ಅಪೊಸ್ತಲರ ಕೃತ್ಯಗ 3 : 1 (OCVKN)
ಪೇತ್ರನು ಹುಟ್ಟುಕುಂಟನನ್ನು ಗುಣಪಡಿಸಿದ್ದು ಒಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಾರ್ಥನೆಯ ಸಮಯದಲ್ಲಿ ಪೇತ್ರ ಹಾಗೂ ಯೋಹಾನನು ದೇವಾಲಯಕ್ಕೆ ಹೋದರು.
ಅಪೊಸ್ತಲರ ಕೃತ್ಯಗ 3 : 2 (OCVKN)
ದೇವಾಲಯದೊಳಗೆ ಹೋಗುವವರಿಂದ ಭಿಕ್ಷೆ ಬೇಡಲು ಪ್ರತಿದಿನ “ಸುಂದರದ್ವಾರ” ಎಂದು ಕರೆಯಲಾಗುತ್ತಿದ್ದ ದೇವಾಲಯದ ದ್ವಾರದ ಬಳಿಯಲ್ಲಿ ಹುಟ್ಟುಕುಂಟನೊಬ್ಬನನ್ನು ಕೆಲವರು ಹೊತ್ತುಕೊಂಡು ಬಂದು ಬಿಡುತ್ತಿದ್ದರು.
ಅಪೊಸ್ತಲರ ಕೃತ್ಯಗ 3 : 3 (OCVKN)
ಅವನು ಪೇತ್ರ, ಯೋಹಾನರು ದೇವಾಲಯದೊಳಗೆ ಪ್ರವೇಶಿಸುತ್ತಿರುವುದನ್ನು ಕಂಡು, ಭಿಕ್ಷೆ ಬೇಡಿದನು.
ಅಪೊಸ್ತಲರ ಕೃತ್ಯಗ 3 : 4 (OCVKN)
ಪೇತ್ರ ಯೋಹಾನರಿಬ್ಬರೂ ಭಿಕ್ಷುಕನನ್ನು ನೇರವಾಗಿ ದೃಷ್ಟಿಸಿ ನೋಡಿದರು. ಪೇತ್ರನು ಭಿಕ್ಷುಕನಿಗೆ, “ನಮ್ಮನ್ನು ನೋಡು!” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 3 : 5 (OCVKN)
ಅವರಿಂದ ಏನಾದರೂ ದೊರೆಯುವುದೆಂದು ನಿರೀಕ್ಷಿಸಿ ಅವನು ಅವರ ಕಡೆಗೆ ಲಕ್ಷ್ಯವಿಟ್ಟು ನೋಡಿದನು.
ಅಪೊಸ್ತಲರ ಕೃತ್ಯಗ 3 : 6 (OCVKN)
ಆಗ ಪೇತ್ರನು, “ಬೆಳ್ಳಿಬಂಗಾರ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ. ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಲ್ಲಿ, ಎದ್ದು ನಡೆ,” ಎಂದು ಹೇಳಿ,
ಅಪೊಸ್ತಲರ ಕೃತ್ಯಗ 3 : 7 (OCVKN)
ಬಲಗೈ ಹಿಡಿದೆಬ್ಬಿಸಿದಾಗ ಕೂಡಲೇ ಆ ಮನುಷ್ಯನ ಪಾದ ಮತ್ತು ಹರಡುಗಳು ಬಲಗೊಂಡವು.
ಅಪೊಸ್ತಲರ ಕೃತ್ಯಗ 3 : 8 (OCVKN)
ಅವನು ಜಿಗಿದು ನಿಂತು ನಡೆದಾಡಲು ಪ್ರಾರಂಭಿಸಿದನು. ಆಮೇಲೆ ನಡೆಯುತ್ತಾ, ಕುಣಿಯುತ್ತಾ, ದೇವರ ಸ್ತೋತ್ರ ಮಾಡುತ್ತಾ, ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.
ಅಪೊಸ್ತಲರ ಕೃತ್ಯಗ 3 : 9 (OCVKN)
ಅವನು ನಡೆಯುವುದನ್ನೂ ದೇವರ ಸ್ತೋತ್ರ ಮಾಡುತ್ತಿರುವುದನ್ನೂ ಜನರೆಲ್ಲರೂ ಕಂಡರು.
ಅಪೊಸ್ತಲರ ಕೃತ್ಯಗ 3 : 10 (OCVKN)
ಅವನು ದೇವಾಲಯದ “ಸುಂದರದ್ವಾರದ” ಬಳಿಯಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದ ಮನುಷ್ಯನೇ ಎಂದು ಗುರುತಿಸಿದರು. ಅವನಿಗೆ ಸಂಭವಿಸಿದ್ದರ ಬಗ್ಗೆ ಅವರು ವಿಸ್ಮಯಗೊಂಡು ಬೆರಗಾದರು.
ಅಪೊಸ್ತಲರ ಕೃತ್ಯಗ 3 : 11 (OCVKN)
ನೋಡುತ್ತಿದ್ದ ಜನರೊಂದಿಗೆ ಪೇತ್ರನು ಮಾತನಾಡಿದ್ದು ಭಿಕ್ಷುಕನು ಇನ್ನೂ ಪೇತ್ರ ಯೋಹಾನರೊಂದಿಗೆ ಇದ್ದಾಗ, ಆಶ್ಚರ್ಯಚಕಿತರಾದ ಜನರೆಲ್ಲರು ಅವರಿದ್ದ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಓಡಿ ಬಂದರು.
ಅಪೊಸ್ತಲರ ಕೃತ್ಯಗ 3 : 12 (OCVKN)
ಜನರನ್ನು ಕಂಡು ಪೇತ್ರನು ಅವರಿಗೆ ಹೇಳಿದ ಮಾತುಗಳಿವು: “ಇಸ್ರಾಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮ ಸ್ವಂತ ಬಲದಿಂದಾಗಲಿ, ಭಕ್ತಿಯಿಂದಾಗಲಿ ಈ ಮನುಷ್ಯನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಿ ನಮ್ಮ ಕಡೆಗೆ ಏಕೆ ನೋಡುತ್ತಿರುವಿರಿ?
ಅಪೊಸ್ತಲರ ಕೃತ್ಯಗ 3 : 13 (OCVKN)
ಅಬ್ರಹಾಮನ, ಇಸಾಕನ, ಯಾಕೋಬನ ದೇವರು, ನಮ್ಮ ಪಿತೃಗಳ ದೇವರು, ತಮ್ಮ ಸೇವಕರಾದ ಯೇಸುವನ್ನು ಮಹಿಮೆಪಡಿಸಿದ್ದಾರೆ. ಅವರನ್ನು ಬಿಡಿಸಬೇಕೆಂದು ಪಿಲಾತನು ನಿರ್ಣಯಿಸಿಕೊಂಡಿದ್ದರೂ ನೀವು ಯೇಸುವನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಟ್ಟು ಪಿಲಾತನ ಮುಂದೆ ಅವರನ್ನು ನಿರಾಕರಿಸಿದಿರಿ.
ಅಪೊಸ್ತಲರ ಕೃತ್ಯಗ 3 : 14 (OCVKN)
ಆದರೆ ನೀವು ಪವಿತ್ರರೂ ನೀತಿವಂತರೂ ಆಗಿರುವ ಯೇಸುವನ್ನು ನಿರಾಕರಿಸಿ ಆ ಕೊಲೆಗಾರನನ್ನು ನಿಮಗೆ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿಕೊಂಡಿರಿ.
ಅಪೊಸ್ತಲರ ಕೃತ್ಯಗ 3 : 15 (OCVKN)
ಜೀವದ ಒಡೆಯನನ್ನು ನೀವು ಕೊಂದಿರಿ. ದೇವರಾದರೋ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.
ಅಪೊಸ್ತಲರ ಕೃತ್ಯಗ 3 : 16 (OCVKN)
ಯೇಸುವಿನ ನಾಮದಲ್ಲಿಟ್ಟ ವಿಶ್ವಾಸದಿಂದಲೇ ನೀವು ಕಂಡು ತಿಳಿದಿರುವ ಈ ಮನುಷ್ಯನು ಬಲಹೊಂದಿದ್ದಾನೆ. ಯೇಸುವಿನ ನಾಮವೂ ಅವರ ಮೂಲಕವಾಗಿ ಬರುವ ನಂಬಿಕೆಯೂ ಇವನಿಗೆ ಸಂಪೂರ್ಣ ಸ್ವಸ್ಥತೆಯನ್ನು ತಂದುಕೊಟ್ಟಿದೆ. ನೀವೆಲ್ಲರೂ ಇದನ್ನು ನೋಡಿದ್ದೀರಿ.
ಅಪೊಸ್ತಲರ ಕೃತ್ಯಗ 3 : 17 (OCVKN)
“ಈಗ, ಪ್ರಿಯರೇ, ನೀವು ಅಜ್ಞಾನದಿಂದ ಹಾಗೆ ವರ್ತಿಸಿದಿರೆಂದು ನನಗೆ ಗೊತ್ತು. ಹಾಗೆಯೇ ನಿಮ್ಮ ನಾಯಕರೂ ಮಾಡಿದರು.
ಅಪೊಸ್ತಲರ ಕೃತ್ಯಗ 3 : 18 (OCVKN)
ಆದರೆ ತಮ್ಮ ಕ್ರಿಸ್ತ ಯೇಸು ಹಿಂಸೆಗೊಳಗಾಗಬೇಕೆಂದು, ಎಲ್ಲಾ ಪ್ರವಾದಿಗಳ ಬಾಯಿಯ ಮುಖಾಂತರ ದೇವರು ಮುಂತಿಳಿಸಿದ್ದನ್ನು ಈ ರೀತಿ ನೆರವೇರಿಸಿದರು.
ಅಪೊಸ್ತಲರ ಕೃತ್ಯಗ 3 : 19 (OCVKN)
ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.
ಅಪೊಸ್ತಲರ ಕೃತ್ಯಗ 3 : 20 (OCVKN)
ದೇವರು ನಿಮಗೋಸ್ಕರ ನೇಮಕವಾಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿಕೊಡುವರು.
ಅಪೊಸ್ತಲರ ಕೃತ್ಯಗ 3 : 21 (OCVKN)
ದೇವರು ತಮ್ಮ ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲದ ಹಿಂದೆಯೇ ವಾಗ್ದಾನಮಾಡಿದ ಪ್ರಕಾರ, ಅವರು ಸಮಸ್ತವನ್ನು ಪುನಃಸ್ಥಾಪಿಸಿದರು. ಆ ಕಾಲ ಬರುವವರೆಗೆ ಕ್ರಿಸ್ತ ಯೇಸು ಪರಲೋಕದಲ್ಲಿಯೇ ಇರುವರು.
ಅಪೊಸ್ತಲರ ಕೃತ್ಯಗ 3 : 22 (OCVKN)
ಮೋಶೆಯು ಹೇಳಿದ್ದೇನೆಂದರೆ: ‘ನಿಮ್ಮ ಕರ್ತದೇವರು ನಿಮ್ಮ ಸ್ವಂತ ಸಹೋದರರೊಳಗಿಂದ ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗಾಗಿ ಎಬ್ಬಿಸುವರು. ಅವರು ನಿಮಗೆ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗಿರಬೇಕು.
ಅಪೊಸ್ತಲರ ಕೃತ್ಯಗ 3 : 23 (OCVKN)
ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ತನ್ನ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.’* ಧರ್ಮೋ 18:15,18,19
ಅಪೊಸ್ತಲರ ಕೃತ್ಯಗ 3 : 24 (OCVKN)
“ಸಮುಯೇಲನು ಮೊದಲುಗೊಂಡು, ಮಾತನಾಡಿದ ಎಲ್ಲಾ ಪ್ರವಾದಿಗಳು ಕ್ರಮವಾಗಿ ಈ ದಿನಗಳನ್ನು ಕುರಿತು ಮುಂತಿಳಿಸಿದ್ದಾರೆ.
ಅಪೊಸ್ತಲರ ಕೃತ್ಯಗ 3 : 25 (OCVKN)
ನೀವು ಪ್ರವಾದಿಗಳ ಮತ್ತು ನಿಮ್ಮ ಪಿತೃಗಳೊಂದಿಗೆ ದೇವರು ಮಾಡಿಕೊಂಡ ಒಡಂಬಡಿಕೆಯ ಮಕ್ಕಳಾಗಿದ್ದೀರಿ. ಏಕೆಂದರೆ ದೇವರು, ‘ನಿನ್ನ ಸಂತತಿಯ ಮುಖಾಂತರವಾಗಿ ಭೂಲೋಕದ ಎಲ್ಲಾ ಕುಟುಂಬಗಳಿಗೆ ಆಶೀರ್ವಾದವುಂಟಾಗುವುದು,’† ಆದಿ 22:18; 26:4 ಎಂದು ಅಬ್ರಹಾಮನಿಗೆ ಹೇಳಿದರು.
ಅಪೊಸ್ತಲರ ಕೃತ್ಯಗ 3 : 26 (OCVKN)
ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.”
❮
❯