ವಿಮೋಚನಕಾಂಡ 26 : 1 (OCVKN)
ದೇವದರ್ಶನದ ಗುಡಾರ “ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಮಾಡಿದ ಕೆರೂಬಿಗಳುಳ್ಳವುಗಳಾಗಿಯೂ ಇರಬೇಕು.
ವಿಮೋಚನಕಾಂಡ 26 : 2 (OCVKN)
ಎಲ್ಲಾ ಪರದೆಗಳೂ ಒಂದೇ ಅಳತೆಯವುಗಳಾಗಿರಬೇಕು. ಪ್ರತಿಯೊಂದು ಪರದೆಯು ಸುಮಾರು ಹದಿಮೂರು ಮೀಟರ್ ಉದ್ದ ಮತ್ತು ಎರಡು ಮೀಟರ್ ಅಗಲವಿರಬೇಕು.* ಸುಮಾರು ಇಪ್ಪತ್ತೆಂಟು ಮೊಳ ಉದ್ದ ಮತ್ತು ಅದರ ಅಗಲವು ನಾಲ್ಕು ಮೊಳವಾಗಿರಬೇಕು
ವಿಮೋಚನಕಾಂಡ 26 : 3 (OCVKN)
ಐದು ಪರದೆಗಳನ್ನು ಒಂದಕ್ಕೊಂದು ಜೋಡಿಸಬೇಕು ಮತ್ತು ಇನ್ನುಳಿದ ಐದು ಪರದೆಗಳನ್ನೂ ಒಂದಕ್ಕೊಂದು ಜೋಡಿಸಬೇಕು.
ವಿಮೋಚನಕಾಂಡ 26 : 4 (OCVKN)
ಕೊನೆಯ ಪರದೆಯ ಅಂಚಿನ ಒಂದು ಜೋಡಣೆಯ ಸ್ಥಳದಲ್ಲಿ ನೀಲಿ ದಾರಿನ ಕುಣಿಕೆಗಳನ್ನು ಮಾಡಿ, ಎರಡನೆಯ ಜೋಡಣೆಯ ಕಟ್ಟಕಡೆಯ ಪರದೆಯ ಅಂಚಿನಲ್ಲಿಯೂ ಅದೇ ಪ್ರಕಾರ ಮಾಡಬೇಕು.
ವಿಮೋಚನಕಾಂಡ 26 : 5 (OCVKN)
ಒಂದು ಪರದೆಯನ್ನು ಜೋಡಿಸುವ ಸ್ಥಳದಲ್ಲಿ ಇರುವ ಇನ್ನೊಂದು ಪರದೆಯ ಕೊನೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಆ ಕುಣಿಕೆಗಳು ಒಂದಕ್ಕೊಂದು ಎದುರುಬದುರಾಗಿ ಹಿಡಿದುಕೊಳ್ಳುವವುಗಳಾಗಿರಬೇಕು.
ವಿಮೋಚನಕಾಂಡ 26 : 6 (OCVKN)
ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ, ಅವುಗಳಿಂದ ಪರದೆಗಳನ್ನು ಒಂದಕ್ಕೊಂದು ಜೋಡಿಸಬೇಕು. ಹೀಗೆ ಅದು ಒಂದೇ ಗುಡಾರವಾಗಬೇಕು.
ವಿಮೋಚನಕಾಂಡ 26 : 7 (OCVKN)
“ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸುವುದಕ್ಕಾಗಿ ಮೇಕೆಯ ಕೂದಲಿನಿಂದ ಹನ್ನೊಂದು ಪರದೆಗಳನ್ನು ಮಾಡಬೇಕು.
ವಿಮೋಚನಕಾಂಡ 26 : 8 (OCVKN)
ಒಂದೊಂದು ಪರದೆಯು ಸುಮಾರು ಹದಿಮೂರುವರೆ ಮೀಟರ್ ಉದ್ದ ಮತ್ತು ಒಂದುವರೆ ಮೀಟರ್ ಅಗಲ ಸುಮಾರು ಮೂವತ್ತು ಮೊಳ ಉದ್ದ ಮತ್ತು ನಾಲ್ಕು ಮೊಳ ಅಗಲ ಇರಬೇಕು. ಹನ್ನೊಂದು ಪರದೆಗಳೂ ಒಂದೇ ಅಳತೆಯಾಗಿರಬೇಕು.
ವಿಮೋಚನಕಾಂಡ 26 : 9 (OCVKN)
ಐದು ಪರದೆಗಳನ್ನು ಒಂದಾಗಿ ಜೋಡಿಸಿ ಇನ್ನುಳಿದ ಆರು ಪರದೆಗಳನ್ನು ಒಂದಾಗಿ ಜೋಡಿಸಿ, ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ತೂಗಾಡಬಿಡಬೇಕು.
ವಿಮೋಚನಕಾಂಡ 26 : 10 (OCVKN)
ಜೋಡಿಸುವಾಗ ಕೊನೆಯ ಒಂದು ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು, ಜೋಡಣೆಯಲ್ಲಿರುವ ಕೊನೆಯ ಎರಡನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು.
ವಿಮೋಚನಕಾಂಡ 26 : 11 (OCVKN)
ಇದಲ್ಲದೆ ಕಂಚಿನ ಐವತ್ತು ಕೊಂಡಿಗಳನ್ನು ಮಾಡಿ, ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ, ಒಂದೇ ಡೇರೆ ಆಗುವಂತೆ ಜೋಡಿಸಬೇಕು.
ವಿಮೋಚನಕಾಂಡ 26 : 12 (OCVKN)
ಗುಡಾರದ ಪರದೆಗಳನ್ನು ಮಿಕ್ಕಿದ ತೂಗಾಡುವಂಥದ್ದು ಎಂದರೆ ಉಳಿದ ಅರ್ಧ ಪರದೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ.
ವಿಮೋಚನಕಾಂಡ 26 : 13 (OCVKN)
ಗುಡಾರದ ಪರದೆಗಳ ಉದ್ದದಲ್ಲಿ ಈಚೆ ಆಚೆ ಮಿಕ್ಕಿದ ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವುದಕ್ಕಾಗಿ ತೂಗಾಡಲಿ.
ವಿಮೋಚನಕಾಂಡ 26 : 14 (OCVKN)
ಗುಡಾರದ ಮೇಲ್ಹೊದಿಕೆಯನ್ನು ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದಿಂದ ಮಾಡಬೇಕು, ಅದರ ಮೇಲೆ ಕಡಲುಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಬೇಕು.
ವಿಮೋಚನಕಾಂಡ 26 : 15 (OCVKN)
“ಗುಡಾರಕ್ಕೆ ಜಾಲಿ ಮರದಿಂದ ಚೌಕಟ್ಟುಗಳನ್ನು ಮಾಡಬೇಕು.
ವಿಮೋಚನಕಾಂಡ 26 : 16 (OCVKN)
ಒಂದೊಂದು ಚೌಕಟ್ಟಿನ ಉದ್ದವು ಸುಮಾರು ನಾಲ್ಕುವರೆ ಮೀಟರ್ ಮತ್ತು ಅಗಲ ಅರವತ್ತೆಂಟು ಸೆಂಟಿಮೀಟರ್ ಸುಮಾರು ಹತ್ತು ಮೊಳ ಉದ್ದ ಮತ್ತು ಒಂದೂವರೆ ಮೊಳ ಅಗಲ ಇರಬೇಕು.
ವಿಮೋಚನಕಾಂಡ 26 : 17 (OCVKN)
ಒಂದು ಚೌಕಟ್ಟಿಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಬೇಕು. ಅದೇ ಪ್ರಕಾರ ಗುಡಾರದ ಎಲ್ಲಾ ಚೌಕಟ್ಟುಗಳಿಗೆ ಮಾಡಬೇಕು.
ವಿಮೋಚನಕಾಂಡ 26 : 18 (OCVKN)
ಗುಡಾರದ ದಕ್ಷಿಣ ಭಾಗದಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಬೇಕು.
ವಿಮೋಚನಕಾಂಡ 26 : 19 (OCVKN)
ಇಪ್ಪತ್ತು ಚೌಕಟ್ಟುಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಬೇಕು ಮತ್ತು ಒಂದೊಂದು ಚೌಕಟ್ಟಿನ ಕೆಳಗೆ ಅದರ ಎರಡು ಪಟ್ಟಿಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.
ವಿಮೋಚನಕಾಂಡ 26 : 20 (OCVKN)
ಹಾಗೆಯೇ ಗುಡಾರದ ಉತ್ತರ ದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನೂ,
ವಿಮೋಚನಕಾಂಡ 26 : 21 (OCVKN)
ಮತ್ತು ಒಂದೊಂದು ಚೌಕಟ್ಟಿನ ಕೆಳಗೆ ಎರಡೆರಡು ಗದ್ದಿಗೇ ಕಲ್ಲುಗಳಂತೆ ನಲವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನೂ,
ವಿಮೋಚನಕಾಂಡ 26 : 22 (OCVKN)
ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮದ ಕಡೆಗೆ ಆರು ಚೌಕಟ್ಟುಗಳನ್ನು ಮಾಡಬೇಕು.
ವಿಮೋಚನಕಾಂಡ 26 : 23 (OCVKN)
ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಬೇಕು.
ವಿಮೋಚನಕಾಂಡ 26 : 24 (OCVKN)
ಈ ಮೂಲೆಗಳನ್ನು ಅಡಿಯಲ್ಲಿ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರಬೇಕು. ಇದೇ ರೀತಿಯಲ್ಲಿ ಅವು ಎರಡು ಮೂಲೆಗಳಲ್ಲಿ ಎರಡಕ್ಕೂ ಇರಬೇಕು.
ವಿಮೋಚನಕಾಂಡ 26 : 25 (OCVKN)
ಹೀಗೆ ಅವು ಎಂಟು ಚೌಕಟ್ಟುಗಳೂ ಒಂದೊಂದು ಚೌಕಟ್ಟಿನ ಕೆಳಗೆ ಎರಡೆರಡು ಕೂರುಗದ್ದಿಗೇ ಕಲ್ಲುಗಳೂ ಇರುವುದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕೂರುಗದ್ದಿಗೇ ಕಲ್ಲುಗಳೂ ಇರಬೇಕು.
ವಿಮೋಚನಕಾಂಡ 26 : 26 (OCVKN)
“ಜಾಲಿ ಮರದಿಂದ ಅಗುಳಿಗಳನ್ನು ಮಾಡಬೇಕು. ಗುಡಾರದ ಒಂದು ಕಡೆಯ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು,
ವಿಮೋಚನಕಾಂಡ 26 : 27 (OCVKN)
ಗುಡಾರದ ಇನ್ನೊಂದು ಭಾಗದ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು, ಅದರ ಹಿಂದುಗಡೆಯ ಅಂದರೆ ಪಶ್ಚಿಮ ಭಾಗದಲ್ಲಿರುವ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು ಮಾಡಬೇಕು.
ವಿಮೋಚನಕಾಂಡ 26 : 28 (OCVKN)
ಮಧ್ಯದ ಅಗುಳಿಯು ಚೌಕಟ್ಟುಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಮುಟ್ಟಿರಬೇಕು.
ವಿಮೋಚನಕಾಂಡ 26 : 29 (OCVKN)
ಆ ಚೌಕಟ್ಟುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು. ಅಗುಳಿಗಳನ್ನು ಬಂಗಾರದಿಂದ ಹೊದಿಸಬೇಕು.
ವಿಮೋಚನಕಾಂಡ 26 : 30 (OCVKN)
ವಿಮೋಚನಕಾಂಡ 26 : 31 (OCVKN)
“ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರವನ್ನು ನಿಲ್ಲಿಸಬೇಕು. “ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಬೇಕು. ಅದರ ಮೇಲೆ ಕೌಶಲ್ಯದಿಂದ ಕಸೂತಿಹಾಕಿ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.
ವಿಮೋಚನಕಾಂಡ 26 : 32 (OCVKN)
ಜಾಲಿ ಮರದ ನಾಲ್ಕು ಸ್ತಂಭಗಳನ್ನು ಮಾಡಿ, ಬಂಗಾರ ತಗಡುಗಳಿಂದ ಅವುಗಳನ್ನು ಹೊದಿಸಿದರು. ಅವುಗಳಿಗೆ ಬಂಗಾರದ ಕೊಂಡಿಗಳನ್ನು ಮಾಡಿ, ಬೆಳ್ಳಿಯ ನಾಲ್ಕು ಗದ್ದಿಗೇ ಕಲ್ಲುಗಳ ಮೇಲೆ ಊರಿಕೊಂಡಿರುವ ಜಾಲಿ ಮರದ ಸ್ತಂಭಗಳಲ್ಲಿ ಅದನ್ನು ತೂಗು ಹಾಕಬೇಕು.
ವಿಮೋಚನಕಾಂಡ 26 : 33 (OCVKN)
ಆ ಪರದೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ, ಪರದೆಯೊಳಗೆ ಒಡಂಬಡಿಕೆಯ ಮಂಜೂಷವನ್ನು ತರಬೇಕು. ಪರಿಶುದ್ಧ ಸ್ಥಳಕ್ಕೂ ಮಹಾಪರಿಶುದ್ಧ ಸ್ಥಳಕ್ಕೂ ಮಧ್ಯದಲ್ಲಿ ಆ ಪರದೆಯನ್ನು ವಿಂಗಡಿಸಬೇಕು.
ವಿಮೋಚನಕಾಂಡ 26 : 34 (OCVKN)
ಮಹಾಪರಿಶುದ್ಧ ಸ್ಥಳದಲ್ಲಿ ಒಡಂಬಡಿಕೆಯ ಮಂಜೂಷದ ಮೇಲೆ ಕರುಣಾಸನವನ್ನು ಇಡಬೇಕು.
ವಿಮೋಚನಕಾಂಡ 26 : 35 (OCVKN)
ಇದಲ್ಲದೆ ಗುಡಾರದ ಉತ್ತರ ಕಡೆಯಲ್ಲಿ ಪರದೆಯ ಹೊರಗೆ ಮೇಜನ್ನು ಇಡಬೇಕು ಮತ್ತು ದೀಪಸ್ತಂಭವನ್ನು ಅದರ ಎದುರಾಗಿ ದಕ್ಷಿಣದ ದಿಕ್ಕಿನಲ್ಲಿ ಇಡಬೇಕು.
ವಿಮೋಚನಕಾಂಡ 26 : 36 (OCVKN)
“ಗುಡಾರದ ಬಾಗಿಲಿಗೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರುಗಳಿಂದ ಹೊಸೆದು ಕಸೂತಿ ಕೆಲಸಮಾಡಿದ ಪರದೆಯನ್ನು ಮಾಡಬೇಕು.
ವಿಮೋಚನಕಾಂಡ 26 : 37 (OCVKN)
ಆ ಪರದೆಗೆ ಜಾಲಿ ಮರದ ಐದು ಕಂಬಗಳನ್ನು ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಐದು ಗದ್ದಿಗೇ ಕಲ್ಲುಗಳನ್ನು ಕಂಚಿನಿಂದ ಎರಕಹೊಯಿಸಬೇಕು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37