ಅಪೊಸ್ತಲರ ಕೃತ್ಯಗ 24 : 1 (OCVKN)
ಫೇಲಿಕ್ಸನ ಮುಂದೆ ವಿಚಾರಣೆ ಐದು ದಿನಗಳ ನಂತರ ಮಹಾಯಾಜಕ ಅನನೀಯನು ಕೆಲವು ಹಿರಿಯರೊಂದಿಗೆ ಕೈಸರೈಯಕ್ಕೆ ಬಂದನು. ತನ್ನೊಂದಿಗೆ ಟೆರ್ಟುಲಸ್ ಎಂಬ ವಕೀಲನನ್ನು ಕರೆದುಕೊಂಡು ಬಂದು, ರಾಜ್ಯಪಾಲನಿಗೆ ಪೌಲನ ವಿರೋಧವಾಗಿ ದೂರುಗಳನ್ನಿಟ್ಟರು.
ಅಪೊಸ್ತಲರ ಕೃತ್ಯಗ 24 : 2 (OCVKN)
ಪೌಲನನ್ನು ಒಳಗೆ ಕರೆದುಕೊಂಡು ಬಂದಾಗ, ಟೆರ್ಟುಲಸನು ಫೇಲಿಕ್ಸನ ಮುಂದೆ ತಪ್ಪು ಹೊರಿಸಲು ಪ್ರಾರಂಭಿಸಿ, “ಸನ್ಮಾನಿತ ಫೇಲಿಕ್ಸರೇ, ನಿಮ್ಮ ಮೂಲಕ ಬಹಳ ದಿನಗಳಿಂದ ಶಾಂತಿಯನ್ನು ಅನುಭವಿಸುತ್ತಿದ್ದೇವೆ. ನಿಮ್ಮ ಮುಂದಾಲೋಚನೆಯಿಂದ ದೇಶಗಳಿಗೆ ಅನೇಕ ಸುಧಾರಣೆಗಳನ್ನು ತಂದಿರುವಿರಿ.
ಅಪೊಸ್ತಲರ ಕೃತ್ಯಗ 24 : 3 (OCVKN)
ಎಲ್ಲಾ ಕಡೆಗಳಲ್ಲಿಯೂ ಎಲ್ಲಾ ವಿಧದಲ್ಲಿಯೂ ಬಹು ಕೃತಜ್ಞತೆಯಿಂದ ಇದನ್ನು ಸ್ವಾಗತಿಸುತ್ತೇವೆ.
ಅಪೊಸ್ತಲರ ಕೃತ್ಯಗ 24 : 4 (OCVKN)
ಆದರೆ ನಿಮಗೆ ಹೆಚ್ಚು ತೊಂದರೆಕೊಟ್ಟು ಬೇಸರಪಡಿಸದೇ ನಾನು ಸಂಕ್ಷೇಪವಾಗಿ ಹೇಳುವ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.
ಅಪೊಸ್ತಲರ ಕೃತ್ಯಗ 24 : 5 (OCVKN)
“ಜಗತ್ತಿನಲ್ಲಿ ಇರುವ ಯೆಹೂದ್ಯರ ಮಧ್ಯದಲ್ಲಿ ದಂಗೆಯೆಬ್ಬಿಸಿ ಪೌಲನೆಂಬ ಈ ಮನುಷ್ಯನು ತೊಂದರೆ ಕೊಡುವವನಾಗಿದ್ದಾನೆಂತಲೂ ನಜರೇತಿನವರ ಪಂಗಡಕ್ಕೆ ಇವನು ನಾಯಕನೆಂದೂ ನಾವು ಕಂಡೆವು.
ಅಪೊಸ್ತಲರ ಕೃತ್ಯಗ 24 : 6 (OCVKN)
ಇವನು ದೇವಾಲಯವನ್ನು ಭ್ರಷ್ಟಮಾಡಲು ಪ್ರಯತ್ನಿಸಿದ್ದರಿಂದ ನಾವು ಇವನನ್ನು ಬಂಧಿಸಿದೆವು.
ಅಪೊಸ್ತಲರ ಕೃತ್ಯಗ 24 : 7 (OCVKN)
ಆದರೆ ಸಹಸ್ರಾಧಿಪತಿ ಲೂಸ್ಯನು ಮಧ್ಯೆಬಂದು ಬಲಾತ್ಕಾರದಿಂದ ಇವನನ್ನು ನಮ್ಮಿಂದ ಬಿಡಿಸಿಕೊಂಡು ಹೋದನು.* ಕೆಲವು ಮೂಲ ಪ್ರತಿಗಳಲ್ಲಿ ಈ ವಾಕ್ಯ ಸೇರ್ಪಡೆಯಾಗಿರುವುದಿಲ್ಲ.
ಅಪೊಸ್ತಲರ ಕೃತ್ಯಗ 24 : 8 (OCVKN)
ನೀವೇ ಪೌಲನನ್ನು ವಿಚಾರಣೆ ಮಾಡುವುದರ ಮೂಲಕ ನಾವು ಇವನಿಗೆ ವಿರೋಧವಾಗಿ ತಂದಿರುವ ದೂರುಗಳೆಲ್ಲವೂ ಸತ್ಯವೆಂದು ನಿಮಗೇ ಗೊತ್ತಾಗುವುದು.”
ಅಪೊಸ್ತಲರ ಕೃತ್ಯಗ 24 : 9 (OCVKN)
ಅಪೊಸ್ತಲರ ಕೃತ್ಯಗ 24 : 10 (OCVKN)
ಆಗ ಈ ಸಂಗತಿಗಳು ಸತ್ಯವಾದವುಗಳೆಂದು ಯೆಹೂದ್ಯರು ಸಹ ಸೇರಿಕೊಂಡು ವಕೀಲನಿಗೆ ದೋಷಾರೋಪಣೆ ಮಾಡಿದರು. ರಾಜ್ಯಪಾಲನು ಪೌಲನಿಗೆ ಮಾತನಾಡಬೇಕೆಂದು ಸನ್ನೆಮಾಡಿದಾಗ, ಪೌಲನು ಕೊಟ್ಟ ಉತ್ತರವಿದು: “ಅನೇಕ ವರ್ಷಗಳಿಂದ ತಾವು ಈ ದೇಶದ ಮೇಲೆ ನ್ಯಾಯಾಧೀಶರಾಗಿರುವುದನ್ನು ನಾನು ಬಲ್ಲೆ. ಆದ್ದರಿಂದ ನಾನು ಸಂತೋಷದಿಂದ ನನ್ನ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.
ಅಪೊಸ್ತಲರ ಕೃತ್ಯಗ 24 : 11 (OCVKN)
ದೇವರ ಆರಾಧನೆ ಮಾಡಲು ಯೆರೂಸಲೇಮಿಗೆ ಹೋಗಿ ಇನ್ನೂ ಹನ್ನೆರಡು ದಿನಗಳು ಮಾತ್ರವಾಯಿತು. ಇದನ್ನು ತಾವು ವಿಚಾರಿಸಿ ತಿಳಿದುಕೊಳ್ಳಬಹುದು.
ಅಪೊಸ್ತಲರ ಕೃತ್ಯಗ 24 : 12 (OCVKN)
ದೇವಾಲಯದಲ್ಲಾಗಲಿ, ಸಭಾಮಂದಿರದಲ್ಲಾಗಲಿ, ಪಟ್ಟಣದ ಯಾವುದೇ ಸ್ಥಳದಲ್ಲಾಗಲಿ ನಾನು ವಾಗ್ವಾದ ಮಾಡುತ್ತಿದ್ದುದ್ದನ್ನು ಅಥವಾ ಜನರ ಗುಂಪನ್ನು ಕೂಡಿಸುವುದನ್ನು ಇವರು ಕಂಡಿಲ್ಲ.
ಅಪೊಸ್ತಲರ ಕೃತ್ಯಗ 24 : 13 (OCVKN)
ಈಗ ಅವರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳನ್ನು ನಿಮ್ಮ ಮುಂದೆ ಅವರು ರುಜುಮಾಡಿ ತೋರಿಸಲಾರರು.
ಅಪೊಸ್ತಲರ ಕೃತ್ಯಗ 24 : 14 (OCVKN)
ಆದರೂ ಅವರು ಒಂದು ಪಂಗಡ ಎಂದು ಕರೆಯುವ ಮಾರ್ಗದ ಅನುಯಾಯಿಯಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮೋಶೆಯ ನಿಯಮ ಒಪ್ಪಿಕೊಳ್ಳುವಂಥದೆಲ್ಲವನ್ನೂ ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವುದೆಲ್ಲವನ್ನೂ ನಾನು ನಂಬುತ್ತೇನೆ.
ಅಪೊಸ್ತಲರ ಕೃತ್ಯಗ 24 : 15 (OCVKN)
ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಿದೆಯೆಂದು ಈ ಜನರು ಎದುರುನೋಡುವಂತೆಯೇ ದೇವರಲ್ಲಿ ನನಗೂ ನಿರೀಕ್ಷೆಯಿದೆ.
ಅಪೊಸ್ತಲರ ಕೃತ್ಯಗ 24 : 16 (OCVKN)
ಆದ್ದರಿಂದ ದೇವರ ಮುಂದೆಯೂ ಜನರ ಮುಂದೆಯೂ ನನ್ನ ಮನಸ್ಸಾಕ್ಷಿಯನ್ನು ಯಾವಾಗಲೂ ಶುದ್ಧವಾಗಿಟ್ಟುಕೊಂಡಿರಲು ಪರಿಶ್ರಮಿಸುತ್ತಿದ್ದೇನೆ.
ಅಪೊಸ್ತಲರ ಕೃತ್ಯಗ 24 : 17 (OCVKN)
“ಅನೇಕ ವರ್ಷಗಳ ನಂತರ ದಾನಧರ್ಮಗಳನ್ನೂ ಕಾಣಿಕೆಗಳನ್ನೂ ನನ್ನ ಸ್ವದೇಶದವರಿಗೆ ಕೊಡಲು ಬಂದೆನು.
ಅಪೊಸ್ತಲರ ಕೃತ್ಯಗ 24 : 18 (OCVKN)
ನಾನು ಇದನ್ನು ಮಾಡುತ್ತಾ ದೇವಾಲಯದಲ್ಲಿದ್ದಾಗ ನಾನು ಶುದ್ಧಾಚಾರ ಮಾಡುತ್ತಿರುವುದನ್ನು ಇವರು ಕಂಡರು. ನನ್ನೊಂದಿಗೆ ಜನರ ಗುಂಪು ಇರಲಿಲ್ಲ. ನಾನು ಗೊಂದಲವನ್ನೆಬ್ಬಿಸಲಿಲ್ಲ.
ಅಪೊಸ್ತಲರ ಕೃತ್ಯಗ 24 : 19 (OCVKN)
ಆದರೆ ಏಷ್ಯಾ ಪ್ರಾಂತದ ಕೆಲವು ಜನ ಯೆಹೂದ್ಯರು ಅಲ್ಲಿಗೆ ಬಂದಿದ್ದರು. ಅವರಿಗೆ ನನ್ನ ಮೇಲೆ ಏನಾದರೂ ವಿರೋಧವಿದ್ದರೆ, ಅವರು ನಿಮ್ಮ ಸನ್ನಿಧಿಯಲ್ಲಿ ಈಗ ಬಂದು ನನ್ನ ಮೇಲೆ ಅಪರಾಧ ಹೊರಿಸಲಿ.
ಅಪೊಸ್ತಲರ ಕೃತ್ಯಗ 24 : 20 (OCVKN)
ಇಲ್ಲವೆ ಇಲ್ಲಿಗೆ ಈಗ ಬಂದವರು ನಾನು ನ್ಯಾಯಸಭೆಯ ಮುಂದೆ ನಿಂತಾಗ ನನ್ನಲ್ಲಿ ಯಾವ ಅಪರಾಧವನ್ನು ಕಂಡರು ಎಂಬುದನ್ನು ಹೇಳಲಿ.
ಅಪೊಸ್ತಲರ ಕೃತ್ಯಗ 24 : 21 (OCVKN)
‘ಇಂದು ನಾನು ನಿಮ್ಮ ಮುಂದೆ ನ್ಯಾಯವಿಚಾರಣೆಗೆ ನಿಂತಿರುವುದು ಸತ್ತವರ ಪುನರುತ್ಥಾನಕ್ಕೆ ಸಂಬಂಧಿಸಿದ್ದು,’ ಎಂದು ಅವರ ಮಧ್ಯದಲ್ಲಿ ನಿಂತು ಕೂಗಿದ್ದನ್ನು ಬಿಟ್ಟರೆ ಬೇರೆ ಏನನ್ನೂ ಇವರು ಹೇಳಲಾರರು,” ಎಂದನು.
ಅಪೊಸ್ತಲರ ಕೃತ್ಯಗ 24 : 22 (OCVKN)
ಈ ಮಾರ್ಗದ ವಿಷಯದ ಬಗ್ಗೆ ಬಹು ಸೂಕ್ಷ್ಮವಾಗಿ ತಿಳಿದುಕೊಂಡಿದ್ದ ಫೇಲಿಕ್ಸನು ವಿಚಾರಣೆಯನ್ನು ಮುಂದಕ್ಕೆ ಹಾಕಿದನು. ಅನಂತರ ಅವನು, “ಸಹಸ್ರಾಧಿಪತಿ ಲೂಸ್ಯನು ಬಂದ ಮೇಲೆ ನಿನ್ನ ಈ ವ್ಯಾಜ್ಯ ತೀರ್ಮಾನಿಸುತ್ತೇನೆ,” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 24 : 23 (OCVKN)
ಪೌಲನನ್ನು ಕಾವಲಿನಲ್ಲಿಡಬೇಕೆಂತಲೂ ಅವನ ಸ್ನೇಹಿತರು ಅವನನ್ನು ಸಂದರ್ಶಿಸಲು ಅಡ್ಡಿಮಾಡಬಾರದೆಂತಲೂ ಶತಾಧಿಪತಿಗೆ ಆಜ್ಞೆಕೊಟ್ಟನು.
ಅಪೊಸ್ತಲರ ಕೃತ್ಯಗ 24 : 24 (OCVKN)
ಕೆಲವು ದಿನಗಳಾದ ತರುವಾಯ ಫೇಲಿಕ್ಸನು ಯೆಹೂದ್ಯಳಾದ ತನ್ನ ಪತ್ನಿ ದ್ರೂಸಿಲ್ಲಳೊಂದಿಗೆ ಬಂದನು. ಪೌಲನನ್ನು ಕರೆಕಳುಹಿಸಿ ಅವನು ಕ್ರಿಸ್ತ ಯೇಸುವಿನಲ್ಲಿ ನಂಬುವ ವಿಷಯವಾಗಿ ಮಾತನಾಡುವುದನ್ನು ಕೇಳಿದನು.
ಅಪೊಸ್ತಲರ ಕೃತ್ಯಗ 24 : 25 (OCVKN)
ನೀತಿ, ದಮೆ, ಬರಲಿಕ್ಕಿರುವ ನ್ಯಾಯವಿಚಾರಣೆಯ ಬಗ್ಗೆ ಪೌಲನು ವಿವರಿಸಿದಾಗ, ಫೇಲಿಕ್ಸ್ ಹೆದರಿಕೊಂಡವನಾಗಿ, “ಈಗ ಇಷ್ಟೇ ಸಾಕು! ಸದ್ಯಕ್ಕೆ ನೀನು ಹೋಗಬಹುದು. ಅನಂತರ ನಾನು ಸಮಯ ಸಿಕ್ಕಿದಾಗ ನಿನ್ನನ್ನು ಪುನಃ ಕರೆಯಿಸುತ್ತೇನೆ,” ಎಂದನು.
ಅಪೊಸ್ತಲರ ಕೃತ್ಯಗ 24 : 26 (OCVKN)
ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರು ಹಣ ಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ ಅವನೊಂದಿಗೆ ಮಾತನಾಡುತ್ತಿದ್ದನು.
ಅಪೊಸ್ತಲರ ಕೃತ್ಯಗ 24 : 27 (OCVKN)
ಎರಡು ವರ್ಷಗಳು ಕಳೆದವು. ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ಎಂಬುವನು ರಾಜ್ಯಪಾಲನಾಗಿ ಬಂದನು. ಫೇಲಿಕ್ಸನು ಯೆಹೂದ್ಯರಿಗೆ ಮೆಚ್ಚುಗೆಯನ್ನು ಗಳಿಸಬಯಸಿದವನಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27