ಎಫೆಸದವರಿಗೆ 5 : 1 (OCVKN)
ಆದ್ದರಿಂದ ನೀವು ದೇವರ ಪ್ರಿಯರಾದ ಮಕ್ಕಳಂತೆ ದೇವರ ಮಾದರಿಯನ್ನು ಅನುಸರಿಸಿ ಬಾಳಿರಿ.
ಎಫೆಸದವರಿಗೆ 5 : 2 (OCVKN)
ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.
ಎಫೆಸದವರಿಗೆ 5 : 3 (OCVKN)
ಆದರೆ ನಿಮ್ಮೊಳಗೆ ಅನೈತಿಕತೆಯಾಗಲಿ, ಯಾವ ಅಶುದ್ಧತ್ವವಾಗಲಿ, ಇಲ್ಲವೆ ಲೋಭವಾಗಲಿ ಇರಲೇಬಾರದು. ಇವು ದೇವರ ಪರಿಶುದ್ಧರಿಗೆ ಯೋಗ್ಯವಲ್ಲ.
ಎಫೆಸದವರಿಗೆ 5 : 4 (OCVKN)
ಅಶ್ಲೀಲತೆ, ಬುದ್ಧಿಹೀನ ಮಾತು, ಅಸಭ್ಯ ಹರಟೆ ಇವು ಬೇಡ, ಇವು ಅಯುಕ್ತವಾಗಿವೆ, ಪ್ರತಿಯಾಗಿ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ.
ಎಫೆಸದವರಿಗೆ 5 : 5 (OCVKN)
ಏಕೆಂದರೆ ಯಾವ ಜಾರನಾಗಲಿ, ಅಶುದ್ಧನಾಗಲಿ, ದೇವರಲ್ಲದವುಗಳನ್ನು ಪೂಜಿಸುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಹಕ್ಕುಬಾಧ್ಯತೆಯನ್ನು ಹೊಂದುವುದಿಲ್ಲವೆಂಬುದು ನಿಮಗೆ ಮನದಟ್ಟಾಗಿರಲಿ.
ಎಫೆಸದವರಿಗೆ 5 : 6 (OCVKN)
ಪ್ರಯೋಜನವಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ವಂಚಿಸದಿರಲಿ. ಏಕೆಂದರೆ ಇಂಥವುಗಳ ದೆಸೆಯಿಂದ ದೇವರ ಕೋಪಾಗ್ನಿಯು ಅವರಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
ಎಫೆಸದವರಿಗೆ 5 : 7 (OCVKN)
ಆದ್ದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ.
ಎಫೆಸದವರಿಗೆ 5 : 8 (OCVKN)
ನೀವು ಹಿಂದೊಮ್ಮೆ ಕತ್ತಲೆಯಾಗಿದ್ದಿರಿ. ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿದ್ದೀರಿ. ಬೆಳಕಿನ ಮಕ್ಕಳಾಗಿ ಬಾಳಿರಿ.
ಎಫೆಸದವರಿಗೆ 5 : 9 (OCVKN)
ಬೆಳಕಿನ ಫಲವು ಎಲ್ಲಾ ಒಳ್ಳೆಯತನದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಇರುತ್ತದೆ.
ಎಫೆಸದವರಿಗೆ 5 : 10 (OCVKN)
ಕರ್ತನಿಗೆ ಮೆಚ್ಚಿಗೆಯಾದದ್ದು ಏನೆಂಬುದನ್ನು ಪರಿಶೋಧಿಸಿರಿ.
ಎಫೆಸದವರಿಗೆ 5 : 11 (OCVKN)
ನಿಷ್ಪ್ರಯೋಜಕವಾದ ಕತ್ತಲೆಯ ಕಾರ್ಯಗಳೊಂದಿಗೆ ಪಾಲುಗಾರರಾಗಿರದೆ ಅವುಗಳನ್ನು ಬೆಳಕಿಗೆ ತನ್ನಿರಿ.
ಎಫೆಸದವರಿಗೆ 5 : 12 (OCVKN)
ಆ ಅವಿಧೇಯರು ಗುಟ್ಟಾಗಿ ಮಾಡುವ ಕೃತ್ಯಗಳನ್ನು ಹೇಳುವುದಕ್ಕೂ ಅವಮಾನಕರವಾಗಿವೆ.
ಎಫೆಸದವರಿಗೆ 5 : 13 (OCVKN)
ಆದರೆ, ಬಹಿರಂಗವಾದವುಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ. ಎಲ್ಲವನ್ನೂ ಪ್ರಕಾಶಪಡಿಸುವಂಥದ್ದು ಬೆಳಕೇ.
ಎಫೆಸದವರಿಗೆ 5 : 14 (OCVKN)
ಆದ್ದರಿಂದ ಹೀಗೆ ಹೇಳಲಾಗಿದೆ: “ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”
ಎಫೆಸದವರಿಗೆ 5 : 15 (OCVKN)
ಆದಕಾರಣ ನೀವು ಹೇಗೆ ಜೀವಿಸಬೇಕೆಂದು ಜಾಗರೂಕರಾಗಿರಿ. ಅಜ್ಞಾನಿಗಳಂತಿರದೆ, ಜಾಣರಾಗಿ ಜೀವಿಸಿರಿ.
ಎಫೆಸದವರಿಗೆ 5 : 16 (OCVKN)
ಈ ದಿನಗಳು ಕೆಟ್ಟವುಗಳಾಗಿರುವುದರಿಂದ, ಸರ್ವ ಸದಾವಕಾಶಗಳನ್ನೂ ಸದ್ವಿನಿಯೋಗಿಸಿಕೊಳ್ಳಿರಿ.
ಎಫೆಸದವರಿಗೆ 5 : 17 (OCVKN)
ಆದಕಾರಣ ಬುದ್ಧಿಹೀನರಾಗಿರದೆ ಕರ್ತನ ಚಿತ್ತವೇನೆಂಬುದನ್ನು ತಿಳಿದವರಾಗಿರಿ.
ಎಫೆಸದವರಿಗೆ 5 : 18 (OCVKN)
ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,* ಅಥವಾ ನಿಯಂತ್ರಣಕ್ಕೆ ಒಳಗಾಗಿರಿ
ಎಫೆಸದವರಿಗೆ 5 : 19 (OCVKN)
ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮನಿಂದಾದ ಹಾಡುಗಳಿಂದಲೂ ಪರಸ್ಪರ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಾಂತರಾಳದಿಂದ ಕರ್ತನಿಗೆ ಹಾಡಿ ಹರಸಿರಿ.
ಎಫೆಸದವರಿಗೆ 5 : 20 (OCVKN)
ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ.
ಎಫೆಸದವರಿಗೆ 5 : 21 (OCVKN)
ವಿಶ್ವಾಸಿಗಳ ಕುಟುಂಬಕ್ಕೆ ಬುದ್ಧಿವಾದಗಳು
ಎಫೆಸದವರಿಗೆ 5 : 22 (OCVKN)
ಇದಲ್ಲದೆ ಕ್ರಿಸ್ತನ ಭಯಭಕ್ತಿಯಲ್ಲಿ ಒಬ್ಬರಿಗೊಬ್ಬರು ಅಧೀನರಾಗಿ ನಡೆದುಕೊಳ್ಳಿರಿ. ಹೆಂಡತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
ಎಫೆಸದವರಿಗೆ 5 : 23 (OCVKN)
ಏಕೆಂದರೆ, ಕ್ರಿಸ್ತ ಯೇಸು ಸಭೆಗೆ ಶಿರಸ್ಸಾಗಿರುವ ಪ್ರಕಾರ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಕ್ರಿಸ್ತ ಯೇಸು ತಮ್ಮ ಸಭೆ ಎಂಬ ದೇಹಕ್ಕೆ ರಕ್ಷಕರಾಗಿದ್ದಾರೆ.
ಎಫೆಸದವರಿಗೆ 5 : 24 (OCVKN)
ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.
ಎಫೆಸದವರಿಗೆ 5 : 25 (OCVKN)
ಗಂಡಂದಿರೇ, ಕ್ರಿಸ್ತ ಯೇಸು ಸಭೆಯನ್ನು ಪ್ರೀತಿಸಿ, ಅದಕ್ಕಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಂತೆಯೇ ನೀವು ನಿಮ್ಮ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
ಎಫೆಸದವರಿಗೆ 5 : 26 (OCVKN)
ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ,
ಎಫೆಸದವರಿಗೆ 5 : 27 (OCVKN)
ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು.
ಎಫೆಸದವರಿಗೆ 5 : 28 (OCVKN)
ಗಂಡಂದಿರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವಂತೆಯೇ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ.
ಎಫೆಸದವರಿಗೆ 5 : 29 (OCVKN)
ಏಕೆಂದರೆ, ಯಾರೂ ಸ್ವಂತ ಶರೀರವನ್ನು ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ತಮ್ಮ ಶರೀರವನ್ನು ಪೋಷಿಸಿ ಸಂರಕ್ಷಿಸುತ್ತಾರೆ. ಅದೇ ಪ್ರಕಾರ ಕರ್ತ ಯೇಸು ಸಭೆಯನ್ನು ಪೋಷಿಸಿ, ಸಂರಕ್ಷಿಸುವವರಾಗಿದ್ದಾರೆ.
ಎಫೆಸದವರಿಗೆ 5 : 30 (OCVKN)
ನಾವು ಕ್ರಿಸ್ತ ಯೇಸುವಿನ ದೇಹದ ಅಂಗಗಳಾಗಿದ್ದೇವೆ.
ಎಫೆಸದವರಿಗೆ 5 : 31 (OCVKN)
“ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಆದಿ 2:24
ಎಫೆಸದವರಿಗೆ 5 : 32 (OCVKN)
ಈ ರಹಸ್ಯವು ಮಹತ್ತಾದದ್ದು. ಆದರೆ ನಾನು ಕ್ರಿಸ್ತನ ಹಾಗೂ ಸಭೆಯ ವಿಷಯವಾಗಿ ಮಾತನಾಡುತ್ತಿದ್ದೇನೆ.
ಎಫೆಸದವರಿಗೆ 5 : 33 (OCVKN)
ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33