ಅಪೊಸ್ತಲರ ಕೃತ್ಯಗ 20 : 1 (OCVKN)
ಮಕೆದೋನ್ಯ ಮತ್ತು ಗ್ರೀಸ್ ಮಾರ್ಗವಾಗಿ ಪೌಲನ ಪ್ರಯಾಣ ಗಲಭೆಯು ಶಾಂತಗೊಂಡ ನಂತರ ಪೌಲನು ಶಿಷ್ಯರನ್ನು ಕರೆಕಳುಹಿಸಿ ಅವರಿಗೆ ಧೈರ್ಯ ಹೇಳಿ, ಅವರನ್ನು ಬೀಳ್ಕೊಟ್ಟು ಮಕೆದೋನ್ಯಕ್ಕೆ ಪ್ರಯಾಣಮಾಡಿದನು.
ಅಪೊಸ್ತಲರ ಕೃತ್ಯಗ 20 : 2 (OCVKN)
ಆ ಪ್ರದೇಶದಲ್ಲೆಲ್ಲಾ ಜನರಿಗೆ ಅನೇಕ ಪ್ರೋತ್ಸಾಹದ ಮಾತುಗಳನ್ನು ಹೇಳುತ್ತಾ ಪ್ರಯಾಣಮಾಡಿ ಗ್ರೀಸ್ ತಲುಪಿದನು.
ಅಪೊಸ್ತಲರ ಕೃತ್ಯಗ 20 : 3 (OCVKN)
ಇಲ್ಲಿ ಮೂರು ತಿಂಗಳುಗಳ ಕಾಲ ಇದ್ದ ಮೇಲೆ, ಅವನು ಸಿರಿಯಕ್ಕೆ ಪ್ರಯಾಣ ಮಾಡಬೇಕೆಂದು ಯೋಚಿಸುತ್ತಿದ್ದಾಗ ಅವನಿಗೆ ವಿರೋಧವಾಗಿ ಯೆಹೂದ್ಯರು ಒಳಸಂಚು ಮಾಡಿದ್ದು ಅವನಿಗೆ ತಿಳಿದು ಬಂದದ್ದರಿಂದ ಮಕೆದೋನ್ಯ ಮಾರ್ಗವಾಗಿ ಹಿಂತಿರುಗಿ ಹೋಗಲು ನಿರ್ಣಯಿಸಿದನು.
ಅಪೊಸ್ತಲರ ಕೃತ್ಯಗ 20 : 4 (OCVKN)
ಬೆರೋಯದ ಪುರ್ರನ ಮಗ ಸೋಪತ್ರನು, ಥೆಸಲೋನಿಕದ ಅರಿಸ್ತಾರ್ಕ ಮತ್ತು ಸೆಕುಂದ, ದೆರ್ಬೆಯ ಗಾಯ, ತಿಮೊಥೆ ಅಲ್ಲದೆ ಏಷ್ಯಾ ಪ್ರಾಂತದ ತುಖಿಕ ಹಾಗೂ ತ್ರೊಫಿಮ ಅವನೊಂದಿಗೆ ಹೋದರು.
ಅಪೊಸ್ತಲರ ಕೃತ್ಯಗ 20 : 5 (OCVKN)
ಇವರೆಲ್ಲರೂ ಮುಂಚಿತವಾಗಿ ಹೋಗಿ ತ್ರೋವದಲ್ಲಿ ನಮಗಾಗಿ ಕಾದಿದ್ದರು.
ಅಪೊಸ್ತಲರ ಕೃತ್ಯಗ 20 : 6 (OCVKN)
ಹುಳಿಯಿಲ್ಲದ ರೊಟ್ಟಿಯ ಹಬ್ಬದ ನಂತರ ನಾವು ಫಿಲಿಪ್ಪಿಯಿಂದ ಸಮುದ್ರ ಮಾರ್ಗವಾಗಿ ಪ್ರಯಾಣಮಾಡಿ, ಐದು ದಿನಗಳ ತರುವಾಯ ತ್ರೋವದಲ್ಲಿದ್ದ ಇತರರೊಂದಿಗೆ ಸೇರಿ, ಅಲ್ಲಿ ಏಳು ದಿನ ಇದ್ದೆವು.
ಅಪೊಸ್ತಲರ ಕೃತ್ಯಗ 20 : 7 (OCVKN)
ತ್ರೋವದಲ್ಲಿ ಯೂತಿಖನನ್ನು ಮರಣದಿಂದ ಎಬ್ಬಿಸಿದ್ದು ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು.
ಅಪೊಸ್ತಲರ ಕೃತ್ಯಗ 20 : 8 (OCVKN)
ನಾವು ಸಭೆ ಸೇರಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳು ಉರಿಯುತ್ತಿದ್ದವು.
ಅಪೊಸ್ತಲರ ಕೃತ್ಯಗ 20 : 9 (OCVKN)
ಒಂದು ಕಿಟಿಕಿಯಲ್ಲಿ ಯೂತಿಖ ಎಂಬ ಹೆಸರಿನ ಒಬ್ಬ ಯುವಕನು ಕುಳಿತುಕೊಂಡಿದ್ದನು. ಪೌಲನು ಬಹಳ ಹೊತ್ತು ಬೋಧಿಸುತ್ತಲೇ ಇದ್ದುದರಿಂದ ಅವನಿಗೆ ಗಾಢನಿದ್ರೆ ಹತ್ತಿತು. ನಿದ್ರಿಸುತ್ತಿದ್ದ ಅವನು ಮೂರನೇ ಅಂತಸ್ತಿನಿಂದ ಕೆಳಕ್ಕೆ ಬಿದ್ದನು. ಅವನನ್ನು ಎತ್ತಿಕೊಂಡಾಗ ಅವನು ಸತ್ತೇ ಹೋಗಿದ್ದನು.
ಅಪೊಸ್ತಲರ ಕೃತ್ಯಗ 20 : 10 (OCVKN)
ಆದರೆ ಪೌಲನು ಕೆಳಗೆ ಹೋಗಿ, ಆ ಯುವಕನನ್ನು ತಬ್ಬಿಕೊಂಡು, “ಗಾಬರಿಗೊಳ್ಳಬೇಡಿ, ಅವನ ಜೀವ ಅವನಲ್ಲಿದೆ,” ಎಂದನು.
ಅಪೊಸ್ತಲರ ಕೃತ್ಯಗ 20 : 11 (OCVKN)
ಅನಂತರ ಪೌಲನು ಮೇಲಂತಸ್ತಿಗೆ ಹೋಗಿ ವಿಶ್ವಾಸಿಗಳೊಂದಿಗೆ ರೊಟ್ಟಿ ಮುರಿದು ಊಟಮಾಡಿ, ಬೆಳಗಾಗುವವರೆಗೆ ಅವರೊಡನೆ ಮಾತನಾಡಿ, ಅಲ್ಲಿಂದ ಹೊರಟನು.
ಅಪೊಸ್ತಲರ ಕೃತ್ಯಗ 20 : 12 (OCVKN)
ಜೀವ ಹೊಂದಿದ ಆ ಯುವಕನನ್ನು ಜನರು ಮನೆಗೆ ಕರೆದುಕೊಂಡು ಹೋದರು. ಅವರಿಗೆ ಅಪಾರ ಸಾಂತ್ವನ ದೊರೆಯಿತು.
ಅಪೊಸ್ತಲರ ಕೃತ್ಯಗ 20 : 13 (OCVKN)
ಎಫೆಸದ ಹಿರಿಯರಿಗೆ ಪೌಲನ ಬೀಳ್ಕೊಡುವಿಕೆ ಮೊದಲು ನಾವು ನೌಕೆ ಇದ್ದ ಸ್ಥಳಕ್ಕೆ ಹೋಗಿ ಅಸ್ಸೊಸಿ ಎಂಬಲ್ಲಿಗೆ ಸಮುದ್ರ ಪ್ರಯಾಣಮಾಡಿದೆವು. ಅಲ್ಲಿ ಪೌಲನು ಬಂದು ನಮ್ಮೊಂದಿಗೆ ನೌಕೆಯಲ್ಲಿ ಪ್ರಯಾಣ ಮಾಡಬೇಕಿತ್ತು. ಅಲ್ಲಿಗೆ ಕಾಲ್ನಡಿಗೆಯಾಗಿ ಹೋಗಬೇಕಾದ್ದರಿಂದ ಅವನು ಈ ಏರ್ಪಾಡು ಮಾಡಿದನು.
ಅಪೊಸ್ತಲರ ಕೃತ್ಯಗ 20 : 14 (OCVKN)
ಅಸ್ಸೊಸಿನಲ್ಲಿ ಪೌಲನು ನಮ್ಮನ್ನು ಭೇಟಿಯಾದಾಗ, ಅವನನ್ನು ಕರೆದುಕೊಂಡು ಮಿತಿಲೇನೆಗೆ ಹೋದೆವು.
ಅಪೊಸ್ತಲರ ಕೃತ್ಯಗ 20 : 15 (OCVKN)
ನಾವು ಮರುದಿನ ಅಲ್ಲಿಂದ ಪ್ರಯಾಣ ಮುಂದುವರೆಸಿ ಖೀಯೊಸ್ ದ್ವೀಪವನ್ನು ಸಮೀಪಿಸಿದೆವು. ಮರುದಿನ ಸಾಮೊಸನ್ನು ತಲುಪಿದೆವು. ಅನಂತರ ಮಾರನೆಯ ದಿನ ಮಿಲೇತನ್ನು ಸೇರಿದೆವು.
ಅಪೊಸ್ತಲರ ಕೃತ್ಯಗ 20 : 16 (OCVKN)
ಸಾಧ್ಯವಾದರೆ, ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬಕ್ಕೆ* ಪಸ್ಕಹಬ್ಬ ಆಚರಿಸಿದ ಐವತ್ತು ದಿನಗಳ ನಂತರ ಬರುತ್ತಿದ್ದ ಯೆಹೂದ್ಯರ ಹಬ್ಬ ಯೆರೂಸಲೇಮನ್ನು ತಲುಪಬೇಕೆಂಬ ಅವಸರ ಪೌಲನಿಗಿದ್ದುದ್ದರಿಂದ, ಏಷ್ಯಾ ಪ್ರಾಂತದಲ್ಲಿ ಕಾಲ ಕಳೆಯುವುದನ್ನು ತಪ್ಪಿಸಿ ಎಫೆಸವನ್ನು ದಾಟಿ ಹೋಗಬೇಕೆಂದು ನಿರ್ಧರಿಸಿದ್ದನು.
ಅಪೊಸ್ತಲರ ಕೃತ್ಯಗ 20 : 17 (OCVKN)
ಮಿಲೇತದಿಂದ, ಪೌಲನು ಎಫೆಸಕ್ಕೆ ಸಂದೇಶ ಕಳುಹಿಸಿ, ಅಲ್ಲಿಯ ಸಭೆಯ ಹಿರಿಯರು ಬರಬೇಕೆಂದು ತಿಳಿಸಿದನು.
ಅಪೊಸ್ತಲರ ಕೃತ್ಯಗ 20 : 18 (OCVKN)
ಅವರು ಬಂದ ಮೇಲೆ, ಪೌಲನು ಅವರಿಗೆ ಹೀಗೆಂದನು: “ನಾನು ಏಷ್ಯಾ ಪ್ರಾಂತಕ್ಕೆ ಬಂದ ಪ್ರಥಮ ದಿನದಿಂದ ನಿಮ್ಮೊಂದಿಗಿದ್ದು ಪೂರ್ತಿ ಸಮಯ ಹೇಗೆ ಕಳೆದನೆಂಬುದನ್ನು ನೀವು ಅರಿತಿದ್ದೀರಿ.
ಅಪೊಸ್ತಲರ ಕೃತ್ಯಗ 20 : 19 (OCVKN)
ಯೆಹೂದ್ಯರ ಒಳಸಂಚುಗಳಿಂದ ನಾನು ಕಠಿಣ ಪರೀಕ್ಷೆಗಳಿಗೆ ಒಳಗಾಗಿದ್ದರೂ ಬಹಳ ದೀನತೆಯಿಂದಲೂ ಕಣ್ಣೀರಿನಿಂದಲೂ ಕರ್ತ ಯೇಸುವಿನ ಸೇವೆ ಮಾಡಿದೆನು.
ಅಪೊಸ್ತಲರ ಕೃತ್ಯಗ 20 : 20 (OCVKN)
ನಿಮಗೆ ಹಿತಕರವಾದುದ್ದೆಲ್ಲವನ್ನೂ ಬೋಧಿಸಲು ನಾನು ಹಿಂಜರಿಯಲಿಲ್ಲ. ಬಹಿರಂಗದಲ್ಲಿಯೂ ಮನೆಮನೆಗಳಲ್ಲಿಯೂ ನಾನು ನಿಮಗೆ ಬೋಧಿಸಿದ್ದೇನೆ.
ಅಪೊಸ್ತಲರ ಕೃತ್ಯಗ 20 : 21 (OCVKN)
ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.
ಅಪೊಸ್ತಲರ ಕೃತ್ಯಗ 20 : 22 (OCVKN)
“ಈಗಲಾದರೋ, ನಾನು ಪವಿತ್ರಾತ್ಮ ಪ್ರೇರಿತನಾಗಿ ಯೆರೂಸಲೇಮಿನಲ್ಲಿ ನನಗೇನಾಗುವುದೋ ಎಂಬುದನ್ನು ತಿಳಿಯದೆ, ಅಲ್ಲಿಗೆ ಹೋಗುತ್ತಿದ್ದೇನೆ.
ಅಪೊಸ್ತಲರ ಕೃತ್ಯಗ 20 : 23 (OCVKN)
ಪ್ರತಿಯೊಂದು ಪಟ್ಟಣದಲ್ಲಿ ಸೆರೆಮನೆಯೂ ಬಾಧೆಯೂ ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ದೇವರು ಎಚ್ಚರಿಸಿದ್ದಾರೆ.
ಅಪೊಸ್ತಲರ ಕೃತ್ಯಗ 20 : 24 (OCVKN)
ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.
ಅಪೊಸ್ತಲರ ಕೃತ್ಯಗ 20 : 25 (OCVKN)
“ನಿಮ್ಮ ಮಧ್ಯದಲ್ಲಿ ನಾನು ದೇವರ ರಾಜ್ಯದ ಬಗ್ಗೆ ಬೋಧಿಸುತ್ತಾ ಇದ್ದೆನು. ನಿಮ್ಮಲ್ಲಿ ಯಾರೂ ನನ್ನ ಮುಖವನ್ನು ಇನ್ನೊಮ್ಮೆ ಕಾಣಲಾರಿರಿ ಎಂದು ನಾನು ಬಲ್ಲೆನು.
ಅಪೊಸ್ತಲರ ಕೃತ್ಯಗ 20 : 26 (OCVKN)
ಆದಕಾರಣ ನಾನು ಎಲ್ಲಾ ಮನುಷ್ಯರ ರಕ್ತದ ಹೊಣೆಯಿಂದ ವಿಮುಕ್ತನಾಗಿದ್ದೇನೆ ಎಂದು ಈ ದಿನ ಸಾಕ್ಷಿಕೊಡುತ್ತೇನೆ.
ಅಪೊಸ್ತಲರ ಕೃತ್ಯಗ 20 : 27 (OCVKN)
ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.
ಅಪೊಸ್ತಲರ ಕೃತ್ಯಗ 20 : 28 (OCVKN)
ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.
ಅಪೊಸ್ತಲರ ಕೃತ್ಯಗ 20 : 29 (OCVKN)
ನಾನು ಹೋದ ನಂತರ ಕ್ರೂರ ತೋಳಗಳು ನಿಮ್ಮ ಮಧ್ಯದಲ್ಲಿ ಪ್ರವೇಶಿಸಿ ಮಂದೆಯನ್ನು ಹಾಳುಮಾಡದೆ ಬಿಡುವುದಿಲ್ಲ ಎಂದು ಬಲ್ಲೆನು.
ಅಪೊಸ್ತಲರ ಕೃತ್ಯಗ 20 : 30 (OCVKN)
ನಿಮ್ಮೊಳಗಿಂದಲೂ ಜನರು ಎದ್ದು ವಕ್ರಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳೆದುಕೊಳ್ಳುವರು.
ಅಪೊಸ್ತಲರ ಕೃತ್ಯಗ 20 : 31 (OCVKN)
ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.
ಅಪೊಸ್ತಲರ ಕೃತ್ಯಗ 20 : 32 (OCVKN)
“ಆದಕಾರಣ ನಾನು ದೇವರಿಗೂ ಅವರ ಕೃಪಾವಾಕ್ಯಕ್ಕೂ ಈಗ ನಿಮ್ಮನ್ನು ಒಪ್ಪಿಸಿಕೊಡುತ್ತೇನೆ. ಆ ವಾಕ್ಯವು ನಿಮ್ಮಲ್ಲಿ ಭಕ್ತಿವೃದ್ಧಿ ಮಾಡಿ, ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಕೊಡಲು ಸಾಮರ್ಥ್ಯವುಳ್ಳದ್ದು.
ಅಪೊಸ್ತಲರ ಕೃತ್ಯಗ 20 : 33 (OCVKN)
ನಾನು ಯಾರ ಬೆಳ್ಳಿ ಬಂಗಾರಕ್ಕಾಗಲಿ, ಬಟ್ಟೆಗಾಗಲಿ ಆಶೆಪಡಲಿಲ್ಲ.
ಅಪೊಸ್ತಲರ ಕೃತ್ಯಗ 20 : 34 (OCVKN)
ನನ್ನ ಹಸ್ತಗಳೇ ನನ್ನ ಅಗತ್ಯಗಳನ್ನೂ ನನ್ನೊಂದಿಗಿದ್ದವರ ಅಗತ್ಯಗಳನ್ನೂ ಪೂರೈಸಿದವೆಂಬುದನ್ನು ನೀವು ಬಲ್ಲವರಾಗಿದ್ದೀರಿ.
ಅಪೊಸ್ತಲರ ಕೃತ್ಯಗ 20 : 35 (OCVKN)
ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು.
ಅಪೊಸ್ತಲರ ಕೃತ್ಯಗ 20 : 36 (OCVKN)
ಇದನ್ನು ಹೇಳಿದ ತರುವಾಯ ಅವನು ಎಲ್ಲರೊಂದಿಗೆ ಮೊಣಕಾಲೂರಿ ಪ್ರಾರ್ಥನೆಮಾಡಿದನು.
ಅಪೊಸ್ತಲರ ಕೃತ್ಯಗ 20 : 37 (OCVKN)
ಅವರೆಲ್ಲರೂ ಪೌಲನ ಕೊರಳನ್ನು ಅಪ್ಪಿಕೊಂಡು ಕಣ್ಣೀರಿಡುತ್ತಾ ಅವನಿಗೆ ಮುದ್ದಿಟ್ಟರು.
ಅಪೊಸ್ತಲರ ಕೃತ್ಯಗ 20 : 38 (OCVKN)
“ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ,” ಎಂದು ಅವನು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ದುಃಖಗೊಂಡು, ಅವನೊಂದಿಗೆ ನೌಕೆಯವರೆಗೆ ಹೋದರು.
❮
❯