ಪ್ರಸಂಗಿ 1 : 2 (OCVKN)
ದಾವೀದನ ಮಗನೂ ಯೆರೂಸಲೇಮಿನ ಅರಸನೂ ಆದ ಪ್ರಸಂಗಿಯ ಮಾತುಗಳು: “ವ್ಯರ್ಥಗಳಲ್ಲಿ ವ್ಯರ್ಥ! ವ್ಯರ್ಥಗಳಲ್ಲಿ ವ್ಯರ್ಥ!” ಎಂದು ಪ್ರಸಂಗಿ ಹೇಳುತ್ತಾನೆ. “ಸಮಸ್ತವೂ ವ್ಯರ್ಥ! ಎಲ್ಲವೂ ವ್ಯರ್ಥ.”
ಪ್ರಸಂಗಿ 1 : 3 (OCVKN)
ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸಗಳಿಂದ ಅವನಿಗೆ ಲಾಭವೇನು?
ಪ್ರಸಂಗಿ 1 : 4 (OCVKN)
ಸಂತತಿಗಳು ಬರುತ್ತವೆ, ಸಂತತಿಗಳು ಹೋಗುತ್ತವೆ; ಆದರೆ ಭೂಮಿಯು ಶಾಶ್ವತವಾಗಿ ಉಳಿಯುತ್ತದೆ.
ಪ್ರಸಂಗಿ 1 : 5 (OCVKN)
ಸೂರ್ಯನು ಉದಯಿಸುತ್ತಾನೆ, ಸೂರ್ಯನು ಮುಳುಗುತ್ತಾನೆ. ತಾನು ಉದಯಿಸುವ ಸ್ಥಳಕ್ಕೆ ಆತುರದಿಂದ ಹಿಂದಿರುಗುತ್ತಾನೆ.
ಪ್ರಸಂಗಿ 1 : 6 (OCVKN)
ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುತ್ತದೆ. ಸುತ್ತುತ್ತಾ, ಸುತ್ತುತ್ತಾ ಹೋಗುತ್ತದೆ. ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರುಗುತ್ತದೆ.
ಪ್ರಸಂಗಿ 1 : 7 (OCVKN)
ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ. ಆದರೂ ಸಮುದ್ರವು ತುಂಬುವುದಿಲ್ಲ. ನದಿಗಳು ಎಲ್ಲಿಂದ ಬಂದಿವೆಯೋ, ಆ ಸ್ಥಳಕ್ಕೆ ಅವು ಹಿಂದಿರುಗುತ್ತವೆ.
ಪ್ರಸಂಗಿ 1 : 8 (OCVKN)
ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿವೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.
ಪ್ರಸಂಗಿ 1 : 9 (OCVKN)
ಇದ್ದದ್ದೇ ಇರುವುದು, ನಡೆದದ್ದೇ ನಡೆಯುವುದು. ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ.
ಪ್ರಸಂಗಿ 1 : 10 (OCVKN)
“ನೋಡು, ಇದು ಹೊಸದು,” ಎಂದು ಯಾವ ವಿಷಯವಾಗಿ ಹೇಳಬಹುದೋ? ಅದು ನಮಗಿಂತ ಮುಂಚೆ ಇದ್ದದ್ದು, ಪುರಾತನ ಕಾಲದಿಂದ ಇದ್ದದ್ದೇ.
ಪ್ರಸಂಗಿ 1 : 11 (OCVKN)
ಹಿಂದಿನ ಕಾಲದ ಜನರ ಜ್ಞಾಪಕವು ಈಗಿನವರಿಗಿಲ್ಲ. ಮುಂದಿನ ಕಾಲದಲ್ಲಿ ಬರುವವರ ಜ್ಞಾಪಕವು ಅವುಗಳ ಮುಂದಿನ ಕಾಲದ ಜನರಿಗೆ ಇರುವುದಿಲ್ಲ.
ಪ್ರಸಂಗಿ 1 : 12 (OCVKN)
ಜ್ಞಾನವು ವ್ಯರ್ಥವಾದದ್ದು ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರ ಮೇಲೆ ಅರಸನಾಗಿದ್ದೆ.
ಪ್ರಸಂಗಿ 1 : 13 (OCVKN)
ಆಕಾಶದ ಕೆಳಗೆ ನಡೆಯುವ ಕೆಲಸಗಳನ್ನೆಲ್ಲಾ ಜ್ಞಾನದಿಂದ ವಿಚಾರಿಸಿ, ವಿಮರ್ಶಿಸುವುದಕ್ಕೆ ನಾನು ನನ್ನ ಮನಸ್ಸು ಮಾಡಿದೆ. ದೇವರು ಮಾನವರ ಮೇಲೆ ಈ ಕಷ್ಟಕರವಾದ ಪ್ರಯಾಸವನ್ನು ಹೊರಿಸಿದ್ದಾರೆ.
ಪ್ರಸಂಗಿ 1 : 14 (OCVKN)
ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ. ಗಾಳಿಯನ್ನು ಹಿಂದಟ್ಟುವಂತೆ ಎಲ್ಲವೂ ವ್ಯರ್ಥ.
ಪ್ರಸಂಗಿ 1 : 15 (OCVKN)
ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ. ಇಲ್ಲದ್ದನ್ನು ಲೆಕ್ಕಿಸುವುದು ಅಸಾಧ್ಯ.
ಪ್ರಸಂಗಿ 1 : 16 (OCVKN)
ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆನು, “ನೋಡು, ಯೆರೂಸಲೇಮಿನಲ್ಲಿ ನನಗಿಂತ ಮೊದಲು ಆಳಿದವರಿಗಿಂತ ನಾನು ಹೆಚ್ಚು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ಹಾಗೂ ತಿಳುವಳಿಕೆಯ ಅನುಭವ ನನಗಿದೆ.”
ಪ್ರಸಂಗಿ 1 : 17 (OCVKN)
ಆಗ ಜ್ಞಾನವನ್ನೂ ಮನಗುಂದುವಿಕೆಯನ್ನೂ ಬುದ್ಧಿಹೀನತೆಯನ್ನೂ ತಿಳಿದುಕೊಳ್ಳುವಂತೆ ನಾನು ಮನಸ್ಸಿಟ್ಟೆನು, ಅದರ ಜೊತೆಗೆ ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ, ಎಂದು ನಾನು ಅರಿತುಕೊಂಡೆನು.
ಪ್ರಸಂಗಿ 1 : 18 (OCVKN)
ಏಕೆಂದರೆ ಬಹು ಜ್ಞಾನವಿದ್ದಲ್ಲಿ ಬಹು ಸಂಕಟ, ಹೆಚ್ಚು ತಿಳುವಳಿಕೆ ಇದ್ದಲ್ಲಿ ಹೆಚ್ಚು ವ್ಯಥೆ ಇದೆ.
❮
❯
1
2
3
4
5
6
7
8
9
10
11
12
13
14
15
16
17
18