ಎಫೆಸದವರಿಗೆ 1 : 1 (OCVKN)
ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ಎಫೆಸದಲ್ಲಿರುವ ಭಕ್ತರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ ಬರೆಯುತ್ತಿರುವುದು:
ಎಫೆಸದವರಿಗೆ 1 : 2 (OCVKN)
ನಮ್ಮ ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ಎಫೆಸದವರಿಗೆ 1 : 3 (OCVKN)
ಕ್ರಿಸ್ತನಿಂದ ಆತ್ಮಿಕ ಆಶೀರ್ವಾದಗಳು ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.
ಎಫೆಸದವರಿಗೆ 1 : 4 (OCVKN)
ನಾವು ಪ್ರೀತಿಯಲ್ಲಿದ್ದು ಅವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಅವರು ಲೋಕದ ಅಸ್ತಿವಾರಕ್ಕೆ ಮುಂಚೆ ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡರು.
ಎಫೆಸದವರಿಗೆ 1 : 5 (OCVKN)
ದೇವರು ತಮ್ಮ ಚಿತ್ತದ ಸಂತೋಷಕ್ಕನುಸಾರವಾಗಿ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತಮಗೋಸ್ಕರ ತಮ್ಮ ಪುತ್ರರಾಗಿ ಸ್ವೀಕಾರ ಮಾಡುವಂತೆ ಮೊದಲೇ ನೇಮಿಸಿದರು.
ಎಫೆಸದವರಿಗೆ 1 : 6 (OCVKN)
ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.
ಎಫೆಸದವರಿಗೆ 1 : 7 (OCVKN)
ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.
ಎಫೆಸದವರಿಗೆ 1 : 8 (OCVKN)
ದೇವರು ಆ ಕೃಪೆಯನ್ನು ನಮ್ಮಲ್ಲಿ ಸಮೃದ್ಧಿಯಾಗಿ ಸುರಿಸಿದ್ದಾರೆ. ಎಲ್ಲಾ ಜ್ಞಾನ ವಿವೇಕಗಳೊಂದಿಗೆ
ಎಫೆಸದವರಿಗೆ 1 : 9 (OCVKN)
ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು,
ಎಫೆಸದವರಿಗೆ 1 : 10 (OCVKN)
ಆ ರಹಸ್ಯವೋ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕಾಲವು ಪರಿಪೂರ್ಣಗೊಂಡಾಗ ಕ್ರಿಸ್ತನಲ್ಲಿ ಒಂದುಗೂಡಿಸುವುದಾಗಿದೆ.
ಎಫೆಸದವರಿಗೆ 1 : 11 (OCVKN)
ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.
ಎಫೆಸದವರಿಗೆ 1 : 12 (OCVKN)
ಇದರಿಂದ ಕ್ರಿಸ್ತನಲ್ಲಿ ಮೊದಲು ನಿರೀಕ್ಷೆಯುಳ್ಳವರಾದ ನಾವು ಅವರ ಮಹಿಮೆಯ ಸ್ತುತಿಯಾಗಿರುವಂತೆ ನೇಮಿಸಿದರು.
ಎಫೆಸದವರಿಗೆ 1 : 13 (OCVKN)
ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ.
ಎಫೆಸದವರಿಗೆ 1 : 14 (OCVKN)
ದೇವರಿಗೆ ಸೇರಿದವರಾದ ನಾವು ವಿಮೋಚನೆಯಾಗುವ ತನಕ ನಮ್ಮ ಸ್ವರ್ಗೀಯ ವಾರಸುತನವನ್ನು ಹೊಂದುವೆವು ಎಂಬುವುದಕ್ಕೆ ಈ ಪವಿತ್ರಾತ್ಮ ದೇವರೇ ನಮಗೆ ಹೊಣೆಯಾಗಿದ್ದಾರೆ. ದೇವರ ಮಹಿಮೆಯ ನಿಮಿತ್ಯವಾಗಿ ನಾವು ಅವರನ್ನು ಸ್ತುತಿಸೋಣ.
ಎಫೆಸದವರಿಗೆ 1 : 15 (OCVKN)
ಕೃತಜ್ಞತೆ ಮತ್ತು ಪ್ರಾರ್ಥನೆ ಈ ಕಾರಣದಿಂದ ನಾನು ಸಹ ಕರ್ತ ಯೇಸುವಿನಲ್ಲಿರುವ ನಿಮ್ಮ ನಂಬಿಕೆ ಹಾಗೂ ಪರಿಶುದ್ಧರೆಲ್ಲರಿಗಾಗಿರುವ ಪ್ರೀತಿಯನ್ನು ಕುರಿತು ಕೇಳಿ,
ಎಫೆಸದವರಿಗೆ 1 : 16 (OCVKN)
ನನ್ನ ಪ್ರಾರ್ಥನೆಗಳಲ್ಲಿ ನಿಮಗಾಗಿ ವಿಜ್ಞಾಪಿಸಿ, ನಿಮ್ಮ ನಿಮಿತ್ತವಾಗಿ ಎಡಬಿಡದೆ ಸ್ತೋತ್ರ ಮಾಡುತ್ತೇನೆ.
ಎಫೆಸದವರಿಗೆ 1 : 17 (OCVKN)
ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ.
ಎಫೆಸದವರಿಗೆ 1 : 18 (OCVKN)
ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.
ಎಫೆಸದವರಿಗೆ 1 : 19 (OCVKN)
ಮಾತ್ರವಲ್ಲದೆ ನಂಬುವವರಾದ ನಮಗಾಗಿರುವ ಹೋಲಿಸಲಾಗದ ದೇವರ ಮಹಾಶಕ್ತಿಯನ್ನೂ ನೀವು ತಿಳಿಯುವಂತೆ ಪ್ರಾರ್ಥನೆ ಮಾಡುವವನಾಗಿದ್ದೇನೆ.
ಎಫೆಸದವರಿಗೆ 1 : 20 (OCVKN)
ಈ ಮಹಾಶಕ್ತಿಯನ್ನು ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ,
ಎಫೆಸದವರಿಗೆ 1 : 21 (OCVKN)
ಸಕಲ ರಾಜತ್ವ, ಅಧಿಕಾರ, ಶಕ್ತಿ, ಪ್ರಭುತ್ವಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿಯೂ ಸಹ, ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೋಕದಲ್ಲಿ ಕ್ರಿಸ್ತರನ್ನು ತಮ್ಮ ಬಲಗಡೆಯಲ್ಲಿ ಕೂರಿಸಿಕೊಂಡರು.
ಎಫೆಸದವರಿಗೆ 1 : 22 (OCVKN)
ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಅಧೀನಮಾಡಿ, ಅವರನ್ನು ಎಲ್ಲದರ ಮೇಲೆ ಶಿರಸ್ಸಾಗಿರಲು ಸಭೆಗೋಸ್ಕರ ನೇಮಿಸಿದ್ದಾರೆ.
ಎಫೆಸದವರಿಗೆ 1 : 23 (OCVKN)
ಎಲ್ಲವನ್ನು ಎಲ್ಲಾ ವಿಧದಲ್ಲಿಯೂ ತುಂಬಿಸುವ ದೇವರಿಂದ ಕ್ರಿಸ್ತನ ದೇಹವಾಗಿರುವ ಸಭೆಯು ಪರಿಪೂರ್ಣ ಉಳ್ಳದ್ದಾಗಿದೆ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23