ಪ್ರಸಂಗಿ 10 : 1 (OCVKN)
ಸತ್ತ ನೊಣಗಳು ಸುಗಂಧ ತೈಲವನ್ನು ದುರ್ವಾಸನೆಗೆ ಒಳಪಡಿಸುತ್ತದೆ. ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮಾನಗಳನ್ನು ಕೆಡಿಸಿಬಿಡುತ್ತದೆ.
ಪ್ರಸಂಗಿ 10 : 2 (OCVKN)
ಜ್ಞಾನಿಯ ಹೃದಯವು ಬಲಗಡೆ ಸಾಗಿದರೆ, ಮೂರ್ಖನ ಹೃದಯವು ಎಡಗಡೆ ಸಾಗುವುದು.
ಪ್ರಸಂಗಿ 10 : 3 (OCVKN)
ಮೂರ್ಖನು ಮಾರ್ಗದಲ್ಲಿ ನಡೆಯುವಾಗಲೂ, ತಾನು ಅರಿವಿಲ್ಲದ ಮೂರ್ಖನೆಂದು ಪ್ರತಿಯೊಬ್ಬರಿಗೂ ಪ್ರಕಟಿಸುತ್ತಾನೆ.
ಪ್ರಸಂಗಿ 10 : 4 (OCVKN)
ಅಧಿಕಾರಿಯು ನಿನಗೆ ವಿರುದ್ಧವಾಗಿ ಸಿಟ್ಟುಗೊಂಡರೆ, ನಿನ್ನ ಉದ್ಯೋಗವನ್ನು ಬಿಟ್ಟುಬಿಡಬೇಡ. ಏಕೆಂದರೆ ತಾಳ್ಮೆಯು ದೊಡ್ಡ ಅಪರಾಧಗಳನ್ನು ಶಾಂತಪಡಿಸುತ್ತದೆ.
ಪ್ರಸಂಗಿ 10 : 5 (OCVKN)
ಮತ್ತೊಂದು ವ್ಯಸನವನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ. ಅದು ಆಳುವವರಿಂದ ಬರುವ ತಪ್ಪಿನಿಂದಾದದ್ದು.
ಪ್ರಸಂಗಿ 10 : 6 (OCVKN)
ಅದು ಯಾವುದೆಂದರೆ, ಮೂರ್ಖರನ್ನು ಉನ್ನತ ಪದವಿಗೆ ನೇಮಿಸುವುದು. ಘನವಂತರನ್ನು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವಂತೆ ಮಾಡುವುದು.
ಪ್ರಸಂಗಿ 10 : 7 (OCVKN)
ಕುದುರೆಗಳ ಮೇಲೆ ಸವಾರಿ ಮಾಡುವ ಸೇವಕರನ್ನೂ ಅಧಿಕಾರಿಗಳು ಸೇವಕರ ಹಾಗೆ ನಡೆದುಕೊಂಡು ಹೋಗುವುದನ್ನೂ ನಾನು ನೋಡಿದ್ದೇನೆ.
ಪ್ರಸಂಗಿ 10 : 8 (OCVKN)
ಗುಂಡಿಯನ್ನು ಅಗೆಯುವವನೇ ಅದರಲ್ಲಿ ಬೀಳುವನು. ಗೋಡೆಯನ್ನು ಒಡೆಯುವವನನ್ನು ಹಾವು ಕಡಿಯುವುದು.
ಪ್ರಸಂಗಿ 10 : 9 (OCVKN)
ಗಣಿಯಿಂದ ಬಂಡೆಗಳನ್ನು ಸೀಳುವವನು ಗಾಯಗೊಳ್ಳುವನು. ಮರಕಡಿಯುವವನು ಅದರಿಂದಲೇ ಅಪಾಯಕ್ಕೊಳಗಾಗುವನು.
ಪ್ರಸಂಗಿ 10 : 10 (OCVKN)
ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ, ಹೆಚ್ಚು ಬಲವನ್ನು ಪ್ರಯೋಗಿಸಬೇಕಾಗುವುದು, ಆದರೆ ಜ್ಞಾನವೇ ಯಶಸ್ಸನ್ನು ತರುತ್ತದೆ.
ಪ್ರಸಂಗಿ 10 : 11 (OCVKN)
ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಏನು ಪ್ರಯೋಜನ?
ಪ್ರಸಂಗಿ 10 : 12 (OCVKN)
ಜ್ಞಾನಿಯ ಮಾತುಗಳು ಹಿತಕರ. ಆದರೆ ಬುದ್ಧಿಹೀನನ ಮಾತುಗಳು ಅವನಿಗೆ ವಿನಾಶಕರ.
ಪ್ರಸಂಗಿ 10 : 13 (OCVKN)
ಅವನ ಮಾತುಗಳು ಆರಂಭದಲ್ಲಿ ಮೂಢತನವಾಗಿರುವುದು. ಅವನ ಮಾತಿನ ಅಂತ್ಯವು ಹುಚ್ಚುತನವಾಗಿರುವುದು.
ಪ್ರಸಂಗಿ 10 : 14 (OCVKN)
ಮೂಢನು ಮಾತುಗಳನ್ನು ಹೆಚ್ಚಿಸುತ್ತಾನೆ. ಆದರೂ ಅವನು ಭವಿಷ್ಯ ಏನೆಂದು ತಿಳಿಯನು. ಅವನ ತರುವಾಯ ಆಗುವುದನ್ನೂ ಅವನಿಗೆ ತಿಳಿಸುವವರು ಇಲ್ಲ.
ಪ್ರಸಂಗಿ 10 : 15 (OCVKN)
ಮೂಢರ ಕಷ್ಟವು ಅವರನ್ನು ದಣಿಸುತ್ತದೆ. ನಗರಕ್ಕೆ ಹೇಗೆ ಹೋಗಬೇಕೆಂದು ಸಹ ಅವನಿಗೆ ತಿಳಿಯದು.
ಪ್ರಸಂಗಿ 10 : 16 (OCVKN)
ಬಾಲಕನಾಗಿದ್ದವನು ದೇಶಕ್ಕೆ ಅರಸನಾಗಿದ್ದರೆ, ನಾಯಕರೆಲ್ಲರು ಬೆಳಿಗ್ಗೆಯೇ ಔತಣಕ್ಕೆ ಕೂತುಕೊಂಡರೆ ಅಯ್ಯೋ ಕಷ್ಟ!
ಪ್ರಸಂಗಿ 10 : 17 (OCVKN)
ಶ್ರೇಷ್ಠ ಹಿನ್ನೆಲೆಯವನು ದೇಶಕ್ಕೆ ಅರಸನಾದರೆ, ರಾಜಕುಮಾರರು ಕುಡುಕರಾಗುವುದಕ್ಕೆ ಬದಲು, ಸರಿಯಾದ ಸಮಯದಲ್ಲಿ ಶಕ್ತಿಗಾಗಿ ಊಟ ಮಾಡಿದರೆ ಅದು ದೇಶಕ್ಕೆ ಆಶೀರ್ವಾದ.
ಪ್ರಸಂಗಿ 10 : 18 (OCVKN)
ಸೋಮಾರಿತನದಿಂದ ಮನೆ ಕುಸಿಯುತ್ತದೆ. ಜೋಲುಗೈಯಿಂದ ಮನೆ ಸೋರುತ್ತದೆ.
ಪ್ರಸಂಗಿ 10 : 19 (OCVKN)
ವಿನೋದಕ್ಕಾಗಿ ಔತಣ ಮಾಡುತ್ತಾರೆ, ಆನಂದಕ್ಕಾಗಿ ದ್ರಾಕ್ಷಾರಸ ಕುಡಿಯುತ್ತಾರೆ; ಎಲ್ಲವನ್ನೂ ಒದಗಿಸಿಕೊಡುವುದಕ್ಕಾಗಿ ಹಣವು.
ಪ್ರಸಂಗಿ 10 : 20 (OCVKN)
ನಿನ್ನ ಆಲೋಚನೆಯಲ್ಲಿಯೂ ಅರಸನನ್ನು ನಿಂದಿಸಬೇಡ. ನೀನು ಮಲಗುವ ಕೋಣೆಯಲ್ಲಿ ಐಶ್ವರ್ಯವಂತರನ್ನು ಶಪಿಸಬೇಡ. ಏಕೆಂದರೆ ಆಕಾಶದ ಪಕ್ಷಿಗಳು ನಿನ್ನ ಮಾತನ್ನು ತೆಗೆದುಕೊಂಡು ಹೋಗಬಹುದು. ಹಾರುವ ಪಕ್ಷಿ ನಿನ್ನ ಸುದ್ದಿಯನ್ನು ತಿಳಿಸಬಹುದು.

1 2 3 4 5 6 7 8 9 10 11 12 13 14 15 16 17 18 19 20