ನಿನಗೆ ನನ್ನ ಮೊದಲನೆಯ ಗ್ರಂಥದಲ್ಲಿ ಯೇಸು ಮಾಡುವುದಕ್ಕೂ ಬೋಧಿಸುವುದಕ್ಕೂ ಪ್ರಾರಂಭಿಸಿದ್ದೆಲ್ಲವನ್ನೂ ಕುರಿತು ನಿಮಗೆ ಬರೆದಿದ್ದೇನೆ.
ಅಪೊಸ್ತಲರ ಕೃತ್ಯಗ 1 : 2 (OCVKN)
ಅಂದರೆ, ಯೇಸು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮ ದೇವರ ಮುಖಾಂತರ ಆಜ್ಞಾಪಿಸಿದ ದಿನ ಮೊದಲುಗೊಂಡು ಸ್ವರ್ಗಕ್ಕೆ ಏರಿಹೋಗುವ ದಿನದವರೆಗೆ ಮಾಡಿದ್ದೆಲ್ಲವನ್ನೂ ಬರೆದಿದ್ದೇನೆ.
ಅಪೊಸ್ತಲರ ಕೃತ್ಯಗ 1 : 3 (OCVKN)
ಯೇಸು ಬಾಧೆಪಟ್ಟು ಸತ್ತ ನಂತರ, ಅಪೊಸ್ತಲರಿಗೆ ಪ್ರತ್ಯಕ್ಷರಾಗುತ್ತಾ ತಾವು ಜೀವಂತವಾಗಿರುವುದನ್ನು ಅನೇಕ ನಿಶ್ಚಿತ ರುಜುವಾತುಗಳಿಂದ ತೋರಿಸಿಕೊಟ್ಟರು ಮತ್ತು ನಲವತ್ತು ದಿನಗಳ ಅವಧಿಯಲ್ಲಿ ಯೇಸು ಅವರಿಗೆ ಕಾಣಿಸಿಕೊಂಡು ದೇವರ ರಾಜ್ಯವನ್ನು ಕುರಿತು ತಿಳಿಸಿದರು.
ಅಪೊಸ್ತಲರ ಕೃತ್ಯಗ 1 : 4 (OCVKN)
ಒಮ್ಮೆ ಯೇಸು ಶಿಷ್ಯರೊಂದಿಗೆ ಊಟಮಾಡುತ್ತಿದ್ದಾಗ ಶಿಷ್ಯರಿಗೆ, “ನೀವು ಯೆರೂಸಲೇಮನ್ನು ಬಿಟ್ಟು ಹೋಗಬೇಡಿರಿ, ನಾನು ನಿಮಗೆ ತಿಳಿಸಿದಂತೆ ನನ್ನ ತಂದೆ ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.
ಅಪೊಸ್ತಲರ ಕೃತ್ಯಗ 1 : 5 (OCVKN)
ಏಕೆಂದರೆ ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದನು. ಆದರೆ ಇನ್ನು ಕೆಲವೇ ದಿನಗಳಲ್ಲಿ ಪವಿತ್ರಾತ್ಮ ದೇವರಿಂದ ನೀವು ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.
ಅಪೊಸ್ತಲರ ಕೃತ್ಯಗ 1 : 6 (OCVKN)
ಅಪೊಸ್ತಲರ ಕೃತ್ಯಗ 1 : 7 (OCVKN)
ಶಿಷ್ಯರು ಯೇಸುವಿನ ಸಂಗಡ ಇದ್ದಾಗ, “ಸ್ವಾಮೀ, ಇಸ್ರಾಯೇಲರ ರಾಜ್ಯವನ್ನು ಈ ಕಾಲದಲ್ಲಿ ಪುನಃ ಸ್ಥಾಪಿಸುವಿಯೋ?” ಎಂದು ಪ್ರಶ್ನೆ ಮಾಡಿದರು. ಅದಕ್ಕೆ ಯೇಸು: “ತಂದೆ ತಮ್ಮ ಸ್ವಂತ ಅಧಿಕಾರದಿಂದ ನೇಮಿಸಿದ ಸಮಯವನ್ನಾಗಲಿ, ಕಾಲವನ್ನಾಗಲಿ, ತಿಳಿಯುವುದು ನಿಮ್ಮ ಕೆಲಸವಲ್ಲ.
ಅಪೊಸ್ತಲರ ಕೃತ್ಯಗ 1 : 8 (OCVKN)
ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.
ಅಪೊಸ್ತಲರ ಕೃತ್ಯಗ 1 : 9 (OCVKN)
ಅಪೊಸ್ತಲರ ಕೃತ್ಯಗ 1 : 10 (OCVKN)
ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು. ಯೇಸು ಮೇಲಕ್ಕೆ ಹೋಗುತ್ತಿರಲು ಶಿಷ್ಯರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರುವಾಗ, ಬಿಳಿವಸ್ತ್ರ ಧರಿಸಿದ್ದ ಇಬ್ಬರು ಪುರುಷರು ಅವರ ಪಕ್ಕದಲ್ಲಿ ನಿಂತುಕೊಂಡು,
ಅಪೊಸ್ತಲರ ಕೃತ್ಯಗ 1 : 11 (OCVKN)
“ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು,” ಎಂದು ಹೇಳಿದರು.
ಅಪೊಸ್ತಲರ ಕೃತ್ಯಗ 1 : 12 (OCVKN)
ಯೂದನ ಬದಲಾಗಿ ಮತ್ತೀಯನ ಆಯ್ಕೆ ಅನಂತರ ಅಪೊಸ್ತಲರು ಯೆರೂಸಲೇಮಿಗೆ ಸಮೀಪದಲ್ಲಿದ್ದ ಓಲಿವ್ ಗುಡ್ಡದಿಂದ ಇಳಿದು ಯೆರೂಸಲೇಮಿಗೆ ಹಿಂದಿರುಗಿ ಹೋದರು. ಅದು ಸಬ್ಬತ್ ದಿನದಲ್ಲಿ ಪ್ರಯಾಣ* ಅಂದರೆ ಸುಮಾರು 1 ಕಿಲೋಮೀಟರ್ ಮಾಡುವಷ್ಟು ದೂರದಲ್ಲಿತ್ತು.
ಅಪೊಸ್ತಲರ ಕೃತ್ಯಗ 1 : 13 (OCVKN)
ಅವರು ಹಿಂದಿರುಗಿದಾಗ, ತಾವು ವಾಸಿಸುತ್ತಿದ್ದ ಮಾಳಿಗೆ ಮೇಲಿನ ಕೋಣೆಯೊಳಗೆ ಹೋದರು. ಅವರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ; ಫಿಲಿಪ್ಪ, ತೋಮ; ಬಾರ್ತೊಲೊಮಾಯ ಮತ್ತಾಯ; ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಸೀಮೋನ ಮತ್ತು ಯಾಕೋಬನ ಮಗ ಯೂದ.
ಅಪೊಸ್ತಲರ ಕೃತ್ಯಗ 1 : 14 (OCVKN)
ಅಪೊಸ್ತಲರ ಕೃತ್ಯಗ 1 : 15 (OCVKN)
ಅಲ್ಲಿ ಕೆಲವು ಮಹಿಳೆಯರು, ಯೇಸುವಿನ ತಾಯಿ ಮರಿಯಳು, ಯೇಸುವಿನ ಸಹೋದರರು, ಇವರೆಲ್ಲರು ನಿತ್ಯವೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿ ಸೇರುತ್ತಿದ್ದರು. ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:
ಅಪೊಸ್ತಲರ ಕೃತ್ಯಗ 1 : 16 (OCVKN)
“ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.
ಅಪೊಸ್ತಲರ ಕೃತ್ಯಗ 1 : 17 (OCVKN)
ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದು ಈ ಸೇವೆಯಲ್ಲಿ ಪಾಲುಗಾರನಾಗಿದ್ದನು.”
ಅಪೊಸ್ತಲರ ಕೃತ್ಯಗ 1 : 18 (OCVKN)
ಯೂದನು, ದ್ರೋಹ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡನು; ಅಲ್ಲಿಯೇ ಅವನು ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತನು.
ಅಪೊಸ್ತಲರ ಕೃತ್ಯಗ 1 : 19 (OCVKN)
ಯೆರೂಸಲೇಮಿನಲ್ಲಿದ್ದ ಪ್ರತಿಯೊಬ್ಬರಿಗೂ ಈ ವಿಷಯ ತಿಳಿಯಿತು, ಹೀಗೆ ಆ ಹೊಲವನ್ನು ಅವರು ತಮ್ಮ ಭಾಷೆಯಲ್ಲಿ “ಅಕೆಲ್ದಮಾ” ಎಂದು ಕರೆದರು. “ರಕ್ತದ ಹೊಲ” ಎಂದು ಅದರ ಅರ್ಥ.
ಅಪೊಸ್ತಲರ ಕೃತ್ಯಗ 1 : 20 (OCVKN)
ಕೀರ್ತನೆಗಳ ಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ ‘ಅವನ ವಾಸಸ್ಥಾನವು ಹಾಳಾಗಲಿ, ಅದರಲ್ಲಿ ಯಾರೂ ವಾಸಿಸದಿರಲಿ,’ ಕೀರ್ತನೆ 69:25 ಮತ್ತು, “ ‘ಅವನ ಹುದ್ದೆಯನ್ನು ಇನ್ನೊಬ್ಬನು ತೆಗೆದುಕೊಳ್ಳಲಿ,’ ಕೀರ್ತನೆ 109:8
ಅಪೊಸ್ತಲರ ಕೃತ್ಯಗ 1 : 21 (OCVKN)
21 ಆದ್ದರಿಂದ, ಕರ್ತ ಆಗಿರುವ ಯೇಸು ನಮ್ಮೊಂದಿಗೆ ಇದ್ದ ಕಾಲವೆಲ್ಲಾ ನಮ್ಮ ಜೊತೆಯಲ್ಲಿರುವ ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಎಲ್ಲಾ ಸೇವಾ ಸಂಚಾರದಲ್ಲಿಯೂ ನಮ್ಮೊಂದಿಗೆ ಇದ್ದವನಾಗಿರಬೇಕು,
ಅಪೊಸ್ತಲರ ಕೃತ್ಯಗ 1 : 22 (OCVKN)
ಅಂದರೆ, ಯೋಹಾನನಿಂದ ದೀಕ್ಷಾಸ್ನಾನ ಪಡೆದ ದಿನದಿಂದ, ಯೇಸು ಸ್ವರ್ಗಕ್ಕೆ ಏರಿಹೋದ ಕಾಲದವರೆಗೆ ನಮ್ಮ ಸಂಗಡ ಇದ್ದವನಾಗಿರಬೇಕು.” ಅವನು ಯೇಸುವಿನ ಪುನರುತ್ಥಾನಕ್ಕೆ ನಮ್ಮೊಂದಿಗೆ ಸಾಕ್ಷಿಯಾಗಿರಬೇಕು.
ಅಪೊಸ್ತಲರ ಕೃತ್ಯಗ 1 : 23 (OCVKN)
ಆಗ ಅವರು ಇಬ್ಬರು ಪುರುಷರ ಹೆಸರುಗಳನ್ನು ಸೂಚಿಸಿದರು: ಬಾರ್ಸಬ ಎಂಬ ಹೆಸರಿನ ಯೋಸೇಫ, ಇವನನ್ನು ಯೂಸ್ತ ಎಂಬುದಾಗಿಯೂ ಕರೆಯುತ್ತಿದ್ದರು ಮತ್ತು ಇನ್ನೊಬ್ಬನು ಮತ್ತೀಯ ಎಂಬುವನು.
ಅಪೊಸ್ತಲರ ಕೃತ್ಯಗ 1 : 24 (OCVKN)
ಆಮೇಲೆ ಅವರು, “ಕರ್ತ ಯೇಸುವೇ, ಪ್ರತಿಯೊಬ್ಬರ ಹೃದಯವನ್ನು ನೀವು ತಿಳಿದವರು. ಈ ಸೇವೆಯಿಂದ ಯೂದನು ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ,
ಅಪೊಸ್ತಲರ ಕೃತ್ಯಗ 1 : 25 (OCVKN)
ಈ ಅಪೊಸ್ತಲರ ಸೇವೆಯನ್ನು ವಹಿಸಿಕೊಳ್ಳುವುದಕ್ಕಾಗಿ, ನೀವು ಈ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡಿಕೊಂಡಿರುವಿರಿ ಎಂಬುದನ್ನು ನಮಗೆ ತೋರಿಸಿರಿ,” ಎಂದು ಪ್ರಾರ್ಥನೆ ಮಾಡಿದರು.
ಅಪೊಸ್ತಲರ ಕೃತ್ಯಗ 1 : 26 (OCVKN)
ಅನಂತರ ಅವರು ಚೀಟು ಹಾಕಲು, ಅದು ಮತ್ತೀಯನ ಪಾಲಿಗೆ ಬಂದಿತು; ಆದ್ದರಿಂದ ಅವನು ಹನ್ನೊಂದು ಜನ ಅಪೊಸ್ತಲರೊಂದಿಗೆ ಸೇರಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26