ಆಮೋಸ 5 : 1 (OCVKN)
ಒಂದು ಪ್ರಲಾಪ ಮತ್ತು ಪಶ್ಚಾತ್ತಾಪಕ್ಕೆ ಕರೆ
ಆಮೋಸ 5 : 2 (OCVKN)
ಇಸ್ರಾಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯ ವಾಕ್ಯವನ್ನು ಕೇಳಿರಿ: “ಇಸ್ರಾಯೇಲ್ ಎಂಬ ಕನ್ಯೆಯು ಬಿದ್ದಿದ್ದಾಳೆ. ಇನ್ನು ಮೇಲೆ ಎದ್ದೇಳುವುದೇ ಇಲ್ಲ. ಅವಳು ದಿಕ್ಕಿಲ್ಲದೆ ತನ್ನ ಭೂಮಿಯ ಮೇಲೆ ಒರಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.”
ಆಮೋಸ 5 : 3 (OCVKN)
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ, ಪಟ್ಟಣಕ್ಕೆ ಮರಳಿದವರು ನೂರೇ ಮಂದಿ. ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ, ಇಸ್ರಾಯೇಲಿಗೆ ಮರಳಿದವರು ಹತ್ತೇ ಮಂದಿ.”
ಆಮೋಸ 5 : 4 (OCVKN)
ಯೆಹೋವ ದೇವರು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾರೆ: “ನೀವು ನನ್ನನ್ನು ಹುಡುಕಿರಿ ಮತ್ತು ಬದುಕಿಕೊಳ್ಳಿರಿ.
ಆಮೋಸ 5 : 5 (OCVKN)
ಆದರೆ ಬೇತೇಲನ್ನು ಹುಡುಕಬೇಡಿರಿ. ಗಿಲ್ಗಾಲಿಗೆ ಹೋಗಬೇಡಿರಿ. ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಏಕೆಂದರೆ ಗಿಲ್ಗಾಲು ಸೆರೆಗೆ ನಿಶ್ವಯವಾಗಿ ಹೋಗುವುದು, ಬೇತೇಲಿನ ಬಾಧೆಗಳು ಕೊನೆಗೊಳ್ಳುವುದಿಲ್ಲ* ಕೊನೆಗೊಳ್ಳುವುದಿಲ್ಲ ಹೋಶೇ 4:15 ನೋಡಿರಿ .”
ಆಮೋಸ 5 : 6 (OCVKN)
ನೀವು ಯೆಹೋವ ದೇವರನ್ನು ಹುಡುಕಿರಿ ಮತ್ತು ಬದುಕಿರಿ. ಇಲ್ಲದಿದ್ದರೆ, ಆತನು ಬೆಂಕಿಯಂತೆ ಯೋಸೇಫನ ಗೋತ್ರಗಳಲ್ಲಿ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವುದಿಲ್ಲ.
ಆಮೋಸ 5 : 7 (OCVKN)
ನ್ಯಾಯವನ್ನು ಕಹಿಯಾಗಿ ತಿರುಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ.
ಆಮೋಸ 5 : 8 (OCVKN)
ವೃಷಭ ರಾಶಿಯನ್ನೂ, ಮೃಗಶಿರವನ್ನೂ ಉಂಟು ಮಾಡಿದವನನ್ನೂ ಕಾರ್ಗತ್ತಲನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲೆ ಮಾಡಿ, ಸಮುದ್ರದ ನೀರನ್ನು ಬರಮಾಡಿ, ಅವುಗಳನ್ನು ಭೂಮಿಯ ಮೇಲೆ ಸುರಿಸುವ ಯೆಹೋವ ದೇವರು ಎಂಬ ಹೆಸರುಳ್ಳವರನ್ನೇ ಹುಡುಕಿರಿ.
ಆಮೋಸ 5 : 9 (OCVKN)
ಕಣ್ಣು ಮಿಟುಕಿಸುವುದರಲ್ಲಿ ಅವರು ಕೋಟೆಯನ್ನು ನಾಶಪಡಿಸುತ್ತಾರೆ ಮತ್ತು ಕೋಟೆಯ ನಗರವನ್ನು ವಿನಾಶಪಡಿಸುತ್ತಾರೆ.
ಆಮೋಸ 5 : 10 (OCVKN)
ಸಭೆಯಲ್ಲಿ ದೋಷವನ್ನು ಎತ್ತಿ ತೋರಿಸುವವನನ್ನು ನೀವು ದ್ವೇಷಿಸುತ್ತೀರಿ. ನಿಮ್ಮ ವಿಷಯವಾಗಿ ಸತ್ಯವನ್ನು ಹೇಳುವವನನ್ನೇ ಹೀನೈಸುತ್ತೀರಿ.
ಆಮೋಸ 5 : 11 (OCVKN)
ಆದಕಾರಣ ನೀವು ಬಡವನನ್ನು ತುಳಿದು ಅವರ ಧಾನ್ಯಕ್ಕೆ ತೆರಿಗೆ ವಿಧಿಸುತ್ತೀರಿ. ಆದ್ದರಿಂದ ನೀವು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಿ. ಆದರೆ ನೀವು ಅವುಗಳಲ್ಲಿ ವಾಸ ಮಾಡದೇ ಇರುವಿರಿ. ರಮ್ಯವಾದ ದ್ರಾಕ್ಷಿತೋಟಗಳನ್ನು ನೆಟ್ಟಿರಲ್ಲಾ, ಆದರೆ ಅವುಗಳ ದ್ರಾಕ್ಷಾರಸವನ್ನು ಕುಡಿಯಲಾರಿರಿ.
ಆಮೋಸ 5 : 12 (OCVKN)
ಏಕೆಂದರೆ ನಿಮ್ಮ ಅನೇಕ ಅಪರಾಧಗಳನ್ನೂ, ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು. ಅವರು ನಿರಪರಾಧಿಯನ್ನು ಬಾಧೆಪಡಿಸಿ, ಲಂಚವನ್ನು ತೆಗೆದುಕೊಂಡರು ಮತ್ತು ಬಾಗಿಲ ಬಳಿಯಲ್ಲಿರುವ ಬಡವರ ನ್ಯಾಯವನ್ನು ತೀರಿಸದೇ ಕಳುಹಿಸಿಬಿಟ್ಟಿರಿ.
ಆಮೋಸ 5 : 13 (OCVKN)
ಆದ್ದರಿಂದ ಆ ಕಾಲದಲ್ಲಿ ಬುದ್ಧಿವಂತನು ಮೌನವಾಗಿರುವನು, ಏಕೆಂದರೆ ಅದು ಕೆಟ್ಟ ಕಾಲವಾಗಿದೆ.
ಆಮೋಸ 5 : 14 (OCVKN)
ನೀವು ಬದುಕುವ ಹಾಗೆ ಒಳ್ಳೆಯದನ್ನು ಹುಡುಕಿ, ಕೆಟ್ಟದ್ದನ್ನಲ್ಲ. ಆಗ ನೀವು ಹೇಳಿಕೊಳ್ಳುವಂತೆ ಸರ್ವಶಕ್ತರಾದ ಯೆಹೋವ ದೇವರು ನಿಮ್ಮ ಸಂಗಡ ಇರುವರು.
ಆಮೋಸ 5 : 15 (OCVKN)
ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.
ಆಮೋಸ 5 : 16 (OCVKN)
ಆದ್ದರಿಂದ ಸರ್ವಶಕ್ತ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎಲ್ಲಾ ಬೀದಿಗಳಲ್ಲೂ ವಿಲಾಪಗಳು, ಎಲ್ಲಾ ಸಾರ್ವಜನಿಕ ಚೌಕದಲ್ಲಿ ದುಃಖದ ಗೋಳಾಟಗಳು ಎನ್ನುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು, ಗೋಳಾಡುವುದಕ್ಕೂ ಕರೆಯಲಾಗುವುದು.
ಆಮೋಸ 5 : 17 (OCVKN)
ಎಲ್ಲಾ ದ್ರಾಕ್ಷಿ ತೋಟಗಳಲ್ಲೂ ಗೋಳಾಟವು ಇರುವುದು. ಏಕೆಂದರೆ ನಾನು ನಿನ್ನ ಮಧ್ಯೆ ಹಾದು ಹೋಗುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
ಆಮೋಸ 5 : 18 (OCVKN)
ಯೆಹೋವ ದೇವರ ದಿನ ಯೆಹೋವ ದೇವರ ದಿನವನ್ನು ಅಪೇಕ್ಷಿಸುವವರೇ, ಅಯ್ಯೋ ನಿಮಗೆ ಕಷ್ಟ! ಆ ದಿನವನ್ನು ನೀವು ಅಪೇಕ್ಷಿಸುವುದೇಕೆ? ಯೆಹೋವ ದೇವರ ದಿವಸವು ನಿಮಗೆ ಬೆಳಕಲ್ಲ, ಕತ್ತಲೆಯೇ.
ಆಮೋಸ 5 : 19 (OCVKN)
ಇದು ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ, ಕರಡಿಯನ್ನು ಎದುರುಗೊಂಡ ಹಾಗೆಯೂ, ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈಯನ್ನು ಒರಗಿಸಿದಾಗ, ಸರ್ಪವು ಕಚ್ಚಿದ ಹಾಗೆಯೂ ಇರುವುದು.
ಆಮೋಸ 5 : 20 (OCVKN)
ಹೀಗೆ ಯೆಹೋವ ದೇವರ ದಿವಸವು ಬೆಳಕಲ್ಲ, ಕತ್ತಲೆಯೇ. ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲೆಯೇ.
ಆಮೋಸ 5 : 21 (OCVKN)
ನಿಮ್ಮ ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ. ನಿಮ್ಮ ಸಭೆಗಳು ನನಗೆ ದುರ್ವಾಸನೆ ಇದ್ದಂತೆ.
ಆಮೋಸ 5 : 22 (OCVKN)
ನೀವು ನನಗೆ ದಹನಬಲಿಗಳನ್ನೂ ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ, ನಾನು ಅವುಗಳನ್ನು ಅಂಗೀಕರಿಸುವುದಿಲ್ಲ. ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನೂ ನಾನು ಲಕ್ಷಿಸುವುದಿಲ್ಲ.
ಆಮೋಸ 5 : 23 (OCVKN)
ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ. ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವುದಿಲ್ಲ.
ಆಮೋಸ 5 : 24 (OCVKN)
ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.
ಆಮೋಸ 5 : 25 (OCVKN)
ಇಸ್ರಾಯೇಲಿನ ಮನೆತನದವರೇ, ನೀವು ನನಗೆ ನಲವತ್ತು ವರ್ಷ ಮರುಭೂಮಿಯಲ್ಲಿ ಬಲಿಗಳನ್ನು, ಕಾಣಿಕೆಗಳನ್ನು ಅರ್ಪಿಸಿದಿರೋ?
ಆಮೋಸ 5 : 26 (OCVKN)
ಆದರೆ ನೀವು ನಿಮಗೋಸ್ಕರ ಮಾಡಿಕೊಂಡ ಮೂರ್ತಿಗಳಾದ ಸಿಕ್ಕೊತ್ ಎಂಬ ನಿಮ್ಮ ರಾಜನನ್ನೂ ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನೂ ನೀವೇ ಹೊತ್ತುಕೊಂಡು ಹೋಗಬೇಕಾಗುವುದು.
ಆಮೋಸ 5 : 27 (OCVKN)
ಆದ್ದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ, ಎಂದು ಸರ್ವಶಕ್ತರಾದ ದೇವರೆಂದು ಹೆಸರುಗೊಂಡ ಯೆಹೋವ ದೇವರು ಹೇಳುತ್ತಾರೆ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27