ಎಫೆಸದವರಿಗೆ 4 : 1 (OCVKN)
ಕ್ರಿಸ್ತನ ದೇಹದಲ್ಲಿ ಐಕ್ಯತೆ ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.
ಎಫೆಸದವರಿಗೆ 4 : 2 (OCVKN)
ನೀವು ಸಂಪೂರ್ಣ ದೀನತ್ವದಿಂದಲೂ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ.
ಎಫೆಸದವರಿಗೆ 4 : 3 (OCVKN)
ಸಮಾಧಾನದ ಬಂಧನದಲ್ಲಿದ್ದವರಾಗಿ, ಪವಿತ್ರಾತ್ಮ ದೇವರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ.
ಎಫೆಸದವರಿಗೆ 4 : 4 (OCVKN)
ಒಂದೇ ನಿರೀಕ್ಷೆಗೆ ನೀವು ಕರೆಹೊಂದಿದಂತೆಯೇ ದೇಹವು ಒಂದೇ, ಪವಿತ್ರಾತ್ಮರು ಒಬ್ಬರೇ,
ಎಫೆಸದವರಿಗೆ 4 : 5 (OCVKN)
ಕರ್ತ ಆಗಿರುವವರು ಒಬ್ಬರೇ, ಒಂದೇ ವಿಶ್ವಾಸ, ದೀಕ್ಷಾಸ್ನಾನವೂ ಒಂದೇ,
ಎಫೆಸದವರಿಗೆ 4 : 6 (OCVKN)
ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬರೇ; ಅವರೇ ಎಲ್ಲರ ಮೇಲಿರುವರೂ ಎಲ್ಲರ ಮೂಲಕ ಕಾರ್ಯನಡಿಸುವವರೂ ಎಲ್ಲರಲ್ಲಿ ವಾಸಿಸುವವರೂ ಆಗಿದ್ದಾರೆ.
ಎಫೆಸದವರಿಗೆ 4 : 7 (OCVKN)
ನಮ್ಮಲ್ಲಿ ಪ್ರತಿಯೊಬ್ಬನಿಗೂ ಕ್ರಿಸ್ತ ಯೇಸುವು ನೀಡಿದ ಅಳತೆಗೆ ಅನುಸಾರವಾಗಿ ವರವನ್ನು ಕೊಡಲಾಗಿದೆ.
ಎಫೆಸದವರಿಗೆ 4 : 8 (OCVKN)
ಆದ್ದರಿಂದ ಪವಿತ್ರ ವೇದದಲ್ಲಿ ಹೀಗೆ ಹೇಳಲಾಗಿದೆ: “ಅವರು ಉನ್ನತಸ್ಥಾನಕ್ಕೆ ಏರಿಹೋದಾಗ, ಸೆರೆಯಾಳಾಗಿದ್ದ ಅನೇಕರನ್ನು ಕೊಂಡೊಯ್ದು ತಮ್ಮ ಜನರಿಗೆ ವರದಾನಗಳನ್ನು ಕೊಟ್ಟರು!”* ಕೀರ್ತನೆ 68:18
ಎಫೆಸದವರಿಗೆ 4 : 9 (OCVKN)
9 “ಅವರು ಏರಿ ಹೋದರೆಂದು,” ಹೇಳಿದ್ದರ ಅರ್ಥವೇನು? ಭೂಮಿಯ ಭೂಗರ್ಭಕ್ಕೂ ಇಳಿದಿದ್ದರು ಎಂದೂ ಹೇಳಿದ ಹಾಗಾಯಿತಲ್ಲವೇ?
ಎಫೆಸದವರಿಗೆ 4 : 10 (OCVKN)
ಇಳಿದು ಬಂದ ಅವರೇ ಮೇಲಣ ಎಲ್ಲಾ ಆಕಾಶಗಳಿಗಿಂತ ಉನ್ನತವಾಗಿ ಏರಿಹೋಗಿ, ಇಡೀ ವಿಶ್ವವನ್ನೇ ತುಂಬಿಕೊಳ್ಳುವುದಕ್ಕಾಗಿ ಮೇಲೆ ಏರಿ ಹೋಗಿದ್ದಾರೆ.
ಎಫೆಸದವರಿಗೆ 4 : 11 (OCVKN)
ಕ್ರಿಸ್ತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಕೆಲವರನ್ನು ಉಪದೇಶಿಗಳನ್ನಾಗಿಯೂ ಸಭೆಗೆ ಕೊಟ್ಟರು.
ಎಫೆಸದವರಿಗೆ 4 : 12 (OCVKN)
ಕ್ರಿಸ್ತನ ದೇಹವನ್ನು ಕಟ್ಟುವುದಕ್ಕಾಗಿಯೂ ದೇವಜನರನ್ನು ಸೇವಾ ಕೆಲಸಕ್ಕಾಗಿ ಪರಿಣಿತರನ್ನಾಗಿ ಮಾಡುವುದಕ್ಕಾಗಿಯೂ ಕ್ರಿಸ್ತನು ಅವರನ್ನು ಕೊಟ್ಟ ಉದ್ದೇಶವಾಗಿತ್ತು.
ಎಫೆಸದವರಿಗೆ 4 : 13 (OCVKN)
ನಾವೆಲ್ಲರೂ ಕ್ರಿಸ್ತನ ಪರಿಪೂರ್ಣತೆಯ ಬೆಳವಣಿಗೆಯಲ್ಲಿ ವಿಶ್ವಾಸದಲ್ಲಿಯೂ ದೇವಪುತ್ರನ ತಿಳುವಳಿಕೆಯಲ್ಲಿ ಒಂದು ಮನಸ್ಸುಳ್ಳವರಾಗಿ ಪರಿಪಕ್ವತೆಯನ್ನು ಹೊಂದುವುದೇ ಆ ಉದ್ದೇಶವಾಗಿತ್ತು.
ಎಫೆಸದವರಿಗೆ 4 : 14 (OCVKN)
ಆಗ, ನಾವು ಚಿಕ್ಕಮಕ್ಕಳಂತೆ ಇರುವುದಿಲ್ಲ: ಮನುಷ್ಯರ ವಿವಿಧ ಬೋಧನೆಗಳಿಂದ ಗಾಳಿಯಿಂದ ತೂರಾಡಿಕೊಳ್ಳುವಂತಾಗುವುದಿಲ್ಲ. ಮನುಷ್ಯರ ಕುಯುಕ್ತಿಗೆ, ತಂತ್ರಕ್ಕೆ, ಒಳಸಂಚಿಗೆ ಒಳಗಾಗುವುದಿಲ್ಲ. ಅವರ ಪ್ರತಿಯೊಂದು ಬೋಧನೆಯ ಗಾಳಿಯಿಂದಲೂ ತೂರಾಡಿಕೊಂಡು ಅತ್ತಿತ್ತ ಅಲೆದಾಡುವ ಚಿಕ್ಕಮಕ್ಕಳಂತೆ ಇರಬಾರದು.
ಎಫೆಸದವರಿಗೆ 4 : 15 (OCVKN)
ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ, ನಾವು ಎಲ್ಲಾ ವಿಷಯಗಳಲ್ಲಿಯೂ ಕ್ರಿಸ್ತನ ದೇಹದ ಪರಿಪಕ್ವತೆಯೆಡೆಗೆ ಅವರ ಶಿರಸತ್ವದಲ್ಲಿ ಬೆಳೆಯೋಣ.
ಎಫೆಸದವರಿಗೆ 4 : 16 (OCVKN)
ಹೀಗೆ ದೇಹವೆಲ್ಲಾ ಕ್ರಿಸ್ತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಣೆಹೊಂದಿ, ಪ್ರತಿ ಅಂಗವೂ ತನ್ನ ಕೆಲಸವನ್ನು ಸೂಕ್ತವಾಗಿ ಮಾಡುವಂತೆ ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿ ಹೊಂದುತ್ತದೆ.
ಎಫೆಸದವರಿಗೆ 4 : 17 (OCVKN)
ಬೆಳಕಿನ ಮಕ್ಕಳಾಗಿ ಜೀವಿಸುವುದು ಆದ್ದರಿಂದ, ಯೆಹೂದ್ಯರಲ್ಲದವರು ವ್ಯರ್ಥ ಆಲೋಚನೆಯುಳ್ಳವರಾಗಿ ಬಾಳುವ ರೀತಿಯಲ್ಲಿ ನೀವು ಇನ್ನು ಮೇಲೆ ಬಾಳದಂತೆ, ಕರ್ತನಲ್ಲಿ ನಾನು ನಿಮಗೆ ಸಾಕ್ಷಿಕೊಟ್ಟು ಹೇಳುತ್ತೇನೆ.
ಎಫೆಸದವರಿಗೆ 4 : 18 (OCVKN)
ಅವರು ತಮ್ಮ ಹೃದಯ ಕಠಿಣತ್ವದ ಅಜ್ಞಾನದಿಂದ ತಮ್ಮ ಕತ್ತಲು ಕವಿದ ತಿಳುವಳಿಕೆಯಲ್ಲಿ, ದೇವರ ಜೀವದಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರಾಗಿದ್ದಾರೆ.
ಎಫೆಸದವರಿಗೆ 4 : 19 (OCVKN)
ಅವರು ಸರ್ವ ಸೂಕ್ಷ್ಮತೆಯನ್ನು ಕಳೆದುಕೊಂಡು, ತಮ್ಮನ್ನು ಕಾಮುಕತನಕ್ಕೆ ಒಪ್ಪಿಸಿಕೊಟ್ಟು, ಎಲ್ಲಾ ಅಶುದ್ಧತ್ವವನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ.
ಎಫೆಸದವರಿಗೆ 4 : 20 (OCVKN)
ನೀವಾದರೋ ಕ್ರಿಸ್ತನನ್ನು ಆ ರೀತಿಯಾಗಿ ಅರಿತುಕೊಳ್ಳಲಿಲ್ಲ.
ಎಫೆಸದವರಿಗೆ 4 : 21 (OCVKN)
ನೀವು ಕ್ರಿಸ್ತನ ಬಗ್ಗೆ ಕೇಳಿ ಬೋಧನೆಯನ್ನು ಪಡೆದಾಗ, ಅದು ಯೇಸುವಿನಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತು.
ಎಫೆಸದವರಿಗೆ 4 : 22 (OCVKN)
ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು.
ಎಫೆಸದವರಿಗೆ 4 : 23 (OCVKN)
ಹೀಗೆ ನೀವು ನಿಮ್ಮ ಮನೋಭಾವನೆಯನ್ನು ನವೀಕರಿಸಿಕೊಂಡು;
ಎಫೆಸದವರಿಗೆ 4 : 24 (OCVKN)
ಸತ್ಯವಾದ ನೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ದೇವರ ಹೋಲಿಕೆಯ ಪ್ರಕಾರವಾಗಿರಲು ಸೃಷ್ಟಿಸಲಾದ ಹೊಸ ಸ್ವಭಾವವನ್ನು ಧರಿಸಿಕೊಳ್ಳಿರಿ.
ಎಫೆಸದವರಿಗೆ 4 : 25 (OCVKN)
ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.
ಎಫೆಸದವರಿಗೆ 4 : 26 (OCVKN)
“ಕೋಪ ಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಕೀರ್ತನೆ 4:4 ಸೂರ್ಯನು ಮುಳುಗುವುದಕ್ಕಿಂತ ಮುಂಚೆ ನಿಮ್ಮ ಕೋಪವು ಇಳಿಯಲಿ.
ಎಫೆಸದವರಿಗೆ 4 : 27 (OCVKN)
ಹೀಗೆ ನೀವು ಸೈತಾನನಿಗೆ ಅವಕಾಶಕೊಡಬೇಡಿರಿ.
ಎಫೆಸದವರಿಗೆ 4 : 28 (OCVKN)
ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.
ಎಫೆಸದವರಿಗೆ 4 : 29 (OCVKN)
ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.
ಎಫೆಸದವರಿಗೆ 4 : 30 (OCVKN)
ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
ಎಫೆಸದವರಿಗೆ 4 : 31 (OCVKN)
ಎಲ್ಲಾ ಕಹಿತನ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಎಲ್ಲಾ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.
ಎಫೆಸದವರಿಗೆ 4 : 32 (OCVKN)
ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32