ವಿಮೋಚನಕಾಂಡ 31 : 1 (OCVKN)
ಬೆಚಲಯೇಲ್ ಹಾಗೂ ಒಹೊಲಿಯಾಬ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಅವನಿಗೆ,
ವಿಮೋಚನಕಾಂಡ 31 : 2 (OCVKN)
“ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲಯೇಲ್ ಎಂಬವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ.
ವಿಮೋಚನಕಾಂಡ 31 : 3 (OCVKN)
ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕದಿಂದಲೂ ಎಲ್ಲಾ ವಿಧವಾದ ಕೌಶಲ್ಯದಿಂದಲೂ ತುಂಬಿಸಿದ್ದೇನೆ.
ವಿಮೋಚನಕಾಂಡ 31 : 4 (OCVKN)
ಅವನು ಚಿನ್ನ, ಬೆಳ್ಳಿ, ಕಂಚಿನಲ್ಲಿ ಕಲಾತ್ಮಕವಾದ ವಿನ್ಯಾಸಗಳ ಕೆಲಸವನ್ನು ಮಾಡುವುದಕ್ಕೂ,
ವಿಮೋಚನಕಾಂಡ 31 : 5 (OCVKN)
ರತ್ನಗಳಲ್ಲಿ ಕೆತ್ತನೆಯನ್ನೂ ಮರದಲ್ಲಿ ಕೆತ್ತನೆಯನ್ನೂ ಸಕಲ ವಿಧವಾದ ಕೌಶಲ್ಯದ ಕೆಲಸವನ್ನು ಬಲ್ಲವನಾಗಿರುವನು.
ವಿಮೋಚನಕಾಂಡ 31 : 6 (OCVKN)
ಇಗೋ, ನಾನೇ ಅವನೊಂದಿಗೆ ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದೇನೆ. “ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಜಾಣರಾದವರೆಲ್ಲರ ಹೃದಯಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಜ್ಞಾನವನ್ನು ಅನುಗ್ರಹಿಸಿದ್ದೇನೆ.
ವಿಮೋಚನಕಾಂಡ 31 : 7 (OCVKN)
“ದೇವದರ್ಶನದ ಗುಡಾರ, ಒಡಂಬಡಿಕೆಯ ಮಂಜೂಷ, ಅದರ ಮೇಲಿರುವ ಕರುಣಾಸನ, ಗುಡಾರದ ಎಲ್ಲಾ ಉಪಕರಣಗಳು,
ವಿಮೋಚನಕಾಂಡ 31 : 8 (OCVKN)
ಮೇಜು ಅದರ ಉಪಕರಣಗಳು, ಶುದ್ಧ ಬಂಗಾರದ ದೀಪಸ್ತಂಭ, ಅದರ ಎಲ್ಲಾ ಉಪಕರಣಗಳು, ಧೂಪವೇದಿ, ಬಲಿಪೀಠ,
ವಿಮೋಚನಕಾಂಡ 31 : 9 (OCVKN)
ದಹನಬಲಿಪೀಠದ ಎಲ್ಲಾ ಉಪಕರಣಗಳು, ಗಂಗಾಳ, ಅದರ ಕಾಲು,
ವಿಮೋಚನಕಾಂಡ 31 : 10 (OCVKN)
ಯಾಜಕನಾದ ಆರೋನನ ಕಲಾತ್ಮಕವಾಗಿ ನೇಯ್ದ ಸೇವಾವಸ್ತ್ರಗಳು, ಪರಿಶುದ್ಧ ವಸ್ತ್ರಗಳು, ಯಾಜಕನ ಕೆಲಸ ಮಾಡುವುದಕ್ಕೆ ಅವನ ಮಕ್ಕಳ ವಸ್ತ್ರಗಳು,
ವಿಮೋಚನಕಾಂಡ 31 : 11 (OCVKN)
ಅಭಿಷೇಕಿಸುವ ತೈಲ, ಪರಿಶುದ್ಧ ಸ್ಥಳಕ್ಕೋಸ್ಕರವಿರುವ ಪರಿಮಳ ಧೂಪ. “ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು,” ಎಂದರು.
ವಿಮೋಚನಕಾಂಡ 31 : 12 (OCVKN)
ಸಬ್ಬತ್ ದಿನ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,
ವಿಮೋಚನಕಾಂಡ 31 : 13 (OCVKN)
“ನೀನು ಇಸ್ರಾಯೇಲರೊಂದಿಗೆ ಮಾತನಾಡಿ, ‘ನಿಶ್ಚಯವಾಗಿ ನೀವು ನನ್ನ ವಿಶ್ರಾಂತಿಯ ದಿನವನ್ನು ಕೈಗೊಳ್ಳಬೇಕು. ಏಕೆಂದರೆ ನಿಮ್ಮನ್ನು ಪರಿಶುದ್ಧ ಮಾಡುವ ಯೆಹೋವ ದೇವರು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ, ನಿಮಗೂ, ನಿಮ್ಮ ಸಂತತಿಯವರಿಗೂ ಗುರುತಾಗಿರುವುದು.
ವಿಮೋಚನಕಾಂಡ 31 : 14 (OCVKN)
“ ‘ಹೀಗಿರುವುದರಿಂದ ನೀವು ಸಬ್ಬತ್ ದಿನವನ್ನು ಕೈಗೊಳ್ಳಬೇಕು. ಏಕೆಂದರೆ ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರ ಮಾಡುವ ಪ್ರತಿಯೊಬ್ಬನು ಸಾಯಲೇಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ, ಅವರನ್ನು ನಿಮ್ಮ ಜನರೊಳಗಿಂದ ತೆಗೆದುಹಾಕಬೇಕು.
ವಿಮೋಚನಕಾಂಡ 31 : 15 (OCVKN)
ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಯೆಹೋವ ದೇವರಿಗೆ ಪರಿಶುದ್ಧವಾದ ಸಬ್ಬತ್ ದಿನ. ಆ ಸಬ್ಬತ್ ದಿನದಲ್ಲಿ ಕೆಲಸ ಮಾಡುವವರೆಲ್ಲಾ ಸಾಯಲೇಬೇಕು.
ವಿಮೋಚನಕಾಂಡ 31 : 16 (OCVKN)
ಹೀಗಿರಲಾಗಿ ಇಸ್ರಾಯೇಲರು ತಮ್ಮ ತಲತಲಾಂತರಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ ದಿನವನ್ನು ಕೈಗೊಳ್ಳಬೇಕು.
ವಿಮೋಚನಕಾಂಡ 31 : 17 (OCVKN)
ನನಗೂ, ಇಸ್ರಾಯೇಲರಿಗೂ ಇದೇ ಶಾಶ್ವತವಾದ ಗುರುತು. ಏಕೆಂದರೆ ಆರು ದಿವಸಗಳಲ್ಲಿ ಯೆಹೋವ ದೇವರು ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸ ನಿಲ್ಲಿಸಿ, ವಿಶ್ರಮಿಸಿಕೊಂಡರು ಎಂದು ಹೇಳು,’ ” ಎಂದರು.
ವಿಮೋಚನಕಾಂಡ 31 : 18 (OCVKN)
ಯೆಹೋವ ದೇವರು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ, ಅವನಿಗೆ ಸಾಕ್ಷಿಯ ಎರಡು ಹಲಗೆಗಳನ್ನೂ ದೇವರು ಬೆರಳಿನಿಂದ ಬರೆದ ಕಲ್ಲಿನ ಹಲಗೆಗಳನ್ನೂ ಕೊಟ್ಟನು.
❮
❯
1
2
3
4
5
6
7
8
9
10
11
12
13
14
15
16
17
18