ದಾನಿಯೇಲನು 12 : 1 (OCVKN)
ಯುಗ ಸಮಾಪ್ತಿ “ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.
ದಾನಿಯೇಲನು 12 : 2 (OCVKN)
ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.
ದಾನಿಯೇಲನು 12 : 3 (OCVKN)
ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.
ದಾನಿಯೇಲನು 12 : 4 (OCVKN)
ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.
ದಾನಿಯೇಲನು 12 : 5 (OCVKN)
ಆಗ ದಾನಿಯೇಲನೆಂಬ ನಾನು ನೋಡಿದೆನು. ಅವರಿಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ, ಇನ್ನೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು.
ದಾನಿಯೇಲನು 12 : 6 (OCVKN)
ಅವರು ನದಿಯ ನೀರಿನ ಮೇಲೆ ನಿಂತು, ನಾರುಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು, “ಈ ಆಶ್ಚರ್ಯದ ಅಂತ್ಯವು ಎಷ್ಟರವರೆಗೆ ಇರುವುದು?” ಎಂದು ಕೇಳಿದನು.
ದಾನಿಯೇಲನು 12 : 7 (OCVKN)
ದಾನಿಯೇಲನು 12 : 8 (OCVKN)
ನದಿಯ ನೀರಿನ ಮೇಲೆ ನಿಂತು ನಾರುಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತರಾಗಿರುವವರ ಮೇಲೆ ಆಣೆಯಿಟ್ಟು, “ಅದು ಒಂದುಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು; ಕೊನೆಗೆ ಪರಿಶುದ್ಧರ ಬಲವನ್ನು ಮುರಿದ ಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.
ದಾನಿಯೇಲನು 12 : 9 (OCVKN)
ನಾನು ಅದನ್ನು ಕೇಳಿದೆನು, ಆದರೆ ಗ್ರಹಿಸಲಿಲ್ಲ. ಆಗ ನಾನು, “ನನ್ನ ಒಡೆಯನೇ, ಈ ಸಂಗತಿಗಳ ಅಂತ್ಯವೇನು?” ಎಂದು ಕೇಳಿದೆನು. ಆಗ ಅವನು, “ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು, ಏಕೆಂದರೆ ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಿ, ಮುದ್ರಿತವಾಗಿವೆ.
ದಾನಿಯೇಲನು 12 : 10 (OCVKN)
ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ಆದರೆ ದುಷ್ಟರು ದುಷ್ಟರಾಗಿಯೇ ಮುಂದುವರಿಯುವರು. ಯಾವ ದುಷ್ಟನೂ ಅರ್ಥಮಾಡಿಕೊಳ್ಳುವುದಿಲ್ಲ. ಆದರೆ ಬುದ್ಧಿವಂತರಾದವರು ಅರಿತುಕೊಳ್ಳುವರು.
ದಾನಿಯೇಲನು 12 : 11 (OCVKN)
“ಪ್ರತಿದಿನದ ಯಜ್ಞವು ಸಕಾಲಕ್ಕೆ ನಿಂತುಹೋಗುವುದು. ಆ ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ, 1,290 ದಿನಗಳು ಕಳೆಯಬೇಕು.
ದಾನಿಯೇಲನು 12 : 12 (OCVKN)
1,335 ದಿನಗಳು ಬರುವವರೆಗೆ ಕಾದಿರುವವನೇ ಭಾಗ್ಯವಂತನು.
ದಾನಿಯೇಲನು 12 : 13 (OCVKN)
“ನೀನು ಅಂತ್ಯದವರೆಗೂ ನಿನ್ನ ಮಾರ್ಗದಲ್ಲಿ ಹೋಗು. ನೀನು ವಿಶ್ರಮಿಸಿಕೊಳ್ಳುವೆ ಮತ್ತು ದಿನಗಳ ಅಂತ್ಯದಲ್ಲಿ ನಿನಗೆ ಪಾಲಾಗಿ ಇಟ್ಟಿರುವ ಬಾಧ್ಯತೆಯನ್ನು ಸ್ವೀಕರಿಸಲು ಎದ್ದು ಬರುವೆ,” ಎಂದು ಹೇಳಿದನು.

1 2 3 4 5 6 7 8 9 10 11 12 13