ಆಮೋಸ 3 : 1 (OCVKN)
ಇಸ್ರಾಯೇಲಿಗೆ ವಿರುದ್ಧ ಸಾಕ್ಷಿಗಳನ್ನು ಕರೆಯಲಾದದ್ದು
ಆಮೋಸ 3 : 2 (OCVKN)
ಇಸ್ರಾಯೇಲರೇ, ಯೆಹೋವ ದೇವರು ನಿಮಗೆ ವಿರೋಧವಾಗಿ ಹೇಳುವ ವಾಕ್ಯವನ್ನು ಕೇಳಿರಿ. ನಾನು ಈಜಿಪ್ಟ್ ದೇಶದೊಳಗಿಂದ ಕರೆದುತಂದ ಸಮಸ್ತ ಕುಟುಂಬಕ್ಕೆ ಹೇಳುವುದೇನೆಂದರೆ: “ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ಆರಿಸಿಕೊಂಡಿದ್ದೇನೆ. ಆದ್ದರಿಂದ ನಾನು ನಿಮ್ಮ ಎಲ್ಲಾ ಪಾಪಗಳಿಗಾಗಿ ಶಿಕ್ಷಿಸುತ್ತೇನೆ.”
ಆಮೋಸ 3 : 3 (OCVKN)
ಒಪ್ಪಂದ ಮಾಡಿಕೊಳ್ಳದ ಹೊರತು, ಇಬ್ಬರು ಜೊತೆಯಾಗಿ ನಡೆಯಲು ಸಾಧ್ಯವೋ?
ಆಮೋಸ 3 : 4 (OCVKN)
ಬೇಟೆ ಇಲ್ಲದಿದ್ದರೆ, ಅಡವಿಯಲ್ಲಿ ಸಿಂಹವು ಗರ್ಜಿಸುವುದೋ? ಏನಾದರೂ ಹಿಡಿಯದಿದ್ದರೆ, ಗುಹೆಯಲ್ಲಿರುವ ಎಳೆಯ ಸಿಂಹವು ಅರಚುವುದೋ?
ಆಮೋಸ 3 : 5 (OCVKN)
ಬೋನು ಇಲ್ಲದಿದ್ದರೆ ಪಕ್ಷಿಯು ಭೂಮಿಯ ಮೇಲೆ ಉರುಲಿನಲ್ಲಿ ಬೀಳುವುದೇ? ಏನೂ ಸಿಕ್ಕಿಕೊಳ್ಳದಿದ್ದರೆ, ಅದನ್ನು ಭೂಮಿಯಿಂದ ಯಾರಾದರೂ ತೆಗೆಯುವರೇ?
ಆಮೋಸ 3 : 6 (OCVKN)
ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?
ಆಮೋಸ 3 : 7 (OCVKN)
ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.
ಆಮೋಸ 3 : 8 (OCVKN)
ಸಿಂಹವು ಗರ್ಜಿಸಿದರೆ ಭಯಪಡದೆ ಇರುವವರು ಯಾರು? ಸಾರ್ವಭೌಮ ಯೆಹೋವ ದೇವರು ನುಡಿದಿದ್ದಾರೆ, ಅವರ ನುಡಿಯನ್ನು ಪ್ರವಾದಿಸದವರು ಯಾರು?
ಆಮೋಸ 3 : 9 (OCVKN)
ಅಷ್ಡೋದಿನ ಕೋಟೆಗಳಲ್ಲಿ ಮತ್ತು ಈಜಿಪ್ಟ್ ದೇಶದ ಕೋಟೆಗಳಲ್ಲಿ ಹೀಗೆ ಸಾರಿ ಹೇಳಿರಿ: “ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು, ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರೊಳಗಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.”
ಆಮೋಸ 3 : 10 (OCVKN)
“ತಮ್ಮ ಕೋಟೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರಿಗೆ, ನ್ಯಾಯ ನೀತಿಯನ್ನು ಮಾಡುವುದಕ್ಕೆ ತಿಳಿಯುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
ಆಮೋಸ 3 : 11 (OCVKN)
ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ವಿರೋಧಿಯು ದೇಶದ ಸುತ್ತಲೂ ಇರುವನು. ನಿನ್ನ ಬಲವನ್ನು ತಗ್ಗಿಸುವನು. ನಿನ್ನ ಅರಮನೆಗಳು ಸೂರೆಯಾಗುವುವು.”
ಆಮೋಸ 3 : 12 (OCVKN)
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಹೇಗೆ ಕುರುಬನು ಸಿಂಹದ ಬಾಯಿಯಿಂದ ಎರಡು ಕಾಲಿನ ಎಲಬುಗಳನ್ನು ಅಥವಾ ಕಿವಿಯ ಒಂದು ತುಂಡನ್ನು ರಕ್ಷಿಸಲು ಪ್ರಯತ್ನಿಸುತ್ತಾನೋ ಹಾಗೆಯೇ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲರು ಹಾಸಿಗೆಯ ತಲೆ ಮತ್ತು ಮಂಚದ ಬಟ್ಟೆಯ ತುಂಡುಗಳೊಂದಿಗೆ ಸಂರಕ್ಷಣೆ ಹೊಂದುತ್ತಾರೆ.”
ಆಮೋಸ 3 : 14 (OCVKN)
ಸರ್ವಶಕ್ತ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: “ನೀವು ಕೇಳಿ, ಯಾಕೋಬಿನ ಮನೆತನದವರಿಗೆ ವಿರುದ್ಧವಾಗಿ ಸಾಕ್ಷಿ ಕೊಡಿರಿ.” “ನಾನು ಇಸ್ರಾಯೇಲಿನ ಪಾಪಗಳನ್ನು ವಿಚಾರಿಸುವ ದಿವಸದಲ್ಲಿ, ಬೇತೇಲಿನ ಬಲಿಪೀಠಗಳನ್ನು ನಾಶಮಾಡುವೆನು. ಬಲಿಪೀಠದ ಕೊಂಬುಗಳು ಕಡಿಯಲಾಗಿ, ನೆಲಕ್ಕೆ ಉರುಳುವುವು.
ಆಮೋಸ 3 : 15 (OCVKN)
ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತ ಮಂದಿರಗಳು ನಾಶವಾಗುವುವು. ದೊಡ್ಡ ಮನೆಗಳು ಕೊನೆಗಾಣುವುವು,” ಎಂದು ಯೆಹೋವ ದೇವರು ಹೇಳುತ್ತಾರೆ.
❮
❯
1
2
3
4
5
6
7
8
9
10
11
12
13
14
15