ಧರ್ಮೋಪದೇಶಕಾಂಡ 8 : 1 (OCVKN)
ದೇವರನ್ನು ಮರೆಯಬೇಡ ನೀವು ಬದುಕಿ ಅಭಿವೃದ್ಧಿಯಾಗಿ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಿ, ಅದನ್ನು ಸ್ವಾಧೀನ ಮಾಡಿಕೊಳ್ಳುವ ಹಾಗೆ ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಗೊಳ್ಳಿರಿ.
ಧರ್ಮೋಪದೇಶಕಾಂಡ 8 : 2 (OCVKN)
ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.
ಧರ್ಮೋಪದೇಶಕಾಂಡ 8 : 3 (OCVKN)
ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ ಯೆಹೋವ ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾನೆಂದು ನಿಮಗೆ ಬೋಧಿಸುವಂತೆ ದೇವರು ನಿಮ್ಮನ್ನು ಹಸಿವೆಯಿಂದ ಬಳಲುವಂತೆ ಮಾಡಿದರು. ನೀವು ತಿಳಿಯದಂಥ ಮತ್ತು ನಿಮ್ಮ ಪಿತೃಗಳು ತಿಳಿಯದಂಥ ಮನ್ನವನ್ನು ನಿಮಗೆ ಉಣ್ಣಲು ಕೊಟ್ಟರು.
ಧರ್ಮೋಪದೇಶಕಾಂಡ 8 : 4 (OCVKN)
ಈ ನಲವತ್ತು ವರ್ಷ ನಿಮ್ಮ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ, ನಿಮ್ಮ ಕಾಲುಗಳು ಬಾತುಹೋಗಲಿಲ್ಲ.
ಧರ್ಮೋಪದೇಶಕಾಂಡ 8 : 5 (OCVKN)
ಇದಲ್ಲದೆ ಒಬ್ಬನು ತನ್ನ ಮಗನನ್ನು ಶಿಸ್ತುಪಡಿಸುವ ಪ್ರಕಾರ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಶಿಸ್ತಿನಿಂದ ನಡೆಸುತ್ತಾ ಬಂದರೆಂದು ನಿಮ್ಮ ಹೃದಯದಲ್ಲಿ ತಿಳಿದುಕೊಳ್ಳಿರಿ.
ಧರ್ಮೋಪದೇಶಕಾಂಡ 8 : 6 (OCVKN)
ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಂಡು, ಅವರ ಮಾರ್ಗಗಳಲ್ಲಿ ನಡೆದು ಅವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.
ಧರ್ಮೋಪದೇಶಕಾಂಡ 8 : 7 (OCVKN)
ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಒಳ್ಳೆಯ ದೇಶಕ್ಕೆ ಬರಮಾಡುತ್ತಾರೆ. ಅದು ನೀರಿನ ಹಳ್ಳಗಳೂ, ತಗ್ಗುಗಳಲ್ಲಿಯೂ, ಬೆಟ್ಟದಲ್ಲಿಯೂ, ಉಕ್ಕುವ ಬುಗ್ಗೆಗಳೂ ಇರುವ ದೇಶವಾಗಿರುತ್ತದೆ.
ಧರ್ಮೋಪದೇಶಕಾಂಡ 8 : 8 (OCVKN)
ಆ ದೇಶದಲ್ಲಿ ಗೋಧಿಯೂ, ಜವೆಗೋಧಿಯೂ, ದ್ರಾಕ್ಷೆಯೂ, ಅಂಜೂರ ಮರಗಳೂ, ದಾಳಿಂಬೆಗಳೂ ಇರುತ್ತವೆ. ಅದು ಓಲಿವ್ ಎಣ್ಣೆಯೂ, ಜೇನೂ ಉಳ್ಳ ದೇಶವೇ.
ಧರ್ಮೋಪದೇಶಕಾಂಡ 8 : 9 (OCVKN)
ಆ ದೇಶದಲ್ಲಿ ನಿಮಗೆ ಆಹಾರಕ್ಕೆ ಕೊರತೆ ಇರುವುದಿಲ್ಲ. ಅಲ್ಲಿ ಯಾವುದರ ಕೊರತೆ ನಿಮಗೆ ಆಗದು. ಅದರ ಕಲ್ಲುಗಳಲ್ಲಿ ಕಬ್ಬಿಣವನ್ನೂ, ಅದರ ಬೆಟ್ಟಗಳಲ್ಲಿ ತಾಮ್ರದ ಗಣಿಗಳನ್ನೂ ಅಗೆಯಬಹುದು.
ಧರ್ಮೋಪದೇಶಕಾಂಡ 8 : 10 (OCVKN)
ನೀವು ತಿಂದು ತೃಪ್ತಿ ಹೊಂದಿದಾಗ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಒಳ್ಳೆಯ ದೇಶದಲ್ಲಿ ಅವರನ್ನು ಸ್ತುತಿಸಬೇಕು.
ಧರ್ಮೋಪದೇಶಕಾಂಡ 8 : 11 (OCVKN)
ನಾನು ಈ ಹೊತ್ತು ನಿಮಗೆ ಕೊಡುವ ದೇವರ ಆಜ್ಞೆಗಳನ್ನೂ ನಿಯಮಗಳನ್ನೂ ತೀರ್ಪುಗಳನ್ನೂ ಕೈಕೊಳ್ಳದವರೂ, ಯೆಹೋವ ದೇವರನ್ನು ಮರೆಯದವರೂ ಆಗದಂತೆ ನೋಡಿಕೊಳ್ಳಿರಿ.
ಧರ್ಮೋಪದೇಶಕಾಂಡ 8 : 12 (OCVKN)
ನೀವು ತಿಂದು ತೃಪ್ತಿಹೊಂದಿ, ಒಳ್ಳೆಯ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ,
ಧರ್ಮೋಪದೇಶಕಾಂಡ 8 : 13 (OCVKN)
ನಿಮ್ಮ ಪಶು ಕುರಿಗಳು ಹೆಚ್ಚಿದಾಗಲೂ, ಬೆಳ್ಳಿಬಂಗಾರ ನಿಮಗೆ ಹೆಚ್ಚಿದಾಗಲೂ, ನಿಮಗಿರುವ ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ,
ಧರ್ಮೋಪದೇಶಕಾಂಡ 8 : 14 (OCVKN)
ನಿಮ್ಮ ಹೃದಯವು ಗರ್ವಗೊಂಡು, ನಿಮ್ಮನ್ನು ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ ನಿಮ್ಮ ದೇವರಾದ ಯೆಹೋವ ದೇವರನ್ನೇ ಮರೆತುಬಿಡಬೇಡಿರಿ.
ಧರ್ಮೋಪದೇಶಕಾಂಡ 8 : 15 (OCVKN)
ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು.
ಧರ್ಮೋಪದೇಶಕಾಂಡ 8 : 16 (OCVKN)
ನಿಮ್ಮನ್ನು ದೀನತ್ವಕೆ ಒಳಪಡಿಸಿ, ಪರೀಕ್ಷಿಸಿದ ನಂತರ, ಕಡೆಯಲ್ಲಿ ನಿಮಗೆ ಒಳ್ಳೆಯದನ್ನು ಮಾಡುವಂತೆ ನಿಮ್ಮ ಪಿತೃಗಳು ಅರಿಯದ ಮನ್ನವನ್ನು ಮರುಭೂಮಿಯಲ್ಲಿ ನಿಮಗೆ ಪೋಷಿಸಿದರು.
ಧರ್ಮೋಪದೇಶಕಾಂಡ 8 : 17 (OCVKN)
ನಿಮ್ಮ ದೇವರಾದ ಯೆಹೋವ ದೇವರನ್ನು ಮರೆತು, “ನಮ್ಮ ಹಸ್ತ ಬಲ ಸಾಮರ್ಥ್ಯವೇ ನಮಗೆ ಈ ಆಸ್ತಿಯನ್ನು ಸಂಪಾದಿಸಿತು,” ಎಂದು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೊಳ್ಳಿರಿ.
ಧರ್ಮೋಪದೇಶಕಾಂಡ 8 : 18 (OCVKN)
ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.
ಧರ್ಮೋಪದೇಶಕಾಂಡ 8 : 19 (OCVKN)
ಒಂದು ವೇಳೆ ನೀವು ನಿಮ್ಮ ಯೆಹೋವ ದೇವರನ್ನು ಮರೆತು, ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ, ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧವಾಗಿ ಈ ಹೊತ್ತು ಸಾಕ್ಷಿ ಹೇಳುತ್ತೇನೆ.
ಧರ್ಮೋಪದೇಶಕಾಂಡ 8 : 20 (OCVKN)
ನೀವು ನಿಮ್ಮ ಯೆಹೋವ ದೇವರ ಮಾತಿಗೆ ವಿಧೇಯರಾಗದ ಕಾರಣ ಅವರು ನಿಮ್ಮ ಮುಂದೆ ನಾಶಮಾಡುವ ಇತರ ಜನಾಂಗಗಳ ಹಾಗೆಯೇ ನೀವೂ ನಾಶವಾಗಿಹೋಗುವಿರಿ.
❮
❯
1
2
3
4
5
6
7
8
9
10
11
12
13
14
15
16
17
18
19
20