ಕೊಲೊಸ್ಸೆಯವರಿಗೆ 2 : 1 (OCVKN)
ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ವೈಯಕ್ತಿಕವಾಗಿ ಭೇಟಿಯಾಗದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆ ಎಂಬುದನ್ನು ನೀವು ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.
ಕೊಲೊಸ್ಸೆಯವರಿಗೆ 2 : 2 (OCVKN)
ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ.
ಕೊಲೊಸ್ಸೆಯವರಿಗೆ 2 : 3 (OCVKN)
ಏಕೆಂದರೆ, ಜ್ಞಾನ ಮತ್ತು ತಿಳುವಳಿಕೆಯ ಎಲ್ಲಾ ನಿಕ್ಷೇಪಗಳೂ ಕ್ರಿಸ್ತ ಯೇಸುವಿನಲ್ಲಿಯೇ ಮರೆಯಾಗಿವೆ.
ಕೊಲೊಸ್ಸೆಯವರಿಗೆ 2 : 4 (OCVKN)
ಯಾರೂ ತಮ್ಮ ತರ್ಕದ ನಯಮಾತುಗಳಿಂದ ನಿಮ್ಮನ್ನು ವಂಚಿಸಬಾರದೆಂದು ನಾನು ಇದನ್ನು ಹೇಳುತ್ತಿದ್ದೇನೆ.
ಕೊಲೊಸ್ಸೆಯವರಿಗೆ 2 : 5 (OCVKN)
ನಾನು ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನೀವು ಎಷ್ಟು ಕ್ರಮವುಳ್ಳವರೆಂಬುದನ್ನೂ, ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಶ್ವಾಸ ಎಷ್ಟು ದೃಢವಾಗಿದೆ ಎಂಬುದನ್ನೂ, ನೋಡಿ ನನಗೆ ಆನಂದವಾಗುತ್ತದೆ.
ಕೊಲೊಸ್ಸೆಯವರಿಗೆ 2 : 6 (OCVKN)
ಕ್ರಿಸ್ತ ಯೇಸುವಿನಲ್ಲಿರುವ ಪರಿಪೂರ್ಣ ಜೀವನ ಆದ್ದರಿಂದ ನೀವು ಕ್ರಿಸ್ತ ಯೇಸುವನ್ನು ಕರ್ತ ಎಂದು ಅಂಗೀಕರಿಸಿದಂತೆಯೇ ಅವರಲ್ಲಿ ಬಾಳಿರಿ.
ಕೊಲೊಸ್ಸೆಯವರಿಗೆ 2 : 7 (OCVKN)
ನೀವು ಕ್ರಿಸ್ತ ಯೇಸುವಿನಲ್ಲಿ ಬೇರೂರಿದವರಾಗಿಯೂ ಕಟ್ಟಲಾದವರಾಗಿಯೂ ಇದ್ದು, ನಿಮಗೆ ಬೋಧನೆ ನೀಡಿದ ಪ್ರಕಾರ ನಿಮ್ಮ ವಿಶ್ವಾಸದಲ್ಲಿ ಬಲಹೊಂದಿ ಕೃತಜ್ಞತೆಯಿಂದ ತುಂಬಿ ಪ್ರವಾಹಿಸುವವರಾಗಿರಿ.
ಕೊಲೊಸ್ಸೆಯವರಿಗೆ 2 : 8 (OCVKN)
ಕೊಲೊಸ್ಸೆಯವರಿಗೆ 2 : 9 (OCVKN)
ತತ್ವಜ್ಞಾನವೂ ನಿರರ್ಥಕವೂ ವಂಚನೆಯೂ ಆಗಿರುವ ಮನುಷ್ಯರ ಸಂಪ್ರದಾಯದಿಂದ ನಿಮ್ಮಲ್ಲಿ ಯಾರಾದರೂ ಬಂದು ನಿಮ್ಮನ್ನು ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಅಂಥವರು ಕ್ರಿಸ್ತ ಯೇಸುವನ್ನು ಅನುಸರಿಸದೆ, ಪ್ರಾಪಂಚಿಕ ಬಾಲಬೋಧನೆಗಳನ್ನೂ* ಈ ಲೋಕವನ್ನು ನಿಯಂತ್ರಿಸುವ ದುಷ್ಟ ಶಕ್ತಿಗೆ ಅನುಸರಿಸುವವರಾಗಿದ್ದಾರೆ. ಏಕೆಂದರೆ ದೇವರ ಸರ್ವಸಂಪೂರ್ಣತೆಯು ಮಾನವ ದೇಹವಾಗಿ ಕ್ರಿಸ್ತ ಯೇಸುವಿನಲ್ಲಿಯೇ ವಾಸಮಾಡಿದೆ.
ಕೊಲೊಸ್ಸೆಯವರಿಗೆ 2 : 10 (OCVKN)
ನೀವು ಕ್ರಿಸ್ತ ಯೇಸುವಿನಲ್ಲಿ ಪರಿಪೂರ್ಣರಾಗಿದ್ದೀರಿ. ಅವರೇ ಎಲ್ಲಾ ಆಳಿಕೆಗೂ, ಅಧಿಕಾರಕ್ಕೂ ಶಿರಸ್ಸಾಗಿದ್ದಾರೆ.
ಕೊಲೊಸ್ಸೆಯವರಿಗೆ 2 : 11 (OCVKN)
ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ.
ಕೊಲೊಸ್ಸೆಯವರಿಗೆ 2 : 12 (OCVKN)
ದೀಕ್ಷಾಸ್ನಾನದಲ್ಲಿ ಕ್ರಿಸ್ತ ಯೇಸುವಿನೊಂದಿಗೆ ಸಮಾಧಿಯಾದಿರಿ ಮತ್ತು ಕ್ರಿಸ್ತ ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಕ್ರಿಸ್ತ ಯೇಸುವಿನೊಂದಿಗೆ ಮರಣದಿಂದ ಜೀವಂತವಾಗಿ ಎದ್ದು ಬಂದಿರಿ.
ಕೊಲೊಸ್ಸೆಯವರಿಗೆ 2 : 13 (OCVKN)
ನಿಮ್ಮ ಪಾಪಗಳಿಂದಲೂ ನಿಮ್ಮ ಸುನ್ನತಿಯಿಲ್ಲದ ಪಾಪ ಸ್ವಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತ ಯೇಸುವಿನೊಂದಿಗೆ ಜೀವಿತರನ್ನಾಗಿ ಮಾಡಿ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದರು.
ಕೊಲೊಸ್ಸೆಯವರಿಗೆ 2 : 14 (OCVKN)
ನಮಗೆ ವಿರೋಧವಾಗಿ ನಿಂತು ನಮ್ಮ ಮೇಲೆ ತಪ್ಪು ಹೊರಿಸುವಂತೆ ಬರೆಯಲಾಗಿದ್ದ ಶಾಸನಗಳನ್ನು ಕ್ರಿಸ್ತ ಯೇಸು ರದ್ದುಮಾಡಿದರು. ಅವುಗಳನ್ನು ಶಿಲುಬೆಯ ಮೇಲೆ ಜಡಿದು ಇಲ್ಲದಂತೆ ಮಾಡಿದರು.
ಕೊಲೊಸ್ಸೆಯವರಿಗೆ 2 : 15 (OCVKN)
ಕ್ರಿಸ್ತ ಯೇಸುವು ಆಳುವ ಅದೃಶ್ಯ ಶಕ್ತಿಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಶಿಲುಬೆಯಲ್ಲಿ ಅವುಗಳ ಮೇಲೆ ಜಯಹೊಂದಿ, ಬಹಿರಂಗವಾಗಿ ಪ್ರದರ್ಶಿಸಿದರು.
ಕೊಲೊಸ್ಸೆಯವರಿಗೆ 2 : 16 (OCVKN)
ಮಾನವೀಯ ಬೋಧನೆಗಳಿಂದ ವಿಮೋಚನೆ ಹೀಗಿರಲಾಗಿ, ಅನ್ನಪಾನಗಳ ವಿಷಯದಲ್ಲಿಯೂ ಹಬ್ಬ ಅಮಾವಾಸ್ಯೆ ಸಬ್ಬತ್ ದಿನ ಮುಂತಾದವುಗಳ ವಿಷಯದಲ್ಲಿಯೂ ಯಾರೂ ನಿಮ್ಮನ್ನು ತೀರ್ಪು ಮಾಡದಿರಲಿ.
ಕೊಲೊಸ್ಸೆಯವರಿಗೆ 2 : 17 (OCVKN)
ಇವು ಬರಬೇಕಾಗಿದ್ದವುಗಳ ಛಾಯೆಯಾಗಿವೆ, ಆದರೆ ನಿಜಸ್ವರೂಪವು ಕ್ರಿಸ್ತ ಯೇಸುವೇ.
ಕೊಲೊಸ್ಸೆಯವರಿಗೆ 2 : 18 (OCVKN)
ಕೆಲವರು ತಾವು ದರ್ಶನ ಕಂಡದ್ದರ ಬಗ್ಗೆ ಬಹಳ ಮಾತನಾಡಿ, ತಮ್ಮ ನಿರರ್ಥಕವಾದ ಪ್ರಾಪಂಚಿಕ ಬುದ್ಧಿಯಿಂದ ಉಬ್ಬಿಕೊಳ್ಳುತ್ತಾರೆ. ಇಂಥವರು ಕಪಟ ದೀನತೆಯಲ್ಲಿಯೂ ದೂತರ ಆರಾಧನೆಯಲ್ಲಿಯೂ ಆನಂದಿಸುವವರಾಗಿರುತ್ತಾರೆ. ಇವರು ನಿಮ್ಮ ಬಳಿಗೆ, ನೀವು ಪ್ರತಿಫಲಹೊಂದದೆ ಇರುವಂತೆ ಅಡ್ಡಿಮಾಡಲು ಅವಕಾಶಕೊಡಬೇಡಿರಿ.
ಕೊಲೊಸ್ಸೆಯವರಿಗೆ 2 : 19 (OCVKN)
ಇಂಥವರು ಶಿರಸ್ಸಾಗಿರುವ ಕ್ರಿಸ್ತ ಯೇಸುವಿನನೊಂದಿಗೆ ಸಂಬಂಧ ಕಳೆದುಕೊಂಡವರಾಗಿದ್ದಾರೆ. ಏಕೆಂದರೆ, ಕ್ರಿಸ್ತನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಪೋಷಣೆ ಪಡೆದು ಒಂದಾಗಿ ಜೋಡಿಸಲಾಗಿ ದೇವರು ಬೆಳೆಸುವಂತೆ ಬೆಳೆಯುತ್ತದೆ.
ಕೊಲೊಸ್ಸೆಯವರಿಗೆ 2 : 20 (OCVKN)
ಪ್ರಾಪಂಚಿಕ ಬಾಲಬೋಧನೆಗಳಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದೀರಿ. ಹಾಗಾದರೆ ನೀವು ಇನ್ನೂ ಪ್ರಾಪಂಚಿಕ ನಿಯಮಗಳಿಗೆ ಅಧೀನರಾಗಿರುವುದೇಕೆ?
ಕೊಲೊಸ್ಸೆಯವರಿಗೆ 2 : 21 (OCVKN)
“ಹಿಡಿಯಬೇಡ! ರುಚಿನೋಡಬೇಡ! ಮುಟ್ಟಬೇಡ!”
ಕೊಲೊಸ್ಸೆಯವರಿಗೆ 2 : 22 (OCVKN)
ಈ ಶಾಸನಗಳು ಮಾನವ ಆಜ್ಞೆಗಳ ಹಾಗೂ ಬೋಧನೆಗಳ ಅನುಸಾರವಾಗಿ ಬಳಕೆಯಿಂದ ಅಳಿದುಹೋಗುತ್ತವೆ!
ಕೊಲೊಸ್ಸೆಯವರಿಗೆ 2 : 23 (OCVKN)
ಇಂಥ ಉಪದೇಶಗಳು ತಾವೇ ತಂದುಕೊಂಡ ಆರಾಧನೆಯಲ್ಲಿಯೂ ಸುಳ್ಳು ದೀನತ್ವದಲ್ಲಿಯೂ ದೇಹದಂಡನೆಯಲ್ಲಿಯೂ ಜ್ಞಾನದ ತೋರಿಕೆಯುಳ್ಳದ್ದಾಗಿರುವುದು ನಿಜವೇ. ಆದರೆ ಇವು ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸಲು ಪ್ರಯೋಜನವಿಲ್ಲದವುಗಳಾಗಿವೆ.

1 2 3 4 5 6 7 8 9 10 11 12 13 14 15 16 17 18 19 20 21 22 23