ಎಸ್ತೇರಳು 7 : 1 (OCVKN)
ಹಾಮಾನನಿಗೆ ಮರಣಶಿಕ್ಷೆ ಅರಸನೂ ಹಾಮಾನನೂ ಎಸ್ತೇರ್ ರಾಣಿಯ ಔತಣಕ್ಕೆ ಬಂದರು.
ಎಸ್ತೇರಳು 7 : 2 (OCVKN)
ಎರಡನೆಯ ದಿವಸ ದ್ರಾಕ್ಷಾರಸವನ್ನು ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.
ಎಸ್ತೇರಳು 7 : 3 (OCVKN)
ಆಗ ಎಸ್ತೇರ್ ರಾಣಿಯು ಉತ್ತರವಾಗಿ, “ಅರಸನೇ, ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವಳಾಗಿದ್ದರೆ, ನನ್ನ ಪ್ರಾಣವನ್ನೂ ನನ್ನ ಜನರ ಪ್ರಾಣವನ್ನೂ ಉಳಿಸಬೇಕು. ಇದೇ ನನ್ನ ವಿಜ್ಞಾಪನೆ. ಇದೇ ನನ್ನ ಬೇಡಿಕೆ.
ಎಸ್ತೇರಳು 7 : 4 (OCVKN)
ಏಕೆಂದರೆ ನಾನು ಮತ್ತು ನನ್ನ ಜನರು ದುರಂತಕ್ಕೂ, ಕೊಲೆಗೂ, ಸರ್ವನಾಶಕ್ಕೂ ಮಾರಟವಾಗಿದ್ದೇವೆ. ಒಂದು ವೇಳೆ, ನಾವು ದಾಸರಾಗಿಯಾಗಲಿ, ದಾಸಿಯರಾಗಲಿ ಮಾರಾಟವಾಗಿದ್ದರೆ ನಾನು ಸುಮ್ಮನಿರುತ್ತಿದ್ದೆ. ಅಂಥ ಕಷ್ಟಕ್ಕಾಗಿ ನಾನು ಅರಸನನ್ನು ತೊಂದರೆಪಡಿಸದೆ ಸುಮ್ಮನೆ ಇದ್ದುಬಿಡುತ್ತಿದ್ದೆನು,” ಎಂದಳು.
ಎಸ್ತೇರಳು 7 : 5 (OCVKN)
ಎಸ್ತೇರಳು 7 : 6 (OCVKN)
ಆಗ ಅರಸನಾದ ಅಹಷ್ವೇರೋಷನು ರಾಣಿಯಾದ ಎಸ್ತೇರಳಿಗೆ, “ಯಾರು ಅವನು? ಈ ಪ್ರಕಾರ ಮಾಡಲು ಧೈರ್ಯಗೊಂಡವನು ಯಾರು? ಅವನು ಎಲ್ಲಿದ್ದಾನೆ?” ಎಂದನು. ಅದಕ್ಕೆ ಎಸ್ತೇರಳು, “ಆ ವೈರಿಯೂ ಹಗೆಗಾರನೂ ಬೇರೆ ಯಾರೂ ಅಲ್ಲ, ಈ ದುಷ್ಟ ಹಾಮಾನನೇ!” ಎಂದಳು. ಆಗ ಹಾಮಾನನು ಅರಸನ ಮುಂದೆಯೂ, ರಾಣಿಯ ಮುಂದೆಯೂ ಬೆಪ್ಪಾದನು.
ಎಸ್ತೇರಳು 7 : 7 (OCVKN)
ಅರಸನು ಕೋಪಗೊಂಡು ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟು, ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು. ಏಕೆಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ಅವನಿಗೆ ತಿಳಿದಿತ್ತು.
ಎಸ್ತೇರಳು 7 : 8 (OCVKN)
ಅರಸನು ಅರಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ಹಿಂದಿರುಗಿ ಬಂದಾಗ, ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು, “ನನ್ನ ಮುಂದೆಯೇ ಇವನು ರಾಣಿಯನ್ನು ಬಲಾತ್ಕಾರ ಮಾಡಬೇಕೆಂದಿರುವನೋ?” ಎಂದನು. ಆ ಮಾತು ಅರಸನ ಬಾಯಿಂದ ಹೊರಟ ಕೂಡಲೆ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಹಾಕಿದರು.
ಎಸ್ತೇರಳು 7 : 9 (OCVKN)
ಆಗ ರಾಜಕಂಚುಕಿಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ ಬಂದು, “ಇಗೋ, ಅರಸನ ಪ್ರಾಣವನ್ನು ರಕ್ಷಿಸಲು ಮಾತಾಡಿದ ಮೊರ್ದೆಕೈಯನ್ನು ಕೊಲ್ಲುವುದಕ್ಕಾಗಿ ಹಾಮಾನನು ಮಾಡಿಸಿದ ಇಪ್ಪತ್ತೆರಡು ಮೀಟರ್ ಗಲ್ಲುಮರವು ಹಾಮಾನನ ಮನೆಯ ಹತ್ತಿರ ಇದೆ,” ಎಂದನು. ಅದಕ್ಕೆ ಅರಸನು, “ಇವನನ್ನು ಅದರಲ್ಲಿ ನೇತುಹಾಕಿರಿ” ಎಂದನು.
ಎಸ್ತೇರಳು 7 : 10 (OCVKN)
ಅವರು ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲುಮರದಲ್ಲಿ ಅವನನ್ನು ನೇತುಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.

1 2 3 4 5 6 7 8 9 10