ಧರ್ಮೋಪದೇಶಕಾಂಡ 15 : 1 (OCVKN)
ಸಾಲ ಬಿಡುಗಡೆಯ ವರ್ಷ ಪ್ರತಿ ಏಳು ವರ್ಷಗಳ ಅಂತ್ಯದಲ್ಲಿ ಎಲ್ಲರ ಸಾಲಗಳನ್ನೂ ಮನ್ನಾಮಾಡಬೇಕು.
ಧರ್ಮೋಪದೇಶಕಾಂಡ 15 : 2 (OCVKN)
ನೀವು ಮಾಡಬೇಕಾದ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಾದ ಇಸ್ರಾಯೇಲರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡಬೇಕು. ಅದು ಯೆಹೋವ ದೇವರ ಬಿಡುಗಡೆಯ ವರ್ಷ ಎಂದು ಪ್ರಕಟವಾಗಿರುವುದರಿಂದ ತನ್ನ ನೆರೆಯವನಿಂದಲೂ, ತನ್ನ ಸಹೋದರನಿಂದಲೂ ಸಾಲವನ್ನು ಕೇಳಬಾರದು.
ಧರ್ಮೋಪದೇಶಕಾಂಡ 15 : 3 (OCVKN)
ಅನ್ಯದೇಶದವರಿಂದ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದು. ಆದರೆ ಸ್ವದೇಶದವನಾದ ನಿಮ್ಮ ಸಹೋದರರು ಕೊಡಬೇಕಾದ ಸಾಲವನ್ನು ನೀವು ಮನ್ನಾಮಾಡಬೇಕು.
ಧರ್ಮೋಪದೇಶಕಾಂಡ 15 : 4 (OCVKN)
ಏಕೆಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದಲ್ಲಿ ಯೆಹೋವ ದೇವರು ನಿಮ್ಮನ್ನು ಬಹಳವಾಗಿ ಆಶೀರ್ವದಿಸುವರು. ಹೀಗಾಗಿ ನಿಮ್ಮಲ್ಲಿ ಬಡವರೇ ಇರುವುದಿಲ್ಲ.
ಧರ್ಮೋಪದೇಶಕಾಂಡ 15 : 5 (OCVKN)
ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಎಚ್ಚರಿಕೆಯಿಂದ ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಎಲ್ಲಾ ಆಜ್ಞೆಯನ್ನು ಕಾಪಾಡಿ ನಡೆಯಿರಿ.
ಧರ್ಮೋಪದೇಶಕಾಂಡ 15 : 6 (OCVKN)
ನಿಶ್ಚಯವಾಗಿ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದಂತೆ ನಿನ್ನನ್ನು ಆಶೀರ್ವದಿಸುವರು. ನೀವು ಸಾಲ ತೆಗೆದುಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲ ಕೊಡುವಿರಿ. ಅನೇಕ ಜನಾಂಗಗಳನ್ನು ಆಳುವಿರಿ, ಅವರು ನಿಮ್ಮನ್ನು ಆಳುವುದಿಲ್ಲ.
ಧರ್ಮೋಪದೇಶಕಾಂಡ 15 : 7 (OCVKN)
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ನಿಮ್ಮ ದೇಶದಲ್ಲಿ, ನಿಮ್ಮ ಸಹೋದರರಲ್ಲಿ ಬಡವರು ಇದ್ದರೆ, ನಿಮ್ಮ ಹೃದಯವನ್ನು ಕಠಿಣ ಮಾಡಿಕೊಳ್ಳಬೇಡಿರಿ. ನಿಮ್ಮ ಕೈಯನ್ನು ನಿಮ್ಮ ಬಡ ಸಹೋದರರಿಗೆ ಮುಚ್ಚಿಕೊಳ್ಳಬೇಡಿರಿ.
ಧರ್ಮೋಪದೇಶಕಾಂಡ 15 : 8 (OCVKN)
ನಿಮ್ಮ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು. ಅವನಿಗೆ ಅಗತ್ಯವಾದಷ್ಟು ಕೊಡಬೇಕು.
ಧರ್ಮೋಪದೇಶಕಾಂಡ 15 : 9 (OCVKN)
“ಸಾಲ ಬಿಡುಗಡೆಯ ವರ್ಷವಾದ ಏಳನೆಯ ವರ್ಷವು ಸಮೀಪವಾಯಿತು,” ಎಂಬ ದುಷ್ಟ ಆಲೋಚನೆ ನಿಮ್ಮ ಹೃದಯದಲ್ಲಿ ಹುಟ್ಟಿ, ನಿಮ್ಮ ಬಡ ಸಹೋದರನ ಮೇಲೆ ಕಠಿಣವಾಗಿ, ನೀವು ಅವನಿಗೆ ಏನೂ ಕೊಡದೆ ಇರಬೇಡಿರಿ. ಅವನು ನಿಮಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆ ಇಟ್ಟಾಗ, ನಿಮ್ಮಲ್ಲಿ ಅಪರಾಧ ಉಂಟಾಗದಂತೆ ನೋಡಿಕೊಳ್ಳಿರಿ.
ಧರ್ಮೋಪದೇಶಕಾಂಡ 15 : 10 (OCVKN)
ಕೊಡುವಾಗ ಬೇಸರಗೊಳ್ಳದೇ ಉದಾರಮನಸ್ಸಿನಿಂದ ಕೊಡಿರಿ. ಏಕೆಂದರೆ ಇದಕ್ಕೋಸ್ಕರವೇ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ, ನೀವು ಕೈಹಾಕುವುದೆಲ್ಲದರಲ್ಲಿಯೂ ಆಶೀರ್ವದಿಸುವರು.
ಧರ್ಮೋಪದೇಶಕಾಂಡ 15 : 11 (OCVKN)
ಏಕೆಂದರೆ ಬಡವರು ದೇಶದಲ್ಲಿ ಇಲ್ಲದೆ ಹೋಗುವುದಿಲ್ಲ. ಆದ್ದರಿಂದ ನಿಮ್ಮ ಸಹೋದರರಿಗೂ, ನಿಮ್ಮ ನಾಡಿನ ದರಿದ್ರರಿಗೂ, ಬಡವರಿಗೂ ನಿಮ್ಮ ಕೈಯನ್ನು ವಿಶಾಲವಾಗಿ ತೆರೆಯಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ.
ಧರ್ಮೋಪದೇಶಕಾಂಡ 15 : 12 (OCVKN)
ಗುಲಾಮನ ಬಿಡುಗಡೆ ನಿಮ್ಮ ಸಹೋದರನಾದ ಹಿಬ್ರಿಯನಾಗಲಿ, ಒಬ್ಬ ಹಿಬ್ರಿಯ ಸ್ತ್ರೀಯಾಗಲಿ ನಿಮಗೆ ಗುಲಾಮರಾಗಿ, ಆರು ವರ್ಷ ನಿಮಗೆ ಮಾರಾಟವಾಗಿದ್ದರೆ ಮತ್ತು ಸೇವೆ ಮಾಡಿದ್ದರೆ, ಏಳನೆಯ ವರ್ಷದಲ್ಲಿ ಅವರನ್ನು ಬಿಡುಗಡೆ ಮಾಡಿ ಕಳುಹಿಸಿಬಿಡಿರಿ.
ಧರ್ಮೋಪದೇಶಕಾಂಡ 15 : 13 (OCVKN)
ಹಾಗೆ ಬಿಟ್ಟುಬಿಡುವಾಗ ಬರೀ ಕೈಯಲ್ಲಿ ಕಳುಹಿಸಬಾರದು.
ಧರ್ಮೋಪದೇಶಕಾಂಡ 15 : 14 (OCVKN)
ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅಂದರೆ ನಿಮ್ಮ ಕುರಿಮಂದೆಯಿಂದಲೂ ಕಣದಿಂದಲೂ ದ್ರಾಕ್ಷಿ ಆಲೆಯದಿಂದಲೂ ಅವರಿಗೆ ಧಾರಾಳವಾಗಿ ಕೊಟ್ಟುಕಳುಹಿಸಬೇಕು.
ಧರ್ಮೋಪದೇಶಕಾಂಡ 15 : 15 (OCVKN)
ನೀವು ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಿರಿ ಎಂದೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ನಾನು ಈ ಹೊತ್ತು ಇದನ್ನು ನಿಮಗೆ ಆಜ್ಞಾಪಿಸುತ್ತೇನೆ.
ಧರ್ಮೋಪದೇಶಕಾಂಡ 15 : 16 (OCVKN)
ಒಂದು ವೇಳೆ ಆ ಗುಲಾಮನು, ನಿಮ್ಮನ್ನೂ, ನಿಮ್ಮ ಮನೆಯನ್ನೂ ಪ್ರೀತಿಸುವುದರಿಂದಲೂ, ನಿಮ್ಮ ಬಳಿ ಸುಖವಾಗಿರುವುದರಿಂದಲೂ, “ನಾನು ಬಿಡುಗಡೆಯಾಗಿ ಹೋಗುವುದಕ್ಕೆ ಮನಸ್ಸಿಲ್ಲ,” ಎಂದು ಹೇಳಿದರೆ,
ಧರ್ಮೋಪದೇಶಕಾಂಡ 15 : 17 (OCVKN)
ನೀವು ದಬ್ಬಳವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಿಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿಮ್ಮ ದಾಸನಾಗಿರುವನು. ನಿಮ್ಮ ದಾಸಿಗೂ ಹಾಗೆಯೇ ಮಾಡಬೇಕು.
ಧರ್ಮೋಪದೇಶಕಾಂಡ 15 : 18 (OCVKN)
ಧರ್ಮೋಪದೇಶಕಾಂಡ 15 : 19 (OCVKN)
ಒಬ್ಬ ಗುಲಾಮನನ್ನು ನಿಮ್ಮಿಂದ ಬಿಡುಗಡೆಯಾಗಿ ಕಳುಹಿಸುವುದು ನಿಮಗೆ ಕಷ್ಟವೆಂದು ಹೇಳಿಕೊಳ್ಳಬಾರದು. ಏಕೆಂದರೆ ಅವನು ಆರು ವರ್ಷ ನಿಮ್ಮ ದಾಸನಾಗಿದ್ದದರಿಂದ ಸಂಬಳದ ಸೇವಕನಿಗಿಂತ ಎರಡಷ್ಟಾಗಿದ್ದನು. ಹೀಗೆ ನಿಮ್ಮ ದೇವರಾದ ಯೆಹೋವ ದೇವರು ನೀವು ಮಾಡುವುದೆಲ್ಲದರಲ್ಲಿಯೂ ನಿಮ್ಮನ್ನು ಆಶೀರ್ವದಿಸುವರು. ಚೊಚ್ಚಲು ಪಶುಗಳು ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠಿಸಬೇಕು. ನಿಮ್ಮ ಹೋರಿಯ ಚೊಚ್ಚಲಿನಿಂದ ನೀವು ಕೆಲಸ ಮಾಡಿಸಬಾರದು. ನಿಮ್ಮ ಕುರಿಯ ಚೊಚ್ಚಲಲ್ಲಿ ಉಣ್ಣೆ ಕತ್ತರಿಸಬಾರದು.
ಧರ್ಮೋಪದೇಶಕಾಂಡ 15 : 20 (OCVKN)
ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವು ನಿಮ್ಮ ಮನೆಯವರ ಸಹಿತವಾಗಿ ಅವುಗಳಿಂದ ಪ್ರತಿವರ್ಷ ಮಾಂಸಾಹಾರವಾಗಿರಬೇಕು.
ಧರ್ಮೋಪದೇಶಕಾಂಡ 15 : 21 (OCVKN)
ಅದರಲ್ಲಿ ಏನಾದರೂ ಊನವಿದ್ದರೆ ಅಂದರೆ, ಅದು ಕುಂಟಾಗಲಿ, ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾಗಿದ್ದರೆ, ಅದನ್ನು ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು.
ಧರ್ಮೋಪದೇಶಕಾಂಡ 15 : 22 (OCVKN)
ಅದನ್ನು ನಿಮ್ಮ ಊರಲ್ಲಿ ಮಾಂಸಾಹಾರವಾಗಿರಲಿ. ಆಚಾರವಾಗಿ ಶುದ್ಧರೂ, ಅಶುದ್ಧರೂ ಕೂಡ ಅದನ್ನು ಕಡವೆ ಜಿಂಕೆಗಳನ್ನು ಮಾಂಸಾಹಾರವಾಗಿ ಮಾಡಿಕೊಂಡ ಹಾಗೆ ತಿನ್ನಬಹುದು.
ಧರ್ಮೋಪದೇಶಕಾಂಡ 15 : 23 (OCVKN)
ಅದರ ರಕ್ತವನ್ನು ಮಾತ್ರ ಭುಜಿಸಬಾರದು, ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.

1 2 3 4 5 6 7 8 9 10 11 12 13 14 15 16 17 18 19 20 21 22 23