ಧರ್ಮೋಪದೇಶಕಾಂಡ 21 : 1 (OCVKN)
ಹಂತಕನು ಪತ್ತೆಯಿಲ್ಲದಾಗ ಮಾಡುವ ಕಾರ್ಯ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ಹತನಾದ ಒಬ್ಬ ವ್ಯಕ್ತಿಯ ಶವವು ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡಾಗ ಮತ್ತು ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ,
ಧರ್ಮೋಪದೇಶಕಾಂಡ 21 : 2 (OCVKN)
ನಿಮ್ಮ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ, ಆ ಹತನಾದವನ ಸುತ್ತಲಿರುವ ಪಟ್ಟಣಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳಲು ಅಳತೆಮಾಡಬೇಕು.
ಧರ್ಮೋಪದೇಶಕಾಂಡ 21 : 3 (OCVKN)
ಹತನಾದವನಿಗೆ ಸಮೀಪವಾದ ಊರು ಯಾವುದೋ, ಆ ಊರಿನ ಹಿರಿಯರು ಇನ್ನೂ ಕೆಲಸ ಮಾಡದಂಥ, ನೊಗ ಎಳೆಯದಂಥ, ಒಂದು ಕಡಸನ್ನು ತೆಗೆದುಕೊಳ್ಳಬೇಕು.
ಧರ್ಮೋಪದೇಶಕಾಂಡ 21 : 4 (OCVKN)
ಆಮೇಲೆ ಆ ಊರಿನ ಹಿರಿಯರು ಆ ಕಡಸನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜ ಹಾಕದಂಥ ಸ್ಥಳಕ್ಕೆ ತೆಗೆದುಕೊಂಡುಹೋಗಿ, ಅಲ್ಲಿ ಹಳ್ಳದಲ್ಲಿ ಕಡಸನ್ನು ವಧಿಸಬೇಕು.
ಧರ್ಮೋಪದೇಶಕಾಂಡ 21 : 5 (OCVKN)
ಲೇವಿಯ ಪುತ್ರರಾದ ಯಾಜಕರು ಹತ್ತಿರ ಇರಬೇಕು. ಏಕೆಂದರೆ ಅವರನ್ನೇ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಸೇವೆ ಮಾಡುವುದಕ್ಕೂ ಯೆಹೋವ ದೇವರ ಹೆಸರಿನಲ್ಲಿ ಆಶೀರ್ವಾದ ಕೊಡುವುದಕ್ಕೂ ಎಲ್ಲಾ ವಿವಾದ ಹೊಡೆದಾಟಗಳ ವಿಷಯದಲ್ಲಿ ತೀರ್ಮಾನಿಸುವುದಕ್ಕೂ ಆಯ್ದುಕೊಂಡಿದ್ದಾರೆ.
ಧರ್ಮೋಪದೇಶಕಾಂಡ 21 : 6 (OCVKN)
ಆಮೇಲೆ ಹತನಾದವನ ಶವಕ್ಕೆ ಸಮೀಪವಾಗಿರುವ ಆ ಊರಿನ ಹಿರಿಯರೆಲ್ಲರೂ ತಗ್ಗಿನಲ್ಲಿ ವಧಿಸಿದ ಕಡಸಿನ ಮೇಲೆ ಕೈಗಳನ್ನು ತೊಳೆದುಕೊಳ್ಳಬೇಕು.
ಧರ್ಮೋಪದೇಶಕಾಂಡ 21 : 7 (OCVKN)
ಅನಂತರ, “ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ. ನಮ್ಮ ಕಣ್ಣುಗಳು ನಡೆದದ್ದನ್ನು ನೋಡಲಿಲ್ಲ.
ಧರ್ಮೋಪದೇಶಕಾಂಡ 21 : 8 (OCVKN)
ಯೆಹೋವ ದೇವರೇ, ನೀವು ವಿಮೋಚಿಸಿದ ನಿಮ್ಮ ಜನರಾದ ಇಸ್ರಾಯೇಲರಿಗೆ ಕರುಣೆ ಹೊದಿಸಿರಿ. ನಿಮ್ಮ ಜನರಾದ ಇಸ್ರಾಯೇಲರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡಿರಿ,” ಎಂದು ಹೇಳಬೇಕು. ಆ ರಕ್ತಾಪರಾಧವು ಅವರಿಗೆ ಮುಚ್ಚಲಾಗುವುದು.
ಧರ್ಮೋಪದೇಶಕಾಂಡ 21 : 9 (OCVKN)
ಈ ಪ್ರಕಾರ ನೀವು ಯೆಹೋವ ದೇವರ ಮುಂದೆ ಸರಿಯಾದದ್ದನ್ನು ಮಾಡಿದರೆ, ರಕ್ತಾಪರಾಧವನ್ನು ನಿಮ್ಮಲ್ಲಿಂದ ತೆಗೆದುಹಾಕುವಿರಿ.
ಧರ್ಮೋಪದೇಶಕಾಂಡ 21 : 10 (OCVKN)
ಸೆರೆಯವಳಾದ ಸ್ತ್ರೀಯನ್ನು ಮದುವೆಮಾಡಿಕೊಳ್ಳುವ ವಿಷಯ ನೀವು ಶತ್ರುಗಳ ವಿರುದ್ಧ ಯುದ್ಧಮಾಡಿ, ನಿಮ್ಮ ದೇವರಾದ ಯೆಹೋವ ದೇವರಿಂದ, ನೀವು ಅವರನ್ನು ಸೋಲಿಸಿದರೆ,
ಧರ್ಮೋಪದೇಶಕಾಂಡ 21 : 11 (OCVKN)
ಸೆರೆ ಹಿಡಿದವರಲ್ಲಿ ಒಬ್ಬ ಸುಂದರ ಸ್ತ್ರೀಯನ್ನು ನಿಮ್ಮಲ್ಲಿ ಯಾರಾದರೂ ಕಂಡು ಇಷ್ಟಪಟ್ಟರೆ, ಅವಳನ್ನು ಮದುವೆ ಮಾಡಿಕೊಳ್ಳಬಹುದು.
ಧರ್ಮೋಪದೇಶಕಾಂಡ 21 : 12 (OCVKN)
ಅವಳು ತಲೆ ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಂಡು,
ಧರ್ಮೋಪದೇಶಕಾಂಡ 21 : 13 (OCVKN)
ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳವರೆಗೆ ತನ್ನ ತಾಯಿ ತಂದೆಯರನ್ನು ಸ್ಮರಿಸಿ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.
ಧರ್ಮೋಪದೇಶಕಾಂಡ 21 : 14 (OCVKN)
ತರುವಾಯ ಅವಳು ಅವನಿಗೆ ಇಷ್ಟವಾಗದೆ ಹೋದರೆ, ಅವನು ಅವಳನ್ನು ಅವಳು ಬಯಸಿದ ಸ್ಥಳಕ್ಕೆ ಕಳುಹಿಸಿಬಿಡಬೇಕು. ಅವಳನ್ನು ಅವಮಾನಪಡಿಸಿದ್ದರಿಂದ ದಾಸತ್ವಕ್ಕೆ ಮಾರಲೂಬಾರದು, ದಾಸಿಯಂತೆ ನಡೆಸಲೂಬಾರದು.
ಧರ್ಮೋಪದೇಶಕಾಂಡ 21 : 15 (OCVKN)
ಚೊಚ್ಚಲ ಮಗನ ಹಕ್ಕು ಒಬ್ಬ ಮನುಷ್ಯನಿಗೆ ಇಬ್ಬರು ಹೆಂಡತಿಯರಿದ್ದು, ಒಬ್ಬಳನ್ನು ಪ್ರೀತಿಸುತ್ತಲೂ, ಮತ್ತೊಬ್ಬಳನ್ನು ದ್ವೇಷಿಸುತ್ತಲೂ ಇದ್ದರೆ, ಅವರಿಬ್ಬರೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ, ಚೊಚ್ಚಲು ಮಗನು ತಿರಸ್ಕಾರ ಹೊಂದುತ್ತಿರುವ ಹೆಂಡತಿಯಲ್ಲಿಯೇ ಹುಟ್ಟಿದ್ದರೆ,
ಧರ್ಮೋಪದೇಶಕಾಂಡ 21 : 16 (OCVKN)
ಅವನು ತನ್ನ ಪುತ್ರರಿಗೆ ತನ್ನ ಆಸ್ತಿಯನ್ನು ಹಂಚಿ ಕೊಡುವಾಗ, ತಾನು ಪ್ರೀತಿಮಾಡದ ಹೆಂಡತಿಯ ಚೊಚ್ಚಲ ಮಗನಿಗೆ ಬದಲಾಗಿ ಅವನು ಪ್ರೀತಿಸುವವಳ ಮಗನನ್ನು ಹಿರಿಯನೆಂದು ಮಾಡಕೂಡದು.
ಧರ್ಮೋಪದೇಶಕಾಂಡ 21 : 17 (OCVKN)
ಅವನು ಪ್ರೀತಿಮಾಡದವಳ ಮಗನಿಗೆ ತನ್ನ ಬಳಿಯಲ್ಲಿರುವ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು, ಅವನೇ ಜೇಷ್ಠ ಪುತ್ರನೆಂದು ಒಪ್ಪಿಕೊಳ್ಳಬೇಕು. ಏಕೆಂದರೆ ಅವನೇ ಅವನ ಪ್ರಥಮ ಫಲ. ಅವನಿಗೆ ಜೇಷ್ಠ ಪುತ್ರನ ಹಕ್ಕು ಉಂಟು.
ಧರ್ಮೋಪದೇಶಕಾಂಡ 21 : 18 (OCVKN)
ದುಷ್ಟ ಪುತ್ರನ ಶಿಕ್ಷಾಕ್ರಮ ಒಬ್ಬ ಮನುಷ್ಯನಿಗೆ ಮೊಂಡನೂ, ತಿರುಗಿ ಬೀಳುವವನೂ ಆದ ಮಗನಿದ್ದರೆ, ಅವನು ತಂದೆತಾಯಿಯ ಮಾತನ್ನೂ ಕೇಳದೆ, ಅವರು ಅವನನ್ನು ಶಿಸ್ತುಪಡಿಸಲು ಹೇಳುವ ಮಾತನ್ನೂ ಕೇಳದೆ ಹೋದರೆ,
ಧರ್ಮೋಪದೇಶಕಾಂಡ 21 : 19 (OCVKN)
ಅವನ ತಂದೆತಾಯಿಗಳು ಅವನನ್ನು ಹಿಡಿದು, ಪಟ್ಟಣದ ಹಿರಿಯರ ಬಳಿಗೂ ಅವನ ಊರಿನ ಬಾಗಿಲಿನ ಬಳಿಗೂ ತಂದು,
ಧರ್ಮೋಪದೇಶಕಾಂಡ 21 : 20 (OCVKN)
ಪಟ್ಟಣದ ಹಿರಿಯರಿಗೆ, “ಈ ನಮ್ಮ ಮಗನು ಮೊಂಡನೂ, ತಿರುಗಿ ಬೀಳುವವನೂ, ನಮ್ಮ ಮಾತು ಕೇಳದವನೂ, ಹೊಟ್ಟೆ ಬಾಕನೂ, ಕುಡುಕನೂ ಆಗಿದ್ದಾನೆ,” ಎಂದು ಹೇಳಬೇಕು.
ಧರ್ಮೋಪದೇಶಕಾಂಡ 21 : 21 (OCVKN)
ಆಗ ಅವನ ಪಟ್ಟಣದ ಜನರೆಲ್ಲರೂ ಅವನು ಸಾಯುವಂತೆ ಅವನ ಮೇಲೆ ಕಲ್ಲೆಸೆಯಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಇಸ್ರಾಯೇಲರಲ್ಲಿ ಇದನ್ನು ಕೇಳಿ ಭಯಪಡುವರು.
ಧರ್ಮೋಪದೇಶಕಾಂಡ 21 : 22 (OCVKN)
ವಿವಿಧ ಶಾಸನಗಳು ಒಬ್ಬನು ಮರಣದಂಡನೆಗೆ ಯೋಗ್ಯವಾದ ಅಪರಾಧ ಮಾಡಿದ್ದರಿಂದ, ನೀವು ಅವನಿಗೆ ಮರಣದಂಡನೆಯನ್ನು ವಿಧಿಸಿ, ಅವನ ಶವವನ್ನು ಮರಕ್ಕೆ ತೂಗುಹಾಕಿದ್ದಾದರೆ,
ಧರ್ಮೋಪದೇಶಕಾಂಡ 21 : 23 (OCVKN)
ಅವನ ಶವ ರಾತ್ರಿಯಲ್ಲಿ ಮರದ ಮೇಲಿರಬಾರದು. ಅವನನ್ನು ಅದೇ ದಿವಸದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23