ಆಮೋಸ 8 : 1 (OCVKN)
ಮಾಗಿದ ಹಣ್ಣುಗಳುಳ್ಳ ಪುಟ್ಟಿ ಸಾರ್ವಭೌಮ ಯೆಹೋವ ದೇವರು ನನಗೆ ಮಾಗಿದ ಹಣ್ಣುಗಳುಳ್ಳ ಬುಟ್ಟಿ ತೋರಿಸಿದರು.
ಆಮೋಸ 8 : 2 (OCVKN)
ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು.
ಆಮೋಸ 8 : 3 (OCVKN)
ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು.
ಆಮೋಸ 8 : 4 (OCVKN)
“ಆ ದಿನದಲ್ಲಿ ದೇವಾಲಯದ ಹಾಡುಗಳು ವಿಲಾಪವಾಗುವುವು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. “ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವುವು. ಮೌನವಾಗಿರಿ!” ಬಡವರನ್ನು ನುಂಗುವವರೇ, ನಾಡಿನ ಬಡವರನ್ನು ಮುಗಿಸಿಬಿಡಬೇಕೆಂದಿರುವವರೇ, ಇದನ್ನು ಕೇಳಿರಿ.
ಆಮೋಸ 8 : 5 (OCVKN)
ನೀವು ಹೇಳುವುದೇನೆಂದರೆ, “ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ? ಗೋಧಿಯನ್ನು ಮಾರುವ ಹಾಗೆ ಸಬ್ಬತ್ ದಿನವು ಯಾವಾಗ ಮುಗಿಯುವುದು? ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ, ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ,
ಆಮೋಸ 8 : 6 (OCVKN)
ಬಡವರನ್ನು ಬೆಳ್ಳಿಗೂ ದರಿದ್ರರನ್ನು ಕೆರಗಳ ಜೋಡಿಗೂ ಕೊಂಡುಕೊಳ್ಳುವೆವು, ಹೌದು ಗೋಧಿಯ ಕಸವನ್ನು ಸಹ ಮಾರೋಣ.”
ಆಮೋಸ 8 : 7 (OCVKN)
ಆಮೋಸ 8 : 8 (OCVKN)
ಯೆಹೋವ ದೇವರು ಯಾಕೋಬಿನ ಅಹಂಕಾರದ ಮೇಲೆ ಆಣೆ ಇಟ್ಟುಕೊಂಡು ಹೇಳುವುದೇನೆಂದರೆ: “ನಿಶ್ಚಯವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವುದಿಲ್ಲ. “ಇದಕ್ಕಾಗಿ ದೇಶವು ನಡುಗುವುದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವುದಿಲ್ಲವೇ? ದೇಶವೆಲ್ಲಾ ನೈಲ್ ನದಿಯ ಪ್ರವಾಹದಂತೆ ಉಬ್ಬಿ ಅಲ್ಲೊಲಕಲ್ಲೋಲವಾಗುವುದು, ಈಜಿಪ್ಟಿನ ನದಿಯಂತೆ ಇಳಿದುಹೋಗುವದು.
ಆಮೋಸ 8 : 9 (OCVKN)
“ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ, “ಆ ದಿನದಲ್ಲಿ,” ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡುತ್ತೇನೆ.
ಆಮೋಸ 8 : 10 (OCVKN)
ನಿಮ್ಮ ಹಬ್ಬಗಳನ್ನು ದುಃಖಕ್ಕೂ, ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು. ಎಲ್ಲರೂ ಸೊಂಟಗಳಿಗೆ ಗೋಣಿತಟ್ಟನ್ನು ಕಟ್ಟಿಕೊಂಡು, ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು. ಒಬ್ಬನೇ ಮಗನಿಗಾಗಿ ಗೋಳಾಡುವ ಸಮಯದಂತೆ ಮಾಡುವೆನು. ಅದರ ಅಂತ್ಯವು ಕಹಿಯಾದ ದಿನದಂತಿರುವುದು.
ಆಮೋಸ 8 : 11 (OCVKN)
ದಿನಗಳು ಬರುವುವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ. ಯೆಹೋವ ದೇವರ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮವನ್ನೇ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ.
ಆಮೋಸ 8 : 12 (OCVKN)
ಆಗ ಅವರು ಸಮುದ್ರದಿಂದ ಸಮುದ್ರಕ್ಕೂ, ಉತ್ತರದಿಂದ ಪೂರ್ವಕ್ಕೂ ಅಲೆದು ಯೆಹೋವ ದೇವರ ವಾಕ್ಯವನ್ನು ಹುಡುಕುವುದಕ್ಕೆ ಅತ್ತಿತ್ತ ಓಡಾಡಿ, ಅದನ್ನು ಕಾಣದೆ ಹೋಗುವರು.
ಆಮೋಸ 8 : 13 (OCVKN)
“ಆ ದಿನದಲ್ಲಿ, “ಸೌಂದರ್ಯವತಿಯರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹದಿಂದ ಕುಗ್ಗಿ ಹೋಗುವರು.
ಆಮೋಸ 8 : 14 (OCVKN)
ಅವರು ಸಮಾರ್ಯದ ಪಾಪದ ಮೇಲೆ ಆಣೆ ಇಟ್ಟುಕೊಂಡು, ದಾನೇ, ನಿನ್ನ ದೇವರ ಜೀವದಾಣೆ ಎಂದೂ, ಬೇರ್ಷೆಬದ ಮಾರ್ಗದ ಜೀವದಾಣೆ ಎಂದೂ ಹೇಳುವರು. ಅವರು ಬಿದ್ದು ಮತ್ತೆ ಮೇಲೆ ಏಳಲಾರರು.”

1 2 3 4 5 6 7 8 9 10 11 12 13 14