ವಿಮೋಚನಕಾಂಡ 21 : 1 (OCVKN)
ವಿಮೋಚನಕಾಂಡ 21 : 2 (OCVKN)
“ಈಗ ಅವರ ಮುಂದೆ ನೀನು ಇಡತಕ್ಕ ನ್ಯಾಯವಿಧಿಗಳು ಇವೇ. ಹಿಬ್ರಿಯ ದಾಸರು “ನೀನು ಹಿಬ್ರಿಯ ದಾಸನನ್ನು ಕೊಂಡುಕೊಂಡರೆ, ಅವನು ಆರು ವರ್ಷ ನಿನಗೆ ಸೇವೆಮಾಡಬೇಕು. ಏಳನೆಯ ವರ್ಷದಲ್ಲಿ ಅವನು ಏನೂ ಕೊಡದೆ ಬಿಡುಗಡೆಯಾಗಿ ಹೋಗಲಿ.
ವಿಮೋಚನಕಾಂಡ 21 : 3 (OCVKN)
ಅವನು ಒಬ್ಬನಾಗಿ ಬಂದಿದ್ದರೆ, ಒಬ್ಬನಾಗಿಯೇ ಹೋಗಬೇಕು. ಅವನು ಮದುವೆಯಾದವನಾಗಿದ್ದರೆ, ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.
ವಿಮೋಚನಕಾಂಡ 21 : 4 (OCVKN)
ಅವನ ಯಜಮಾನನು ಅವನಿಗೆ ಮದುವೆಮಾಡಿಸಿ ಆ ಹೆಂಡತಿಗೆ ಗಂಡು ಇಲ್ಲವೆ ಹೆಣ್ಣುಮಕ್ಕಳು ಹುಟ್ಟಿದ್ದರೆ, ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು. ಅವನು ಒಬ್ಬನಾಗಿಯೇ ಹೋಗಬೇಕು.
ವಿಮೋಚನಕಾಂಡ 21 : 5 (OCVKN)
“ಆದರೆ ದಾಸನು, ‘ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿಮಾಡುತ್ತೇನೆ. ಆದ್ದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ಮನಸ್ಸಿಲ್ಲ,’ ಎಂದು ಸ್ವಷ್ಟವಾಗಿ ಹೇಳಿದರೆ,
ವಿಮೋಚನಕಾಂಡ 21 : 6 (OCVKN)
ಅವನ ಯಜಮಾನನು ಅವನನ್ನು ನ್ಯಾಯಾಧೀಶರ* ಅಥವಾ ದೇವರು ಬಳಿಗೆ ಕರಕೊಂಡು ಬಂದು, ಬಾಗಿಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ, ಅವನ ಯಜಮಾನನು ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ದಾಸನಾಗಿರಬೇಕು.
ವಿಮೋಚನಕಾಂಡ 21 : 7 (OCVKN)
“ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಹೋಗುವಂತೆ ಆಕೆಯು ಹೋಗಿಬಿಡಬಾರದು.
ವಿಮೋಚನಕಾಂಡ 21 : 8 (OCVKN)
ಅವಳನ್ನು ನಿಶ್ಚಯಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ, ಆಗ ಅವಳು ಬಿಡುಗಡೆಯಾಗುವಂತೆ ಮಾಡಲಿ. ಅವನು ಅವಳನ್ನು ವಂಚಿಸಿದ್ದರಿಂದ ಯೆಹೂದ್ಯರಲ್ಲದವರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.
ವಿಮೋಚನಕಾಂಡ 21 : 9 (OCVKN)
ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯ ಮಾಡಿದರೆ, ಹೆಣ್ಣು ಮಕ್ಕಳ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕು.
ವಿಮೋಚನಕಾಂಡ 21 : 10 (OCVKN)
ಒಂದು ವೇಳೆ ಅವನು ಇನ್ನೊಬ್ಬಳನ್ನು ಮದುವೆಯಾದರೆ, ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕನ್ನು ಕಡಿಮೆ ಮಾಡಬಾರದು.
ವಿಮೋಚನಕಾಂಡ 21 : 11 (OCVKN)
ಈ ಮೂರನ್ನು ಅವಳಿಗೆ ಮಾಡದೆ ಹೋದರೆ, ಅವಳು ಏನೂ ಕ್ರಯ ಕೊಡದೆ, ಸ್ವತಂತ್ರಳಾಗಿ ಹೋಗಿಬಿಡಬಹುದು.
ವಿಮೋಚನಕಾಂಡ 21 : 12 (OCVKN)
ಹಿಂಸಾಚಾರಗಳ ಬಗ್ಗೆ “ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.
ವಿಮೋಚನಕಾಂಡ 21 : 13 (OCVKN)
ಆದರೆ ಕೊಲ್ಲಬೇಕೆಂಬ ಯೋಚನೆ ಇಲ್ಲದೆ ದೇವರು ಅನುಮತಿಸಿದ್ದರಿಂದ ಕೊಲೆಯಾದರೆ, ಕೊಂದವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಾನು ನೇಮಿಸುವೆನು.
ವಿಮೋಚನಕಾಂಡ 21 : 14 (OCVKN)
ಆದರೆ ಒಬ್ಬನು ಮತ್ತೊಬ್ಬನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಬಲಿಪೀಠದಿಂದ ದೂರ ತೆಗೆದುಕೊಂಡುಹೋಗಿ ಕೊಂದುಹಾಕಬೇಕು.
ವಿಮೋಚನಕಾಂಡ 21 : 15 (OCVKN)
ವಿಮೋಚನಕಾಂಡ 21 : 16 (OCVKN)
“ತಂದೆತಾಯಿಗಳನ್ನು ಹೊಡೆಯುವವನು† ಅಥವಾ ಕೊಲೆಮಾಡುವವನು ಖಂಡಿತವಾಗಿ ಮರಣದಂಡನೆ ಹೊಂದಬೇಕು.
ವಿಮೋಚನಕಾಂಡ 21 : 17 (OCVKN)
“ಒಬ್ಬನು ಮತ್ತೊಬ್ಬನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ, ಇಲ್ಲವೆ ಅವನು ಬಂಧನಕ್ಕೊಳಗಾದಾಗ ಅಪಹರಿಸಲಾದವನು ಅವನೊಂದಿಗಿದ್ದರೆ, ಅವನನ್ನು ಮರಣದಂಡನೆಗೆ ಗುರಿಮಾಡಬೇಕು.
ವಿಮೋಚನಕಾಂಡ 21 : 18 (OCVKN)
“ತಂದೆಗಾದರೂ ತಾಯಿಗಾದರೂ ಶಾಪಕೊಟ್ಟವನು ಖಂಡಿತವಾಗಿ ಸಾಯಬೇಕು. “ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಟಿಯಿಂದಾಗಲಿ‡ ಅಥವಾ ಯಾವುದಾದರೂ ಸಾಧನ ಹೊಡೆದದ್ದರಿಂದ ಅವನು ಸಾಯದೆ ಗಾಯಗೊಂಡು, ಹಾಸಿಗೆ ಹಿಡಿದು, ಕ್ರಮೇಣ
ವಿಮೋಚನಕಾಂಡ 21 : 19 (OCVKN)
ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ, ಅವನನ್ನು ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಪೆಟ್ಟು ತಿಂದವನು ಗುಣಹೊಂದುವವರೆಗೆ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನನ್ನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.
ವಿಮೋಚನಕಾಂಡ 21 : 20 (OCVKN)
“ಒಬ್ಬನು ದಾಸನನ್ನಾಗಲಿ, ದಾಸಿಯನ್ನಾಗಲಿ ಸಾಯುವಂತೆ ಕೋಲಿನಿಂದ ಹೊಡೆದಾಗ, ಹೊಡೆದವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು.
ವಿಮೋಚನಕಾಂಡ 21 : 21 (OCVKN)
ದಾಸದಾಸಿಯರು ಒಂದೆರಡು ದಿನಗಳ ನಂತರ ಉಳಿದರೆ ಶಿಕ್ಷೆಯಾಗಬಾರದು. ಏಕೆಂದರೆ ಅವರು ಅವನ ಸೊತ್ತು.
ವಿಮೋಚನಕಾಂಡ 21 : 22 (OCVKN)
“ಜನರು ಜಗಳವಾಡುವಾಗ ಗರ್ಭಿಣಿಯಾದ ಸ್ತ್ರೀಗೆ ಏಟು ತಗಲಿ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.
ವಿಮೋಚನಕಾಂಡ 21 : 23 (OCVKN)
ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನು, ಕಣ್ಣಿಗೆ ಕಣ್ಣನ್ನು,
ವಿಮೋಚನಕಾಂಡ 21 : 24 (OCVKN)
ಹಲ್ಲಿಗೆ ಹಲ್ಲು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು,
ವಿಮೋಚನಕಾಂಡ 21 : 25 (OCVKN)
ಸುಟ್ಟ ಗಾಯಕ್ಕೆ ಸುಟ್ಟಗಾಯವನ್ನು, ಕಡಿದ ಗಾಯಕ್ಕೆ ಕಡಿದ ಗಾಯವನ್ನು, ಹೊಡೆದ ಗಾಯಕ್ಕೆ ಹೊಡೆದು ಗಾಯವನ್ನು ನೀನು ಮಾಡಬೇಕು.
ವಿಮೋಚನಕಾಂಡ 21 : 26 (OCVKN)
“ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ, ಆ ಕಣ್ಣಿಗೋಸ್ಕರ ಅವರನ್ನು ಅವನು ಬಿಡುಗಡೆ ಮಾಡಿ ಕಳುಹಿಸಲಿ.
ವಿಮೋಚನಕಾಂಡ 21 : 27 (OCVKN)
ಒಬ್ಬನು ದಾಸನ ಹಲ್ಲನ್ನು, ಇಲ್ಲವೆ ದಾಸಿಯ ಹಲ್ಲನ್ನು ಉದುರಿಸಿದರೆ, ಹಲ್ಲಿಗೋಸ್ಕರ ಅವರನ್ನು ಬಿಡುಗಡೆ ಮಾಡಿ ಕಳುಹಿಸಲಿ.
ವಿಮೋಚನಕಾಂಡ 21 : 28 (OCVKN)
“ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಹಾಯ್ದು ಕೊಂದರೆ, ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆ ಎತ್ತಿನ ಯಜಮಾನನು ನಿರಪರಾಧಿ.
ವಿಮೋಚನಕಾಂಡ 21 : 29 (OCVKN)
ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೆ ಇದ್ದುದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದುಹಾಕಿದರೆ, ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಆದರೆ ಯಜಮಾನನೂ ಮರಣದಂಡನೆಗೆ ಗುರಿಯಾಗುವನು.
ವಿಮೋಚನಕಾಂಡ 21 : 30 (OCVKN)
ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿಸಿದರೆ, ಅವನು ತನಗೆ ನೇಮಿಸಿದ್ದನ್ನೆಲ್ಲಾ ತನ್ನ ಪ್ರಾಣವಿಮೋಚನೆಗಾಗಿ ಕೊಡಲಿ.
ವಿಮೋಚನಕಾಂಡ 21 : 31 (OCVKN)
ಅದು ಮಗನನ್ನು ಹಾಯ್ದಿದ್ದರೂ, ಮಗಳನ್ನು ಹಾಯ್ದಿದ್ದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.
ವಿಮೋಚನಕಾಂಡ 21 : 32 (OCVKN)
ದಾಸನನ್ನಾದರೂ, ದಾಸಿಯನ್ನಾದರೂ ಎತ್ತು ಹಾಯ್ದರೆ, ದಾಸನ, ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
ವಿಮೋಚನಕಾಂಡ 21 : 33 (OCVKN)
“ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದುದರಿಂದ ಎತ್ತಾದರೂ ಕತ್ತೆಯಾದರೂ ಆ ಗುಂಡಿಯಲ್ಲಿ ಬಿದ್ದು ಸತ್ತರೆ,
ವಿಮೋಚನಕಾಂಡ 21 : 34 (OCVKN)
ಗುಂಡಿಯನ್ನು ಅಗೆದವನು ಈಡು ಕೊಡಬೇಕು. ಅವುಗಳ ಯಜಮಾನನಿಗೆ ಕ್ರಯ ನೀಡಬೇಕು. ಆದರೆ ಸತ್ತ ಪಶು ಅವನದಾಗಬೇಕು.
ವಿಮೋಚನಕಾಂಡ 21 : 35 (OCVKN)
“ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದು ಕೊಂದರೆ, ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನೂ, ಸತ್ತ ಎತ್ತನ್ನೂ ಸರಿಯಾಗಿ ಇಬ್ಬರೂ ಪಾಲುಮಾಡಿಕೊಳ್ಳಬೇಕು.
ವಿಮೋಚನಕಾಂಡ 21 : 36 (OCVKN)
ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿದ್ದರೂ, ಅದರ ಯಜಮಾನನು ಅದನ್ನು ಕಟ್ಟಿಹಾಕದೆ ಹೋಗಿದ್ದರೆ, ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲುಕೊಡಬೇಕು. ಆದರೆ ಸತ್ತ ಪಶುವನ್ನು ಅವನು ತೆಗೆದುಕೊಳ್ಳಬಹುದು.
❮
❯