ಅಪೊಸ್ತಲರ ಕೃತ್ಯಗ 6 : 1 (OCVKN)
ಏಳು ಜನರ ಆಯ್ಕೆ ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು.
ಅಪೊಸ್ತಲರ ಕೃತ್ಯಗ 6 : 2 (OCVKN)
ಆದ್ದರಿಂದ ಆ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಸೇರಿಸಿ, “ನಾವು ದೇವರ ವಾಕ್ಯ ಬೋಧಿಸುವ ಸೇವೆಯನ್ನು ಕಡೆಗಣಿಸಿ, ಆಹಾರ ವಿತರಣೆಗಾಗಿ ಸಮಯ ಕಳೆಯುತ್ತಿರುವುದು ಸರಿಯಲ್ಲ.
ಅಪೊಸ್ತಲರ ಕೃತ್ಯಗ 6 : 3 (OCVKN)
ಸಹೋದರರೇ, ನಿಮ್ಮಲ್ಲಿ ಪವಿತ್ರಾತ್ಮಭರಿತರೂ ಜ್ಞಾನವಂತರೂ ಎಂದು ಸಾಕ್ಷಿ ಹೊಂದಿರುವ ಏಳು ಜನರನ್ನು ಆಯ್ಕೆ ಮಾಡಿರಿ. ನಾವು ಅವರನ್ನು ಈ ಕಾರ್ಯಕ್ಕಾಗಿ ನೇಮಿಸುವೆವು.
ಅಪೊಸ್ತಲರ ಕೃತ್ಯಗ 6 : 4 (OCVKN)
ನಾವಾದರೋ ಪ್ರಾರ್ಥನೆ ಮಾಡುವುದರಲ್ಲಿಯೂ ದೇವರ ವಾಕ್ಯ ಬೋಧಿಸುವುದರಲ್ಲಿಯೂ ನಿರತರಾಗಿರುವೆವು,” ಎಂದು ಹೇಳಿದರು.
ಅಪೊಸ್ತಲರ ಕೃತ್ಯಗ 6 : 5 (OCVKN)
ಈ ಮಾತು ಇಡೀ ಸಮೂಹಕ್ಕೆ ಮೆಚ್ಚುಗೆಯಾಯಿತು. ಅವರು ಪೂರ್ಣನಂಬಿಕೆಯುಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೆಫನನ್ನು ಆರಿಸಿಕೊಂಡರು; ಅಲ್ಲದೆ ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮಾರ್ಗ ಅನುಸರಿಸುತ್ತಿದ್ದ ಅಂತಿಯೋಕ್ಯದ ನಿಕೊಲಾಯನನ್ನು ಆಯ್ಕೆಮಾಡಿದರು.
ಅಪೊಸ್ತಲರ ಕೃತ್ಯಗ 6 : 6 (OCVKN)
ಇವರನ್ನು ಅಪೊಸ್ತಲರ ಮುಂದೆ ತಂದು ನಿಲ್ಲಿಸಿದರು. ಅವರು ಪ್ರಾರ್ಥನೆಮಾಡಿ ಅವರ ಮೇಲೆ ತಮ್ಮ ಹಸ್ತಗಳನ್ನಿಟ್ಟು ನೇಮಿಸಿದರು.
ಅಪೊಸ್ತಲರ ಕೃತ್ಯಗ 6 : 7 (OCVKN)
ಅಪೊಸ್ತಲರ ಕೃತ್ಯಗ 6 : 8 (OCVKN)
ದೇವರ ವಾಕ್ಯವು ಅಭಿವೃದ್ಧಿಯಾಗುತ್ತಾ ಬಂತು. ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು. ಯಾಜಕರಲ್ಲಿಯೂ ಅನೇಕ ಜನರು ನಂಬಿಕೆಗೆ ವಿಧೇಯರಾದರು. ಸ್ತೆಫನನ ಬಂಧನ ದೇವರ ಕೃಪೆಯಿಂದಲೂ ಶಕ್ತಿಯಿಂದಲೂ ತುಂಬಿದ್ದ ಸ್ತೆಫನನಿಂದ ಜನರಲ್ಲಿ ಮಹಾ ಅದ್ಭುತಗಳೂ ಸೂಚಕಕಾರ್ಯಗಳೂ ನಡೆದವು.
ಅಪೊಸ್ತಲರ ಕೃತ್ಯಗ 6 : 9 (OCVKN)
ಆದರೆ, “ಬಿಡುಗಡೆ ಹೊಂದಿದವರು” ಎಂಬ ಯೆಹೂದ್ಯ ಸಭಾಮಂದಿರಕ್ಕೆ ಸೇರಿದವರಿಂದ ವಿರೋಧ ಉಂಟಾಯಿತು. ಅವರು ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಮತ್ತು ಏಷ್ಯಾ ಪ್ರಾಂತಗಳಿಂದ ಬಂದ ಯೆಹೂದ್ಯರಾಗಿದ್ದರು. ಅವರು ಸ್ತೆಫನನೊಂದಿಗೆ ತರ್ಕಿಸುವುದಕ್ಕೆ ಪ್ರಾರಂಭಿಸಿದರು.
ಅಪೊಸ್ತಲರ ಕೃತ್ಯಗ 6 : 10 (OCVKN)
ಆದರೆ ಅವನು ಜ್ಞಾನದಿಂದಲೂ ಪವಿತ್ರಾತ್ಮ ದೇವರಿಂದಲೂ ಮಾತನಾಡಿದ್ದರಿಂದ ಅವರಿಗೆ ಅವನನ್ನು ಎದುರಿಸಲು ಸಾಧ್ಯವಾಗಲಿಲ್ಲ.
ಅಪೊಸ್ತಲರ ಕೃತ್ಯಗ 6 : 11 (OCVKN)
ಅಪೊಸ್ತಲರ ಕೃತ್ಯಗ 6 : 12 (OCVKN)
ಆಗ ಅವರು, “ಇವನು ಮೋಶೆಗೂ ದೇವರಿಗೂ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುವುದನ್ನು ನಾವು ಕೇಳಿದ್ದೇವೆ,” ಎಂದು ಕೆಲವರಿಗೆ ಲಂಚಕೊಟ್ಟು ಹೇಳುವಂತೆ ರಹಸ್ಯವಾಗಿ ಮನವೊಲಿಸಿದರು. ಹೀಗೆ ಅವರು ಜನರನ್ನೂ ಹಿರಿಯರನ್ನೂ ನಿಯಮ ಬೋಧಕರನ್ನೂ ಪ್ರಚೋದಿಸಿ ಸ್ತೆಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ತಂದು ನಿಲ್ಲಿಸಿದರು.
ಅಪೊಸ್ತಲರ ಕೃತ್ಯಗ 6 : 13 (OCVKN)
ಸುಳ್ಳುಸಾಕ್ಷಿಗಳನ್ನು ಹಾಜರುಪಡಿಸಿ, “ಈ ಮನುಷ್ಯನು ಈ ಪವಿತ್ರಸ್ಥಳಕ್ಕೂ ಮೋಶೆಯ ನಿಯಮಕ್ಕೂ ವಿರೋಧವಾಗಿ ಮಾತನಾಡುತ್ತಲೇ ಇದ್ದಾನೆ.
ಅಪೊಸ್ತಲರ ಕೃತ್ಯಗ 6 : 14 (OCVKN)
ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿಬಿಡುತ್ತಾರೆಂದೂ ನಮಗೆ ಒಪ್ಪಿಸಿದ ಮೋಶೆಯ ಪದ್ಧತಿಗಳನ್ನು ಬದಲಾಯಿಸುತ್ತಾರೆಂದೂ ಇವನು ಹೇಳುವುದನ್ನು ನಾವು ಕೇಳಿದ್ದೇವೆ,” ಎಂದು ಅವನ ವಿರುದ್ಧ ಸಾಕ್ಷಿ ಹೇಳಿಸಿದರು.
ಅಪೊಸ್ತಲರ ಕೃತ್ಯಗ 6 : 15 (OCVKN)
ನ್ಯಾಯಸಭೆಯಲ್ಲಿ ಕುಳಿತುಕೊಂಡಿದ್ದವರೆಲ್ಲರೂ ಸ್ತೆಫನನ ಮುಖವನ್ನೇ ದಿಟ್ಟಿಸಿ ನೋಡುತ್ತಿದ್ದರು. ಅವನ ಮುಖವು ದೇವದೂತನ ಮುಖದಂತೆ ಕಾಣಿಸುತ್ತಿತ್ತು.

1 2 3 4 5 6 7 8 9 10 11 12 13 14 15