ಪ್ರಸಂಗಿ 7 : 1 (OCVKN)
ಜ್ಞಾನ ಅಮೂಲ್ಯವಾದ ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ. ಒಬ್ಬನ ಜನ್ಮ ದಿನಕ್ಕಿಂತ ಮರಣದ ದಿನವೇ ಮೇಲು.
ಪ್ರಸಂಗಿ 7 : 2 (OCVKN)
ಔತಣದ ಮನೆಗೆ ಹೋಗುವುದಕ್ಕಿಂತ, ಶೋಕದ ಮನೆಗೆ ಹೋಗುವುದು ಲೇಸು. ಏಕೆಂದರೆ ಎಲ್ಲಾ ಮನುಷ್ಯರ ಅಂತ್ಯವು ಸಾವಾಗಿದೆ. ಇದರಿಂದ ಜೀವಂತರು ಇದನ್ನು ತಮ್ಮ ಹೃದಯದಲ್ಲಿ ಸ್ಮರಿಸಿಕೊಳ್ಳುವರು.
ಪ್ರಸಂಗಿ 7 : 3 (OCVKN)
ನಗೆಗಿಂತ ದುಃಖವು ವಾಸಿ, ಏಕೆಂದರೆ ಮುಖದಲ್ಲಿ ದುಃಖ ಹೃದಯಕ್ಕೆ ಸುಖ.
ಪ್ರಸಂಗಿ 7 : 4 (OCVKN)
ಜ್ಞಾನಿಗಳ ಹೃದಯವು ಶೋಕದ ಮನೆಯಲ್ಲಿರುವುದು, ಆದರೆ ಮೂಢರ ಹೃದಯವು ಉಲ್ಲಾಸದ ಮನೆಯಲ್ಲಿರುವುದು.
ಪ್ರಸಂಗಿ 7 : 5 (OCVKN)
ಮೂಢರ ಹಾಡನ್ನು ಕೇಳುವುದಕ್ಕಿಂತ, ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.
ಪ್ರಸಂಗಿ 7 : 6 (OCVKN)
ಗಡಿಗೆಯ ಕೆಳಗೆ ಉರಿಯುವ ಮುಳ್ಳುಕಡ್ಡಿ ಚಟಚಟನೆಯ ಶಬ್ದ ಹೇಗೋ, ಮೂಢನ ನಗುವು ಹಾಗೆಯೇ ಇರುವುದು. ಇದು ಕೂಡ ವ್ಯರ್ಥವೇ.
ಪ್ರಸಂಗಿ 7 : 7 (OCVKN)
ದಬ್ಬಾಳಿಕೆ ಜ್ಞಾನಿಯನ್ನು ಮೂರ್ಖನನ್ನಾಗಿ ಮಾಡುತ್ತದೆ. ಲಂಚವು ಹೃದಯವನ್ನು ಕೆಡಿಸುತ್ತದೆ.
ಪ್ರಸಂಗಿ 7 : 8 (OCVKN)
ಪ್ರಾರಂಭಕ್ಕಿಂತ ಅದರ ಅಂತ್ಯವೇ ಲೇಸು. ಗರ್ವಿಷ್ಠನಿಗಿಂತ ತಾಳ್ಮೆಯುಳ್ಳವನೇ ಉತ್ತಮ.
ಪ್ರಸಂಗಿ 7 : 9 (OCVKN)
ನೀನು ಕೋಪಿಸಿಕೊಳ್ಳುವುದಕ್ಕೆ ಆತುರಪಡದಿರು, ಏಕೆಂದರೆ ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
ಪ್ರಸಂಗಿ 7 : 10 (OCVKN)
“ಹಿಂದಿನ ಕಾಲ ಈಗಿನ ಕಾಲಕ್ಕಿಂತ ಮೇಲಾಗಿರುವುದಕ್ಕೆ ಕಾರಣ ಏನು?” ಎಂದು ನೀನು ಕೇಳಬೇಡ. ಇದು ಬುದ್ಧಿವಂತರು ಕೇಳುವ ಪ್ರಶ್ನೆಯಲ್ಲ.
ಪ್ರಸಂಗಿ 7 : 11 (OCVKN)
ಜ್ಞಾನವು ಆಸ್ತಿಯ ಹಾಗೆ ಒಳ್ಳೆಯದು; ಅದರಿಂದ ಜೀವಂತರೆಲ್ಲರಿಗೂ ಲಾಭಕರ.
ಪ್ರಸಂಗಿ 7 : 12 (OCVKN)
ಧನವು ಹೇಗೋ ಹಾಗೆ ಜ್ಞಾನವು ಆಶ್ರಯ. ಆದರೆ ಜ್ಞಾನದ ಶ್ರೇಷ್ಠತೆ ಏನೆಂದರೆ, ಅದು ಜ್ಞಾನಿಗೆ ಜೀವದಾಯಕ.
ಪ್ರಸಂಗಿ 7 : 13 (OCVKN)
ದೇವರ ಸೃಷ್ಟಿಕಾರ್ಯವನ್ನು ಯೋಚಿಸು: ದೇವರು ಮಾಡಿದ್ದನ್ನು, ಪುನಃ ಸರಿಪಡಿಸಲು ಯಾರಿಗೆ ಸಾಧ್ಯ?
ಪ್ರಸಂಗಿ 7 : 14 (OCVKN)
ಸುಖ ದಿನದಲ್ಲಿ ಸಂತೋಷವಾಗಿರು. ಆದರೆ ದುಃಖ ದಿನದಲ್ಲಿ ಇದನ್ನು ಯೋಚಿಸು: ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ. ಹೀಗೆ ಮನುಷ್ಯನು ತನ್ನ ಆಯುಸ್ಸನ್ನು ಕಳೆದ ಮೇಲೆ ಭವಿಷ್ಯವನ್ನು ಗ್ರಹಿಸಲಾರನು.
ಪ್ರಸಂಗಿ 7 : 15 (OCVKN)
ನನ್ನ ವ್ಯರ್ಥದ ದಿನಗಳಲ್ಲಿ ಇವೆರಡು ವಿಷಯಗಳನ್ನು ನೋಡಿದ್ದೇನೆ: ನೀತಿವಂತನು ತನ್ನ ನೀತಿಯಲ್ಲಿ ಗತಿಸಿಹೋಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ, ಇಡೀ ಜೀವಮಾನವನ್ನು ಕಳೆಯುತ್ತಾನೆ.
ಪ್ರಸಂಗಿ 7 : 16 (OCVKN)
ನೀನು ಅತಿಯಾಗಿ ನೀತಿವಂತನಾಗಿರಬೇಡ. ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿಯೂ ಮಾಡಿಕೊಳ್ಳಬೇಡ. ನಿನ್ನನ್ನು ನೀನೇ ಏಕೆ ನಾಶಪಡಿಸಿಕೊಳ್ಳುವೆ?
ಪ್ರಸಂಗಿ 7 : 17 (OCVKN)
ನೀನು ದುಷ್ಟತನದಲ್ಲಿ ಸಾಗಬೇಡ, ಮೂರ್ಖತನದಲ್ಲಿಯೂ ಮುಂದುವರಿಯಬೇಡ. ನಿನ್ನ ಸಮಯಕ್ಕಿಂತ ಮೊದಲು ನೀನು ಏಕೆ ಸಾಯುವೆ?
ಪ್ರಸಂಗಿ 7 : 18 (OCVKN)
ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು. ಹೌದು, ಇವುಗಳನ್ನು ಮರೆಯಬೇಡ. ಏಕೆಂದರೆ ದೇವರಿಗೆ ಭಯಪಡುವವನು ಇವೆಲ್ಲವುಗಳಿಂದ ಪಾರಾಗುವನು.
ಪ್ರಸಂಗಿ 7 : 19 (OCVKN)
ಪಟ್ಟಣದ ಹತ್ತು ಮಂದಿ ಅಧಿಕಾರಿಗಳ ಸ್ಥಿರತೆಗಿಂತ, ಜ್ಞಾನವು ಜ್ಞಾನಿಯನ್ನು ಹೆಚ್ಚಾಗಿ ಸ್ಥಿರಪಡಿಸುತ್ತದೆ.
ಪ್ರಸಂಗಿ 7 : 20 (OCVKN)
ಪಾಪಮಾಡದೆ ಒಳ್ಳೆಯದನ್ನೇ ನಡೆಸುವ ನೀತಿವಂತನು, ಭೂಮಿಯ ಮೇಲೆ ಒಬ್ಬನೂ ಇಲ್ಲ.
ಪ್ರಸಂಗಿ 7 : 21 (OCVKN)
ಜನರು ಆಡಿದ ಎಲ್ಲಾ ಮಾತುಗಳನ್ನು ನೀನು ಲಕ್ಷಿಸಬೇಡ, ನಿನ್ನ ಕೆಲಸದವರೂ ನಿನ್ನನ್ನು ಶಪಿಸಬಹುದು.
ಪ್ರಸಂಗಿ 7 : 22 (OCVKN)
ನೀನು ಸಹ ಅನೇಕ ವೇಳೆ ಇತರರನ್ನು ಶಪಿಸಿದ್ದೀ, ಇದು ನಿನ್ನ ಹೃದಯಕ್ಕೆ ತಿಳಿದಿದೆ.
ಪ್ರಸಂಗಿ 7 : 23 (OCVKN)
ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ, “ನಾನು ಜ್ಞಾನಿಯಾಗಿರಲು ತೀರ್ಮಾನಿಸುತ್ತೇನೆ,” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು.
ಪ್ರಸಂಗಿ 7 : 24 (OCVKN)
ದೂರದಲ್ಲಿರುವುದನ್ನೂ, ಅಗಾಧದಲ್ಲಿರುವುದನ್ನೂ ಯಾರು ಕಂಡುಕೊಂಡಾರು?
ಪ್ರಸಂಗಿ 7 : 25 (OCVKN)
ಜ್ಞಾನದ ಮೂಲ ತತ್ವವನ್ನೂ, ದುಷ್ಟತನದ ಮೂಢತನವನ್ನೂ, ಮೂಢತ್ವದ ಹುಚ್ಚುತನವನ್ನೂ ಪರೀಕ್ಷಿಸಿ ತಿಳಿದುಕೊಳ್ಳುವಂತೆ ಮನಸ್ಸುಮಾಡಿದೆನು.
ಪ್ರಸಂಗಿ 7 : 26 (OCVKN)
ಕೆಟ್ಟ ಹೆಂಗಸಿನ ಹೃದಯವು ಬೋನೂ ಬಲೆಯೂ ಆಗಿರುತ್ತದೆ. ಅವಳ ಕೈ ಸಂಕೋಲೆ ಆಗಿರುತ್ತದೆ. ಇದು ಮರಣಕ್ಕಿಂತಲೂ ಕಠೋರವಾದದ್ದು ಎಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸುವವನು, ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.
ಪ್ರಸಂಗಿ 7 : 27 (OCVKN)
“ನೋಡು, ನಾನಿದನ್ನು ಹುಡುಕಿ ಕಂಡುಕೊಂಡಿದ್ದೇನೆ,” ಎಂದು ಪ್ರಸಂಗಿಯು ಹೇಳುತ್ತಿದ್ದಾನೆ: ನಾನು ಒಂದರ ನಂತರ ಮತ್ತೊಂದನ್ನು ಕೂಡಿಸಿ, ಸಂಶೋಧನೆಗಳನ್ನು ನಡೆಸಿದೆ;
ಪ್ರಸಂಗಿ 7 : 28 (OCVKN)
ನಾನು ಹುಡುಕಿ ನೋಡಿದರೂ ನನಗೆ ಇದುವರೆಗೆ ಉತ್ತರ ಸಿಕ್ಕಲಿಲ್ಲ. ನಾನು ಸಾವಿರ ಪುರುಷರಲ್ಲಿ ಒಬ್ಬ ಸತ್ಯವಂತನನ್ನು ಕಂಡೆನು. ಆದರೆ ಸಾವಿರ ಸ್ತ್ರೀಯರಲ್ಲಿ ಒಬ್ಬ ಸತ್ಯವಂತಳನ್ನು ಕಂಡುಕೊಳ್ಳಲಿಲ್ಲ.
ಪ್ರಸಂಗಿ 7 : 29 (OCVKN)
ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ: ದೇವರು ಮನುಷ್ಯರನ್ನು ಸತ್ಯವಂತರನ್ನಾಗಿ ಸೃಷ್ಟಿಸಿದರು. ಮನುಷ್ಯರಾದರೋ ಅನೇಕ ಸ್ವಾರ್ಥ ಯೋಜನೆಗಳನ್ನು ಮಾಡಿಕೊಂಡಿದ್ದಾರೆ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29